ರಾಜಕೀಯ
Ashoka Jana-Mana-ಅಶೋಕ ಜನ-ಮನ ಕಾರ್ಯಕ್ರಮದ ಕರಪತ್ರ ಬಿಡುಗಡೆ; ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನ- ಸುದೇಶ್ ಶೆಟ್ಟಿ
ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ನ 2 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನವನ್ನು ನೀಡಲಾಗುವುದು ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು. ಅವರು ತಿಂಗಳಾಡಿ ಗ್ರಾಪಂ ಸಭಾಂಗಣದಲ್ಲಿ ನಡೆದ ಅಶೋಕ ಜನಮನದ ಕರಪತ್ರವನ್ನು ಬಿಡುಗಡೆ ಮಾಡುವ ಮೂಲಕ ಗ್ರಾಮ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ನ 2 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನವನ್ನು ನೀಡಲಾಗುವುದು ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು.
ಅವರು ತಿಂಗಳಾಡಿ ಗ್ರಾಪಂ ಸಭಾಂಗಣದಲ್ಲಿ ನಡೆದ ಅಶೋಕ ಜನಮನದ ಕರಪತ್ರವನ್ನು ಬಿಡುಗಡೆ ಮಾಡುವ ಮೂಲಕ ಗ್ರಾಮ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.
ಪುತ್ತೂರು ತಾಲೂಕಿನ ಪ್ರತೀ ಗ್ರಾಮಗಳಿಗೂ ನಮ್ಮ ತಂಡ ಭೇಟಿ ನೀಡಿ ಅಶೋಕ ಜನ-ಮನ ಕಾರ್ಯಕ್ರಮದ ಆಹ್ವಾನವನ್ನು ನೀಡಲಿದ್ದೇವೆ. ಗ್ರಾಮದ ಪ್ರತೀ ಮನೆ ಮನೆಗೆ ತೆರಳಲು ಅಸಾಧ್ಯವಾದ ಕಾರಣ ಗ್ರಾಮದ ಪ್ರಮುಖ ಕೆಂದ್ರಗಳಲ್ಲಿ ಕಾರ್ಯಕ್ರಮವನ್ನು ನಡೆಸಿ ಗ್ರಾಮಸ್ಥರಿಗೆ ಆಹ್ವಾನವನ್ನು ನೀಡುತ್ತೇವೆ. ಗ್ರಾಮದಲ್ಲಿ ನಡೆಯುವ ಪ್ರಚಾರ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಅಶೋಕ್ ರೈ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮದ ಯಶಶ್ವಿಗೆ ಸಹಕಾರವನ್ನು ನೀಡಬೇಕು ಎಂದು ಮನವಿ ಮಾಡಿದರು. ದೀಪಾವಳಿಗೆ ಪ್ರತೀ ವರ್ಷ ಶಾಸಕರಾದ ಅಶೋಕ್ ರಐ ಅವರ ನೇತೃತ್ವದಲ್ಲಿ ವಸ್ತ್ರ ವಿತರಣೆ ಕಾರ್ಯಕ್ರಮ ನಡೆಸುವ ಮೂಲಕ ಬಡವರ ಜೊತೆ ಸಹಭೋಜನವನ್ನು ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಹಿಳೆಯರು, ಪುರುಷರು ಹಾಗೂ ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಸಶ್ವಿಗೊಳಿಸಬೇಕು ಎಂದು ವಿನಂತಿಸಿದರು.

ಜನರ ಜೊತೆ ದೀಪಾವಳಿ ಆಚರಣೆ ಉತ್ತಮ ಕೆಲಸ: ಬೋಳೋಡಿ
ಬಡವರ ಬಂಧು ಎಂದೇ ಖ್ಯಾತಿಯನ್ನು ಪಡೆದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಪ್ರತೀ ವರ್ಷ ಜನರ ಜೊತೆ ದೀಪಾವಳಿ ಹಬ್ಬ ಆಚರಣೆ ಮಾಡುತ್ತಿರುವುದು ಉತ್ತಮ ಕೆಲಸವಾಗಿದೆ, ಇದು ದೇವರಿಗೂ ಪ್ರಿಯವಾದ ಕೆಲಸವಾಗಿದೆ ಎಂದು ಹಿರಿಯರಾದ ಬೋಳೋಡಿ ಚಂದ್ರಹಾಸ ರೈ ಹೇಳಿದರು.ಕಳೆದ ಬಾರಿ ಭಾರೀ ಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಂಧವರಿಗೆಲ್ಲಾ ವಸ್ತ್ರ ಹಾಗೂ ಊಟವನ್ನು ಕೊಡಲಾಗುತ್ತಿದ್ದು ಇದು ಅತ್ಯಂತ ಪುಣ್ಯದ ಕೆಲಸವಾಗಿದೆ ಇದಕ್ಕೆ ಎಲ್ಲರ ಸಹಕಾರ ಅತೀ ಅಗತ್ಯವಾಗಿದೆ. ಗ್ರಾಮ ಗ್ರಾಮಕ್ಕೆ ಬಂದು ಜನರಿಗೆ ಆಹ್ವಾನ ನೀಡಲಾಗುತ್ತಿದ್ದು ಗ್ರಾಮದ ಪ್ರತೀಯೊಬ್ಬರೂ ಕುಟುಂಬ ಸಮೇತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
75 ಸಾವಿರ ಜನರ ನಿರೀಕ್ಷೆ: ನಿಹಾಲ್ ಪಿ ಶೆಟ್ಟಿ
ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನ-ಮನ ಕಾರ್ಯಕ್ರಮದಲ್ಲಿ ಈ ಬಾರಿ 75 ಸಾವಿರಕ್ಕೂ ಮಿಕ್ಕಿ ಜನ ಭಾಗವಹಿಸುವ ನಿರೀಕ್ಷೆ ಇದೆ. ಬೆಳಿಗ್ಗೆಯಿಂದಲೇ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು ಪ್ರತೀ ಮನೆಯಿಂದ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಸಶ್ವಿಗೊಳಿಸುವಂತೆ ಮನವಿ ಮಾಡಿದರು. ವಸ್ತ್ರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿದೆ. ಜನ ಹೆಚ್ಚು ಸೇರುತ್ತಾರೆ ತೊಂದರೆಯಾಗಬಹುದು ಎಂಬ ಭಯ ಯಾರಿಗೂ ಬೇಡ. ಎಷ್ಟೇ ಜನ ಬಂದರೂ ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಗ್ರಾಮಸ್ಥರು ಕಾರ್ಯಕ್ರಮದ ಬಗ್ಗೆ ಪ್ರತೀ ಮನೆಗೂ ವಿಷಯತಿಳಿಸಿ ಅವರನ್ನು ಕರೆದುಕೊಂಡು ಬರುವಂತೆ ವಿನಂತಿಸಿದರು.
ವೇದಿಕೆಯಲ್ಲಿ ಪ್ರಮುಖರಾದ ಶಿವನಾಥ ರೈ ಮೇಗಿನಗುತ್ತು, ಎ ಕೆ ಜಯರಾಮ ರೈ, ಕಮಲೇಶ್ ಸರ್ವೆದೊಳಗುತ್ತುಸಂತೋಷ್ ನೆಹರೂನಗರ, ಶಶಿ ಕೃಷ್ಣನಗರ, ಸುಚರಿತ್ ಜೈನ್ ಬೊಳುವಾರು ಸೇರಿದಂತೆ ಕೆದಂಬಡಿ ಗ್ರಾಮಸ್ಥರು ಉಸ್ಥಿತರಿದ್ದರು. ಟ್ರಸ್ಟ್ ಸದಸ್ಯೆ ಪದ್ಮಾವತಿ ಸ್ವಾಗತಿ, ಅರುಣಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ರಾಜಕೀಯ
Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್
ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್‌ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.
ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್‌ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.
ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್‌ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.
ಎಫ್‌ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್‌ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಅಂತರ ರಾಜ್ಯ
Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!
ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಟೋಬರ್‌ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.
ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.
ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.
ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
-
ಕ್ರೈಂ20 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ20 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಸ್ಥಳೀಯ14 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಕಾರ್ಯಕ್ರಮಗಳು19 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ18 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಬಿಗ್ ನ್ಯೂಸ್20 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ15 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ19 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















