ಚಿನ್ನ-ಬೆಳ್ಳಿ ದರ
Gold Rate Today – ಗೋಲ್ಡ್‌ಪ್ರಿಯರಿಗೆ ಬಿಗ್‌ಶಾಕ್! ಚಿನ್ನದ ಬೆಲೆ ಭಾರೀ ಏರಿಕೆ-ಬೆಳ್ಳಿ ಬೆಲೆ ಸ್ಥಿರ-ಇಲ್ಲಿದೆ ಇಂದಿನ ದರ
ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೆಚ್ಚಾದಂತೆ, ಅದರ ಮೌಲ್ಯ ಕೂಡ ಹೆಚ್ಚಾಗಿದೆ. ಹಬ್ಬ, ಹರಿದಿನ, ಮದುವೆಯಂತಹ ವಿಶೇಷ ಸಂದರ್ಭಗಳಲ್ಲದೇ ಬೇರೆ ದಿನವೂ ಬಂಗಾರ ಖರೀದಿ ಜೋರಾಗಿಯೇ ಇರುತ್ತದೆ. ಭಾರತದಲ್ಲಿ ಚಿನ್ನದ ಬೆಲೆ ಗುರುವಾರವೂ ಹೆಚ್ಚಳವಾಗಿದ್ದು ಆಭರಣಪ್ರಿಯರಿಗೆ ನಿರಾಶೆಯನ್ನುಂಟುಮಾಡಿದೆ. ನಿನ್ನೆ ಗ್ರಾಮ್ಗೆ 45 ರೂನಷ್ಟು ಏರಿಕೆಯಾಗಿದ್ದ ಹಳದಿ ಲೋಹದ ಬೆಲೆ ಇವತ್ತು 20 ರೂನಷ್ಟು ದುಬಾರಿಯಾಗಿದೆ. ಈ ಮಧ್ಯೆ ಬೆಳ್ಳಿ ಬೆಲೆಯಲ್ಲಿ ಯಾವ ಬದಲಾವಣೆಯೂ ಆಗಿಲ್ಲ.
ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೆಚ್ಚಾದಂತೆ, ಅದರ ಮೌಲ್ಯ ಕೂಡ ಹೆಚ್ಚಾಗಿದೆ. ಹಬ್ಬ, ಹರಿದಿನ, ಮದುವೆಯಂತಹ ವಿಶೇಷ ಸಂದರ್ಭಗಳಲ್ಲದೇ ಬೇರೆ ದಿನವೂ ಬಂಗಾರ ಖರೀದಿ ಜೋರಾಗಿಯೇ ಇರುತ್ತದೆ. ಭಾರತದಲ್ಲಿ ಚಿನ್ನದ ಬೆಲೆ ಗುರುವಾರವೂ ಹೆಚ್ಚಳವಾಗಿದ್ದು ಆಭರಣಪ್ರಿಯರಿಗೆ ನಿರಾಶೆಯನ್ನುಂಟುಮಾಡಿದೆ. ನಿನ್ನೆ ಗ್ರಾಮ್ಗೆ 45 ರೂನಷ್ಟು ಏರಿಕೆಯಾಗಿದ್ದ ಹಳದಿ ಲೋಹದ ಬೆಲೆ ಇವತ್ತು 20 ರೂನಷ್ಟು ದುಬಾರಿಯಾಗಿದೆ. ಈ ಮಧ್ಯೆ ಬೆಳ್ಳಿ ಬೆಲೆಯಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಇಲ್ಲಿದೆ ಇಂದಿನ ದರಗಳ ಮಾಹಿತಿ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅ. 17ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 78,110 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,580 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 78,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 920 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 71,600 ರೂ
ಚೆನ್ನೈ: 71,600 ರೂ
ಮುಂಬೈ: 71,600 ರೂ
ದೆಹಲಿ: 71,750 ರೂ
ಕೋಲ್ಕತಾ: 71,600 ರೂ
ಕೇರಳ: 71,600 ರೂ
ಅಹ್ಮದಾಬಾದ್: 71,650 ರೂ
ಜೈಪುರ್: 71,750 ರೂ
ಲಕ್ನೋ: 71,750 ರೂ
ಭುವನೇಶ್ವರ್: 71,600 ರೂ
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!
ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.
ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
-
ಪುತ್ತೂರು18 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್21 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು21 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್20 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ21 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ರಾಜ್ಯ24 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಅಪರಾಧ20 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ20 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ


















