Connect with us

Uncategorized

Mangalore dasara : ಮಂಗಳೂರು ದಸರಾ ಕುದ್ರೋಳಿ ದೇವಲಾಯದಲ್ಲಿ 9 ದಿನ ನವದುರ್ಗೆಯರಿಗೆ ವಿಶೇಷ ಪೂಜೆ – ಇಂದು ವೈಭವದ ಶೋಭಾಯಾತ್ರೆ

Published

on



Ad Widget

Ad Widget

Ad Widget

Ad Widget


Photo Credit: True Pics Photography Mangalore

Ad Widget

Ad Widget

Ad Widget

Ad Widget

ದೇಶಾದ್ಯಂತ ನವರಾತ್ರಿ ಹಾಗೂ ವಿಜಯದಶಮಿ ವಿಜ್ರಂಭಣೆ, ಅದ್ದೂರಿಯಿಂದ ನಡೆಯುತ್ತದೆಯಾದರೂ, ಕರ್ನಾಟಕದಲ್ಲಿ ಈ ಹಬ್ಬಕ್ಕೆ ವಿಶೇಷ ಮಾನ್ಯತೆ ಇದೆ. ಇದು ಇಲ್ಲಿ ನಾಡಹಬ್ಬ ಆಗಿಯೂ ಪ್ರಸಿದ್ದ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರಮುಖವಾಗಿ ಆಚರಿಸಲಾಗುತ್ತದೆಯಾದರೂ ರಾಜ್ಯದ ವಿವಿಧೆಡೆಯಲ್ಲಿಯೂ ಇದನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ವಿಜಯದಶಮಿಯ ಶೋಭಾಯಾತ್ರೆ ಮಂಗಳೂರು ದಸರಾ ಎಂದೇ ಪ್ರಸಿದ್ಧವಾಗಿದೆ. ದಸಾರ ಹಬ್ಬದ ಸಂದರ್ಭ 10 ದಿನಗಳ ಕಾಲ ಮಂಗಳೂರು ನಗರದ ಮೂಲೆಮೂಲೆಗಳಲ್ಲಿ ಬಣ್ಣ ಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕಾರ ಮಾಡಲಾಗುತ್ತದೆ, ಇದರಿಂದ ಇಡೀ ಮಂಗಳೂರು ವಿವಿಧ ಬಣ್ಣಗಳಿಂದ ಝಗಮಗಿಸುತ್ತಿರುತ್ತದೆ.

Ad Widget

Ad Widget <> Ad Widget

ಇನ್ನೂ ಕರಾವಳಿ ಜಿಲ್ಲೆಯಲ್ಲಿ ನವರಾತ್ರಿ ಹಬ್ಬದ ಪ್ರಮುಖ ಆಕರ್ಷಣೆ ವೇಷಗಳು. ಹುಲಿ, ಸಿಂಹ, ಶಾರ್ದೂಲ ಹಾಗೂ ವಿವಿಧ ರೀತಿಯ ರಕ್ಕಸ ಹಾಗೂ ದೇವತೆಗಳ ವೇಷ ಧರಿಸುವುದು ಇಲ್ಲಿ ತಲೆ ತಲಾಂತರದಿಂದ ಪಾಲಿಸಿಕೊಂಡು ಬರುತ್ತಿರುವ ಸಂಪ್ರಾದಯ. ಇದರಲ್ಲಿನ ಪ್ರಸಿದ್ದ ಹುಲಿ ವೇ಼ ತಂಡಗಳು ಮಂಗಳೂರು ದಸಾರದ ನೆರವಣಿಗೆಯಲ್ಲಿ ಭಾಗವಹಿಸಿ ಜನರಿಗೆ ಮುದ ನೀಡುತ್ತಿವೆ.



Ad Widget

ಗೋಕರ್ಣನಾಥೇಶ್ವರ ದೇವಾಲಯದಲ್ಲಿ ನಡೆಯುವ ದಸರಾ ಹಬ್ಬದ ಸಮಯದಲ್ಲಿ ಶಾರದಾದೇವಿ ಸೇರಿದಂತೆ 9 ದೇವಿಯರು ಮತ್ತು ಮಹಾಗಣಪತಿ ದೇವರಿಗೆ ವೈದಿಕ ಪದ್ಧತಿಯಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಗಣಪತಿ, ಶಾರದಾ ಮಾತೆ,ಆದಿಶಕ್ತಿಯೊಂದಿಗೆ ನವದುರ್ಗೆಯರಾದ ಶೈಲಪುತ್ರಿ,ಬ್ರಹ್ಮಚಾರಿಣಿ, ಚಂದ್ರಘಂಟ,ಕೂಷ್ಮಾಂಡಿನಿ, ದಾತ್ರಿ,ಮಹಾಕಾಳಿ,ಕಾತ್ಯಾಯಿನಿ,ಸ್ಕಂದಮಾತೆ ಮಹಾಗೌರಿಯರನ್ನು ಇಲ್ಲಿನ ಸುಂದರ ಕಲಾಕೃತಿಗಳ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿದೆ.

Ad Widget

Ad Widget

ಭೂಲೋಕದ ಸ್ವರ್ಗದಂತಿರುವ ಸಭಾಂಗಣದಲ್ಲಿ ಅತ್ಯಾಕರ್ಷ ಸಂಯೋಜನೆಯಲ್ಲಿ ಈ 12 ದೇವರುಗಳನ್ನು ನೋಡುವುದು ಭಕ್ತರ ಕಣ್ಣಿಗೊಂದು ಹಬ್ಬವೇ ಸರಿ. ಮೈಸೂರು ದಸರಾಕ್ಕೆ ಇದು ಸರಿಸಾಟಿ ಎಂದು ಭಕ್ತರು ಬಣ್ಣಿಸುತ್ತಾರೆ.ಈ ರೀತಿ ನವರಾತ್ರಿಯ ಸಂದರ್ಭ ದೇವರುಗಳ ಪ್ರತಿಷ್ಠಾಪನೆ ದೇಶದ ಬೇರೆಲ್ಲೂ ಆಗೋದಿಲ್ಲ ಅನ್ನುವುದು ಇಲ್ಲಿನ ವಿಶೇಷತೆ.

ಇಂದು ( ಅ13 ) ನಡೆಯುವ ದಸರಾ ಮೆರವಣಿಗೆಯು ಮಂಗಳೂರು ದಸಾರದ ವಿಶೇಷ ಆಕರ್ಷಣೆ, ಈ ಭವ್ಯ ಹಾಗೂ ದಿವ್ಯ ಮೆರವಣಿಗೆಯನ್ನು ವೀಕ್ಷಿಸಲು ಮಂಗಳೂರಿನ ನಾಗರಿಕರು ಮತ್ತು ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ನಗರದಲ್ಲಿ ಸೇರುತ್ತಾರೆ. ಜನರು ತಮ್ಮ ಮನೆ ಮತ್ತು ವ್ಯಾಪಾರ ಕಟ್ಟಡ, ಅಂಗಡಿಗಳು, ಹೋಟೆಲ್ಗಳು ಇತ್ಯಾದಿಗಳನ್ನು ಅಲಂಕರಿಸುತ್ತಾರೆ.

ವಿಜಯದಶಮಿಯ ಸಂಜೆ ವೇಳೆಗೆ ಕುದ್ರೋಳಿ ದೇವಸ್ಥಾನದಿಂದ ಆರಂಭವಾಗಿ ಮಂಗಳೂರಿನ ಪ್ರಮುಖ ರಸ್ತೆಗಳ ಮೂಲಕ ಸಾಗುತ್ತದೆ. ನವದುರ್ಗೆಯರ ವಿಗ್ರಹಗಳು ಹಾಗೂ ಮಹಾಗಣಪತಿ, ಶಾರದೆಯರ ಮೂರ್ತಿಗಳನ್ನು ಪುಷ್ಪಾರ್ಚನೆ ಮಾಡಿ, ಅಲಂಕಾರಿಕ ಛತ್ರಿ, ಪಟಲ, ವಾದ್ಯ, ಚೆಂಡೆ, ಸಾಂಪ್ರದಾಯಿಕ ನೃತ್ಯ, ಜಾನಪದ ನೃತ್ಯ, ಸಂಗೀತ, ಯಕ್ಷಗಾನ ಪಾತ್ರಧಾರಿಗಳು, ಡೊಳ್ಳು ಕುಣಿತ, ಗೊಂಬೆಗಳ ಮೆರವಣಿಗೆ ಕರಗ, ಹುಲಿವೇಷ (ಹುಲಿ ನೃತ್ಯ) ಮತ್ತು ಇತರ ಸಾಂಪ್ರದಾಯಿಕ ಕಲಾ ಪ್ರಕಾರಗಳೊಂದಿಗೆ ಸಾಗುವ ಮೆರವಣಿಗೆ ಮಾರನೆಯ ದಿನ ಮುಂಜಾನೆ ವಿಗ್ರಹ ವಿಸರ್ಜನೆಯೊಂದಿಗೆ ಪೂರ್ಣಗೊಳ್ಳುತ್ತದೆ.

Ad Widget
Click to comment

Leave a Reply

Uncategorized

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿಗೆ ‘ಅಂಬಿಯೋರ- 2026’; ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’  ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’  ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ  ಸ್ವಿನಿಕಾ ವಿಯೋಲಾ ಕ್ರಾಸ್ತಾ ಹಾಗೂ ಧ್ಯಾನ್ ಬಿ ಪ್ರಥಮ, ಪ್ರಾಡಕ್ಟ್ ಇನ್ನೊವೇಟಿವ್ ಚಾಲೆಂಜ್ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಿವಾನಿ ಹಾಗೂ ಗಾನವಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಅದ್ವಿತಿ ಜಿ ಹಾಗೂ ಎ ಜಿ ಕೃತಿಕಾ ಪ್ರಥಮ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವೇದಿತಾ ಕೆ ಮತ್ತು ತನುಶ್ರೀ ಬಿ ದ್ವಿತೀಯ, ಬಿಸ್ನೆಸ್ ಮಾಡೆಲ್ ಸ್ಪರ್ಧೆಯಲ್ಲಿ ಹೆಫ್ಜಿಬಾ ಎಂ ರಿನ್ಸಾನ್ ಹಾಗೂ ಪ್ರೀತಾ ಎ ದ್ವಿತೀಯ, ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸಜ್ನಾಜ್ ಮತ್ತು ಹಲೀಮತ್ ಸೌಧ ದ್ವಿತೀಯ ಹಾಗೂ ಮಿನಿ ಮಿಲಿಟಿಯ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಹಾದ್ ಅಜಾರ್ ಮತ್ತು ಮೊಹಮ್ಮದ್ ರಫಾಜ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.



Ad Widget
Ad Widget
Continue Reading

Uncategorized

Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ ಬಗ್ಗೆ ಮಾತ್ರವಲ್ಲ. ಇಲ್ಲಿ ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ ಮನಸ್ಥಿತಿ ಮತ್ತು ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ ತಿಳಿದುಕೊಳ್ಳಬಹುದು. ಇದರ ನಡುವೆ ಬರುವ ಸೋಲು-ಗೆಲುವುಗಳನ್ನು ವಿದ್ಯಾರ್ಥಿಗಳು ಸಮನಾಗಿ ಸ್ವೀಕರಿಸಬೇಕು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಗೌರವ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ ವಿಚಾರಗಳು ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ ಮೇಳಗಳು ಅಗತ್ಯ ಎಂದು ಹೇಳಿದರು.



Ad Widget

ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಉಪಸ್ಥಿತರಿದ್ದರು.

Ad Widget

Ad Widget

ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು:

ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದು ಫ್ರೋಜನ್ ಡಿಲೈಟ್ ತಂಡ ಪ್ರಥಮ ಸ್ಥಾನ, ಬೈಟ್ ಬೈ ಬೈಟ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಹಾಗೂ ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.

ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ. ಕೃತಿಕಾ ನಿರ್ವಹಿಸಿದರು.

Ad Widget
Continue Reading

Uncategorized

Ashok Rai-ಬದ್ಯಾರ್‌ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ

Published

on



Ad Widget

Ad Widget

Ad Widget

Ad Widget

ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಈ ಭಾಗದ ಜನರು ರಸ್ತೆಯಿಲ್ಲದೆ ಸುಮಾರು 50 ವರ್ಷಗಳಿಂದ ತೊಂದರೆಯಲ್ಲಿದ್ದರು, ಇಲ್ಲಿ ಸುಮಾರು ಹತ್ತು ಮನೆಗಳಿದೆ, ಮನೆ ಕಟ್ಟುವಾಗ ಇವರೆಲ್ಲಾ ಕಲ್ಲನ್ನು ಕಾಲು ದಾರಿಯ ಮೂಲಕ ಹೊತ್ತುಕೊಂಡೇ ಹೋಗಿದ್ದು, ವಾಹನ ಹತ್ತ ಬೇಕಾದರೆ ಒಂದಷ್ಟು ದೂರ ನಡೆದುಕೊಂಡೇ ಬರಬೇಕಾದ ಸ್ಥಿತಿ. ಇದು ಪೆರುವಾಯಿ ಗ್ರಾಮದ ಬದ್ಯಾರಿನ ಕಥೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ರಸ್ತೆಗಾಗಿ ಮನವಿ ಹಾಗೂ ಹೋರಾಟವನ್ನು ಮಾಡುತ್ತಲೇ ಇದ್ದರು. ಆದರೆ ರಸ್ತೆ ನಿರ್ಮಾಣವಾಗುವಲ್ಲಿ ಖಾಸಗಿ ಜಾಗದ ತಕರಾರಿತ್ತು. ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಲು ಅನೇಕ ಜನಪ್ರತಿನಿಧಿಗಳು ಪ್ರಯತ್ನ ಮಾಡಿದ್ದರು ಆದರೆ ಯಾರಿದಂಲೂ ಸಾಧ್ಯವಾಗಿಲ್ಲ, ಕೆಲವರು ಭರವಸೆಯನ್ನು ಮಾತ್ರ ಕೊಟ್ಟಿದ್ದರು.

Ad Widget

Ad Widget <> Ad Widget

ಶಾಸಕ ಅಶೋಕ್ ರೈ ಭೇಟಿ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.



Ad Widget

ಶಾಸಕರಿಗೆ ಸನ್ಮಾನ
ವಿವಾದ ಇತ್ಯರ್ಥಪಡಿಸಿ ೫೦ ವರ್ಷಗಳ ಹಿಂದಿನ ಬಹುದೊಡ್ಡ ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಬದ್ಯಾರು ರಸ್ತೆ ಫಲಾನುಭವಿಗಳು ಸನ್ಮಾನವನ್ನು ಮಾಡಿದ್ದಾರೆ.

Ad Widget

Ad Widget

ಬದ್ಯಾರ್‌ನಿವಾಸಿಗಳು ತಮ್ಮ ಕಷ್ಟವನ್ನು ನನ್ನಲ್ಲಿ ಹೇಳಿಕೊಂಡಿದ್ದರು. ರಸ್ತೆ ಇಲ್ಲದೆ ಹತ್ತು ಕುಟುಂಬಗಳು ಸಂಕಷ್ಟದಲ್ಲಿತ್ತು ಮಾತ್ರವಲ್ಲದೆ ಪಕ್ಕದಲ್ಲೇ ಒಂದು ದೇವಸ್ಥಾನದ ಕಾಮಗಾರಿಯೂ ಅರ್ಧಕ್ಕೆ ನಿಂತಿತ್ತು. ಜಾಗ ಖಾಸಗಿ ವ್ಯಕ್ತಿಗೆ ಸೇರಿದ್ದರಿಂದ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿತ್ತು. ಜಾಗದ ಮಾಲಿಕರನ್ನು ಕರೆಸಿ ಮಾತುಕತೆ ನಡೆಸಿದಾಗ ಅವರು ಮಾನವೀಯ ನೆಲೆಯಲ್ಲಿ ಒಪ್ಪಿಕೊಂಡು ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡುವ ಮೂಲಕ ದೊಡ್ಡ ಪುಣ್ಯದ ಕೆಲಸವನ್ನು ಮಾಡಿದ್ದಾರೆ. ಬೇಡಿಕೆ ಈಡೇರಿಸಿದ್ದೇನೆ, ಅನುದಾನವನ್ನು ನೀಡಿದ್ದೇನೆ ಮುಂದೆ ಅವರೆಲ್ಲರೂ ನನ್ನ ಜೊತೆ ಇರುತ್ತಾರೆ ಎಂಬ ನಂಬಿಕೆಯೂ ಇದೆ
ಅಶೋಕ್ ರೈ, ಶಾಸಕರು ಪುತ್ತೂರು

ರಸ್ತೆ ಸಂಪರ್ಕ ಇಲ್ಲದೆ 50 ವರ್ಷದಿಂದ ಪರದಾಡುತ್ತಿದ್ದೇವೆ, ನಾವು ಬಿಜೆಪಿ ಶಾಸಕರಿಗೆ, ಮುಖಂಡರಿಗಳಿಗೆ ಮನವಿ ಮಾಡಿದ್ದೆವು, ನಾವು ಬಿಜೆಪಿ ಕಾರ್ಯಕರ್ತರಾದರೂ ನಮ್ಮ ಬೇಡಿಕೆಯನ್ನು ಅವರು ಈಡೇರಿಸಿರಲಿಲ್ಲ. ನಾವು ಶಾಸಕ ಅಶೋಕ್ ರೈ ಕಚೇರಿಗೆ ಈ ವಿಚಾರವನ್ನು ತಿಳಿಸಲು ಹೋದಾಗ ಕೆಲವರು ನಮ್ಮನ್ನು ಛೇಡಿಸಿದ್ದರು. ನೀವು ಬಿಜೆಪಿ ಕಾರ್ಯಕರ್ತರಾದ ಕಾರಣ ನಿಮ್ಮ ಕೆಲಸ ಶಾಸಕರು ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಶಾಸಕರು ಪಕ್ಷ ರಾಜಕೀಯ ಮಾಡದೆ ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ, ನಾವು ಮುಂದೆ ಅಶೋಕ್ ರೈ ಜೊತೆ ಇರುತ್ತೇವೆ, ಶಾಸಕರು ಮಾಡಿದ ಈ ಉಪಕಾರವನ್ನು ಮರೆಯುವುದೇ ಇಲ್ಲ.
ಜಯರಾಮ, ಬದ್ಯಾರ್ ಫಲಾನುಭವಿ

ಯಾವ ಜನಪ್ರತಿನಿಧಿಯಿಂದಲೂ ಮಾಡಲಾಗದ ಕೆಲಸವನ್ನು ಶಾಸಕ ಅಶೋಕ್ ರೈ ಮಾಡಿದ್ದಾರೆ. ಪಕ್ಷ ಬೇದವಿಲ್ಲದೆ ಬೇಡಿಕೆಯನ್ನು ಈಡೇರಿಸಿದ್ದಾರೆ, ಇವರು ಮುಂದೆಯೂ ಶಾಸಕರಾಗಿ ಆಯ್ಕೆಯಾಗುವಲ್ಲಿ ನಾವು ಖಂಡಿತಾ ಕೆಲಸ ಮಾಡುತ್ತೇವೆ.
ಶೀಲಾ ರೈ , ಫಲಾನುಭವಿ

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading