ರಾಜಕೀಯ
Dinesh Gundu Rao-ಪುತ್ತೂರಿನಲ್ಲಿ ಕಾಂಗ್ರೇಸ್ ಸ್ವಂತ ಬಲದಿಂದ ಗೆಲ್ಲಬೇಕು: ಹೋದ ಸಲ ಗೆಲುವು ಪಡೆಯಲು ಕಾರಣ ಬೇರೆ ಇತ್ತು – ಸಚಿವ ದಿನೇಶ್ ಗುಂಡೂರಾವ್ : ವಿಧಾನಪರಿಷತ್ ಉಪಚುನಾವಣೆ – ಕಾಂಗ್ರೇಸ್ ಅಭ್ಯರ್ಥಿ ರಾಜು ಪೂಜಾರಿ ಪರ ಪುತ್ತೂರಿನಲ್ಲಿ ಪ್ರಚಾರ ಸಭೆ
ರಾಜ್ಯ ಕುಟುಂಬ ಕಲ್ಯಾಣ, ಆರೋಗ್ಯ ಇಲಾಖೆ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಕಾಂಗ್ರೆಸ್ ಪಕ್ಷವು ಈ ಬಾರಿ ವಿಧಾನ ಪರಿಷತ್ ಉಪಚುನಾವಣೆಯನ್ನು ಲಘುವಾಗಿ ಪರಿಗಣಿಸದೆ ಬಹಳ ಗಂಭೀರವಾಗಿ ತೆಗೆದುಕೊಂಡು ಕೆಲಸ ಮಾಡಬೇಕೆಂದು ತಿಳಿಸಿದ್ದಾರೆ.
ಪುತ್ತೂರು: ರಾಜ್ಯ ಕುಟುಂಬ ಕಲ್ಯಾಣ, ಆರೋಗ್ಯ ಇಲಾಖೆ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಕಾಂಗ್ರೆಸ್ ಪಕ್ಷವು ಈ ಬಾರಿ ವಿಧಾನ ಪರಿಷತ್ ಉಪಚುನಾವಣೆಯನ್ನು ಲಘುವಾಗಿ ಪರಿಗಣಿಸದೆ ಬಹಳ ಗಂಭೀರವಾಗಿ ತೆಗೆದುಕೊಂಡು ಕೆಲಸ ಮಾಡಬೇಕೆಂದು ತಿಳಿಸಿದ್ದಾರೆ.
ಪುತ್ತೂರಿನಲ್ಲಿ ಅನೇಕ ನಾಯಕರುಗಳು ಇದ್ದೀರಿ.ನಾವೆಲ್ಲ ಸೌಹಾರ್ದಯುತವಾಗಿರಬೇಕು ಸಣ್ಣಪುಟ ವ್ಯತ್ಯಾಸಗಳಿಗೆ ಕಿವಿ ಕೊಡದೆ ಸೌಹಾರ್ದಮಯ, ಸ್ನೇಹಮಯವಾಗಿ ಕುಶಿಯಾಗಿ ನಮ್ಮ ಅಭ್ಯರ್ಥಿ ಪರವಾಗಿ ನಾವು ಕೆಲಸ ಮಾಡುವ ಮೂಲಕ ಖಂಡಿತವಾಗಿಯೂ ಮುಂದೆ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವಾಗಬೇಕು.ಹೋದ ಸಲ ಇಲ್ಲಿ ಗೆಲುವಿನ ಕಾರಣಗಳು ಬೇರೆ ಬೇರೆ ಇದೆ.
ಆದರೆ ಮುಂದಿನ ಚುನಾವಣೆಯಲ್ಲಿ ಸ್ವಂತ ಬಲದಿಂದ ಕಾಂಗ್ರೆಸ್ ಗೆಲ್ಲಬೇಕು.ಬೇರೆಯವರ ಕಾರಣಗಳಿಂದ ಗೆದ್ದಂತಾಗಬಾರದು.ಪುತ್ತೂರು, ಬಂಟ್ವಾಳ, ಮಂಗಳೂರಿನಲ್ಲಿ ಸ್ವಂತ ಬಲದಿಂದ ಗೆಲುವು ಸಾಧಿಸಬೇಕು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅ.21ರಂದು ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿ ಅ.11ರಂದು ಸಂಜೆ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ ಪುತ್ತೂರು, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಜನಪ್ರತಿನಿಧಿಗಳ ಮತ್ತು ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ನಮ್ಮ ಸರಕಾರವಿರುವ ಕಾರಣ ಈ ಚುನಾವಣೆಯನ್ನು ಲಘುವಾಗಿ ತೆಗೆದುಕೊಳ್ಳದೇ ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಿಗೂ ಭೇಟಿ ನೀಡುತ್ತಿದ್ದಾರೆ.
ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಈ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸಿ ಗೆಲುವು ಸಾಧಿಸಬೇಕು. ಯಾಕೆಂದರೆ ಇದು ನಮ್ಮ ಮರ್ಯಾದೆ ಪ್ರಶ್ನೆ.ಇನ್ನೊಂದು ಕಡೆ ಪಕ್ಷವನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು ಎಂದ ಅವರು ವಿಧಾನಪರಿಷತ್ ಉಪಚುನಾವಣೆಯಲ್ಲಿ ಒಳ್ಳೆಯ ವ್ಯಕ್ತಿತ್ವದ ಅಭ್ಯರ್ಥಿ ರಾಜು ಪೂಜಾರಿ ಅವರನ್ನು ಪಕ್ಷದಿಂದ ನೀಡಿದ್ದೇವೆ. ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕು ಎಂದರು.
ನಮ್ಮ ಅಸ್ತಿತ್ವ ಉಳಿಸುವ ಕೆಲಸ ಆಗಬೇಕು :
ಅಭ್ಯರ್ಥಿ ಆಗುವ ತನಕ ಚರ್ಚೆಗಳು ಇರುವುದು ಸಹಜ. ಅಭ್ಯರ್ಥಿ ಆದ ಬಳಿಕ ಟೀಕೆ ಟಿಪ್ಪಣಿ ಇರಬಾರದು. ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡಬೇಕು. ನಾವೆಲ್ಲ ಅದಕ್ಕಾಗಿ ಇಲ್ಲಿಗೆ ಬಂದಿದ್ದೇವೆ. ನಮಗೆ ಪಕ್ಷ ಮುಖ್ಯ ಪಕ್ಷ ಬೆಳೆಸಬೇಕು. ನಮ್ಮ ಎದುರಾಳಿ ಕೂಡಾ ಬಹಳ ಲೆಕ್ಕಾಚಾರ ಮಾಡುತ್ತಾರೆ. ನಮ್ಮ ಅಸ್ತಿತ್ವ ಉಳಿಸುವ ಕೆಲಸ ಆಗಬೇಕು ಎಂದು ಹೇಳಿದ ಅವರು, ನಮ್ಮಲ್ಲಿರುವ ಕಾಂಗ್ರೆಸ್ ಮತಗಳನ್ನು ಉಳಿಸಬೇಕು. ಯಾವುದೂ ಮಿಸ್ ಆಗಬಾರದು. ಅದು ನಮ್ಮ ಮೊದಲ ಆದ್ಯತೆ. ಇದೇನು ಸಾರ್ವತ್ರಿಕ ಚುನಾವಣೆ ಅಲ್ಲ.ಲಕ್ಷಾಂತರ ಜನರನ್ನು ಭೇಟಿಯಾಗಬೇಕಾಗಿಲ್ಲ. ಆದರೆ ವ್ಯವಸ್ಥಿತವಾಗಿ, ಪ್ರಾಮಾಣಿಕತೆಯಾಗಿ ಚುನಾವಣೆ ಗೆಲ್ಲಬೇಕು. ಎಡಪಂಥೀಯ ಚಿಂತನೆ, ಸಮಾಜವಾದಿ ಚಿಂತನೆ ಇರುವವರು. ಉದಾರವಾಗಿ ಚಿಂತನೆ ಮಾಡುವವರು. ಸಾಂಪ್ರದಾಯವಾಗಿ ಚಿಂತನೆ ಮಾಡುವವರೂ ಕಾಂಗ್ರೆಸ್ ನಲ್ಲಿ ಇರುತ್ತಾರೆ. ಹಾಗಾಗಿ ಕಾಂಗ್ರೆಸ್ ಅಂದರೆ ಮಿಲನ ಎಂದು ಹೇಳಿದರು.
ಪುತ್ತೂರಿನಿಂದ ಅಧಿಕ ಮತಗಳು ಬರಬೇಕು:
ಮುಂದಿನ ವಿಧಾನಸಭಾ ಚುನಾವಣೆಗೂ ನಾವು ತಯಾರಾಗಬೇಕು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಏನಾದರೂ ಬದಲಾವಣೆ ಆಗಬೇಕೆಂಬ ಇಚ್ಚೆ ಇಟ್ಟುಕೊಂಡಿದ್ದರೆ ಎಲ್ಲಾ ಚುನಾವಣೆಯ ಪ್ರತಿಯೊಂದು ಹೆಜ್ಜೆಯೂ ಮುಖ್ಯ. ಈ ವಿಧಾನಪರಿಷತ್ ಚುನಾವಣೆ, ಮುಂದೆ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಗ್ರಾ.ಪಂ, ಮಹಾನಗರ ಪಾಲಿಕೆ ಹೀಗೆ ಎಲ್ಲಾ ಚುನಾವಣೆಗಳು ಬರುತ್ತವೆ. ಇದಕ್ಕೆ ನಮ್ಮ ಸಂಘಟನೆಗೆ ಇನ್ನೂ ಹೆಚ್ಚು ಶಕ್ತಿ ತುಂಬುವ ಕೆಲಸ ಮಾಡಬೇಕು.ನಮ್ಮ ಸಿದ್ಧಾಂತವನ್ನು ಜನರಿಗೆ ತಿಳಿಸಬೇಕು. ಹೆಚ್ಚು ಕೆಲಸ ಮಾಡಿ ಜನರ ವಿಶ್ವಾಸ ಗಳಿಸುವ ಕೆಲಸ ಮಾಡಬೇಕೆಂದು ಹೇಳಿದ ದಿನೇಶ್ ಗುಂಡೂ ರಾವ್, ಪುತ್ತೂರಿನಲ್ಲಿ ನಮ್ಮ ಶಾಸಕರೇ ಇದ್ದಾರೆ. ಇಲ್ಲಿ ಹೆಚ್ಚು ಜವಾಬ್ದಾರಿ ಇದೆ. ಇಲ್ಲಿಂದ ಅಧಿಕ ಮತಗಳು ಬರಬೇಕು ಎಂದು ಹೇಳಿದರು.
ಒಮ್ಮತದಿಂದ ಗೆಲ್ಲಿಸಬೇಕು:
ಕರ್ನಾಟಕ ಪ್ರಾದೇಶಕ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಮಾತನಾಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಕಡಿಮೆ ಮತಗಳ ಅಂತರವಿತ್ತು. ಆದರೆ ಈ ಬಾರಿ ರಾಜು ಪೂಜಾರಿ ಅವರಿಗೆ ಅಂತರ ಜಾಸ್ತಿ ಇದೆ. ಹಾಗಾಗಿ ಕಾಂಗ್ರೆಸ್ ಜನಪ್ರತಿನಿಧಿಗಳೆಲ್ಲರೂ ಈ ಹಿಂದೆ ನನಗೆ ಸಹಕಾರ ಮಾಡಿದಂತೆ ರಾಜು ಪೂಜಾರಿ ಅವರನ್ನು ಒಮ್ಮತದಿಂದ ಗೆಲ್ಲಿಸಬೇಕು ಎಂದು ವಿನಂತಿಸಿದರು. ಚುನಾವಣೆಯಲ್ಲಿ ಸೋಲು ಗೆಲುವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ.ಈ ಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಮುಂದಿನ ಚುನಾವಣೆಗಳಿಗೆ ಅದರ ಅಡ್ಡಪರಿಣಾಮಗಳು ಗೊತ್ತಾಗುತ್ತದೆ. ಹಾಗಾಗಿ ಚುನಾವಣೆಗೆ ವರಿಷ್ಟರು ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಮೇಲೆ ಅಭ್ಯರ್ಥಿಯ ಪರಿಚಯ ಮಾಡಿಕೊಳ್ಳುವುದು ಮುಖ್ಯ ಎಂದವರು ಹೇಳಿದರು.
ಕಾಂಗ್ರೆಸ್ ಪಕ್ಷದಿಂದ ಅಭಿವೃದ್ಧಿ ಸುನಾಮಿ:
ಮಾಜಿ ಸಚಿವ, ಜಿಲ್ಲಾ ಚುನಾವಣಾ ಸಂಯೋಜಕ ಬಿ.ರಮಾನಾಥ ರೈ ಅವರು ಮಾತನಾಡಿ ಕಾಂಗ್ರೆಸ್ ಪಕ್ಷ ನನ್ನ ಧರ್ಮ, ಯಾಕೆಂದರೆ ಎಲ್ಲಾ ಜಾತಿ, ಧರ್ಮ, ಭಾಷೆಯನ್ನು ಪ್ರೀತಿ ಮಾಡುವ ಪಕ್ಷ. ಸಾಮಾಜಿಕ ನ್ಯಾಯದಿಂದ ವಂಚಿತರಾದಂತಹ ದುರ್ಬಲ ವರ್ಗದವರನ್ನು ಎತ್ತಿ ಹಿಡಿಯುವ ಪಕ್ಷ ಕಾಂಗ್ರೆಸ್. ರಾಜೀವ ಗಾಂಧಿಯವರ ಕನಸಿನ ಕೂಸಾದ ಪಂಚಾಯತ್ ರಾಜ್ ತಿದ್ದುಪಡಿಯನ್ನು
ಬಿಜೆಪಿ ವಿರೋಧಿಸಿದರೂ ಕಾಂಗ್ರೆಸ್ ಪಕ್ಷ ಮತ್ತೆ ಮಸೂದೆಯನ್ನು ಜಾರಿ ಮಾಡಿತ್ತು. ಹಾಗಾಗಿ ಗ್ರಾ.ಪಂ ಸದಸ್ಯರಾದ ಬಳಿಕ ಅವರಿಗೆ ಋಣವಿದೆ. ಪಕ್ಷದ ಋಣ ತೀರಿಸಲು ಈ ಚುನಾವಣೆ ಪ್ರಮುಖವಾಗಿದೆ. ಪಂಚಾಯತ್ ರಾಜ್ ಮೂಲಕ ಅಭಿವೃದ್ಧಿ ಸುನಾಮಿ ಎದ್ದಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಎಂದರು. ಇವತ್ತು ಕಸ್ತೂರಿ ರಂಗನ್ ವರದಿ ಜಾರಿಯನ್ನು ತಡೆಯಲು ರಾಜ್ಯದ ಕಾಂಗ್ರೆಸ್ ಸರಕಾರದಿಂದ ಸಾಧ್ಯವಿಲ್ಲ. ಅದರ ಜವಾಬ್ದಾರಿ ಕೇಂದ್ರ ಸರಕಾರದ್ದು. ರಾಜ್ಯ ಸರಕಾರದ ಮೂಲಕ ನಾವು ಕಸ್ತೂರಿರಂಗನ್ ವರದಿ ಬೇಡ ಎಂದು ಹೇಳಿದ್ದೇವೆ. ಕಸ್ತೂರಿರಂಗನ್ ವರದಿ ರದ್ದು ಮಾಡುವ ಅಧಿಕಾರ ಕೇಂದ್ರ ಸರಕಾರದ ನರೇಂದ್ರ ಮೋದಿ ಮಾಡಬೇಕಷ್ಟೆ ಹೊರತು ನಾವಲ್ಲ ಎಂದರು.
ಪ್ರಥಮ ಪ್ರಾಶಸ್ತ್ರದ ಮತ ನೀಡಿ ಸಹಕರಿಸಿ:
ವಿಧಾನಪರಿಷತ್ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಸ್.ರಾಜು ಪೂಜಾರಿ ಅವರು ಮಾತನಾಡಿ ನನಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಬಂಧ ಬಹಳ ಹಿಂದಿನಿಂದಲೂ ಇದೆ. ಜನರ ಮಧ್ಯೆ ಇದ್ದು ಜನರ ಸಮಸ್ಯೆಯನ್ನು ಪರಿಹರಿಸುವ ಸೇವೆಯನ್ನು ಕಳೆದ ಮೂವತ್ತು ವರ್ಷಗಳಿಂದ ಮಾಡುತ್ತಾ ಬಂದಿದ್ದೇನೆ. ನಾನು ಪಕ್ಷದ ಟಿಕೆಟ್ ಕೇಳಿಲ್ಲ. ಆದರೆ ಪಕ್ಷ ಗುರುತಿಸಿ ನೀಡಿದೆ. ಇದು ನನಗೆ ಕೊಟ್ಟ ಸೀಟ್ ಅಲ್ಲ. ಹಿರಿಯ ಕಾರ್ಯಕರ್ತರು ಮತ್ತು ನಾಯಕರಿಗೆ ಕೊಟ್ಟ ಸೀಟ್. ಇವತ್ತು ನಮಗೆ ಮತ ಕಡಿಮೆ ಇರಬಹುದು. ಆದರೆ ನಿಮ್ಮ ಪ್ರಭಾವ ದೊಡ್ಡದಿದೆ. ಅದನ್ನು ಉಪಯೋಗಿಸಿ ನನಗೆ ಮತ ನೀಡುವಲ್ಲಿ ಸಹಕರಿಸಿ. ಜೊತೆಗೆ ಪ್ರಥಮ ಪ್ರಾಶಸ್ತ್ರದ ಮತ ಕೊಡುವಂತೆ ವಿನಂತಿಸಿದರು.
ವೇದಿಕೆಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಸದಸ್ಯ ಪ್ರಸಾದ್ ಕೌಶಲ್ ಶೆಟ್ಟಿ, ಆರ್ಬಿಐನ ಮಾಜಿ ನಿರ್ದೇಶಕ ನವೀನ್ ಭಂಡಾರಿ, ಕೆಪಿಸಿಸಿ ಸಂಯೋಜಕರಾದ ಪ್ರದೀಪ್ ಕುಮಾರ್ ರೈ ಪಾಂಬಾರು,ಸತೀಶ್ ಕುಮಾರ್ ಕೆಡೆಂಜಿ, ಸಾಲ್ಮರ ನೂರುದ್ದೀನ್, ಬೆಳ್ತಂಗಡಿಯ ರಂಜನ್ ಗೌಡ, ಗ್ಯಾರೆಂಟಿ ಅನುಷ್ಠಾನದ ತಾಲೂಕು ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಮಾಜಿ ಜಿ.ಪಂ.ಉಪಾಧ್ಯಕ್ಷ ಎಮ್.ಎಸ್.ಮಹಮ್ಮದ್ ಉಪಸ್ಥಿತರಿದ್ದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಜಿಲ್ಲಾ ಉಸ್ತುವಾರಿ ಸಚಿವರನ್ನು ಗೌರವಿಸಿದರು.ವಿಟ್ಲ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಪದ್ಮನಾಭ ಪೂಜಾರಿ ಸ್ವಾಗತಿಸಿದರು.ಜಿಲ್ಲಾ ಸೇವಾದಳದ ಸಂಚಾಲಕ ಜೋಕಿಂ ಡಿ’ಸೋಜ ವಂದೇ ಮಾತರಂ ಹಾಡಿದರು. ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಅವರು ವಂದಿಸಿದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಬಡಗನ್ನೂರು ಕಾರ್ಯಕ್ರಮ ನಿರೂಪಿಸಿದರು.
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
-
ಮಂಗಳೂರು18 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ23 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಅಂತರ ರಾಜ್ಯ17 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ23 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ24 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ23 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಕಾರ್ಯಕ್ರಮಗಳು18 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ12 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ















