ಕೊಡಗು
Balachandra Kalagi-Big Breaking-ಕೊಡಗು-ಸುಳ್ಯ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಅಪಘಾತವೆಸಗಿ ಹತ್ಯೆ : ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಘೋಷಣೆ
ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಬಾಲಚಂದ್ರ ಕಳಗಿಯವರನ್ನು ಹತ್ಯೆ ಮಾಡಿದ ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್ರವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕೊಡಗು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ಶಿಕ್ಷೆಯ ಪ್ರಮಾಣ ಘೋಷಿಸಿತ್ತು.
ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಬಾಲಚಂದ್ರ ಕಳಗಿಯವರನ್ನು ಹತ್ಯೆ ಮಾಡಿದ ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್ರವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕೊಡಗು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ಶಿಕ್ಷೆಯ ಪ್ರಮಾಣ ಘೋಷಿಸಿತ್ತು.
2019ರ ಮಾ. 19ರಂದು, ಬಾಲಚಂದ್ರ ಕಳಗಿಯವರು ಓಮ್ಮಿ ಕಾರಿಗೆ ಲಾರಿಯಿಂದ ಗುದ್ದಿ ಹತ್ಯೆಗೆಯ್ಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಆರೋಪಿಗಳಾದ ಸಂಪತ್, ಹರಿಪ್ರಸಾದ್ ಮತ್ತು ಜಯನ್ ರವರನ್ನು ಮಡಿಕೇರಿ ಪೊಲೀಸರು ಬಂದಿಸಿದ್ದರು. ಜಾಮೀನಿನ ಮೇಲೆ ಹೊರಗೆ ಬಂದ ಆರೋಪಿ , ಸಂಪತ್ ನನ್ನು ಸುಳ್ಯದ ಶಾಂತಿನಗರದಲ್ಲಿ ಹತ್ಯೆಗೈಯಲಾಗಿದೆ.
ಇದೀಗ, ನ್ಯಾಯಾಲಯವು ಈ ಪ್ರಕರಣದ ವಿಚಾರಣೆಯು ಮುಗಿಯುತ್ತಲೆ, ಹರಿಪ್ರಸಾದ್ ಮತ್ತು ಜಯನ್ರ ವಿರುದ್ಧದ ಆರೋಪಗಳು ಸಾಬೀತು ಆಗಿರುವುದಾಗಿ ತೀರ್ಪು ನೀಡಿತ್ತು. . ನ್ಯಾಯಾಧೀಶ ಪ್ರಶಾಂತಿ ಜಿ. ಯವರು ಅ. 16ರಂದು ತೀರ್ಪನ್ನು ಘೋಷಿಸಿದ್ದು, ಅ. 19ರಂದು ಶಿಕ್ಷೆಯ ಪ್ರಮಾಣವನ್ನು ಘೋಷಿಸುವುದಾಗಿ ತಿಳಿಸಿದರು.
ಇದರಂತೆ, ಇಂದು ಆರೋಪಿಗಳಿಗೆ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಪ್ರತಿ ವ್ಯಕ್ತಿಗೆ 10,000 ರುಪಾಯಿಗಳ ದಂಡವನ್ನು ವಿಧಿಸಿದ್ದಾರೆ.
ಅಪರಾಧ
Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.
ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.
ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.
ಇದೇ ವರ್ಷದ ಮಾರ್ಚ್ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.
ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.
ಕೊಡಗು
Madikeri-ಮಡಿಕೇರಿ: ಅಡಿಕೆ ಹಾಳೆ ತಟ್ಟೆ, ಪೇಪರ್ ಕಪ್ ನಿಷೇಧ: ನಗರಸಭೆ ಆದೇಶಕ್ಕೆ ವ್ಯಾಪಾರಸ್ಥರು ಶಾಕ್..!
ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ: ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ನಿಷೇಧಕ್ಕೆ ಕಾರಣವೇನು?:
ನಗರಸಭೆಯ ಮಾಹಿತಿ ಪ್ರಕಾರ, ಪೇಪರ್ ಕಪ್ ಮತ್ತು ಅಡಿಕೆ ಹಾಳೆ ತಟ್ಟೆಗಳು ನೈಸರ್ಗಿಕವಾಗಿ ಕರಗುವ ವಸ್ತುಗಳೇ ಆದರೂ, ಅವುಗಳು ಸಂಪೂರ್ಣವಾಗಿ ಮಣ್ಣಿನಲ್ಲಿ ವಿಲೀನವಾಗಲು ದೀರ್ಘ ಸಮಯ ತೆಗೆದುಕೊಳ್ಳುತ್ತವೆ. ಇದರಿಂದ ನಗರದ ಕಸ ವಿಲೇವಾರಿ ಪ್ರಕ್ರಿಯೆಯಲ್ಲಿ ಸಮಸ್ಯೆಗಳು ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರಸಭೆಯ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಈ ನಿಷೇಧ ಜಾರಿಗೊಳಿಸಲಾಗಿದೆ. ಇತ್ತೀಚೆಗಷ್ಟೇ ನಗರಸಭೆಯು ಒಂದು ಮತ್ತು ಅರ್ಧ ಲೀಟರ್ ನೀರಿನ ಬಾಟಲಿಗಳನ್ನು ನಿಷೇಧಿಸಿ ಗಮನ ಸೆಳೆದಿತ್ತು.
ಸಾರ್ವಜನಿಕರ ಮತ್ತು ವ್ಯಾಪಾರಸ್ಥರ ಆಕ್ರೋಶ:
ನಗರಸಭೆಯ ಈ ಹೊಸ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ನೀರಿನ ಬಾಟಲಿ ನಿಷೇಧಕ್ಕೆ ಬೆಂಬಲ ನೀಡಿದ್ದ ಜನತೆ, ಅಡಿಕೆ ಹಾಳೆ ಮತ್ತು ಪೇಪರ್ ತಟ್ಟೆಗಳ ನಿಷೇಧವನ್ನು ಖಂಡಿಸಿದ್ದಾರೆ.
“ಅಡಿಕೆ ಹಾಳೆ ಮತ್ತು ಪೇಪರ್ ಉತ್ಪನ್ನಗಳು ನೈಸರ್ಗಿಕವಾಗಿದ್ದು, ಮಣ್ಣಿನಲ್ಲಿ ಸುಲಭವಾಗಿ ಕರಗುತ್ತವೆ. ಮದುವೆ, ದೇವಸ್ಥಾನಗಳ ಉತ್ಸವ, ಕ್ರೀಡಾಕೂಟ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇವುಗಳ ಬಳಕೆಯೇ ಹೆಚ್ಚು. ಇವುಗಳನ್ನು ನಿಷೇಧಿಸುವುದು ಎಷ್ಟರ ಮಟ್ಟಿಗೆ ಸರಿ?” ಎಂದು ವ್ಯಾಪಾರಸ್ಥರು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, “ಸ್ಥಳೀಯವಾಗಿ ಮಾರಾಟ ನಿಷೇಧಿಸಿದರೂ ಪ್ರವಾಸಿಗರು ಹೊರಗಿನಿಂದ ಅಡಿಕೆ ತಟ್ಟೆ, ಪೇಪರ್ ಕಪ್ಗಳನ್ನು ತರುತ್ತಾರೆ, ಅವರನ್ನು ತಡೆಯುವುದು ಹೇಗೆ?” ಎಂದು ಜನರು ನಗರಸಭೆಯನ್ನು ಪ್ರಶ್ನಿಸುತ್ತಿದ್ದಾರೆ.
ಉಡುಪಿ
Helpline-ನೇಪಾಲ ಜಲಪ್ರಳಯ: ಉಡುಪಿ, ಕೊಡಗು ಯಾತ್ರಿಕರ ರಕ್ಷಣೆಗೆ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ
ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ/ಮಡಿಕೇರಿ: ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ ಜಿಲ್ಲೆಯವರಿಗೆ ಸೂಚನೆ:
ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ನೇಪಾಲದ ನೆರೆ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರ ವಿವರಗಳನ್ನು ತಕ್ಷಣವೇ ಜಿಲ್ಲಾಡಳಿತಕ್ಕೆ ನೀಡಲು ಕೋರಲಾಗಿದೆ. ಸಂಕಷ್ಟದಲ್ಲಿರುವವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರ ಸ್ಥಳ ಮತ್ತು ಮೊಬೈಲ್ ಸಂಖ್ಯೆಯನ್ನು ಕೆಳಗಿನ ಸಂಖ್ಯೆಗಳಿಗೆ ತಿಳಿಸಬಹುದು:
ಸಹಾಯವಾಣಿ: 1077
ದೂರವಾಣಿ: 0820-2574802
ಕೊಡಗು ಜಿಲ್ಲೆಯವರಿಗೆ ಸೂಚನೆ:
ಕೊಡಗು ಜಿಲ್ಲೆಯ ಯಾರಾದರೂ ಯಾತ್ರಿಕರು ನೇಪಾಲದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದರೆ, ಅವರ ಕುಟುಂಬದವರು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ:
ದೂರವಾಣಿ ಸಂಖ್ಯೆಗಳು: 08272-221077, 08272-221099
ಮೊಬೈಲ್/ವಾಟ್ಸಾಪ್ ಸಂಖ್ಯೆ: 8550001077
ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್20 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ22 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ4 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ3 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ3 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಚಿನ್ನ-ಬೆಳ್ಳಿ ದರ3 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ3 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
Uncategorized6 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ















