ಸುಳ್ಯ
Sullia-ಸುಳ್ಯ ಐಡಿಯಲ್ ಟಿವಿಎಸ್ ನಲ್ಲಿ ‘ವಿಜಯೋತ್ಸವ ಹಬ್ಬದ ಸಂಭ್ರಮ’ : 0% ಬಡ್ಡಿ – ಉಚಿತ ಪೆಟ್ರೋಲ್ : ಕಾರು, ಬೈಕ್ ಸಹಿತ ಸಾವಿರಾರು ಬಹುಮಾನ ಗೆಲ್ಲಲು ಸುವರ್ಣಾವಕಾಶ
ಸುಳ್ಯದ ಓಡಬಾಯಿಯ ಕುಂಬಗೋಡು ಕಸ್ತೂರಿ ಕಾಂಪ್ಲೆಕ್ಸ್ ನಲ್ಲಿರುವ ಐಡಿಯಲ್ ಟಿವಿಎಸ್ ನಲ್ಲಿ ದಸರಾ ದೀಪಾವಳಿಯ ಹಬ್ಬದ ಸಂದರ್ಭದಲ್ಲಿ ರಾಜ್ಯದ ನಂ.1 ದಿನಪತ್ರಿಕೆ ವಿಜಯವಾಣಿ ನಡೆಸುತ್ತಿರುವ ವಿಜಯೋತ್ಸವ ಶಾಪಿಂಗ್ ಹಬ್ಬದ ಸಂಭ್ರಮ ನಡೆಯುತ್ತಿದೆ. ಯಾವೂದೇ ಕಂಪನಿಯ ದ್ವಿಚಕ್ರ ವಾಹನಗಳನ್ನು ವಿನಿಮಯ ಮಾಡಿಕೊಂಡು ಹೊಸ ವಾಹನ ಖರೀದಿಸಬಹುದು. ವಾಹನ ಸರ್ವಿಸ್ ನಲ್ಲೂ ರೂ.2000 ಮೇಲ್ಪಟ್ಟು ಬಿಲ್ ಆದರೆ ಕೂಪನ್ ಲಭ್ಯವಿದೆ.
ಸುಳ್ಯ: ಸುಳ್ಯದ ಓಡಬಾಯಿಯ ಕುಂಬಗೋಡು ಕಸ್ತೂರಿ ಕಾಂಪ್ಲೆಕ್ಸ್ ನಲ್ಲಿರುವ ಐಡಿಯಲ್ ಟಿವಿಎಸ್ ನಲ್ಲಿ ದಸರಾ ದೀಪಾವಳಿಯ ಹಬ್ಬದ ಸಂದರ್ಭದಲ್ಲಿ ರಾಜ್ಯದ ನಂ.1 ದಿನಪತ್ರಿಕೆ ವಿಜಯವಾಣಿ ನಡೆಸುತ್ತಿರುವ ವಿಜಯೋತ್ಸವ ಶಾಪಿಂಗ್ ಹಬ್ಬದ ಸಂಭ್ರಮ ನಡೆಯುತ್ತಿದೆ.
ಟಿವಿಎಸ್ ದ್ವಿಚಕ್ರ ವಾಹನಗಳಾದ ಅಪಾಚಿ, ಜ್ಯುಪಿಟರ್ 125 ಸಿಸಿ, ಜ್ಯುಪಿಟರ್ 100ಸಿಸಿ , ಎನ್ ಟಾರ್ಕ್, ಐಕ್ಯೂಬ್, ರಾಡೆನ್, ಸ್ಪೋರ್ಟ್ ಮೊದಲಾದವುಗಳ ಖರೀದಿಸುವ ಗ್ರಾಹಕರಿಗೆ ಝೀರೋ ಶೇಕಡಾ ಬಡ್ಡಿ ದರದಲ್ಲಿ ಲೋನ್ ವ್ಯವಸ್ಥೆ, ಉಚಿತ ಹೆಲ್ಮೆಟ್, ಉಚಿತ ಇನ್ಸೂರೆನ್ಸ್ ವ್ಯವಸ್ಥೆಯೂ ಇದೆ.
ಯಾವೂದೇ ಕಂಪನಿಯ ದ್ವಿಚಕ್ರ ವಾಹನಗಳನ್ನು ವಿನಿಮಯ ಮಾಡಿಕೊಂಡು ಹೊಸ ವಾಹನ ಖರೀದಿಸಬಹುದು.
ವಾಹನ ಸರ್ವಿಸ್ ನಲ್ಲೂ ರೂ.2000 ಮೇಲ್ಪಟ್ಟು ಬಿಲ್ ಆದರೆ ಕೂಪನ್ ಲಭ್ಯವಿದೆ.
ವಿಜಯವಾಣಿ ಪತ್ರಿಕೆಯ ಅದೃಷ್ಟ ಕೂಪನ್ ಗಳು ಅ.3 ಕ್ಕೆ ಪ್ರಾರಂಭಗೊಂಡು ನ.16ರವರೆಗೆ ನಡೆಯಲಿದ್ದು, ಈ ದಸರಾ ದೀಪಾವಳಿಯ ಸಂದರ್ಭದಲ್ಲಿ ಗ್ರಾಹಕರು ಸುಳ್ಯದ ಐಡಿಯಲ್ ಟಿವಿಎಸ್ ನಲ್ಲಿ ವಾಹನ ಖರೀದಿಸಿ ಬಹುಮಾನಗಳನ್ನು ಗೆಲ್ಲಬಹುದು ಎಂದು ಸಂಸ್ಥೆಯ ಮಾಲಕರಾದ ಕಿರಣ್ ಬಿ.ಜೆ ತಿಳಿಸಿದ್ದಾರೆ.
ವಿಜಯವಾಣಿ ವಿಜಯೋತ್ಸವದಲ್ಲಿ ಏನೆಲ್ಲ ಬಹುಮಾನಗಳಿವೆ ಗೊತ್ತೇ..?
ಸುಳ್ಯ ಆಸುಪಾಸಿನ ಜನರಿಗೆ ಟಿವಿಎಸ್ ದ್ವಿಚಕ್ರ ವಾಹನ ಖರೀದಿಯ ಮೂಲಕ ಕೂಪನ್ ಪಡೆದು ಬಹುಮಾನ ಗೆಲ್ಲುವ ಅವಕಾಶವನ್ನು ‘ಐಡಿಯಲ್ ಟಿವಿಎಸ್’ ಸಹಕಾರದೊಂದಿಗೆ ವಿಜಯವಾಣಿ ವಿಜಯೋತ್ಸವದಲ್ಲಿ ಮಾಡಿಕೊಟ್ಟಿದೆ.
ಬಹುಮಾನಗಳು: ಬಂಪರ್ ಬಹುಮಾನವಾಗಿ ಹ್ಯಾಚ್ ಬ್ಯಾಕ್ ಕಾರು 7, ದ್ವಿಚಕ್ರವಾಹನ 10, 32 ಇಂಚಿನ ಎಲ್ ಇ ಡಿ ಟಿವಿ 10, ರೆಪ್ರಿಜರೇಟರ್ 10, ವಾಶಿಂಗ್ ಮೆಶಿನ್ 10, 1 ಗ್ರಾಂ ಚಿನ್ನದ ನಾಣ್ಯ 140, ಸೇಫ್ ಲಾಕರ್ 10, ವೆಟ್ ಗ್ರೈಂಡರ್ 20, 20 ಗ್ರಾಂ ಬೆಳ್ಳಿ ನಾಣ್ಯ 223, ಮಿಕ್ಸರ್ 150, ಟ್ರಾಲಿ ಬ್ಯಾಗ್ 20, ಎಲೆಕ್ಟ್ರಿಕ್ ಕೆಟಲ್ 350, ಸ್ಮಾರ್ಟ್ ವಾಚ್ 30, ಇಂಡಕ್ಷನ್ ಸ್ಟವ್ 90, ಹಾಟ್ ಪ್ಲಾಸ್ಕ್ 300, ಪ್ರೆಶರ್ ಕುಕ್ಕರ್ 400, ಪೆಡೆಸ್ಟಲ್ ಪ್ಯಾನ್ 260, ಕಾಪರ್ ಬಾಟಲ್ 470 ಸೇರಿ ಒಟ್ಟು 2500ಕ್ಕೂ ಅಧಿಕ ಬಹುಮಾನಗಳನ್ನು ಗ್ರಾಹಕರಿಗೆ ನೀಡಲಾಗುತ್ತಿದೆ.
ಗ್ರಾಹಕರಿಗೆ ಕೂಪನ್ ಸಿಗಲಿದ್ದು ಅದರ ಮೂಲಕ ಡ್ರಾ ಮೂಲಕ ಅದೃಷ್ಟಶಾಲಿಗಳ ಆಯ್ಕೆ ನಡೆಯಲಿದೆ.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
Uncategorized22 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized10 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಮಂಗಳೂರು8 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized9 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ9 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ8 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ನಿಧನ ವಾರ್ತೆ8 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
Uncategorized10 hours agoYouTuber Dhruv Rati-ಎಸ್ಐಆರ್ ವಿರುದ್ಧ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ : ಖ್ಯಾತ ಯೂಟ್ಯೂಬರ್ ದ್ರುವ್ ರಾಠಿ ಹೋರಾಟಕ್ಕೆ ಎಂಟ್ರಿ..!


















