ಮಂಗಳೂರು
Mangalore-ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಬಸ್ಸಿನ ನಿರ್ವಾಹಕನ ಕಲ್ಲಿನಿಂದ ಜಜ್ಜಿ ಕೊ*ಲೆ – ಪೊಲೀಸರಿಗೆ ಮಹತ್ವದ ಸುಳಿವು ಲಭ್ಯ
ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಸ್ಥಿತಿಯಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬನ ಶವ ಸ್ಟೇಟ್ ಬ್ಯಾಂಕ್ನ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಸೋಮವಾರ ಪತ್ತೆಯಾಗಿತ್ತು. ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಪೊಲೀಸರಿಗೆ ಪ್ರಕರಣದ ಕುರಿತಾಗಿ ಮಹತ್ವದ ಸುಳಿವು ಲಭಿಸಿದೆ ಎನ್ನಲಾಗಿದೆ. ಅವರು ಬಜಪೆಯವರೆಂದು ಗೊತ್ತಾಗಿದೆ. ರಾಜೇಶ್ ಅವರಿಗೆ ತಂದೆ, ತಾಯಿ ಇಲ್ಲ. ಸಹೋದರಿ ಮಾತ್ರ ಇದ್ದಾರೆ. ಕುಟುಂಬಸ್ಥರು ಬಂದು ಶವ ಕೊಂಡೊಯ್ದು ಅಂತ್ಯ ಸಂಸ್ಕಾರ ಮಾಡಿದ್ದಾರೆ.
ಮಂಗಳೂರು: ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಸ್ಥಿತಿಯಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬನ ಶವ ಸ್ಟೇಟ್ ಬ್ಯಾಂಕ್ನ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಸೋಮವಾರ ಪತ್ತೆಯಾಗಿತ್ತು. ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಪೊಲೀಸರಿಗೆ ಪ್ರಕರಣದ ಕುರಿತಾಗಿ ಮಹತ್ವದ ಸುಳಿವು ಲಭಿಸಿದೆ ಎನ್ನಲಾಗಿದೆ.
ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30) ಮೃತ ಪಟ್ಟವರು. ಆರಂಭದಲ್ಲಿ ಅವರು ಎಲ್ಲಿಯವರೆಂದು ಗೊತ್ತಾಗಿರಲಿಲ್ಲ. ಮೃತದೇಹವನ್ನು ಪೊಲೀಸರು ವೆನ್ಲಾಕ್ ಶವಾಗಾರದಲ್ಲಿಟ್ಟಿದ್ದರು. ಬಳಿಕ ಅವರು ಬಜಪೆಯವರೆಂದು ಗೊತ್ತಾಗಿದೆ. ರಾಜೇಶ್ ಅವರಿಗೆ ತಂದೆ, ತಾಯಿ ಇಲ್ಲ. ಸಹೋದರಿ ಮಾತ್ರ ಇದ್ದಾರೆ. ಕುಟುಂಬಸ್ಥರು ಬಂದು ಶವ ಕೊಂಡೊಯ್ದು ಅಂತ್ಯ ಸಂಸ್ಕಾರ ಮಾಡಿದ್ದಾರೆ.
ಕಂಡಕ್ಟರ್ ರಾಜೇಶನ ಜರ್ಜರಿತವಾದ ಮೃತದೇಹ ಸೋಮವಾರ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಪತ್ತೆಯಾಗಿತ್ತು. , ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ಮೂಡಿದೆ. ಮಂಗಳೂರಿನಲ್ಲೇ ರೂಮ್ನಲ್ಲಿ ಉಳಿದುಕೊಂಡು ಬಸ್ ನಿರ್ವಾಹಕನಾಗಿ ದುಡಿಯುತ್ತಿದ್ದ ಲೇವಾದೇವಿ ವ್ಯವಹಾರವನ್ನೂ ಮಾಡುತ್ತಿದ್ದರು ಎನ್ನಲಾಗಿದೆ.
ಸಾಧು ಸ್ವಭಾವದವರಾಗಿದ್ದ ಅವರು ಕೊಲೆಯಾಗಿರುವ ವಿಚಾರ ತಿಳಿದ ಸಹೋದ್ಯೋಗಿಗಳು, ಸ್ನೇಹಿತರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸ್ಟೇಟ್ಬ್ಯಾಂಕ್ ಪರಿಸರದ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳ ಕುರಿತು ಸುಳಿವು ಸಿಕ್ಕಿದೆ ಎನ್ನಲಾಗಿದೆ.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಮಂಗಳೂರು
Chouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಮಂಗಳೂರು, ಅ.6: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಫಾರಂ 7 ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರನ್ನು ಅಳಿಸಲು ಸಾಧ್ಯವಿಲ್ಲ. ಅಕ್ರಮವಾಗಿ ಮತಗಳನ್ನು ಡಿಲೀಟ್ ಮಾಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅಗತ್ಯವಾದ ಪ್ರಕ್ರಿಯೆ. ಇದಕ್ಕೆ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ–2) ಸಹಕರಿಸಬೇಕು. ಆದರೆ, ಕಾಂಗ್ರೆಸ್ ಈ ಪ್ರಕ್ರಿಯೆಯಲ್ಲಿ ತೊಡಗಿರುವ ಏಜೆಂಟರನ್ನು ಬೆದರಿಸುವ ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ಫಾರಂ 7 ಸಲ್ಲಿಸಿದ ತಕ್ಷಣ ಹೆಸರು ಡಿಲೀಟ್ ಆಗಲ್ಲ
ಮತದಾರರು ಸ್ಥಳಾಂತರಗೊಂಡಿರುವುದು, ಮೃತಪಟ್ಟಿರುವುದು ಅಥವಾ ಭಾರತೀಯ ಪ್ರಜೆಯಲ್ಲ ಎಂಬ ಆಕ್ಷೇಪಣೆಗಳಿದ್ದಲ್ಲಿ ಫಾರಂ 7 ಮೂಲಕ ಅರ್ಜಿ ಸಲ್ಲಿಸಬಹುದು. ಆದರೆ, ಅರ್ಜಿ ಸಲ್ಲಿಕೆಯಾದ ಮಾತ್ರಕ್ಕೆ ಮತದಾರರ ಹೆಸರನ್ನು ಏಕಪಕ್ಷೀಯವಾಗಿ ಅಳಿಸಲು ಸಾಧ್ಯವಿಲ್ಲ. ಚುನಾವಣಾಧಿಕಾರಿಗಳು ಆಕ್ಷೇಪಣೆಯನ್ನು ಪರಿಶೀಲಿಸಿ, ಸೂಕ್ತ ದೃಢೀಕರಣದ ಬಳಿಕವೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಚೌಟ ವಿವರಿಸಿದರು.
ಫಾರಂ 7 ಮೂಲಕ ಅಲ್ಪಸಂಖ್ಯಾತ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಅವರು ತಳ್ಳಿಹಾಕಿದರು. ಅಕ್ರಮವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂಬುದಕ್ಕೆ ನಿರ್ದಿಷ್ಟ ದಾಖಲೆಗಳಿದ್ದರೆ ಚುನಾವಣಾ ಆಯೋಗದ ಮುಂದೆ ಸಲ್ಲಿಸಲಿ. ಅಂತಹ ಮತದಾರರನ್ನೇ ಕರೆತಂದು ತೋರಿಸಲಿ ಎಂದು ಸವಾಲು ಹಾಕಿದರು.
5.54 ಕೋಟಿ ಮತದಾರರ ಲೆಕ್ಕ ಮುಂದಿಟ್ಟು ಗೊಂದಲ ಎಂದ ಚೌಟ
ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೂ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.46 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಅವರು ಆರೋಪಿಸಿದರು.
ಕರಡು ಮತದಾರರ ಪಟ್ಟಿ ಅಂತಿಮವಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕವೂ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇಂತಹ ಪ್ರಕ್ರಿಯೆಯ ವಿರುದ್ಧವೇ ಜನರನ್ನು ಎತ್ತಿಕಟ್ಟುವುದು ಸರಿಯಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ಗೆ ಆಗ್ರಹ
ಕಾಂಗ್ರೆಸ್‌ಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಆರೋಪಿಸಿದ ಚೌಟ, ಮುಖ್ಯಮಂತ್ರಿಯೊಬ್ಬರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದರು. ಸಾಂವಿಧಾನಿಕ ಸಂಸ್ಥೆಗಳ ಕಾರ್ಯವಿಧಾನ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಅರಿವು ಇರಬೇಕು. ಚುನಾವಣಾ ಆಯೋಗದ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಈ ವಿಚಾರದಲ್ಲಿ ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಸುಮ್ಮನಿರಲ್ಲ
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಪಾಲ್ಗೊಳ್ಳುತ್ತಿದ್ದಾರೆ. ಅವರನ್ನು ಬೆದರಿಸುವ ಅಥವಾ ಒತ್ತಡಕ್ಕೆ ಒಳಪಡಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಚೌಟ ಎಚ್ಚರಿಸಿದರು. ಆಕ್ಷೇಪಣೆಗಳಿಗೆ ಬೆದರಿಕೆ ಮೂಲಕ ಉತ್ತರಿಸುವ ಬದಲು ನಿಗದಿತ ಕಾನೂನು ಪ್ರಕ್ರಿಯೆಯ ಮೂಲಕವೇ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರುಗಳು ಉಳಿದರೆ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗಬಹುದು. ಹೀಗಾಗಿ ಶುದ್ಧ ಮತದಾರರ ಪಟ್ಟಿ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಪ್ರತಿಪಾದಿಸಿದ ಅವರು, ಎಸ್‌ಐಆರ್‌ಗೆ ಕೋಮು ಬಣ್ಣ ನೀಡುವ ಬದಲು ವಾಸ್ತವಾಂಶಗಳ ಆಧಾರದಲ್ಲಿ ಚರ್ಚೆ ನಡೆಯಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪೂಜಾ ಪೈ, ಪೂರ್ಣಿಮಾ, ಸುಜಿತ್ ಪ್ರತಾಪ್, ರಾಜಗೋಪಾಲ ರೈ, ವಸಂತ ಜೆ. ಪೂಜಾರಿ, ಜೀವನ್ ಕುಮಾರ್ ತೊಕ್ಕೊಟ್ಟು ಹಾಗೂ ಸಂಜಯ ಪ್ರಭು ಉಪಸ್ಥಿತರಿದ್ದರು.
-
Uncategorized14 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized16 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು19 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ18 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಅಂತರ ರಾಜ್ಯ23 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಉದ್ಯೋಗ20 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಸ್ಥಳೀಯ23 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಬಿಗ್ ನ್ಯೂಸ್19 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ


















