Uncategorized
ಅ.12 ಶಾರದಾ ಪೂಜೆ ಹಿನ್ನಲೆ : ಮನೆಯಲ್ಲಿ ಮಕ್ಕಳಿಂದ ಪುಸ್ತಕಗಳಿಗೆ ಪೂಜೆ ಮಾಡಿಸಿ ವೀಡಿಯೋ ಕಳುಹಿಸುವಂತೆ ವಿನಂತಿ – ದೇವಾಲಯಗಳ ಸಂವರ್ಧನಾ ಸಮಿತಿಯಿಂದ ಮಕ್ಕಳಲ್ಲಿ ಧರ್ಮ ರಕ್ಷಣೆ ಪ್ರೇರೆಪಿಸಲು ವಿನೂತನ ಪ್ರಯತ್ನ

ಕಳೆದೊಂದು ವಾರದಿಂದ ದೇಶದೆಲ್ಲೆಡೆ ಹಿಂದೂ ಆಸ್ತಿಕರು ನವರಾತ್ರಿ ಹಬ್ಬವನ್ನು ಭಕ್ತಿ ಮತ್ತು ಶ್ರದ್ದೆಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಇದೇ ಪಾವನ ಸಮಯದಲ್ಲಿ ಮುಂದಿನ ಪೀಳಿಗೆಯಾದ ಮಕ್ಕಳಲ್ಲಿ ಧರ್ಮ ಜಾಗೃತಿಯನ್ನು ಮೂಡಿಸಲು ಹಾಗೂ ಧರ್ಮ ರಕ್ಷಣೆಗೆ ಪ್ರೇರೆಪಿಸಲು ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗವು ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ. ಶರನ್ನವರಾತ್ರಿಯ ಕೊನೆಯ ದಿನವಾದ ಅ.12ರಂದು ಬೆಳಿಗ್ಗೆ ಮಕ್ಕಳಲ್ಲಿ ಶಾರದಾ ಪೂಜೆ ಮಾಡಿಸುವಂತೆ ಪೋಷಕರಿಗೆ ಅದು ಕರೆ ನೀಡಿದೆ.
ಅಂದು ಶಾರದಾ ಪೂಜೆಯ ಪ್ರಯುಕ್ತ ಮನೆಯಲ್ಲಿರುವ ಮಕ್ಕಳು ಮನೆಯ ದೇವರ ಕೋಣೆಯಲ್ಲಿ ತಮ್ಮ ಪಠ್ಯಪುಸ್ತಕಗಳು ಹಾಗೂ ಧಾರ್ಮಿಕ ಪುಸ್ತಕಗಳಿಗೆ ಹೂ ಇಟ್ಟು, ಶಾರದೆಗೆ ಹಾಲು ಹಣ್ಣು ಸಮರ್ಪಿಸಿ, ಆರತಿ ಎತ್ತಿ ಪೂಜಿಸುವಂತೆ ದೇವಾಲಯಗಳ ಸಂವರ್ಧನ ಸಮಿತಿಯ ಮಂಗಳೂರು ವಿಭಾಗ ಪ್ರಮುಖ್ ಕೇಶವ ಪ್ರಸಾದ್ ಮುಳಿಯ ಹಾಗೂ ಕಾರ್ಯಕ್ರಮ ನಿರ್ದೇಶಕರಾದ ಯದುಶ್ರೀ ಕೊಯಿಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿಡಿಯೋ ಮಾಡುವಂತೆ ಮನವಿ
ದೀಪ ಬೆಳಗಿಸಿ ಆರತಿ ಮಾಡುವ ಈ ಪೂಜಾ ವಿಧಿಗಳ 10ರಿಂದ 20 ಸೆಕೆಂಡ್ಸ್ ನ ವಿಡಿಯೋ ವನ್ನು ಚಿತ್ರಿಕರಿಸಿ 99013 36916 ಎಂಬ ವಾಟ್ಸ್ಯಾಪ್ ಸಂಖ್ಯೆಗೆ ಕಳುಹಿಸುವಂತೆಯೂ ಪೋಷಕರಲ್ಲಿ ಧಾರ್ಮಿಕ ಶಿಕ್ಷಣ ಕೇಂದ್ರದ ಮುಖ್ಯಸ್ಥರು ಮನವಿ ಮಾಡಿದ್ದಾರೆ. ಅ. 12 ರಂದು ರಾತ್ರಿ 10 ಗಂಟೆ ಒಳಗೆ ಎಲ್ಲರೂ ತಾವು ಚಿತ್ರೀಕರಿಸಿದ ವಿಡಿಯೋ ಹಾಗೂ ಭಾವಚಿತ್ರವನ್ನು ಕಳಿಸುವಂತೆ ಕೋರಲಾಗಿದೆ.
ಸಂಸ್ಕೃತಿಗೆ ಮೆರಗು ನೀಡುವ ಉಡುಪು ಧರಿಸಿ
ಈ ವಿಡಿಯೋವನ್ನು ಧಾರ್ಮಿಕ ಶಿಕ್ಷಣ ಕೇಂದ್ರದ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಲಾಗುತ್ತದೆ. ಹೀಗಾಗಿ ಮಕ್ಕಳೆಲ್ಲರೂ, ನಮ್ಮ ಸಂಸ್ಕೃತಿಗೆ ಮೆರಗು ನೀಡುವಂತಹ ಧಾರ್ಮಿಕ ಉಡುಪು, ಕೇಸರಿ ಶಾಲು ಧರಿಸಿ ವಿಡಿಯೋ ಮಾಡಿ ಕಳುಹಿಸಬೇಕು. ಹೆಣ್ಣು ಮಕ್ಕಳು ಲಂಗ ರವಕೆ ಹಾಗೆಯೇ ಗಂಡು ಮಕ್ಕಳು ಕುರ್ತಾ ಪೈಜಾಮ ಅಥವಾ ಲುಂಗಿ ಮತ್ತು ಶಾಲನ್ನು ಧರಿಸಿ ಭಾಗವಹಿಸಿದರೆ ಉತ್ತಮ ಎಂದು ಧಾರ್ಮಿಕ ಶಿಕ್ಷಣ ಕೇಂದ್ರದ ಮುಖ್ಯಸ್ಥರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಯನ್ನು 99013 36916 ಸಂಪರ್ಕಿಸಬಹುದು.
ವಿದ್ಯಾರ್ಥಿಗಳಿಗೆ ದೇವಿ ಶಾರದೆಯ ಮಹತ್ವದ ಅರಿವು ಮೂಡಿಸುವ ಕಾರ್ಯಕ್ರಮ
“ಹಿಂದೆ ಶಾಲೆಗಳಲ್ಲಿ ಶಾರದಾ ಪೂಜೆಯನ್ನ ಒಂದು ಉತ್ಸವ ರೀತಿಯಲ್ಲಿ ಆಚರಿಸಲಾಗುತ್ತಿತ್ತು ಭಾರತದ ಸಂಪ್ರದಾಯ ಮತ್ತು ಧರ್ಮದ ನೆಲೆಗಟ್ಟಿನಲ್ಲಿ ವಿದ್ಯೆಗೆ ಶಾರದಾ ದೇವಿಯ ಅನುಗ್ರಹ ಮತ್ತು ಮಹತ್ವವನ್ನ ಸಾರುವ ಕಾರ್ಯಕ್ರಮಗಳು ನಡೆಯುತ್ತಿತ್ತು. ಕಾರಣಾಂತರಗಳಿಂದ ಅವು ಈಗ ನಿಂತು ಹೋಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ದೇವಿ ಶಾರದೆಯ ಮಹತ್ವವನ್ನ ಅರಿವು ಮೂಡಿಸಲು ಈ ಕಾರ್ಯಕ್ರಮ. ಕಳೆದ ವರ್ಷ ಕೊಯ್ಲ ಗ್ರಾಮದಲ್ಲಿ ಶ್ರೀ ಎದುಶ್ರೀ ಅವರ ನೇತೃತ್ವದಲ್ಲಿ ಸುಮಾರು 600 ಮನೆಗಳಲ್ಲಿ ನಡೆದ ಈ ಶಾರದಾ ಪೂಜೆಯ ಪ್ರೇರಣೆ ಪಡೆದು ಈ ವರ್ಷ ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗದ ಮೂಲಕ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರಗಳ ಮೂಲಕ ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನ ಮೂಡಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎರಡು ಜಿಲ್ಲೆಗಳಲ್ಲಿ ಸುಮಾರು 3000ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಶಾರದಾ ಪೂಜೆಯನ್ನ ಮಾಡಲಿದ್ದಾರೆ ಎಂದು ಅಂದಾಜಿಸಲಾಗಿದೆ. ನನಗೆ ಶ್ರದ್ದೆ ದಯಪಾಲಿಸು, ಮೇಧಾವಿಯನ್ನಾಗಿ ಮಾಡು, ಯಶಸ್ಸು ನೀಡು, ಪ್ರಜ್ಞೆ ಕೊಡು, ವಿದ್ಯೆ ಕಲಿಸು, ಬುದ್ದಿ ನೀಡು, ಧನ ಅನುಗ್ರಹಿಸು, ಬಲಶಾಲಿಯನ್ನಾಗಿ ಮಾಡು ಮಾಡು, ಆಯುಷ್ಯ ಕೊಡು, ತೇಜಸ್ಸು ದಯಪಾಲಿಸು, ಆರೋಗ್ಯ ದೇಹಿಮೇ ಅಂತ ದೇವಿ ಶಾರದೆಯಲ್ಲಿ ವಿದ್ಯಾರ್ಥಿಗಳು ಬೇಡಿಕೊಳ್ಳಲಿದ್ದಾರೆ. “ಶ್ರದ್ಧಾಂ ಮೇಧಾಮ್ ಯಶ ಪ್ರಜ್ಞಾಂ ವಿದ್ಯಾಂ ಬುದ್ಧಿಂ ಆಯುಷ್ಯಂ ತೇಜ ಆರೋಗ್ಯಂ ದೇಹಿಮೇ ದೇವಿ ಶಾರದೇ” – ಕೇಶವ ಪ್ರಸಾದ್ ಮುಳಿಯ, ದೇವಲಾಯಗಳ ಸಂವರ್ಧನ ಸಮಿತಿಯ ಮಂಗಳೂರು ವಿಭಾಗ ಪ್ರಮುಖ್
Uncategorized
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿಗೆ ‘ಅಂಬಿಯೋರ- 2026’; ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ
ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸ್ವಿನಿಕಾ ವಿಯೋಲಾ ಕ್ರಾಸ್ತಾ ಹಾಗೂ ಧ್ಯಾನ್ ಬಿ ಪ್ರಥಮ, ಪ್ರಾಡಕ್ಟ್ ಇನ್ನೊವೇಟಿವ್ ಚಾಲೆಂಜ್ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಿವಾನಿ ಹಾಗೂ ಗಾನವಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಅದ್ವಿತಿ ಜಿ ಹಾಗೂ ಎ ಜಿ ಕೃತಿಕಾ ಪ್ರಥಮ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವೇದಿತಾ ಕೆ ಮತ್ತು ತನುಶ್ರೀ ಬಿ ದ್ವಿತೀಯ, ಬಿಸ್ನೆಸ್ ಮಾಡೆಲ್ ಸ್ಪರ್ಧೆಯಲ್ಲಿ ಹೆಫ್ಜಿಬಾ ಎಂ ರಿನ್ಸಾನ್ ಹಾಗೂ ಪ್ರೀತಾ ಎ ದ್ವಿತೀಯ, ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸಜ್ನಾಜ್ ಮತ್ತು ಹಲೀಮತ್ ಸೌಧ ದ್ವಿತೀಯ ಹಾಗೂ ಮಿನಿ ಮಿಲಿಟಿಯ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಹಾದ್ ಅಜಾರ್ ಮತ್ತು ಮೊಹಮ್ಮದ್ ರಫಾಜ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.
Uncategorized
Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಮಾತನಾಡಿದರು.

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ ಬಗ್ಗೆ ಮಾತ್ರವಲ್ಲ. ಇಲ್ಲಿ ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ ಮನಸ್ಥಿತಿ ಮತ್ತು ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ ತಿಳಿದುಕೊಳ್ಳಬಹುದು. ಇದರ ನಡುವೆ ಬರುವ ಸೋಲು-ಗೆಲುವುಗಳನ್ನು ವಿದ್ಯಾರ್ಥಿಗಳು ಸಮನಾಗಿ ಸ್ವೀಕರಿಸಬೇಕು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಗೌರವ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ ವಿಚಾರಗಳು ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ ಮೇಳಗಳು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಉಪಸ್ಥಿತರಿದ್ದರು.
ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು:
ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದು ಫ್ರೋಜನ್ ಡಿಲೈಟ್ ತಂಡ ಪ್ರಥಮ ಸ್ಥಾನ, ಬೈಟ್ ಬೈ ಬೈಟ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಹಾಗೂ ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.
ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ. ಕೃತಿಕಾ ನಿರ್ವಹಿಸಿದರು.
Uncategorized
Ashok Rai-ಬದ್ಯಾರ್‌ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.

ಪುತ್ತೂರು: ಈ ಭಾಗದ ಜನರು ರಸ್ತೆಯಿಲ್ಲದೆ ಸುಮಾರು 50 ವರ್ಷಗಳಿಂದ ತೊಂದರೆಯಲ್ಲಿದ್ದರು, ಇಲ್ಲಿ ಸುಮಾರು ಹತ್ತು ಮನೆಗಳಿದೆ, ಮನೆ ಕಟ್ಟುವಾಗ ಇವರೆಲ್ಲಾ ಕಲ್ಲನ್ನು ಕಾಲು ದಾರಿಯ ಮೂಲಕ ಹೊತ್ತುಕೊಂಡೇ ಹೋಗಿದ್ದು, ವಾಹನ ಹತ್ತ ಬೇಕಾದರೆ ಒಂದಷ್ಟು ದೂರ ನಡೆದುಕೊಂಡೇ ಬರಬೇಕಾದ ಸ್ಥಿತಿ. ಇದು ಪೆರುವಾಯಿ ಗ್ರಾಮದ ಬದ್ಯಾರಿನ ಕಥೆ.
ಇವರು ರಸ್ತೆಗಾಗಿ ಮನವಿ ಹಾಗೂ ಹೋರಾಟವನ್ನು ಮಾಡುತ್ತಲೇ ಇದ್ದರು. ಆದರೆ ರಸ್ತೆ ನಿರ್ಮಾಣವಾಗುವಲ್ಲಿ ಖಾಸಗಿ ಜಾಗದ ತಕರಾರಿತ್ತು. ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಲು ಅನೇಕ ಜನಪ್ರತಿನಿಧಿಗಳು ಪ್ರಯತ್ನ ಮಾಡಿದ್ದರು ಆದರೆ ಯಾರಿದಂಲೂ ಸಾಧ್ಯವಾಗಿಲ್ಲ, ಕೆಲವರು ಭರವಸೆಯನ್ನು ಮಾತ್ರ ಕೊಟ್ಟಿದ್ದರು.
ಶಾಸಕ ಅಶೋಕ್ ರೈ ಭೇಟಿ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.
ಶಾಸಕರಿಗೆ ಸನ್ಮಾನ
ವಿವಾದ ಇತ್ಯರ್ಥಪಡಿಸಿ ೫೦ ವರ್ಷಗಳ ಹಿಂದಿನ ಬಹುದೊಡ್ಡ ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಬದ್ಯಾರು ರಸ್ತೆ ಫಲಾನುಭವಿಗಳು ಸನ್ಮಾನವನ್ನು ಮಾಡಿದ್ದಾರೆ.
ಬದ್ಯಾರ್‌ನಿವಾಸಿಗಳು ತಮ್ಮ ಕಷ್ಟವನ್ನು ನನ್ನಲ್ಲಿ ಹೇಳಿಕೊಂಡಿದ್ದರು. ರಸ್ತೆ ಇಲ್ಲದೆ ಹತ್ತು ಕುಟುಂಬಗಳು ಸಂಕಷ್ಟದಲ್ಲಿತ್ತು ಮಾತ್ರವಲ್ಲದೆ ಪಕ್ಕದಲ್ಲೇ ಒಂದು ದೇವಸ್ಥಾನದ ಕಾಮಗಾರಿಯೂ ಅರ್ಧಕ್ಕೆ ನಿಂತಿತ್ತು. ಜಾಗ ಖಾಸಗಿ ವ್ಯಕ್ತಿಗೆ ಸೇರಿದ್ದರಿಂದ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿತ್ತು. ಜಾಗದ ಮಾಲಿಕರನ್ನು ಕರೆಸಿ ಮಾತುಕತೆ ನಡೆಸಿದಾಗ ಅವರು ಮಾನವೀಯ ನೆಲೆಯಲ್ಲಿ ಒಪ್ಪಿಕೊಂಡು ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡುವ ಮೂಲಕ ದೊಡ್ಡ ಪುಣ್ಯದ ಕೆಲಸವನ್ನು ಮಾಡಿದ್ದಾರೆ. ಬೇಡಿಕೆ ಈಡೇರಿಸಿದ್ದೇನೆ, ಅನುದಾನವನ್ನು ನೀಡಿದ್ದೇನೆ ಮುಂದೆ ಅವರೆಲ್ಲರೂ ನನ್ನ ಜೊತೆ ಇರುತ್ತಾರೆ ಎಂಬ ನಂಬಿಕೆಯೂ ಇದೆ
ಅಶೋಕ್ ರೈ, ಶಾಸಕರು ಪುತ್ತೂರು
ರಸ್ತೆ ಸಂಪರ್ಕ ಇಲ್ಲದೆ 50 ವರ್ಷದಿಂದ ಪರದಾಡುತ್ತಿದ್ದೇವೆ, ನಾವು ಬಿಜೆಪಿ ಶಾಸಕರಿಗೆ, ಮುಖಂಡರಿಗಳಿಗೆ ಮನವಿ ಮಾಡಿದ್ದೆವು, ನಾವು ಬಿಜೆಪಿ ಕಾರ್ಯಕರ್ತರಾದರೂ ನಮ್ಮ ಬೇಡಿಕೆಯನ್ನು ಅವರು ಈಡೇರಿಸಿರಲಿಲ್ಲ. ನಾವು ಶಾಸಕ ಅಶೋಕ್ ರೈ ಕಚೇರಿಗೆ ಈ ವಿಚಾರವನ್ನು ತಿಳಿಸಲು ಹೋದಾಗ ಕೆಲವರು ನಮ್ಮನ್ನು ಛೇಡಿಸಿದ್ದರು. ನೀವು ಬಿಜೆಪಿ ಕಾರ್ಯಕರ್ತರಾದ ಕಾರಣ ನಿಮ್ಮ ಕೆಲಸ ಶಾಸಕರು ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಶಾಸಕರು ಪಕ್ಷ ರಾಜಕೀಯ ಮಾಡದೆ ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ, ನಾವು ಮುಂದೆ ಅಶೋಕ್ ರೈ ಜೊತೆ ಇರುತ್ತೇವೆ, ಶಾಸಕರು ಮಾಡಿದ ಈ ಉಪಕಾರವನ್ನು ಮರೆಯುವುದೇ ಇಲ್ಲ.
ಜಯರಾಮ, ಬದ್ಯಾರ್ ಫಲಾನುಭವಿ
ಯಾವ ಜನಪ್ರತಿನಿಧಿಯಿಂದಲೂ ಮಾಡಲಾಗದ ಕೆಲಸವನ್ನು ಶಾಸಕ ಅಶೋಕ್ ರೈ ಮಾಡಿದ್ದಾರೆ. ಪಕ್ಷ ಬೇದವಿಲ್ಲದೆ ಬೇಡಿಕೆಯನ್ನು ಈಡೇರಿಸಿದ್ದಾರೆ, ಇವರು ಮುಂದೆಯೂ ಶಾಸಕರಾಗಿ ಆಯ್ಕೆಯಾಗುವಲ್ಲಿ ನಾವು ಖಂಡಿತಾ ಕೆಲಸ ಮಾಡುತ್ತೇವೆ.
ಶೀಲಾ ರೈ , ಫಲಾನುಭವಿ
-
Uncategorized16 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್10 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು13 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized14 hours agoAshok Rai-ಬದ್ಯಾರ್‌ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ14 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ15 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ14 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್15 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















