ಕೊಡಗು
Theerthodbhava-ತಲಕಾವೇರಿಯಲ್ಲಿ ತೀರ್ಥೋದ್ಭವ : ಬ್ರಹ್ಮಗಿರಿ ಬೆಟ್ಟದ ತಪ್ಪಲಿನ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ದರ್ಶನವಿತ್ತ ಕಾವೇರಿ ಮಾತೆ
ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕ್ಷೇತ್ರದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಕಾವೇರಿ ಮಾತೆ ತೀರ್ಥ ಸ್ವರೂಪಿಣಿಯಾದಳು. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತೀರ್ಥೋದ್ಭವ ನಡೆದು ಬ್ರಹ್ಮ ಕುಂಡಿಕೆಯಲ್ಲಿ ಕಾವೇರಿ ಮಾತೆ ದರ್ಶನ ರೂಪ ತೋರಿದಳು. ಅರ್ಚಕರು ತೀರ್ಥೋದ್ಭವ ನಡೆದ ಸಂದರ್ಭದಲ್ಲಿ ಭಕ್ತರ ಮೇಲೆ ಕಾವೇರಿ ತೀರ್ಥ ಸಿಂಪಡಣೆ ಮಾಡಿದರು.
ತಲಕಾವೇರಿ: ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕ್ಷೇತ್ರದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಕಾವೇರಿ ಮಾತೆ ತೀರ್ಥ ಸ್ವರೂಪಿಣಿಯಾದಳು. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತೀರ್ಥೋದ್ಭವ ನಡೆದು ಬ್ರಹ್ಮ ಕುಂಡಿಕೆಯಲ್ಲಿ ಕಾವೇರಿ ಮಾತೆ ದರ್ಶನ ರೂಪ ತೋರಿದಳು.
ಅರ್ಚಕರು ತೀರ್ಥೋದ್ಭವ ನಡೆದ ಸಂದರ್ಭದಲ್ಲಿ ಭಕ್ತರ ಮೇಲೆ ಕಾವೇರಿ ತೀರ್ಥ ಸಿಂಪಡಣೆ ಮಾಡಿದರು. ಪ್ರಧಾನ ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಅರ್ಚಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ನಡೆಯುತ್ತಿದ್ದಂತೆ ಮಂತ್ರಘೋಷದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ದರ್ಶನ ತೋರಿದಳು.
ಕಾವೇರಿ ಕ್ಷೇತ್ರ ತೀರ್ಥೋದ್ಭವ ಪ್ರಯುಕ್ತ ಪುಪ್ಪಾಲಂಕಾರದಿಂದ ಕಂಗೊಳಿಸಿತ್ತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕಾವೇರಿ ಕ್ಷೇತ್ರಕ್ಕೆ ಆಗಮಿಸಿದ್ದು ಕೊಡಗು ಏಕೀಕರಣ ರಂಗದಿಂದ ದೇವಾಲಯದ ಅನ್ನಪ್ರಸಾದ ಸಭಾಭವನದಲ್ಲಿ ಭಕ್ತರಿಗೆ ಉಪಹಾರ ವಿತರಣೆ ಮಾಡಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಎ ಎಸ್ ಪೊನ್ನಣ್ಣ, ಡಾ ಮಂತರ್ ಗೌಡ, ಸುಜಾಕುಶಾಲಪ್ಪ, ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಧರ್ಮಜಾ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಟಾಧಿಕಾರಿ ಕೆ ರಾಮರಾಜನ್, ಎಎಸ್ ಪಿ ಸುಂದರ್ ರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಸೇರಿದಂತೆ ಅನೇಕ ಗಣ್ಯರು ಕಾವೇರಿ ತೀರ್ಥೋದ್ಭವ ಸಂದರ್ಭದಲ್ಲಿ ಭಾಗಿಯಾಗಿದ್ದರು.
ಅಪರಾಧ
Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.
ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.
ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.
ಇದೇ ವರ್ಷದ ಮಾರ್ಚ್ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.
ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.
ಕೊಡಗು
Madikeri-ಮಡಿಕೇರಿ: ಅಡಿಕೆ ಹಾಳೆ ತಟ್ಟೆ, ಪೇಪರ್ ಕಪ್ ನಿಷೇಧ: ನಗರಸಭೆ ಆದೇಶಕ್ಕೆ ವ್ಯಾಪಾರಸ್ಥರು ಶಾಕ್..!
ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ: ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ನಿಷೇಧಕ್ಕೆ ಕಾರಣವೇನು?:
ನಗರಸಭೆಯ ಮಾಹಿತಿ ಪ್ರಕಾರ, ಪೇಪರ್ ಕಪ್ ಮತ್ತು ಅಡಿಕೆ ಹಾಳೆ ತಟ್ಟೆಗಳು ನೈಸರ್ಗಿಕವಾಗಿ ಕರಗುವ ವಸ್ತುಗಳೇ ಆದರೂ, ಅವುಗಳು ಸಂಪೂರ್ಣವಾಗಿ ಮಣ್ಣಿನಲ್ಲಿ ವಿಲೀನವಾಗಲು ದೀರ್ಘ ಸಮಯ ತೆಗೆದುಕೊಳ್ಳುತ್ತವೆ. ಇದರಿಂದ ನಗರದ ಕಸ ವಿಲೇವಾರಿ ಪ್ರಕ್ರಿಯೆಯಲ್ಲಿ ಸಮಸ್ಯೆಗಳು ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರಸಭೆಯ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಈ ನಿಷೇಧ ಜಾರಿಗೊಳಿಸಲಾಗಿದೆ. ಇತ್ತೀಚೆಗಷ್ಟೇ ನಗರಸಭೆಯು ಒಂದು ಮತ್ತು ಅರ್ಧ ಲೀಟರ್ ನೀರಿನ ಬಾಟಲಿಗಳನ್ನು ನಿಷೇಧಿಸಿ ಗಮನ ಸೆಳೆದಿತ್ತು.
ಸಾರ್ವಜನಿಕರ ಮತ್ತು ವ್ಯಾಪಾರಸ್ಥರ ಆಕ್ರೋಶ:
ನಗರಸಭೆಯ ಈ ಹೊಸ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ನೀರಿನ ಬಾಟಲಿ ನಿಷೇಧಕ್ಕೆ ಬೆಂಬಲ ನೀಡಿದ್ದ ಜನತೆ, ಅಡಿಕೆ ಹಾಳೆ ಮತ್ತು ಪೇಪರ್ ತಟ್ಟೆಗಳ ನಿಷೇಧವನ್ನು ಖಂಡಿಸಿದ್ದಾರೆ.
“ಅಡಿಕೆ ಹಾಳೆ ಮತ್ತು ಪೇಪರ್ ಉತ್ಪನ್ನಗಳು ನೈಸರ್ಗಿಕವಾಗಿದ್ದು, ಮಣ್ಣಿನಲ್ಲಿ ಸುಲಭವಾಗಿ ಕರಗುತ್ತವೆ. ಮದುವೆ, ದೇವಸ್ಥಾನಗಳ ಉತ್ಸವ, ಕ್ರೀಡಾಕೂಟ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇವುಗಳ ಬಳಕೆಯೇ ಹೆಚ್ಚು. ಇವುಗಳನ್ನು ನಿಷೇಧಿಸುವುದು ಎಷ್ಟರ ಮಟ್ಟಿಗೆ ಸರಿ?” ಎಂದು ವ್ಯಾಪಾರಸ್ಥರು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, “ಸ್ಥಳೀಯವಾಗಿ ಮಾರಾಟ ನಿಷೇಧಿಸಿದರೂ ಪ್ರವಾಸಿಗರು ಹೊರಗಿನಿಂದ ಅಡಿಕೆ ತಟ್ಟೆ, ಪೇಪರ್ ಕಪ್ಗಳನ್ನು ತರುತ್ತಾರೆ, ಅವರನ್ನು ತಡೆಯುವುದು ಹೇಗೆ?” ಎಂದು ಜನರು ನಗರಸಭೆಯನ್ನು ಪ್ರಶ್ನಿಸುತ್ತಿದ್ದಾರೆ.
ಉಡುಪಿ
Helpline-ನೇಪಾಲ ಜಲಪ್ರಳಯ: ಉಡುಪಿ, ಕೊಡಗು ಯಾತ್ರಿಕರ ರಕ್ಷಣೆಗೆ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ
ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ/ಮಡಿಕೇರಿ: ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ ಜಿಲ್ಲೆಯವರಿಗೆ ಸೂಚನೆ:
ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ನೇಪಾಲದ ನೆರೆ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರ ವಿವರಗಳನ್ನು ತಕ್ಷಣವೇ ಜಿಲ್ಲಾಡಳಿತಕ್ಕೆ ನೀಡಲು ಕೋರಲಾಗಿದೆ. ಸಂಕಷ್ಟದಲ್ಲಿರುವವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರ ಸ್ಥಳ ಮತ್ತು ಮೊಬೈಲ್ ಸಂಖ್ಯೆಯನ್ನು ಕೆಳಗಿನ ಸಂಖ್ಯೆಗಳಿಗೆ ತಿಳಿಸಬಹುದು:
ಸಹಾಯವಾಣಿ: 1077
ದೂರವಾಣಿ: 0820-2574802
ಕೊಡಗು ಜಿಲ್ಲೆಯವರಿಗೆ ಸೂಚನೆ:
ಕೊಡಗು ಜಿಲ್ಲೆಯ ಯಾರಾದರೂ ಯಾತ್ರಿಕರು ನೇಪಾಲದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದರೆ, ಅವರ ಕುಟುಂಬದವರು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ:
ದೂರವಾಣಿ ಸಂಖ್ಯೆಗಳು: 08272-221077, 08272-221099
ಮೊಬೈಲ್/ವಾಟ್ಸಾಪ್ ಸಂಖ್ಯೆ: 8550001077
ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಅಪರಾಧ22 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್20 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ20 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು20 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ16 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ21 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
Uncategorized11 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಮಂಗಳೂರು22 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ















