Connect with us

ಬಿಗ್ ನ್ಯೂಸ್

Bangalore Kambala-ಕಳೆದ ವರ್ಷ ಅದ್ದೂರಿಯಾಗಿ ಜರಗಿದ ‘ಬೆಂಗಳೂರು ಕಂಬಳ’ ಈ ಬಾರಿ ನಿಗಧಿತ ದಿನದಂದು ಕ್ಯಾನ್ಸಲ್..! ಯಾವಾಗ ನಡೆಯಬಹುದು..? ಅಧ್ಯಕ್ಷರಾದ ಅಶೋಕ್ ರೈ ಏನಂದ್ರು..? ಇಲ್ಲಿ ಓದಿ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ನಿಖರನ್ಯೂಸ್ : ತುಳುನಾಡಿನ ಸಂಸ್ಕೃತಿಯ ಕಂಬಳವನ್ನು ರಾಜಧಾನಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಆಚರಿಸಿ , ಸಿಲಿಕಾನ್ ಸಿಟಿಯಲ್ಲಿ ಆಚರಿಸುವ ಮೂಲಕ ವಿಶ್ವಕ್ಕೆ ಕಂಬಳವನ್ನು ಪರಿಚಯಿಸಿದ ‘ಬೆಂಗಳೂರು ಕಂಬಳ’ ಈ ಬಾರಿ ಯಾವಾಗ ನಡೆಯಲಿದೆ ಎನ್ನುವ ಚರ್ಚೆ ಪ್ರಾರಂಭವಾಗಿದೆ.

Ad Widget

Ad Widget alt="Ad Widget"/>

Ad Widget

ಕಂಬಳ ಸಮಿತಿಯ ಟೈಂಟೇಬಲ್ ಮೂಲಕ ಈ ಬಾರಿ ಅ.26ಕ್ಕೆ ನಿಗದಿಯಾಗಿತ್ತು. ಆದರೆ ಈ ದಿನದಂದು ಕಂಬಳ ಬೆಂಗಳೂರು ಕಂಬಳ ಆಯೋಜನೆಯಾಗುವುದು ಬಹುತೇಕ ಅನುಮಾನ. ಜತೆಗೆ ಈ ವರ್ಷ ನಡೆಯುವುದೇ ಅನುಮಾನ ಎನ್ನುವ ಉಹಾಪೋಹ ಚರ್ಚೆಯಾಗುತ್ತಿದೆ.

Ad Widget

Ad Widget <> Ad Widget

ಬೆಂಗಳೂರಿನಲ್ಲಿ ಕಂಬಳ ನಡೆಸುವುದು ಬಹಳ ಕಷ್ಟದ ಕೆಲಸ. ಪ್ಯಾಲೇಸ್‌ ಗ್ರೌಂಡ್‌ ಅನುಮತಿ ದೊರೆಯಬೇಕಾದರೆ 3 ತಿಂಗಳ ಮುನ್ನ ಪ್ರಕ್ರಿಯೆ ನಡೆಸಬೇಕು. ಮೈಸೂರು ಅರಮನೆ ಹಾಗೂ ಸರಕಾರದಿಂದ ಅನುಮತಿ ಪಡೆಯಬೇಕು. ಕರೆ ನಿರ್ಮಾಣ ಸಹಿತ ಮೂಲ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಕೋಣಗಳನ್ನು ಕರಾವಳಿಯಿಂದ ಬೆಂಗಳೂರಿಗೆ ಕೊಂಡೊಯ್ಯಬೇಕು. ಇಂತಹ ಹತ್ತು ಹಲವು ಸವಾಲು ಎದುರಿಸುವ ಜತೆಗೆ ಕೋಟ್ಯಂತರ ರೂ. ಖರ್ಚು ಕೂಡ ಆಗುತ್ತದೆ. ಕಳೆದ ವರ್ಷ ಮೊದಲ ಕಂಬಳ ಎಂಬ ನೆಲೆಯಲ್ಲಿ ಯಶಸ್ವಿಯಾಗಿ ಮೂಡಿಬಂತಾದರೂ, ಈ ಬಾರಿ ಮಾತ್ರ ಈ ಕುರಿತ ಉತ್ಸಾಹ ಎಲ್ಲೂ ಕಂಡುಬಾರದೆ ಒಂದೇ ವರ್ಷಕ್ಕೆ ಕಂಬಳದಾಟ ಮುಗಿಯಿತೇ ಎಂಬ ಪ್ರಶ್ನೆ ಮೂಡಿದೆ.

ಮಾರ್ಚ್‌ನಲ್ಲಿ ಸಾಧ್ಯವೇ?
ಸದ್ಯದ ಮಾಹಿತಿ ಪ್ರಕಾರ ಈ ಋತುವಿನ ಆರಂಭದಲ್ಲಿ ಬೆಂಗಳೂರು ಕಂಬಳ ನಡೆಯುವುದಿಲ್ಲ. ಆದರೆ ಕಂಬಳ ಸಮಿತಿ ಹಾಗೂ ಕೋಣಗಳ ಯಜಮಾನರು ಒಪ್ಪಿಗೆ ಸೂಚಿಸಿದರೆ ಮಾರ್ಚ್‌ನಲ್ಲಿ ಬೆಂಗಳೂರು ಕಂಬಳ ನಡೆಸಬಹುದೇ ಎಂಬ ಬಗ್ಗೆ ಚರ್ಚೆ ಈಗ ನಡೆಯುತ್ತಿದೆ. ಇದಕ್ಕಾಗಿ ಅರಮನೆ ಮೈದಾನದ ಅನುಮತಿಗೆ ಬೆಂಗಳೂರು ಸಮಿತಿ ಅರ್ಜಿ ಹಾಕಿದೆ. ಈ ಕುರಿತಂತೆ ಚರ್ಚೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

ಟಾಪರ್‌ ಕೋಣವಷ್ಟೇ ಭಾಗವಹಿಸಲಿ
ಕಂಬಳದ ತೀರ್ಪುಗಾರರ ಸಮಿತಿಯ ಸಂಚಾಲಕರಾದ ವಿಜಯ್‌ ಕುಮಾರ್‌ ಕಂಗಿನಮನೆ ಅವರ ಪ್ರಕಾರ 157 ಜತೆ ಕೋಣಗಳನ್ನು ಜಿಲ್ಲೆಯ ಹೊರಭಾಗಕ್ಕೆ ಕೊಂಡೊಯ್ಯುವುದು ಸುಲಭದ ಕೆಲಸವಲ್ಲ. ಇದರಲ್ಲಿ ಆಯ್ಕೆ ಮಾಡಿ 65 ಜತೆ ಕೋಣಗಳು ಮಾತ್ರ ಹೊರಜಿಲ್ಲೆಗೆ ಕೊಂಡೊಯ್ದರೆ ಹೆಚ್ಚು ಅನುಕೂಲ. ಹೀಗೆ ಮಾಡಿದರೆ ಬೇರೆ ಕಡೆಯೂ ಕಂಬಳ ನಡೆಸಬಹುದು. ಇಲ್ಲದಿದ್ದರೆ ಕಷ್ಟ’ ಎನ್ನುತ್ತಾರೆ.

ಬೆಂಗಳೂರು ಕಂಬಳಕ್ಕೆ ಸಮಿತಿ ದಿನಾಂಕ ನೀಡಿತ್ತು. ಆದರೆ ಕಂಬಳ ಆಯೋಜನೆಯ ಸಿದ್ಧತೆ ನಡೆದಿಲ್ಲ. ಹೀಗಾಗಿ ಈ ಬಾರಿ ಬೆಂಗಳೂರಿನಲ್ಲಿ ಕಂಬಳ ನಡೆಯುವ ಸಾಧ್ಯತೆ ಕಡಿಮೆ. ಫೆಬ್ರವರಿಯಲ್ಲಿ ಶಿವಮೊಗ್ಗ ಕಂಬಳ ನಡೆಯಲಿದ್ದು, ಈ ಕುರಿತ ತಯಾರಿ ನಡೆಸಲಾಗುತ್ತಿದೆ ಎಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾದ ಬೆಳಪು ದೇವಿಪ್ರಸಾದ್‌ ಶೆಟ್ಟಿ ಯವರು ಅಭಿಪ್ರಾಯಪಟ್ಟಿದ್ದಾರೆ.

ನಿಖರ ನ್ಯೂಸ್ ಜೊತೆ ಮಾತನಾಡಿದ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರಾಗಿ ಕಂಬಳ ಆಯೋಜಿಸಿ ಬಾರಿ ಪ್ರಚಾರಕ್ಕೆ ಬಂದ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ, ಬೆಂಗಳೂರು ಕಂಬಳಕ್ಕೆ ಕಂಬಳ ಸಮಿತಿಯಿಂದ ದಿನಾಂಕ ಪ್ರಕಟವಾಗಿತ್ತು. ಆ ದಿನ ನಡೆಸುವುದು ಕಷ್ಟ ಸಾಧ್ಯ. ಬೆಂಗಳೂರಿನಲ್ಲಿ ಕಂಬಳ ಆಯೋಜಿಸುವುದು ಭಾರಿ ಕಷ್ಟವಿದೆ. ಸರ್ಕಾರದ ಅನುಮತಿ ಪಡೆಯಬೇಕು, ಮತ್ತೊಂದು ಕಡೆ ಮೈಸೂರು ಅರಮನೆಯ ಜಾಗವಾದ ಕಾರಣ ಅವರ ಅನುಮತಿ ಮತ್ತು ಬಾಡಿಗೆ ನಿಗಧಿಯಾಗಬೇಕು. ಟ್ರಾಫಿಕ್ ಪೊಲೀಸ್ ಕಮಿಷನರ್ ಅವರ ಪರ್ಮಿಷನ್ ಪಡೆಯಬೇಕು. ವಿಮಾನನಿಲ್ದಾಣ ರಸ್ತೆಯಾದ ಕಾರಣ ವಿಐಪಿಗಳ ಪ್ರವಾಸ ಪಟ್ಟಿ ಎಲ್ಲಾ ನೋಡಿಕೊಂಡು ಅದರ ಪರ್ಮಿಷನ್ ಸಿಗುವುದು. ಪಾರ್ಕಿಂಗ್ ವ್ಯವಸ್ಥೆ ಭದ್ರತಾ ವ್ಯವಸ್ಥೆ ಮುಂತಾದ ಭಾರಿ ಕಷ್ಟಕರ ವ್ಯವಸ್ಥೆಯಲ್ಲಿ ಬೆಂಗಳೂರು ಕಂಬಳ ಆಯೋಜನೆಯಾಗುವುದು.

ಅದ್ದರಿಂದ ಸಮಿತಿ ಕೊಟ್ಟ ದಿನದಲ್ಲಿ ತೀರ್ಮಾನ ತೆಗೆದುಕೊಳ್ಳುವುದು ಕಷ್ಟ. ಇಷ್ಟೆಲ್ಲ ಕಷ್ಟ ಇರೋದರಿಂದ ಯಾರಾದರೂ ಆಸಕ್ತರಿದ್ದರೆ ಮುಂದೆ ಬರಬಹುದು ಎಂದು ನಾವೂ ನಿರೀಕ್ಷೆಯಲ್ಲಿದ್ದೆವು. ಯಾರೂ ಮುಂದೆ ಬರಲಿಲ್ಲ. ಸದ್ಯಕ್ಕೆ ಕಂಬಳ ನಡೆಸಲು ಸಾಧ್ಯವಿಲ್ಲ. ಆದರೂ ಕಂಬಳ ಸಮಿತಿ ಹಾಗೂ ಕೋಣಗಳ ಯಜಮಾನರು ಅನುಮತಿ ನೀಡಿದರೆ ಫೆಬ್ರವರಿ/ಮಾರ್ಚ್‌ನಲ್ಲಿ ನಡೆಸುವ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ಈಗಾಗಲೇ ಎಲ್ಲಾ ಅನುಮತಿಗಳಿಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಅಶೋಕ್ ರೈ ತಿಳಿಸಿದರು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!