ಬಿಗ್ ನ್ಯೂಸ್
Muthappa Rai Asset | ಮುತ್ತಪ್ಪ ರೈ ಬಯಸಿದಂತೆ ಆಸ್ತಿ ಪಾಲು ಸುಖಾಂತ್ಯ : 2ನೇ ಹೆಂಡ್ತಿ ಅನುರಾಧ ರೈಗೆ ಪುತ್ರರೇ ಕೊಟ್ರು ನೂರಾರು ಕೋಟಿ ಆಸ್ತಿ..! ಸಹೋದರನ ಪುತ್ರ ಹಾಗೂ ಕೆಲಸದವರಿಗೂ ಪಾಲು – ಮೂರನೇ ವ್ಯಕ್ತಿಗಳು ಕೈಹಾಕದಂತೆ ನಿರ್ವಹಣೆ..! ಯಾರ್ಯಾರಿಗೆ ಎಷ್ಟೇಷ್ಟು ಆಸ್ತಿ ಸಿಕ್ಕಿದೆ ಗೊತ್ತೇ..?
ಬೆಂಗಳೂರು (ಅ.18): ಮಾಜಿ ಡಾನ್ ಮುತ್ತಪ್ಪ ರೈ (Muthappa Rai Asset) ತಾವು ನಿಧನರಾಗುವ ಮೊದಲು ಪುತ್ರರಲ್ಲಿ ತಿಳಿಸಿದಂತೆ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪುತ್ರರೇ ಭಾಗ ಮಾಡಿ 2ನೇ ಹೆಂಡತಿಗೆ ನೀಡಿದ್ದಾರೆ. ಸಹೋದರನ ಪುತ್ರ ಹಾಗೂ ಮನೆ ಕೆಲಸದವರು ಸೇರಿದಂತೆ ಯಾರಾರಿಗೆ ಎಷ್ಟು ಆಸ್ತಿ ಕೊಟ್ಟಿದ್ದಾರೆ ಎನ್ನುವ ಎನ್ನುವ ವಿವರ ಇಲ್ಲಿದೆ.
ರಾಜ್ಯದಲ್ಲಿ ದೊಡ್ಡ ಡಾನ್ ಆಗಿ ಮೆರೆದ ಮುತ್ತಪ್ಪ ರೈ, ಕಾನೂನು ಕಟ್ಟಳೆಗಳು ಬಿಗಿಯಾದ ನಂತರ ತನ್ನ ಎಲ್ಲ ಕೃತ್ಯಗಳನ್ನು ನಿಲ್ಲಿಸಿ ಸಾಮಾನ್ಯರಂತೆ ಸಮಾಜ ಸೇವೆ ಮತ್ತು ಜಯಕರ್ನಾಟಕ ಸಂಘಟನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಜೀವನ ಮಾಡುತ್ತಿದ್ದರು. ಆದರೆ, ಮಾಜಿ ಡಾನ್ ಆಗುವ ಮುನ್ನವೇ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ ತನ್ನದಾಗಿಸಿಕೊಂಡಿದ್ದರು.
ಮುತ್ತಪ್ಪ ರೈ ಮೊದಲ ಹೆಂಡತಿ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದರು. ಇದಾದ ನಂತರ ಮುತ್ತಪ್ಪ ರೈಯನ್ನು ಅನುರಾಧ ರೈ ಎಂಬವರನ್ನು 2ನೇ ಹೆಂಡತಿಯಾಗಿ ಅಧಿಕೃತವಾಗಿ ಮದುವೆ ಮಾಡಿಕೊಂಡರು.
ಅನುರಾಧ ಅವರೊಂದಿಗೆ ಕೆಲ ವರ್ಷಗಳ ಸಂಸಾರ ಮಾಡಿದ್ದ ಮುತ್ತಪ್ಪ ರೈಗೆ ಕ್ಯಾನ್ಸರ್ ಬಾಧಿಸಿ ನಿಧನರಾದರು. ಇದಕ್ಕೂ ಮುನ್ನ ಮುತ್ತಪ್ಪ ರೈ ವಕೀಲರ ನೇತೃತ್ವದಲ್ಲಿ ವಿಲ್ ಬರೆಸಿದ್ದರು. ಆ ವಿಲ್ ನ್ನು ರಿಜಿಸ್ಟರ್ ಕೂಡ ಮಾಡಿಸಿದ್ದರು.
ಮುತ್ತಪ್ಪ ರೈ ಅವರ ಸಾವಿನ ಬೆನ್ನಲ್ಲಿಯೇ ದೊಡ್ಡ ಮಟ್ಟದಲ್ಲಿ ಅವರ ಮೃತದೇಹ ಮೆರವಣಿಗೆ ಮಾಡಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಇದಾದ ನಂತರ ಆಸ್ತಿ ಹಂಚಿಕೆ ವಿಚಾರ ಬಂದಾಗ ಮುತ್ತಪ್ಪ ರೈ ಬರೆದಿಟ್ಟ ವಿಲ್ ಅನ್ನು ಮರೆಮಾಚಿದ ಮಕ್ಕಳಾದ ರಾಖಿ ರೈ ಮತ್ತು ರಿಕ್ಕಿ ರೈ ಯಾರಿಗೂ ತುಂಡು ಆಸ್ತಿ ಕೊಡದೇ ತಾವೇ ಇಟ್ಟುಕೊಂಡಿದ್ದರು ಎನ್ನುವ ಆರೋಪ ಕೇಳಿಬಂದಿತ್ತು.
ಮುತ್ತಪ್ಪ ರೈ ಅವರನ್ನು ಕಾನೂನಾತ್ಮಕವಾಗಿ ಮದುವೆಯಾಗಿ ಸಂಸಾರ ಮಾಡಿದ್ದ ಅನುರಾಧ ರೈ ಅವರು ಆಸ್ತಿಗಾಗಿ ಕೋರ್ಟ್ ಮೊರೆ ಹೋಗಿದ್ದರು.
ಇದೀಗ ಬೆಂಗಳೂರಿನ 19 ನೇ ಸಿಟಿ ಸಿವಿಲ್ ಹಾಗೂ ಸೆಷನ್ಸ್ ಕೋರ್ಟ್ ನಲ್ಲಿ ಆಸ್ತಿ ವಿವಾದ ಇತ್ಯರ್ಥವಾಗಿದೆ. ಲೋಕ ಅದಾಲತ್ ಮೂಲಕ ಕೋರ್ಟ್‌ನಲ್ಲಿ ಸಂಧಾನ ಮಾಡಿ ಆಸ್ತಿ ವಿವಾದವನ್ನು ಇತ್ಯರ್ಥ ಮಾಡಲಾಗಿದೆ. ಇದಕ್ಕೆ ಪುತ್ರರು ಒಪ್ಪಿಕೊಂಡಿದ್ದಾರೆ. ಮುತ್ತಪ್ಪ ರೈ ಸಾಯುವ ಮೊದಲು ತನ್ನ 2 ನೇ ಹೆಂಡತಿಗೆ ಮತ್ತು ಸಹೋದರನ ಮಗನಿಗೆ ಮತ್ತು ಕೆಲಸದವರಿಗೆ ಆಸ್ತಿ ಕೊಡಬೇಕೆಂದು ಪುತ್ರರಲ್ಲಿ ತಿಳಿಸಿದ್ದರು.
2019 ರಲ್ಲಿ ಮುತ್ತಪ್ಪ ರೈ ಆಸ್ತಿಗೆ ಸಂಬಂಧಿಸಿದಂತೆ ವಿಲ್ ಮಾಡಿದ್ದರು. ವಕೀಲ ನಾರಾಯಣಸ್ವಾಮಿ ಅವರನ್ನ ವಿಲ್ ಎಕ್ಸಿಕ್ಯೂಟರ್ ಆಗಿ ನೇಮಿಸಿ, ವಕೀಲೆ ಗೀತಾರಾಜ್ ಎಂಬುವವರ ಮೂಲಕ ಆಸ್ತಿಗೆ ಸಂಬಂಧಿಸಿದಂತೆ ವಿಲ್ ಬರೆಸಿದ್ದರು. ಒಟ್ಟು ಸಾವಿರ ಕೋಟಿಗೂ ಅಧಿಕ ಮೌಲ್ಯದ ಆಸ್ತಿಗೆ ಸಂಬಂಧಿಸಿದಂತೆ 41 ಪುಟಗಳ ವಿಲ್ ಬರೆಸಿದ್ದರು.
2020 ರಲ್ಲಿ ಮುತ್ತಪ್ಪ ರೈ ನಿಧನರಾಗಿದ್ದರು. ಮುತ್ತಪ್ಪ ರೈ ಸಾವಿನ ಬಳಿಕ 2ನೇ ಹೆಂಡತಿ ಅನುರಾಧ ರೈ ಆಸ್ತಿಯಲ್ಲಿ ಪಾಲು ಕೇಳಿ ರಾಖಿ ರೈ, ರಿಕ್ಕಿ ರೈ ಅವರನ್ನು ಪ್ರತಿವಾದಿಗಳಾಗಿ ಮಾಡಿ ಕೋರ್ಟ್ ನಲ್ಲಿ ದಾವೆ ಹೂಡಿದ್ದರು. ಆದರೆ, ಅದರಲ್ಲಿ ಮೂರು ಕೇಸ್ ನಲ್ಲಿ ಅನುರಾಧ ರೈ ಹಿನ್ನಡೆ ಅನುಭವಿಸಿದ್ದರು.
ಒಂದು ಕಾಲದಲ್ಲಿ ಭೂಗತ ಲೋಕವನ್ನೇ ಆಳಿದ್ದ ಮುತ್ತಪ್ಪ ರೈಯ ಆಸ್ತಿ ಪಾಲಿಗೆ ಮೂರನೇ ವ್ಯಕ್ತಿಗಳು ಕೈ ಹಾಕುವುದು ಪುತ್ರರಿಗೆ ಇಷ್ಟವಿರಲಿಲ್ಲ.
ಈ ಕೇಸಿಗೆ ಸಂಬಂಧಪಟ್ಟಂತೆ ಇದೀಗ ಇಬ್ಬರೂ ಕಾಂಪ್ರಮೈಸ್ ಮಾಡಿಕೊಂಡು ತಾವೇ ಕುಟುಂಬದಲ್ಲಿ ಆಸ್ತಿ ಹಂಚಿಕೆ ಮಾಡಿಕೊಳ್ಳುವುದಾಗಿ ಕೋರ್ಟ್ ಮುಂದೆ ಒಪ್ಪಿಕೊಂಡಿದ್ದಾರೆ. ಇದರ ಅನ್ವಯ ಅನುರಾಧ ರೈ ಅವರಿಗೆ ಸುಮಾರು 100 ಕೋಟಿ ಮೌಲ್ಯದ ಆಸ್ತಿಯನ್ನ ಹಂಚಿಕೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅನುರಾಧ ರೈ ಪಡೆದ ಆಸ್ತಿ ವಿವರ:
- ಅನುರಾಧ ರೈಗೆ 7 ಕೋಟಿ ರೂ. ನಗದು ಹಣ
- ಮಂಡ್ಯದ ಪಾಂಡವಪುರದ ಬಳಿ 22 ಎಕರೆ ಜಮೀನು
- ಮೈಸೂರಿನಲ್ಲಿ 4,800 ಚದರಡಿ ನಿವೇಶನ ಹಾಗೂ ಅದೇ ನಿವೇಶನದಲ್ಲಿನ ಮನೆ
- ನಂದಿಬೆಟ್ಟ ಬಳಿಯ ಕೆಂಪತಿಮ್ಮನಹಳ್ಳಿಯಲ್ಲಿ 5.5 ಎಕರೆ ಜಮೀನು
- ಒಟ್ಟಾರೆ ಅನುರಾಧ ರೈಗೆ ಕೊಟ್ಟ ಆಸ್ತಿ ಮೌಲ್ಯ 100 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಇದರ ಜೊತೆ ಮುತ್ತಪ್ಪ ರೈ ಜೊತೆ ಇರುವಾಗ ಕೊಟ್ಟ ಚಿನ್ನ ಒಡೆವೆಗಳು ಅನುರಾಧ ರೈ ಜೊತೆಗಿವೆ. ಇಷ್ಟು ಆಸ್ತಿಯನ್ನು ಮುತ್ತಪ್ಪ ರೈ ಪುತ್ರರೇ ಒಪ್ಪಿಕೊಂಡು ಎರಡನೇ ಪತ್ನಿಗೆ ಗೌರವಯುತವಾಗಿ ಮಾನವೀಯತೆ ದೃಷ್ಟಿಯಿಂದ ಕೊಟ್ಟಿದ್ದಾರೆ ಎಂದು ಕುಟುಂಬದ ಮೂಲಗಳಿಂದ ಮಾಹಿತಿ ದೊರಕಿದೆ.
ಮುತ್ತಪ್ಪ ರೈ ಸಹೋದರ ಕರುಣಾಕರ್ ರೈ ಪುತ್ರ ಅಶ್ವಿನ್ ರೈ ಗೆ ಮೈಸೂರು ಹಾಗೂ ಬಿಡದಿಯ ಆಸ್ತಿಯಲ್ಲಿ ಪಾಲು ನೀಡಿದ್ದಾರೆ.
ಇನ್ನು ಜೊತೆಗಿದ್ದ ಕೆಲಸದವರಿಗೆ ಮುತ್ತಪ್ಪ ರೈ ಇಚ್ಚೆಯಂತೆ ಮನೆಯ ನಿವೇಶನ ಮತ್ತು ಹಣ ನೀಡಲಾಗಿದೆ. ಕೆಲವು ಜನರಿಗೆ ಈಗಾಗಲೇ ಕೊಡಲಾಗಿದೆ. ಇನ್ನು ಬಾಕಿಯಿರುವವರಿಗೆ ಕೆಲವೇ ದಿನಗಳಲ್ಲಿ ಕೊಡಲಾಗುವುದು ಎನ್ನುವ ಮಾಹಿತಿ ದೊರಕಿದೆ.
ಕುಟುಂಬಸ್ಥರಿಗೆ ಮುತ್ತಪ್ಪ ರೈ ಜೀವಂತ ಇರುವಾಗಲೇ ಆಸ್ತಿಗಳನ್ನು ಕೊಟ್ಟಿದ್ದಾರೆ ಎನ್ನಲಾಗಿದೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್8 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ14 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು16 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized15 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್16 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ14 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್15 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















