ರಾಜಕೀಯ
ಇಫ್ತಾರ್ ಕೂಟ ಮೂಲಕ ಖಾನ್ ಗಳ ಶೀತಲ ಸಮರ ಬಗೆಹರಿಸಿ ಖ್ಯಾತನಾದ ಅಜಿತ್ ಪವಾರ್ ಆಪ್ತ ಮಾಜಿ ಸಚಿವ ಬಾಬಾ ಸಿದ್ದಿಕಿಗೆ ಗುಂಡಿಟ್ಟು ಹತ್ಯೆ : ಲಾರೆನ್ಸ್ ಬಿಷ್ಣೋಯ್ ಸಹಚರರ ಬಂಧನ
ಇಫ್ತಾರ್ ಕೂಟ ಹಾಗೂ ಅದ್ಧೂರಿ ಪಾರ್ಟಿಗಳ ಹೆಸರಲ್ಲಿ ಸಿನಿಮಾ ರಂಗದ ದೈತ್ಯರನ್ನೆಲ್ಲ ಒಂದೆಡೆ ಗುಡ್ಡೆ ಹಾಕುತ್ತಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಅಜಿತ್ ಪವಾರ್ ಆಪ್ತ ಬಾಬಾ ಸಿದ್ದಿಕಿ ಅವರನ್ನು ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.
ಸದ್ಯ ಎನ್‌ಸಿಪಿಯ ಅಜಿತ್ ಪವಾರ್ ಬಣದಲ್ಲಿರುವ ಸಿದ್ದಿಕಿ ಮೇಲೆ ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿ ನಡೆದಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.
ಶನಿವಾರ ರಾತ್ರಿ 9.30 ಗಂಟೆ ಸುಮಾರಿಗೆ ಬಾಬಾ ಸಿದ್ಧಿಕಿ ಅವರ ಮೇಲೆ ಮೂರು ಬುಲೆಟ್‌ಗಳನ್ನು ಹಾರಿಸಲಾಗಿತ್ತು. ಅವರ ಮಗ ಜೀಶನ್ ಸಿದ್ದಿಕಿ ಅವರ ಕಚೇರಿಯಲ್ಲಿ ಈ ದಾಳಿ ನಡೆದಿತ್ತು. ಜೀಶನ್ ಬಾಂದ್ರಾ ಪೂರ್ವದ ಶಾಸಕರಾಗಿದ್ದಾರೆ.
ಬಾಬಾ ಸಿದ್ಧಿಕಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆ ಮೂಲಗಳ ಪ್ರಕಾರ ಕನಿಷ್ಠ ಒಂದು ಬುಲೆಟ್ ಅವರ ಎದೆಯ ಒಳಗೆ ಹೊಕ್ಕಿತ್ತು. ಅವರಿಗೆ ನಿರಂತರವಾಗಿ ಕಾರ್ಡಿಯೋಪಲ್ಮನರಿ ರೆಸಸಿಟೇಶನ್ (ಸಿಪಿಆರ್) ನೀಡಲಾಗುತ್ತಿತ್ತು. ಆದರೆ ವೈದ್ಯರ ಯತ್ನ ಫಲ ನೀಡದೆ ಅವರು ಅಸುನೀಗಿದ್ದಾರೆ.
ಮೂರು ಬಾರಿಯ ಶಾಸಕ
ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬಾಬಾ ಸಿದ್ಧಿಕಿ ಸುಮಾರು 48 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿದ್ದರು. ಕಳೆದ ಫೆಬ್ರವರಿಯಲ್ಲಿ ಅವರು ಕೈ ಪಾಳಯ ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿ ಬಣ ಸೇರಿದ್ದರು. ಈ ಹಿನ್ನೆಲೆಯಲ್ಲಿ ಅವರ ಪುತ್ರ ಜೀಶನ್ ಸಿದ್ದಿಕಿ ಅವರನ್ನು ಕಾಂಗ್ರೆಸ್ ಆಗಸ್ಟ್‌ನಲ್ಲಿ ಪಕ್ಷದಿಂದ ಉಚ್ಚಾಟನೆ ಮಾಡಿತ್ತು.
ದಸರಾದಂದೇ ಈ ಗುಂಡಿನ ದಾಳಿ ನಡೆದಿದ್ದು, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ನಡೆದಿರುವ ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.
ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಎನ್‌ಸಿಪಿ ವಕ್ತಾರ ಬ್ರಿಜ್‌ಮೋಹನ್ ಶ್ರೀವಾಸ್ತವ, ‘ತಮಗೆ ಯಾರಿಂದಲಾದರೂ ಬೆದರಿಕೆ ಇದೆ ಎಂದು ಸಿದ್ದಿಕಿ ಯಾವತ್ತೂ ಹೇಳಿರಲಿಲ್ಲ’ ಎಂದು ಆಂಗ್ಲ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಹೇಳಿದ್ದಾರೆ.
ಬಾಬಾ ಸಿದ್ಧಿಕಿ ಅವರು 1999, 2004 ಹಾಗೂ 2009ರ ಚುನಾವಣೆಯಲ್ಲಿ ಬಾಂದ್ರಾ ಪಶ್ಚಿಮ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅವರು 2004ರಿಂದ 2008ರವರೆಗೆ ಆಹಾರ ಮತ್ತು ನಾಗರಿಕ ಸರಬರಾಜು, ಕಾರ್ಮಿಕ ಹಾಗೂ ಎಫ್‌ಡಿಎ ಸಚಿವರೂ ಆಗಿದ್ದರು.
ಮಹಾರಾಷ್ಟ್ರದಲ್ಲಿ ರಾಜಕೀಯ ಕಾರಣಕ್ಕೆ ಬಾಬಾ ಸಿದ್ಧಿಕಿ ಪರಿಚಿತರಾದರೂ, ರಾಜ್ಯದ ಹೊರಗಡೆ ಅದ್ಧೂರಿ ಪಾರ್ಟಿಗಳಿಗೆ ಜನಪ್ರಿಯರಾಗಿದ್ದರು. ಬಾಲಿವುಡ್ ಸೇರಿದಂತೆ ದೇಶದ ಚಿತ್ರರಂಗದ ಹೆಚ್ಚು ಕಡಿಮೆ ಎಲ್ಲಾ ದೊಡ್ಡ ದೊಡ್ಡ ಸ್ಟಾರ್‌ಗಳ ಜತೆಯೂ ವಿಶೇಷ ನಂಟು ಹೊಂದಿದ್ದ ಅವರು, ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ನಡುವೆ ನಡೆಯುತ್ತಿದ್ದ ಶೀತಲ ಸಮರವನ್ನು 2023ರ ಇಫ್ತಾರ್ ಕೂಟದಲ್ಲಿ ಬಗೆಹರಿಸಿ ಭಾರೀ ಹೆಸರು ಗಳಿಸಿದ್ದರು.
ರಾಜಕೀಯ
Puttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.
ಪುತ್ತೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.
ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಮುಖಂಡರು, ಪುತ್ತೂರಿನ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಯೋಜನೆಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.
2020ರಲ್ಲಿ ಅಂದಿನ ಶಾಸಕ ಸಂಜೀವ ಮಟಂದೂರು ಅವರ ಅವಧಿಯಲ್ಲಿ ವಾಜಪೇಯಿ ಅವರ ಅಲ್ಪಸಂಖ್ಯಾತರ ಅಭಿವೃದ್ಧಿಯ ಕನಸಿನ ಭಾಗವಾಗಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣವಾಗಿದೆ. ಇದರ ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವ ಉದ್ದೇಶದಿಂದ ದರ್ಬೆ ಸಿಟಿ ಗುಡ್ಡೆಯಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ 4,000 ಚದರ ಅಡಿ ವಿಸ್ತೀರ್ಣದ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು.
ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದ್ದ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಉದ್ಘಾಟನೆ ಸಾಧ್ಯವಾಗಿರಲಿಲ್ಲ. ಬಳಿಕವೂ ಕಟ್ಟಡವನ್ನು ಉದ್ಘಾಟಿಸಿ ಬಳಕೆಗೆ ನೀಡಲಾಗದೆ ಕಳೆದ ನಾಲ್ಕು ವರ್ಷಗಳಿಂದ ಪಾಳು ಬಿದ್ದಿದೆ ಎಂದು ಮೋರ್ಚಾ ಮುಖಂಡರು ಆರೋಪಿಸಿದರು.
ಬೇರೆ ಉದ್ದೇಶಕ್ಕೆ ಬಳಸಬೇಡಿ
ಪ್ರಸ್ತುತ ಶಾಸಕರು ಈ ಕಟ್ಟಡವನ್ನು ಬೇರೆ ಕಾರ್ಯಕ್ಕೆ ಬಳಸಲು ಮುಂದಾಗಿರುವುದು ಸರಿಯಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತ ಸಮುದಾಯಕ್ಕೆ ಅಗತ್ಯವಿರುವ ಸೇವೆಗಳನ್ನು ಒದಗಿಸುವ ಕೇಂದ್ರವಾಗಿಯೇ ಕಟ್ಟಡವನ್ನು ಬಳಕೆ ಮಾಡಬೇಕು. ಪುತ್ತೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಹಾಸ್ಟೆಲ್‌ಗಳು ಮತ್ತು ಸಮುದಾಯ ಭವನ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸಿಟಿ ಗುಡ್ಡೆ ಪ್ರದೇಶದಲ್ಲಿ ಈಗಾಗಲೇ ವಾಣಿಜ್ಯ ತೆರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಗಳ ಕಚೇರಿಗಳಿವೆ. ಪುತ್ತೂರು ನಗರದ ಎರಡನೇ ಪ್ರಮುಖ ಪ್ರದೇಶವಾಗಿ ದರ್ಬೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸೇವಾ ಕೇಂದ್ರವೂ ತನ್ನ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಕಾಂಗ್ರೆಸ್ ವಿರುದ್ಧ ಆರೋಪ
ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಯೋಜನೆಗಳು ಹಾಗೂ ಮೂಲಸೌಕರ್ಯ ಕಲ್ಪಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆರೋಪಿಸಿದರು.
ಅಲ್ಪಸಂಖ್ಯಾತರ ಬೆಂಬಲವನ್ನು ಪಡೆದಿರುವ ಹಾಲಿ ಶಾಸಕರು ತಮ್ಮ ಅವಧಿಯಲ್ಲಿ ಸಮುದಾಯಕ್ಕೆ ನೀಡಿರುವ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದರು.
ಬಿಜೆಪಿ ಸರ್ಕಾರ ನಿರ್ಮಿಸಿರುವ ಸೇವಾ ಕೇಂದ್ರವನ್ನು ವಿರೋಧಿಸುವ ಬದಲು ಅದನ್ನು ಉದ್ಘಾಟಿಸಿ ಅಲ್ಪಸಂಖ್ಯಾತ ಸಮುದಾಯದ ಬಹುಉಪಯೋಗಕ್ಕೆ ಬಳಸಲು ಸಹಕರಿಸಬೇಕು ಎಂದು ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಟಿ.ಎ. ಶನವಾಜ್, ಪ್ರಧಾನ ಕಾರ್ಯದರ್ಶಿ ಫೆಡ್ರಿಕ್ ಪೌಲ್, ಉಪಾಧ್ಯಕ್ಷ ಅಜ್ಗರ್ ಮುಡಿಪು, ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ, ಹಿರೆಬಂಡಾಡಿ ಪಂಚಾಯತ್ ಮಾಜಿ ಅಧ್ಯಕ್ಷ ಸೌಕತ್ ಅಲಿ, ರಾಜೇಶ ಬನ್ನೂರು ಉಪಸ್ಥಿತರಿದ್ದರು.
ಸ್ಥಳೀಯ
B.Y. Vijayendra-ಬಣ ಕಿತ್ತಾಟ ಮುಂದುವರಿದರೆ ಗುಬ್ಬಿಯಲ್ಲಿ ನಾನೇ ಸ್ಪರ್ಧಿಸುತ್ತೇನೆ’: ಬಿ.ವೈ.ವಿಜಯೇಂದ್ರ
ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಚೇಳೂರು (ತುಮಕೂರು), ಅ.4: ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಚೇಳೂರಿನಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ದಡಿ ಆಯೋಜಿಸಿದ್ದ ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಹಾಗೂ 2023ರ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ದಿಲೀಪ್ ಕುಮಾರ್ ಮಾತನಾಡುವ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ಜಿಪಂ ಮಾಜಿ ಸದಸ್ಯ ಚಂದ್ರಶೇಖರ್ ಬಾಬು ಮಾತನಾಡುವಾಗ ದಿಲೀಪ್ ಕುಮಾರ್ ಅವರ ಹೆಸರನ್ನು ಉಲ್ಲೇಖಿಸದಿರುವುದು ಕೆಲವು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಯಿತು.
ಈ ವಿಚಾರಕ್ಕೆ ಸಂಬಂಧಿಸಿ ಎರಡೂ ಬಣಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ರಾಜ್ಯಾಧ್ಯಕ್ಷರ ಸಮ್ಮುಖದಲ್ಲೇ ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಬಳಿಕ ಮಾತನಾಡಿದ ಬಿ.ವೈ.ವಿಜಯೇಂದ್ರ, ಗುಬ್ಬಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಕ್ಷದೊಳಗಿನ ಆಂತರಿಕ ಜಗಳ ಹಾಗೂ ಭಿನ್ನಾಭಿಪ್ರಾಯಗಳೇ ಅಡ್ಡಿಯಾಗುತ್ತಿವೆ ಎಂದು ಹೇಳಿದರು.
ಮುಖಂಡರು ಹಾಗೂ ಕಾರ್ಯಕರ್ತರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಸಂಘಟನೆ ಮತ್ತು ಗೆಲುವಿನತ್ತ ಗಮನಹರಿಸಬೇಕು ಎಂದು ವಿಜಯೇಂದ್ರ ಸೂಚಿಸಿದರು. ಇದೇ ರೀತಿ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸುವ ಸಂದರ್ಭ ಬರಬಹುದು ಎಂದು ಅವರು ಎಚ್ಚರಿಕೆ ನೀಡಿದರು.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
-
ನಿಧನ ವಾರ್ತೆ17 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್22 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ22 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ21 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ22 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
Uncategorized11 hours ago
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ
-
ನಿಧನ ವಾರ್ತೆ20 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ರಾಜಕೀಯ16 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















