Connect with us

ಕಾರ್ಯಕ್ರಮಗಳು

Puttur-ಪುತ್ತೂರು: ಕ್ಯಾಂಪ್ಕೊ ಚಾಕಲೇಟ್ ಫ್ಯಾಕ್ಟರಿ ಮುಂದೆ ‘ಅಗಸ್ತ್ಯ ಇಲೆಕ್ಟ್ರೋನಿಕ್ಸ್’ ಶುಭಾರಂಭ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಪುತ್ತೂರು: ಮರೀಲು ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಮುಂಭಾಗದ ಈಶ್ವರ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಅ.11 ರಂದು ವಿವಿಧ ಕಂಪೆನಿಗಳ ಸುಪ್ರಸಿದ್ಧ ಇಲೆಕ್ಟ್ರೋನಿಕ್ಸ್ ಐಟಂಗಳ ಹಾಗೂ ಸಿಸಿ ಕ್ಯಾಮೆರಾ ಇದರ ಮಾರಾಟ ಹಾಗೂ ಸೇವಾ ಮಳಿಗೆ ಅಗಸ್ತ್ಯ ಇಲೆಕ್ಟ್ರೋನಿಕ್ಸ್ ಸಂಸ್ಥೆಯು ಉದ್ಘಾಟನೆಗೊಂಡಿತು.

Ad Widget

Ad Widget alt="Ad Widget"/>

Ad Widget

ನೂತನ ಸಂಸ್ಥೆಯನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಂಚಾಲಕ ಅರುಣ್ ಕುಮಾರ್ ಪುತ್ತಿಲರವರು ರಿಬ್ಬನ್ ಕತ್ತರಿಸಿ, ದೀಪ ಬೆಳಗಿಸಿ ಉದ್ಘಾಟಿಸಿ ನೂತನ ಸಂಸ್ಥೆಗೆ ಚಾಲನೆ ನೀಡಿದರು

Ad Widget

Ad Widget <> Ad Widget

ಅರುಣ್ ಕುಮಾ‌ರ್ ಪುತ್ತಿಲ ಮಾತನಾಡಿ ಬೆಳೆಯುತ್ತಿರುವ ಪುತ್ತೂರಿಗೆ ಇಂತಹ ಇಲೆಕ್ಟ್ರೋನಿಕ್ಸ್ ಸಂಸ್ಥೆಯು ಉದ್ಘಾಟನೆಗೊಂಡಿರುವುದು ಒಳ್ಳೆಯ ಬೆಳವಣಿಗೆ ಮಾತ್ರವಲ್ಲ ಈ ಭಾಗದ ಜನರಿಗೆ ಬಹಳ ಉಪಯುಕ್ತವಾಗಿದೆ ಸಂಸ್ಥೆಯ ಮೂಲಕ ಉತ್ತನ ಸೇವೆಗಳು ಸಾರ್ವಜನಿಕರಿಗೆ ಸಿಗುವಂತಾಗಲಿ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಂಸ್ಥೆಗೆ ಆಗಮಿಸಿ ವಸ್ತುಗಳನ್ನು ಖರೀದಿ ಮಾಡಿ ಸಂಸ್ಥೆಗೆ ಶಕ್ತಿ ತುಂಬುವ ಕೆಲಸವಾಗಲಿ ಎಂದು ಹೇಳಿ ಸಂಸ್ಥೆಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರು ಹಾಗೂ ಸುಬ್ರಹ್ಮಣ್ಯ ಸ್ವಾಮಿ ಆಶೀರ್ವದಿಸಲಿ ಎಂದು ಹಾರೈಸಿದರು.

ಹೊಸ ಉದ್ಯಮಗಳು ಪುತ್ತೂರಿಗೆ ಆಗಮಿಸುತ್ತಿರುವುದು ಪುತ್ತೂರಿನ ಬಾಹುಬಲವನ್ನು ಹೆಚ್ಚಿಸಿದೆ. ಮರೀಲಿನ ಈ ಸಂಕೀರ್ಣದಲ್ಲಿ ಇಲೆಕ್ಟೋನಿಕ್ಸ್ ಮಳಿಗೆಯು ಲೋಕಾರ್ಪಣೆಗೊಂಡಿರುವುದು ಈ ಭಾಗದ ಜನತೆಗೆ ಉಪಯೋಗವಾಗಲಿದೆ. ಗ್ರಾಹಕರು ಐಟಂಗಳನ್ನು ಖರೀದಿ ಮಾಡುವ ಮೂಲಕ ವ್ಯವಹಾರ ನಡೆಸಿ ಉದ್ಯಮವು ಬೆಳೆಯುವಂತಾಗಲಿ ಆ ಮೂಲಕ ಸಂಸ್ಥೆಯ ಮಾಲಕರಾದ ಹರ್ಷಿತ್ ರವರ ಕನಸಿನ ಈ ಸಂಸ್ಥೆ ಅಭಿವೃದ್ಧಿ ಹೊಂದಲಿ ಎಂದು ಪುತ್ತೂರು ನಗರಸಭೆ ಉಪಾಧ್ಯಕ್ಷ ಹಾಗೂ ಕಟ್ಟಡದ ಮಾಲಕ ಬಾಲಚಂದ್ರ ಕೆಮ್ಮಿಂಜೆ ತಿಳಿಸಿದರು.

Ad Widget

Ad Widget

ಧಾರ್ಮಿಕ ವಿಧಿವಿಧಾನಗಳನ್ನು ಕುಂಟಾರು ಗುರುರಾಜ್ ತಂತ್ರಿರವರು ನೆರವೇರಿಸಿದರು. ರೂಪೇಶ್ ನಾಯ್ಕ, ನವೀನ್, ರೋಹಿತ್ ಪಿ, ಜಯಪ್ರಕಾಶ್, ಯತೀನ್, ಹೊಟೇಲ್ ಅಭಿನಂದನ್ ಕೃಷ್ಣ ಕೆ.ಎಸ್, ಶರತ್ ರೈ, ಜಯಪ್ರಕಾಶ್, ನಿತಿನ್ ಹಾಗೂ ಸಂಸ್ಥೆಯ ಮಾಲಕ ಹರ್ಷಿತ್ ರವರ ತಂದೆ ಬಾಲಕೃಷ್ಣ ಮರುವಂಜ, ತಾಯಿ ಪ್ರೇಮಲತಾ, ಸಹೋದರ ಪುನೀತ್ ಸಹಿತ ಹಾಗೂ ಇನ್ನೂ ಹಲವರು ಆಗಮಿಸಿ ಶುಭ ಹಾರೈಸಿದರು. ನೂತನ ಮಳಿಗೆ ಅಗಸ್ತ್ಯ ಇಲೆಕ್ಟೋನಿಕ್ಸ್ ಮಾಲಕ ಹರ್ಷಿತ್ ರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಪ್ರೋತ್ಸಾಹಿಸಿ ಹರಸುವಂತೆ ಗ್ರಾಹಕರಲ್ಲಿ ಮನವಿ:
ನಮ್ಮ ಸಂಸ್ಥೆಯಲ್ಲಿ ವಿವಿಧ ಕಂಪೆನಿಗಳ ಟಿವಿ, ವಾಷಿಂಗ್ ಮೆಷಿನ್, ಎಸಿ, ಮಿಕ್ಸಿ, ಸಿಸಿ ಕ್ಯಾಮರಾ ಹಾಗೂ ಇನ್ನಿತರ ಇಲೆಕ್ಟ್ರೋನಿಕ್ಸ್ ಉಪಕರಣಗಳು ಮಾರಾಟ ಹಾಗೂ ಸೇವೆ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಮೊ.8050846994, 9481726994 ನಂಬರಿಗೆ ಸಂಪರ್ಕಿಸಬಹುದಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮಳಿಗೆಗೆ ಭೇಟಿ ನೀಡಿ ನಮ್ಮನ್ನು ಪ್ರೋತ್ಸಾಹಿಸಿ ಹರಸಬೇಕು. -ಹರ್ಷಿತ್, ಮಾಲಕರು, ಅಗಸ್ತ್ಯ ಇಲೆಕ್ಟ್ರೋನಿಕ್ಸ್

ಕೂಪನ್ ಡ್ರಾ:
ಗ್ರಾಹಕರಿಗಾಗಿ ಸಂಸ್ಥೆಯು ಬಹುಮಾನವಾಗಿ ಕೂಪನ್ ಡ್ರಾವನ್ನು ಆಯೋಜಿಸಿದ್ದು ಸಂಸ್ಥೆಯ ಉದ್ಘಾಟನೆಯ ಆಮಂತ್ರಣ ಪತ್ರಿಕೆಯೊಂದಿಗೆ ಈ ಕೂಪನ್ ಅನ್ನು ಲಗತ್ತಿಸಿದೆ. ಗ್ರಾಹಕರು ಈ ಕೂಪನ್ ಅನ್ನು ಭರ್ತಿ ಮಾಡಿ ಮಳಿಗೆಗೆ ಭೇಟಿ ಮಾಡಿ ಮಳಿಗೆಯಲ್ಲಿನ ಡ್ರಾಪ್ ಬಾಕ್ಸ್ ನಲ್ಲಿ ಹಾಕಿ ವಿಶೇಷ ಬಹುಮಾನವನ್ನು ಗೆಲ್ಲುವ ಸುವರ್ಣಾವಕಾಶವನ್ನು ಸಂಸ್ಥೆಯ ಮಾಲಕರು ಗ್ರಾಹಕರಿಗೆ ಒದಗಿಸಿಕೊಟ್ಟಿದ್ದು ಇದರ ಪ್ರಯೋಜನವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕಾಗಿದೆ.

ಪುತ್ತಿಲಗೆ ಸನ್ಮಾನ:
ಈ ಸಂದರ್ಭದಲ್ಲಿ ಮಳಿಗೆಯ ಮಾಲಕರಾದ ಹರ್ಷಿತ್ ಹಾಗೂ ಅವರ ತಂದೆ ಬಾಲಕೃಷ್ಣ ಮರುವಂಜ, ತಾಯಿ ಪ್ರೇಮಲತಾರವರು ಜೊತೆಗೂಡಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಂಚಾಲಕ ಅರುಣ್ ಕುಮಾರ್ ಪುತ್ತಿಲರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

Ad Widget
Click to comment

Leave a Reply

ಸ್ಥಳೀಯ

Dharmasthala-ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನ ಸಂಭ್ರಮ; ಧರ್ಮಸ್ಥಳದ ಮ್ಯೂಸಿಯಂಗೆ ಕಲಾಂ ಕಾರು, ಸಚಿತ್ರ ಅಂಚೆಚೀಟಿಗಳು, ಬಗ್ಗಿ ವಾಹನ ಕೊಡುಗೆ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನವನ್ನು ನ. 26ರಂದು ಧರ್ಮಸ್ಥಳದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಗಣ್ಯರು, ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದರು.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನವನ್ನು ನ. 26ರಂದು ಧರ್ಮಸ್ಥಳದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಗಣ್ಯರು, ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದರು.

Ad Widget

Ad Widget alt="Ad Widget"/>

Ad Widget

ಪೆರಿಂಜೆ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಆನುವಂಶಿಕ ಆಡಳಿತ ಮೊಕ್ತಸರ ಎ. ಜೀವಂಧರ ಕುಮಾರ್, ಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಡಾ. ಪ್ರಭಾಚಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಕೆ. ಅಭಯಚಂದ್ರ ಜೈನ್ ಮೂಡುಬಿದಿರೆ, ಸುದರ್ಶನ ಜೈನ್ ಬಂಟ್ವಾಳ, ನೋಟರಿ ಶ್ವೇತಾ ಜೈನ್, ಉದ್ಯಮಿ ಪ್ರಭಾತ್ ಮೂಡುಬಿದಿರೆ, ಮಾಳ ಹರ್ಷೇಂದ್ರ ಜೈನ್, ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತಾಧಿಕಾರಿ ಬಿ.ಪಿ. ಸಂಪತ್ ಕುಮಾರ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಸೇರಿದಂತೆ ಹಲವರು ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಶುಭಾಶಯಗಳನ್ನು ಅರ್ಪಿಸಿದರು.

Ad Widget

Ad Widget <> Ad Widget

ಕಲಾಂ ಬಳಸಿದ ಟಾಟಾ ನ್ಯಾನೋ ಕಾರು, ಪೆನ್ನು ಕೊಡುಗೆ
ರಾಮೇಶ್ವರಂನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅಂತಾರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಬಳಸಿದ್ದ ಟಾಟಾ ನ್ಯಾನೋ ಕಾರು, ಅದರ ದಾಖಲೆ ಪತ್ರಗಳು ಹಾಗೂ ಪೆನ್ನನ್ನು ಧರ್ಮಸ್ಥಳದ ಮಂಜೂಷಾ ವಾಹನಗಳ ಮ್ಯೂಸಿಯಂನಲ್ಲಿ ಪ್ರದರ್ಶನಕ್ಕೆ ಇಡಲು ಕೊಡುಗೆಯಾಗಿ ಹಸ್ತಾಂತರಿಸಲಾಯಿತು.

ಡಾ. ಅಬ್ದುಲ್ ಕಲಾಂ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭವನ್ನು ಸ್ಮರಿಸಿದ ಹೆಗ್ಗಡೆಯವರು, ಅವರ ಸರಳ ವ್ಯಕ್ತಿತ್ವ, ಸರ್ವಧರ್ಮ ಸಮನ್ವಯದ ನಿಲುವು, ದೇವರ ಮೇಲಿನ ದೃಢಭಕ್ತಿ ಮತ್ತು ವಿಶ್ವಾಸವನ್ನು ನೆನಪಿಸಿಕೊಂಡರು. ಮಕ್ಕಳೊಂದಿಗೆ ಮಗುವಿನಂತೆ ಮುಕ್ತವಾಗಿ ಬೆರೆಯುತ್ತಿದ್ದ ಅವರ ಗುಣ ಹಾಗೂ ಸರಳತೆ ಅವಿಸ್ಮರಣೀಯ ಎಂದು ಹೇಳಿದರು. ಕಲಾಂ ಅವರ ಸ್ಮರಣಾರ್ಥ ಅಮೂಲ್ಯ ವಸ್ತುಗಳಾದ ಕಾರು ಮತ್ತು ಪೆನ್ನನ್ನು ಕೊಡುಗೆಯಾಗಿ ನೀಡಿದ ಪ್ರತಿಷ್ಠಾನದವರಿಗೆ ಕೃತಜ್ಞತೆ ಸಲ್ಲಿಸಿದರು.

Ad Widget

Ad Widget

ಡಾ. ಎ.ಪಿ.ಜೆ.ಎಂ. ನಝೀಮಾ ಮರೈಕಾಯಲ್, ಪ್ರತಿಷ್ಠಾನದ ಕಾರ್ಯದರ್ಶಿ ಎ.ಪಿ.ಜೆ.ಎಂ. ಜೈನೀಲಾಭಿ ಡೀಮ್ ಹಾಗೂ ಸಹ ಸಂಸ್ಥಾಪಕ ಎ.ಪಿ.ಜೆ.ಎಂ. ಶೇಖ್ ಸಲೀಂ ಉಪಸ್ಥಿತರಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಸಿಇಒ ಅನಿಲ್ ಕುಮಾರ್ ಸ್ವಾಗತಿಸಿದರು.

ವೀರವನಿತೆಯರ ಸಚಿತ್ರ ಅಂಚೆಚೀಟಿ ಬಿಡುಗಡೆ
ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನದ ಸವಿ ನೆನಪಿಗಾಗಿ ವಂದೇ ಭಾರತಂ ಪರಿಕಲ್ಪನೆಯಡಿ ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ, ಭಾರತೀಯ ಅಂಚೆ ಇಲಾಖೆಯ ಪುತ್ತೂರು ವಿಭಾಗದ ಸಹಯೋಗದೊಂದಿಗೆ ವೀರವನಿತೆಯರ ಸಂಕ್ಷಿಪ್ತ ಮಾಹಿತಿಯನ್ನು ಒಳಗೊಂಡ ಸಚಿತ್ರ ಅಂಚೆಚೀಟಿಗಳನ್ನು ಬೀಡಿನಲ್ಲಿ ಸರಳ ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಯಿತು.

ದಾನಚಿಂತಾಮಣಿ ಅತ್ತಿಮಬ್ಬೆ, ರಣಭೈರವಿ, ಅಕ್ಕಾದೇವಿ, ಕಾಳಲಾ ದೇವಿ, ಕಂತಿ, ಚೌಟರ ರಾಣಿ ಅಬ್ಬಕ್ಕ ದೇವಿ, ನಾಟ್ಯರಾಣಿ ಶಾಂತಲಾದೇವಿ ಹಾಗೂ ಚಂದನಬಾಲೆಯ ಕುರಿತ ಸಚಿತ್ರ ಅಂಚೆಚೀಟಿಗಳನ್ನು ಬಿಡುಗಡೆ ಮಾಡಲಾಯಿತು.

ವಂದೇ ಮಾತರಂ ಗೀತೆಯ 150ನೇ ವರ್ಷದ ಸ್ಮರಣಾರ್ಥ ಹಾಗೂ 2026ರ ಜಿನಸಮ್ಮಿಲನ ನಡೆಯುವ ಸಮ್ಮೇದ ಶಿಖರ್ಜಿಗೆ ಸಂಬಂಧಿಸಿದ ವಿಷಯಗಳನ್ನೊಳಗೊಂಡ ಅಂಚೆಪತ್ರಗಳೂ ಸೇರಿದಂತೆ ಒಟ್ಟು ಹತ್ತು ಅಂಚೆಪತ್ರಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಚಿತ್ರ ಅಂಚೆಚೀಟಿಗಳನ್ನು ಬಿಡುಗಡೆಗೊಳಿಸಿ, ಈ ಕಾರ್ಯದಲ್ಲಿ ಕೈಜೋಡಿಸಿದ ಅಂಚೆ ಇಲಾಖೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

ಅಂಚೆ ಇಲಾಖೆಯ ನಿರ್ದೇಶಕ ಶ್ರೀಹರ್ಷ ಎನ್. ಹಾಗೂ ಪುತ್ತೂರು ಅಂಚೆ ವಿಭಾಗದ ಅಧೀಕ್ಷಕ ರವೀಂದ್ರ ನಾಯ್ಕ ಉಪಸ್ಥಿತರಿದ್ದರು. ಹುಬ್ಬಳ್ಳಿಯ ಮಹಾವೀರ ಕುಂದೂರ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಹಾಗೂ ಆಡಳಿತ ನಿರ್ದೇಶಕ ಬಿ.ಪಿ. ಸಂಪತ್ ಕುಮಾರ್ ಸಹಕರಿಸಿದರು.

ವಿಶೇಷಚೇತನರ ಸೇವೆಗೆ 10 ಆಸನಗಳ ಬಗ್ಗಿ ಕಾರು ಕೊಡುಗೆ
ಉದ್ಯಮಿ ಬಸವರಾಜ್ ಆರ್. ಅವರು ಹತ್ತು ಆಸನಗಳ ಇಲೆಕ್ಟ್ರಿಕ್ ಬಗ್ಗಿ ಕಾರನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಿದರು. ಈ ವಾಹನವನ್ನು ವಿಶೇಷಚೇತನರು ವಸತಿಗೃಹಕ್ಕೆ ತೆರಳಲು ಉಚಿತ ಸೇವೆಗಾಗಿ ಬಳಸಲಾಗುವುದು ಎಂದು ಡಾ. ಹೆಗ್ಗಡೆಯವರು ತಿಳಿಸಿದರು.

ರಾಷ್ಟ್ರಪತಿ, ಪ್ರಧಾನಿಯಿಂದ ಶುಭಾಶಯ
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತ್ಯೇಕ ಶುಭಾಶಯ ಪತ್ರಗಳ ಮೂಲಕ ಹೆಗ್ಗಡೆಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

Ad Widget
Continue Reading

ಕಾರ್ಯಕ್ರಮಗಳು

Medland Cup-2026-ಮೆಡ್‌ಲ್ಯಾಂಡ್ ಆಸ್ಪತ್ರೆಯ ವಾರ್ಷಿಕ ಸಂಭ್ರಮ: ನ.29ರಂದು ‘ಮೆಡ್‌ಲ್ಯಾಂಡ್ ಕಪ್-2026’ ಕ್ರಿಕೆಟ್ ಪಂದ್ಯಾಟ

Published

on

Ad Widget

Ad Widget

Ad Widget

Ad Widget

ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್‌ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್‌ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಪುತ್ತೂರಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ಎಂಟು ತಂಡಗಳು ಈ ಕ್ರೀಡಾಕೂಟದಲ್ಲಿ ಸೆಣಸಾಡಲಿವೆ. ಪುತ್ತೂರು ಪೊಲೀಸ್ ಎಲೆವೆನ್, ಫಾರೆಸ್ಟ್ ಎಲೆವೆನ್, ಮೆಡ್ಲ್ಯಾಂಡ್ ಫಾಲ್ಕನ್ಸ್, ಪುತ್ತೂರು ಬಾರ್ ಅಸೋಸಿಯೇಷನ್, ಮೆಸ್ಕಾಂ ಪುತ್ತೂರು ಪರ್ಲ್ಸ್, ಕ್ಯಾಂಪ್ಕೋ ಪುತ್ತೂರು, ಕೆಎಸ್‌ಆರ್‌ಟಿಸಿ ಪುತ್ತೂರು ಹಾಗೂ ಸಿಎಂಸಿ ಎಲೆವೆನ್ ಪುತ್ತೂರು ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಲಿವೆ.

Ad Widget

Ad Widget <> Ad Widget

ಆಸ್ಪತ್ರೆಯ ಒಂದು ವರ್ಷದ ವೈದ್ಯಕೀಯ ಸೇವೆಯ ಸಂಭ್ರಮವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ವಿವಿಧ ಇಲಾಖೆಗಳ ನಡುವೆ ಪರಸ್ಪರ ಬಾಂಧವ್ಯ ವೃದ್ಧಿಸುವುದರ ಜತೆಗೆ ಕ್ರೀಡಾಸ್ಫೂರ್ತಿ, ತಂಡದ ಒಗ್ಗಟ್ಟು ಹಾಗೂ ಸ್ನೇಹಭಾವವನ್ನು ಉತ್ತೇಜಿಸುವುದು ಪಂದ್ಯಾಟದ ಆಶಯವಾಗಿದೆ.

ಈ ಕುರಿತು ಮಾಹಿತಿ ನೀಡಿದ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯ ಡಾ. ವಿಶಾಲ್ ಅವರು, ಆಸ್ಪತ್ರೆಯ ಪ್ರಥಮ ವರ್ಷದ ಸಂಭ್ರಮವನ್ನು ಕ್ರೀಡಾಕೂಟದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

Ad Widget

Ad Widget

ಈ ಸಂದರ್ಭದಲ್ಲಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ರಝಾಕ್ ಸಾಲ್ಮರ ಹಾಗೂ ಅಖಿಲ್ ಉಪಸ್ಥಿತರಿದ್ದರು.

Ad Widget
Continue Reading

ಕಾರ್ಯಕ್ರಮಗಳು

Silver Jubilee-ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ 25ನೇ ವರ್ಷದ ಸಂಭ್ರಮ: ಡಿ.26ರಂದು ಬೆಳ್ಳಿಹಬ್ಬ ʻರಜತ ರಶ್ಮಿʼ; ಜ ಸಮಾಲೋಚನಾ ಸಭೆಯಲ್ಲಿ ಸವಣೂರು ಸೀತಾರಾಮ ರೈ ಘೋಷಣೆ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿಯೇ ಶಿಕ್ಷಣ ಕ್ಷೇತ್ರದಲ್ಲಿ ಹೆಸರನ್ನು ಮಾಡಿರುವ ವಿದ್ಯಾಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಬೆಳ್ಳಿಹಬ್ಬ ಆಚರಣೆಯ ಸಮಾರಂಭ ರಜತ ರಶ್ಮಿ ದ. 26 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಸಹಕಾರರತ್ನ ಸವಣೂರು ಸೀತಾರಾಮ ರೈ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ರಾಜ್ಯದಲ್ಲಿಯೇ ಶಿಕ್ಷಣ ಕ್ಷೇತ್ರದಲ್ಲಿ ಹೆಸರನ್ನು ಮಾಡಿರುವ ವಿದ್ಯಾಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಬೆಳ್ಳಿಹಬ್ಬ ಆಚರಣೆಯ ಸಮಾರಂಭ ರಜತ ರಶ್ಮಿ ದ. 26 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಸಹಕಾರರತ್ನ ಸವಣೂರು ಸೀತಾರಾಮ ರೈ ಹೇಳಿದರು.

Ad Widget

Ad Widget alt="Ad Widget"/>

Ad Widget

ನ. 24 ರಂದು ಸಂಸ್ಥೆಯ ಸಭಾಂಗಣದಲ್ಲಿ ಬೆಳ್ಳಿಹಬ್ಬ ಆಚರಣೆಯ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ನಮ್ಮ ಸಂಸ್ಥೆಯು 2001 ಮೇ 23 ರಂದು ಪ್ರಾರಂಭಗೊಂಡಿತು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಅಂಗ್ಗಮಾಧ್ಯಮ ಶಿಕ್ಷಣದೊಂದಿಗೆ ಸಕಲ ಸೌಲಭ್ಯಗಳನ್ನು ಒಳಗೊಂಡ ವ್ಯವಸ್ಥೆಯನ್ನು ನೀಡುವುದರ ಜೊತೆಗೆ ರಾಜ್ಯದ ನಾನಾ ಜಿಲ್ಲೆಗಳ ವಿದ್ಯಾರ್ಥಿಗಳು ಕಲಿಕೆಗೆ ಇಲ್ಲಿಗೆ ಆಗಮಿಸಿ, ಉತ್ತಮ ಶಿಕ್ಷಣ ಪಡೆದು, ಇಂದು ದೇಶ-ವಿದೇಶಗಳಲ್ಲಿ ಉನ್ನತವಾದ ಹುದ್ದೆಗಳಲ್ಲಿ ಇದ್ದಾರೆ. ಇದು ನಮಗೆ ತುಂಬಾ ಸಂತೋಷದ ವಿಚಾರ, ಸಂಸ್ಥೆಯ ಬೆಳ್ಳಿಹಬ್ಬವನ್ನು ಅರ್ಥಪೂರ್ಣ ಕಾರ್‍ಯಕ್ರಮವಾಗಿ ರೂಪಿಸುವ ನಿಟ್ಟಿನಲ್ಲಿ ದ. 26 ರಂದು ಬೆಳಿಗ್ಗೆ ಸವಣೂರು ಬಸದಿ ವಠಾರದಿಂದ ಮುಖ್ಯರಸ್ತೆಯಾಗಿ ಸಂಸ್ಥೆಯ ವಠಾರಕ್ಕೆ ಅದ್ದೂರಿಯಾದ ಮೆರವಣಿಗೆಯನ್ನು ಆಯೋಜಿಸಲಿವೆ.

Ad Widget

Ad Widget <> Ad Widget

ಬಳಿಕ ಸಭಾ ಕಾರ್‍ಯಕ್ರಮ, ಸಾಂಸ್ಕೃತಿಕ ವೈವಿಧ್ಯಮಯ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಿವೆ ಎಂದು ಹೇಳಿದರು.

ವೈವಿಧ್ಯಮಯ 40 ಸ್ಟಾಲ್‌ಗಳು: ರಜತ ಸಂಭ್ರಮದ ನಿಟ್ಟಿನಲ್ಲಿ ನಾವು ಸಂಸ್ಥೆಯ ಅವರಣದಲ್ಲಿ 40 ಬಗೆಯ ವಿವಿಧ ಸ್ಟಾಲ್‌ಗಳನ್ನು ಹಾಕಲಿವೆ. ಈ ಸ್ಟಾಲ್‌ನಲ್ಲಿ ಜಿಲ್ಲೆಯ ವಿವಿಧ ಕಡೆಯಿಂದ ಅನೇಕ ಬಗೆಯ ವಸ್ತುಗಳ ಮಾರಾಟ, ಪ್ರದರ್ಶನ ಇರಲಿದೆ ಎಂದು ಸೀತಾರಾಮ ರೈ ತಿಳಿಸಿದರು.

Ad Widget

Ad Widget

ಮಾದರಿ ಕಾರ್‍ಯಕ್ರಮ ಆಗಬೇಕು-ಬಾಲ್ಯೊಟ್ಟು: `ರಜತರಶ್ಮಿ’ ಕಾರ್‍ಯಕ್ರಮದ ಗೌರವಾಧ್ಯಕ್ಷ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಮಾತನಾಡಿ ಕಾರ್‍ಯಕ್ರಮ ಸಂಘಟಿಸುವುದರಲ್ಲಿ ಸೀತಾರಾಮ ರೈ ಅವರು ಬಹಳಷ್ಟು ಹೆಸರನ್ನು ಪಡೆದಿದ್ದಾರೆ, ವಿದ್ಯಾರಶ್ಮಿ ವಿದ್ಯಾಲಯ ಮತ್ತು ಆದರ್ಶ ವಿವಿಧೋzಶ ಸಹಕಾರ ಸಂಸ್ಥೆಗಳನ್ನು ಸ್ಥಾಪಿಸಿರುವ ಸೀತಾರಾಮ ರೈ ಅವರನ್ನು ವಿದ್ಯಾರಶ್ಮಿ ಸಂಸ್ಥೆಯ ರಜತ ಸಂಭ್ರಮ ಕಾರ್‍ಯಕ್ರಮದಲ್ಲಿ ಸವಣೂರು ಬಸದಿ ವಠಾರದಿಂದ ವಿದ್ಯಾರಶ್ಮಿ ವಿದ್ಯಾಲಯದ ತನಕ ರಥದ ಮೂಲಕ ವೈಭವಯುತವಾದ ಮೆರವಣಿಗೆಯಲ್ಲಿ ಕರೆತರಲಾಗುವುದು, ಮೆರವಣಿಗೆಯನ್ನು ವಿಶೇಷ ರೀತಿಯಲ್ಲಿ ಆಯೋಜಿಸಲಾಗುವುದು.

ಕಲ್ಲಡ್ಕಗೊಂಬೆಗಳ ಕುಣಿತದೊಂದಿಗೆ ಮೆರವಣಿಗೆಯ ಮೆರಗು ಹೆಚ್ಚಲಿದೆ ಎಂದರು. ಸೀತಾರಾಮ ರೈ ಓರ್ವ ಸಾಧಕರು, ಅವರ ನೇತೃತೃದಲ್ಲಿ ನಡೆಯುವ ಸಂಸ್ಥೆಯ ಬೆಳ್ಳಿಹಬ್ಬ ಮಾದರಿ ಕಾರ್‍ಯಕ್ರಮವಾಗಬೇಕು ಎಂದು ಬಾಲ್ಯೊಟ್ಟು ಹೇಳಿದರು.

ನ್ಯಾಯವಾದಿ ಎನ್.ಜಯಪ್ರಕಾಶ್ ರೈ ಸುಳ್ಯ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಪ್ರಮುಖರಾದ ಪಿ.ಡಿ. ಕೃಷ್ಣಕುಮಾರ್ ರೈ ದೇವಸ್ಯ, ಸುದರ್ಶನ್ ನಾಕ್ ಕಂಪ, ಕುಸುಮಾ ಶೆಟ್ಟಿ ಕೆರೆಕ್ಕೋಡಿ, ಸುರೇಶ್ ರೈ ಸೂಡಿಮುಳ್ಳು, ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆ ವಿವಿಧ ಸಲಹೆ-ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ಟ್ರಸ್ಟಿಗಳಾದ ಎನ್.ಸುಂದರ ರೈ ಸವಣೂರು, ರಶ್ಮಿ ಅಶ್ವಿನ್ ಶೆಟ್ಟಿ ಸವಣೂರು, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ| ರಾಜಲಕ್ಷ್ಮಿ ಎಸ್ ರೈ, ಸಂಸ್ಥೆಯ ರಕ್ಷಕ-ಶಿಕ್ಷಕ ಅಧ್ಯಕ್ಷ ಡಾ. ಜೀವನ್ ಪ್ರಕಾಶ್ ರೈ ಉಪಸ್ಥಿತರಿದ್ದರು.

ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ ಸ್ವಾಗತಿಸಿ, ಉಪನ್ಯಾಸಕಿ ಕಸ್ತೂರಿ ವಂದಿಸಿದರು. ಶಿಕ್ಷಕಿ ಚೇತನಾ ಕಾರ್‍ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಪ್ರತಿಭಾ ಸ್ಮರಣ ಸಂಚಿಕೆ ತಯಾರಿಯ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದಲ್ಲಿ ಜಿ.ಪಂ, ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ, ಸವಣೂರು ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ನಡುಬೈಲು, ಸವಣೂರು ಬೊಳ್ಳಿಬೊಲ್ಪು ತುಳುಕೂಟದ ಅಧ್ಯಕ್ಷ ಸತೀಶ್ ಬಲ್ಯಾಯ ಕನ್ನಡಕುಮೇರು, ಸವಣೂರು ಗ್ರಾ.ಪಂ, ಮಾಜಿ ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ, ಸಂಗೀತ ಪ್ರತಿಭೆ ಅಖಿಲಾ ನೆಕ್ರಾಜೆ, ಶಾಲಾ ಎಸ್‌ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

ರಜತ ರಶ್ಮಿ ಊರಿನ ಹಬ್ಬ
ವಿದ್ಯಾರಶ್ಮಿ ವಿದ್ಯಾಲಯದ ರಜತ ಸಂಭ್ರಮದ ಬೆಳ್ಳಿಹಬ್ಬ `ರಜತ ರಶ್ಮಿ’ ದ. 26 ರಂದು ದಿನಪೂರ್ತಿ ಅದ್ದೂರಿಯಾಗಿ ನಡೆಯಲಿದೆ. ಈ ಸುಂದರವಾದ ಕಾರ್‍ಯಕ್ರಮ ಅರ್ಥಪೂರ್ಣ ರೀತಿಯಲ್ಲಿ ನಡೆಯುವಲ್ಲಿ ಸಂಸ್ಥೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು, ಊರ-ಪರವೂರ ಹಿತೈಷಿಗಳ ಪೂರ್ಣ ಸಹಕಾರ ಅಗತ್ಯ ಇದೆ. ರಜತ ರಶ್ಮಿ ಕಾರ್‍ಯಕ್ರಮ ಊರಿನ ಹಬ್ಬದಂತೆ ಆಗಲಿದೆ.
-ಸವಣೂರು ಸೀತಾರಾಮ ರೈ, ಸಂಚಾಲಕರು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಸವಣೂರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!