Connect with us

ಅಪರಾಧ

Uppinangady-ಉಪ್ಪಿನಂಗಡಿ : ಭಾರಿ ಗಾತ್ರದ ಕಾಡುಕೋಣ ಭೇಟೆ : ಅರಣ್ಯಾಧಿಕಾರಿಗಳ ದಾಳಿ- ಬೇಯಿಸಿದ ಮಾಂಸ ಪತ್ತೆ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ವಲಯ ಅರಣ್ಯ ವ್ಯಾಪ್ತಿಯ ನಿಡ್ಲೆ ಗ್ರಾಮದ ಬೂಡುಜಾಲು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಪ್ರಕರಣದ ಶಂಕಿತ ಆರೋಪಿಗಳ ಮನೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಬೇಯಿಸಿ ಒಣಗಿಸುತ್ತಿದ್ದ ಮಾಂಸ ಪತ್ತೆ ಹಚ್ಚಿದ್ದು, ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಬೂಡುಜಾಲು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಮೀಸಲು ಅರಣ್ಯದ ಅಂಚಿನಲ್ಲಿರುವ ತೋಟದಲ್ಲಿ ಕಾಡುಕೋಣ ಕೊಂದು ಅದರ ಅಂಗಾಂಗಗಳನ್ನು ಬೇರ್ಪಡಿಸಿ ವಾಹನವೊಂದರಲ್ಲಿ ಸಾಗಾಟ ಮಾಡಿ, ಆರೋಪಿಗಳ ಮನೆಯಲ್ಲಿ ಶೇಖರಿಸಿದ್ದ ಮಾಹಿತಿ ತಿಳಿದ ಅರಣ್ಯ ಅಧಿಕಾರಿಗಳ ತಂಡ ಶನಿವಾರ ರಾತ್ರಿಯಿಂದಲೇ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಈ ಪೈಕಿ ಆರೋಪಿ, ಶಿಬಾಜೆ ಗ್ರಾಮದ ಕಡಮಕಲ್ ನಿವಾಸಿ ರಾಜು ಎಂಬಾತನ ಮನೆಯಲ್ಲಿ ಬೇಯಿಸಿ, ಒಣಗಿಸುತ್ತಿದ್ದ ಮಾಂಸವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Ad Widget

Ad Widget <> Ad Widget

ಮಾಂಸದೊಂದಿಗೆ ಆರೋಪಿಗಳು ಪರಾರಿ?

ಕಾಡುಕೋಣವನ್ನು ಬೇಟೆಯಾಡಿರುವ ತಂಡದಲ್ಲಿ ಸುಮಾರು 7 ಮಂದಿ ಇದ್ದು, ಈ ಪೈಕಿ ಬಹುತೇಕ ಮಂದಿ ಮನೆಗೆ ಬೀಗ ಹಾಕಿ ವಾಹನದೊಂದಿಗೆ ಪರಾರಿ ಆಗಿದ್ದಾರೆ ಎಂದು ಹೇಳಲಾಗಿದೆ. ಬೇಟೆಯಾಡಿರುವ ಕಾಡುಕೋಣ ಸುಮಾರು ಭಾರಿ ಗಾತ್ರದ್ದಾಗಿದ್ದು, ಸುಮಾರು 4 ಕ್ವಿಂಟಲ್ ಮಾಂಸ ದೊರೆತಿರುವ ಅನುಮಾನ ವ್ಯಕ್ತವಾಗಿದೆ. ಅದನ್ನು ಆರೋಪಿಗಳು ಪಾಲುಮಾಡಿಕೊಂಡಿದ್ದಾರೆ. ಈ ಪೈಕಿ ಕೆಲವರು ಮಾಂಸವನ್ನು ಮನೆಯ ಹಿಂಭಾಗದ ಗುಡ್ಡದಲ್ಲಿ ಹೂತಿರುವ ಸಾಧ್ಯತೆ ಇದೆ. ಕೆಲವರು ಪರಾರಿಯಾಗುವಾಗ ಮಾಂಸವನ್ನೂ ಕೊಂಡೊಯ್ದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Ad Widget

Ad Widget

3 ಮನೆಗಳಿಗೆ ದಾಳಿ:

ಪ್ರಕರಣದಲ್ಲಿ ಹಲವರು ಭಾಗಿಯಾಗಿದ್ದು, ಈ ಪೈಕಿ 3 ಮಂದಿ ಶಂಕಿತ ಆರೋಪಿಗಳ ಮನೆಗೆ ದಾಳಿ ನಡೆಸಿದ್ದೇವೆ. ಆರೋಪಿಗಳು ಪರಾರಿ ಆಗಿದ್ದು, ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ವಲಯ ಅರಣ್ಯಾಧಿಕಾರಿ ರಾಘವೇಂದ್ರ ತಿಳಿಸಿದರು.

ದಾಳಿ ಕಾರ್ಯಾಚರಣೆಯ ತಂಡದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ರಾಜೇಶ್, ಶಿವಾನಂದ ಆಚಾರ್ಯ, ಯತೀಂದ್ರ, ಭವಾನಿ ಶಂಕರ್, ಅರಣ್ಯ ರಕ್ಷಕ ಶಿವಾನಂದ ಕುದುರಿ ಭಾಗವಹಿಸಿದ್ದರು.

Ad Widget
Click to comment

Leave a Reply

ಅಪರಾಧ

Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget alt="Ad Widget"/>

Ad Widget

ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget <> Ad Widget

ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಅಪರಾಧ

Punacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?

Published

on

Ad Widget

Ad Widget

Ad Widget

Ad Widget

ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.

ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

Ad Widget

Ad Widget

ಅಪಘಾತದ ಕುರಿತು ಸಂಬಂಧಪಟ್ಟ ಪೊಲೀಸ್ ಇಲಾಖೆ ಪರಿಶೀಲನೆ ನಡೆಸಿ, ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ವಾಹನ ಹಾಗೂ ಚಾಲಕನನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗಾಯಾಳುವಿನ ಆರೋಗ್ಯ ಸ್ಥಿತಿ, ಅಪಘಾತಕ್ಕೆ ನಿಖರ ಕಾರಣ ಹಾಗೂ ಕಾರು ಚಾಲಕನ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Ad Widget
Continue Reading

ಅಪರಾಧ

Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!

Published

on

Ad Widget

Ad Widget

Ad Widget

Ad Widget

ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget alt="Ad Widget"/>

Ad Widget

2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.

Ad Widget

Ad Widget <> Ad Widget

ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್‌ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.

ಅಲ್ಲದೆ, ಬಿಎನ್‌ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!