ರಾಜಕೀಯ
Anganwadi Workers-ಇಂದು ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ; ಶಾಸಕ ಅಶೋಕ್ ರೈ ಸೂಚನೆಗೆ ಸ್ಪಂದಿಸಿದ ಇಲಾಖೆ
ಕಳೆದ ಎರಡು ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಬಾಕಿ ಇದ್ದು ಈ ವಿಚಾರ ಶಾಸಕ ಅಶೋಕ್ ರೈ ಗಮನಕ್ಕೆ ಬರುತ್ತಿದ್ದಂತೆಯೇ ತಕ್ಷಣ ಮಹಿಳಾ ಮತ್ತು ಮಕ್ಕಳ ಕ್ಲಯಾಣ ಇಲಾಖೆಯ ಆಯುಕ್ತರಿಗೆ ಕರೆ ಮಾಡಿದ ಶಾಸಕರು ಅ. 17 ರಂದು ವೇತನ ನೀಡಲೇಬೇಕು ಎಂದು ಸೂಚನೆಯನ್ನು ನೀಡಿದ್‌ದು ಅದರಂತೆ ಬಾಕಿ ಇರುವ ವೇತನ ಇಂದು ಖಾತೆಗೆ ಜಮೆಯಾಗಲಿದೆ.
ಪುತ್ತೂರು: ಕಳೆದ ಎರಡು ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಬಾಕಿ ಇದ್ದು ಈ ವಿಚಾರ ಶಾಸಕ ಅಶೋಕ್ ರೈ ಗಮನಕ್ಕೆ ಬರುತ್ತಿದ್ದಂತೆಯೇ ತಕ್ಷಣ ಮಹಿಳಾ ಮತ್ತು ಮಕ್ಕಳ ಕ್ಲಯಾಣ ಇಲಾಖೆಯ ಆಯುಕ್ತರಿಗೆ ಕರೆ ಮಾಡಿದ ಶಾಸಕರು ಅ. 17 ರಂದು ವೇತನ ನೀಡಲೇಬೇಕು ಎಂದು ಸೂಚನೆಯನ್ನು ನೀಡಿದ್‌ದು ಅದರಂತೆ ಬಾಕಿ ಇರುವ ವೇತನ ಇಂದು ಖಾತೆಗೆ ಜಮೆಯಾಗಲಿದೆ.
ಈ ಕುರಿತು ಇಲಾಖೆಯ ಆಯುಕ್ತರ ಜೊತೆ ಮಾತನಾಡಿದ ಶಾಸಕ ಅಶೋಕ್ ರೈ ಯಾಕೆ ಎರಡು ತಿಂಗಳಿಂದ ವೇತನವನ್ನು ಬಾಕಿ ಇರಿಸಲಾಗಿದೆ. ವೇತನ ಬಾಕಿ ಇರುವ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯೋರ್ವರು ತನಗೆ ಮಾಹಿತಿ ನೀಡಿದ್ದರು. ಯಾವುದೇ ಕಾರಣಕ್ಕೂ ವೇತನ ವಿಳಂಬವಾಗಬಾರದು. ಅ.17ರಂದು ವೇತನ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯವರ ಖಾತೆಗೆ ಜಮೆಯಾಗಬೇಕು ಎಂದು ಸೂಚನೆ ನೀಡಿದ್ದು ಇದಕ್ಕೆ ಆಯುಕ್ತರು ಒಪ್ಪಿಗೆಯನ್ನು ಸೂಚಿಸಿದ್ದಾರೆ.
ಮೊಟ್ಟೆ, ಗ್ಯಾಸ್ ಹಣ ಕೇಂದ್ರ ಸರಕಾರ ಕೊಟ್ಟಿಲ್ಲ
ಅಂಗನವಾಡಿಗೆ ಪೂರೈಕೆಯಾಗುತ್ತಿರುವ ಮೊಟ್ಟೆ ಮತ್ತು ಅಡುಗೆ ಅನಿಲವನ್ನು ಕೇಂದ್ರ ಸರಕಾರ ಪೂರೈಕೆ ಮಾಡಬೇಕಾಗಿದೆ. ಕಳೆದ ಕೆಲವು ತಿಂಗಳಿಂದ ಮೊಟ್ಟೆ ಮತ್ತು ಅಡುಗೆ ಅನಿಲದ ಹಣವನ್ನು ಕೇಂದ್ರ ಸರಕಾರ ನೀಡದ ಕಾರಣ ಕೆಲವು ಅಂಗನವಾಡಿಗಳಿಗೆ ಮೊಟ್ಟೆ ಮತ್ತು ಗ್ಯಾಸ್ ಕೊರತೆ ಎದುರಾಗಿದೆ. ಇದನ್ನು ಮನಗಂಡ ರಾಜ್ಯ ಸರಕಾರ ಹಣವನ್ನು ಬಿಡುಗಡೆ ಮಾಡಿದ್ದು ಎರಡು ದಿನದೊಳಗೆ ಮೊಟ್ಟೆ ಮತ್ತು ಅನಿಲದ ಹಣವೂ ಖಾತೆಗೆ ಜಮೆಯಾಗಲಿದೆ ಎಂದು ಶಾಸಕರು ತಿಳಿಸಿದರು.
ಅಂಗನವಾಡಿ ಬಂದ್ ಮಾಡಿದರೆ ಕಾನೂನು ಕ್ರಮ
ಮೊಟ್ಟೆ ಮತ್ತು ಗ್ಯಾಸ್ ಹಣ ಬಂದಿಲ್ಲ ಎಂದು ಕೆಲವು ಅಂಗನವಾಡಿಗಳನ್ನು ಬಂದ್ ಮಾಡಲಗಿದೆ ಎಂಬ ವಿಚಾರವನ್ನು ಕೆಲವರು ಶಾಸಕ ಅಶೋಕ್ ರೈ ಗಮನಕ್ಕೆ ತಂದಿದ್ದು ಈ ಕಾರಣಕ್ಕಾಗಿ ಅಂಗನವಾಡಿ ಕೇಂದ್ರವನ್ನು ಬಂದ್ ಮಾಡಿದ್ದಲ್ಲಿ ಕಾನೂನು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಈ ವಿಚಾರದಲ್ಲಿ ಮಾತನಾಡಿದ ಶಾಸಕ ಅಶೋಕ್ ರೈ ಮೊಟ್ಟೆ ಮತ್ತು ಗ್ಯಾಸ್ ಹಣ ಕೇಂದ್ರ ಸರಕಾರ ನೀಡಬೇಕಿತ್ತು ಯಾವ ಕಾರಣಕ್ಕೆ ನೀಡಿಲ್ಲ ಎಂಬುದು ಗೊತ್ತಾಗಲಿಲ್ಲ. ಮೊಟ್ಟೆ ಬಂದಿಲ್ಲ ಎಂದು ಅಂಗನವಾಡಿಯನ್ನು ಬಂದ್ ಮಾಡುವುದು ಅಕ್ಷಮ್ಯ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಅಂತರ ರಾಜ್ಯ
Jnanesh kumar-ವಿಪಕ್ಷಗಳ ರಾಜೀನಾಮೆ ಒತ್ತಾಯದ ನಡುವೆ ಜ್ಞಾನೇಶ್ ಕುಮಾರ್ ಛತ್ತೀಸ್‌ಗಢ ಭೇಟಿ ಮುಂದೂಡಿಕೆ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಅಕ್ಟೋಬರ್ 7 ಮತ್ತು 8ರಂದು ಜ್ಞಾನೇಶ್ ಕುಮಾರ್ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಈ ಭೇಟಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎಂಬ ವದಂತಿಗಳು ಹರಿದಾಡುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಆಕ್ರೋಶ
ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹಾಗೂ ಅರ್ಜಿ ನಮೂನೆ-6ರಲ್ಲಿನ ಮಾರ್ಪಾಡು ಸೇರಿದಂತೆ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ.
ದೇವಾಲಯ, ಜಲಪಾತಗಳಿಗೆ ಭೇಟಿ ನೀಡಬೇಕಿತ್ತು
ಎರಡು ದಿನಗಳ ಛತ್ತೀಸ್‌ಗಢ ಪ್ರವಾಸದ ವೇಳೆ ಜ್ಞಾನೇಶ್ ಕುಮಾರ್ ಅವರು ದಾಂತೇವಾಡದಲ್ಲಿರುವ ದಾಂತೇಶ್ವರಿ ದೇವಾಲಯ, ಬಸ್ತಾರ್‌ನ ಚಿತ್ರಕೋಟೆ ಜಲಪಾತ ಹಾಗೂ ಕಬೀರ್ ಧಾಮ್ ಜಿಲ್ಲೆಯ ಭೋರಂಡಿಯೊ ದೇವಾಲಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.
ಈ ಭೇಟಿಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಸರ್ಕಾರವು ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಅತಿಥಿಯ ಗೌರವ ನೀಡಲು ನಿರ್ಧರಿಸಿತ್ತು. ಅವರನ್ನು ಸ್ವಾಗತಿಸುವುದು ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲು ರಾಯ್‌ಪುರ ಜಿಲ್ಲಾಡಳಿತ, ಪೊಲೀಸರು ಮತ್ತು ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ ಪ್ರಾಧಿಕಾರಗಳು ಸಿದ್ಧತೆ ಆರಂಭಿಸಿದ್ದವು. ಇದೀಗ ಭೇಟಿಯನ್ನು ಮುಂದೂಡಲಾಗಿದೆ.
ರಾಜಕೀಯ
Ashok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರು: ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರಿಗೆ ಆಗಮಿಸಿದ ಬೊಲೆರೋ ವಾಹನವನ್ನು ‘ಬ್ಲಾಕ್ ಕಾಂಗ್ರೆಸ್ ವಾಹನ’ ಎಂದು ನಾಮಕರಣ ಮಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು.
ಮೂರು ಬ್ಲಾಕ್‌ಗಳಿಗೆ ಒಂದೇ ವಾಹನ
ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ಗಳ ಸಂಘಟನಾ ಚಟುವಟಿಕೆಗಳಿಗೆ ಈ ವಾಹನವನ್ನು ಬಳಸಲಾಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ಭೇಟಿ ನೀಡುತ್ತಾರೋ, ಆ ಸಂದರ್ಭ ಆಯಾ ಬ್ಲಾಕ್‌ನ ಅಧ್ಯಕ್ಷರು ವಾಹನವನ್ನು ಬಳಸಿಕೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಈ ಬ್ಲಾಕ್ ಕಾಂಗ್ರೆಸ್ ವಾಹನವನ್ನು ತರಿಸಲಾಗಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು.
ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಪುಡಾ ಸದಸ್ಯ ನಿಹಾಲ್ ಪಿ. ಶೆಟ್ಟಿ, ಪುತ್ತೂರು ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಉದ್ಯಮಿ ಸಿಯಾನ್ ದರ್ಬೆ, ವಿಕ್ರಂ ರೈ ಸಾಂತ್ಯ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು
Chouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಮಂಗಳೂರು, ಅ.6: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಫಾರಂ 7 ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರನ್ನು ಅಳಿಸಲು ಸಾಧ್ಯವಿಲ್ಲ. ಅಕ್ರಮವಾಗಿ ಮತಗಳನ್ನು ಡಿಲೀಟ್ ಮಾಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅಗತ್ಯವಾದ ಪ್ರಕ್ರಿಯೆ. ಇದಕ್ಕೆ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ–2) ಸಹಕರಿಸಬೇಕು. ಆದರೆ, ಕಾಂಗ್ರೆಸ್ ಈ ಪ್ರಕ್ರಿಯೆಯಲ್ಲಿ ತೊಡಗಿರುವ ಏಜೆಂಟರನ್ನು ಬೆದರಿಸುವ ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ಫಾರಂ 7 ಸಲ್ಲಿಸಿದ ತಕ್ಷಣ ಹೆಸರು ಡಿಲೀಟ್ ಆಗಲ್ಲ
ಮತದಾರರು ಸ್ಥಳಾಂತರಗೊಂಡಿರುವುದು, ಮೃತಪಟ್ಟಿರುವುದು ಅಥವಾ ಭಾರತೀಯ ಪ್ರಜೆಯಲ್ಲ ಎಂಬ ಆಕ್ಷೇಪಣೆಗಳಿದ್ದಲ್ಲಿ ಫಾರಂ 7 ಮೂಲಕ ಅರ್ಜಿ ಸಲ್ಲಿಸಬಹುದು. ಆದರೆ, ಅರ್ಜಿ ಸಲ್ಲಿಕೆಯಾದ ಮಾತ್ರಕ್ಕೆ ಮತದಾರರ ಹೆಸರನ್ನು ಏಕಪಕ್ಷೀಯವಾಗಿ ಅಳಿಸಲು ಸಾಧ್ಯವಿಲ್ಲ. ಚುನಾವಣಾಧಿಕಾರಿಗಳು ಆಕ್ಷೇಪಣೆಯನ್ನು ಪರಿಶೀಲಿಸಿ, ಸೂಕ್ತ ದೃಢೀಕರಣದ ಬಳಿಕವೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಚೌಟ ವಿವರಿಸಿದರು.
ಫಾರಂ 7 ಮೂಲಕ ಅಲ್ಪಸಂಖ್ಯಾತ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಅವರು ತಳ್ಳಿಹಾಕಿದರು. ಅಕ್ರಮವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂಬುದಕ್ಕೆ ನಿರ್ದಿಷ್ಟ ದಾಖಲೆಗಳಿದ್ದರೆ ಚುನಾವಣಾ ಆಯೋಗದ ಮುಂದೆ ಸಲ್ಲಿಸಲಿ. ಅಂತಹ ಮತದಾರರನ್ನೇ ಕರೆತಂದು ತೋರಿಸಲಿ ಎಂದು ಸವಾಲು ಹಾಕಿದರು.
5.54 ಕೋಟಿ ಮತದಾರರ ಲೆಕ್ಕ ಮುಂದಿಟ್ಟು ಗೊಂದಲ ಎಂದ ಚೌಟ
ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೂ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.46 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಅವರು ಆರೋಪಿಸಿದರು.
ಕರಡು ಮತದಾರರ ಪಟ್ಟಿ ಅಂತಿಮವಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕವೂ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇಂತಹ ಪ್ರಕ್ರಿಯೆಯ ವಿರುದ್ಧವೇ ಜನರನ್ನು ಎತ್ತಿಕಟ್ಟುವುದು ಸರಿಯಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ಗೆ ಆಗ್ರಹ
ಕಾಂಗ್ರೆಸ್‌ಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಆರೋಪಿಸಿದ ಚೌಟ, ಮುಖ್ಯಮಂತ್ರಿಯೊಬ್ಬರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದರು. ಸಾಂವಿಧಾನಿಕ ಸಂಸ್ಥೆಗಳ ಕಾರ್ಯವಿಧಾನ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಅರಿವು ಇರಬೇಕು. ಚುನಾವಣಾ ಆಯೋಗದ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಈ ವಿಚಾರದಲ್ಲಿ ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಸುಮ್ಮನಿರಲ್ಲ
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಪಾಲ್ಗೊಳ್ಳುತ್ತಿದ್ದಾರೆ. ಅವರನ್ನು ಬೆದರಿಸುವ ಅಥವಾ ಒತ್ತಡಕ್ಕೆ ಒಳಪಡಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಚೌಟ ಎಚ್ಚರಿಸಿದರು. ಆಕ್ಷೇಪಣೆಗಳಿಗೆ ಬೆದರಿಕೆ ಮೂಲಕ ಉತ್ತರಿಸುವ ಬದಲು ನಿಗದಿತ ಕಾನೂನು ಪ್ರಕ್ರಿಯೆಯ ಮೂಲಕವೇ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರುಗಳು ಉಳಿದರೆ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗಬಹುದು. ಹೀಗಾಗಿ ಶುದ್ಧ ಮತದಾರರ ಪಟ್ಟಿ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಪ್ರತಿಪಾದಿಸಿದ ಅವರು, ಎಸ್‌ಐಆರ್‌ಗೆ ಕೋಮು ಬಣ್ಣ ನೀಡುವ ಬದಲು ವಾಸ್ತವಾಂಶಗಳ ಆಧಾರದಲ್ಲಿ ಚರ್ಚೆ ನಡೆಯಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪೂಜಾ ಪೈ, ಪೂರ್ಣಿಮಾ, ಸುಜಿತ್ ಪ್ರತಾಪ್, ರಾಜಗೋಪಾಲ ರೈ, ವಸಂತ ಜೆ. ಪೂಜಾರಿ, ಜೀವನ್ ಕುಮಾರ್ ತೊಕ್ಕೊಟ್ಟು ಹಾಗೂ ಸಂಜಯ ಪ್ರಭು ಉಪಸ್ಥಿತರಿದ್ದರು.
-
ಮಂಗಳೂರು13 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ18 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
Uncategorized10 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು20 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು
-
ಸ್ಥಳೀಯ17 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಅಂತರ ರಾಜ್ಯ12 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ14 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ರಾಜಕೀಯ19 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ


















