ಸ್ಥಳೀಯ
Belthangady-ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಅ. 20 ರಂದು ಐತಿಹಾಸಿಕ “ಯುವಸಿರಿ” ಕಾರ್ಯಕ್ರಮ : ಯುವ ಸಮುದಾಯದಲ್ಲಿ ಕೃಷಿ ಅರಿವು ಮೂಡಿಸಲು 700 ಯುವ ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ನೇಜಿನಾಟಿ ಕಾರ್ಯ
ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಅ. 20ರಂದು ‘ಯುವಸಿರಿ’ ರೈತ ಭಾರತದ ಐಸಿರಿ ಎನ್ನುವ ಐತಿಹಾಸಿಕ ಕಾರ್ಯಕ್ರಮ ಬೆಳಾಲಿನ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿವಿನಲ್ಲಿ ನಡೆಯಲಿದೆ ಎಂದು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಕೆ. ಮೋಹನ್ ಕುಮಾರ್ ತಿಳಿಸಿದ್ದಾರೆ.
ಉಜಿರೆ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಅ. 20ರಂದು ‘ಯುವಸಿರಿ’ ರೈತ ಭಾರತದ ಐಸಿರಿ ಎನ್ನುವ ಐತಿಹಾಸಿಕ ಕಾರ್ಯಕ್ರಮ ಬೆಳಾಲಿನ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿವಿನಲ್ಲಿ ನಡೆಯಲಿದೆ ಎಂದು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಕೆ. ಮೋಹನ್ ಕುಮಾರ್ ತಿಳಿಸಿದ್ದಾರೆ.
ಉಜಿರೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಐತಿಹಾಸಿಕ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕಿನ ಪತ್ರಕರ್ತರ ಸಂಘ, ಎಸ್.ಡಿ.ಎಂ ದೈಹಿಕ ವಿಭಾಗ, ಅನಂತ ಪದ್ಮನಾಭ ದೇವಸ್ಥಾನದದ ವ್ಯವಸ್ಥಾಪನಾ ಸಮಿತಿ ಸಹಯೋಗದಲ್ಲಿ ಈ ಕಾರ್ಯಕ್ರಮದಲ್ಲಿ ನಡೆಯಲ್ಲಿದ್ದು, 700ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ನೇಜಿನಾಟಿ ಕಾರ್ಯ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ. ಬೆಳಗ್ಗೆ 9 ಗಂಟೆಗೆ ಸರಿಯಾಗಿ ಯವಸಿರಿ ಕಾರ್ಯಕ್ರಮಕ್ಕೆ ದೇವಾಲಯದ ಆವರಣದಲ್ಲಿ ಶ್ರೀಮತಿ ಸೋನಿಯಾ ಯಶೋವರ್ಮ ಅವರು ಚಾಲನೆ ನೀಡಲಿದ್ದಾರೆ ಎಂದು ಮೋಹನ್ ಕುಮಾರ್ ಮಾಹಿತಿ ನೀಡಿದರು.
ಇನ್ನು ಈ ವಿಶೇಷ ಕಾರ್ಯಕ್ರಮದಲ್ಲಿ ಕೃಷಿ ಸಾಧಕ ಬಿಕೆ ದೇವರಾವ್ ಅವರಿಗೆ ಗೌರವಾರ್ಪಣೆ ನಡೆಯಲಿದೆ ಎಂದು ಸಂಚಾಲಕ ಮೋಹನ್ ಕುಮಾರ್ ತಿಳಿಸಿದ್ದಾರೆ. ಈ ವೇಳೆ ಬದುಕು ಕಟ್ಟೋಣ ಬನ್ನಿ ಸಂಚಾಲಕ ರಾಜೇಶ್ ಪೈ, ಎನ್. ಎಸ್ ಎಸ್ ಘಟಕದ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಕುಮಾರ್, ಶ್ರೀಧರ್ ಕೆವಿ, ಚೈತ್ರೇಶ್ ಇಳಂತಿಲ ಉಪಸ್ಥಿತರಿದ್ದರು.
ಕಾರ್ಯಕ್ರಮದ ಉದ್ದೇಶವೇನು..?
ಭತ್ತ ಕೃಷಿ ಭಾರತದ ಪ್ರಮಖ ಆದಾಯದ ಮೂಲ ಮತ್ತು ಆಹಾರದ ಮಾರ್ಗವಾಗಿದೆ. ದೇಶದ ಆದಾಯಕ್ಕೂ ಭತ್ತ ಕೃಷಿಯ ಕೊಡುಗೆ ಇದೆ. ಆದರೆ ಇಂದಿನ ದಿನಗಳಲ್ಲಿ ಕೃಷಿ ಮಾಡುವ ರೈತರ ಸಂಖ್ಯೆ ಕಡಿಮೆಯಾಗುತ್ತಿದೆ.
ಈ ನಿಟ್ಟಿನಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಯುವಕ – ಯುವತಿಯರಲ್ಲಿ ಕೃಷಿ ಬಗ್ಗೆ ಅರಿವು ಮೂಡಿಸುವ ಮತ್ತು ಯುವಕ-ಯುವತಿಯರನ್ನು ಕೃಷಿ ಕಡೆ ಸೆಳೆಯುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದೆ. ಕೃಷಿ ಬಗ್ಗೆ ಆಸಕ್ತಿ ಮೂಡಿಸಿ ಮುಂದಿನ ದಿನಗಳಲ್ಲಿ ತಮ್ಮ ಊರಿನಲ್ಲೇ ಕೃಷಿ ಮಾಡಲು ಪ್ರೇರೇಪಿಸುವ ಮಹತ್ವದ ಕಾರ್ಯಕ್ರಮವಾಗಿದೆ.
2 ತಿಂಗಳಿಗೂ ಮೊದಲೇ ಕೃಷಿ ಚಟುವಟಿಕೆ ಆರಂಭ..!
ಭತ್ತ ಕೃಷಿ ಅಂದರೆ ಒಂದೇ ದಿನ ನಡೆಯುವ ಕಾರ್ಯವಲ್ಲ ತಿಂಗಳುಗಳ ಕಾಲದಿಂದ ಕೃಷಿ ಚಟುವಟಿಕೆ ನಡೆಯುತ್ತದೆ. ಹೀಗಾಗಿ ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ NSS ವಿದ್ಯಾರ್ಥಿಗಳು, ದೈಹಿಕ ವಿಭಾಗದ ವಿದ್ಯಾರ್ಥಿಗಳಿಗೆ ಎರಡು ತಿಂಗಳಿನಿಂದ ಅನಂತೋಡಿನ ನಾಲ್ಕುವರೆ ಎಕರೆ ಗದ್ದೆಯಯಲ್ಲಿ ಉಳುಮೆ, ಬೀಜ ಬಿತ್ತನೆ, ಪುಣಿ ಕಟ್ಟುವ ಕಾರ್ಯ ಹೀಗೆ ಕೃಷಿ ಚಟುವಟಿಕೆ ವಿದ್ಯಾರ್ಥಿಗಳಿಂದ ನಡೆದಿದೆ.
ನಿರಂತರವಾಗಿ ವಿದ್ಯಾರ್ಥಿಗಳು ಈ ಯುವಸಿರಿಯ ಪೂರ್ವಭಾವಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
ನಿಧನ ವಾರ್ತೆ9 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು7 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ9 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ8 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ9 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಮಂಗಳೂರು5 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ10 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
ಅಂತರ ರಾಜ್ಯ8 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















