ರಾಜಕೀಯ
ಕರ್ನಾಟಕ ಬಿಜೆಪಿಯಲ್ಲಿ ಮತ್ತೆ ರಾರಾಜಿಸಿದ ಕುಟುಂಬ ರಾಜಕಾರಣ – ಮಾಜಿ ಸಿ ಎಂ ಬಸವರಾಜ್ ಪುತ್ರನಿಗೆ ಟಿಕೆಟ್ ! ಬೊಮ್ಮಾಯಿ ಕುಟುಂಬದ ಮೂರನೇ ಕುಡಿ ಚುನಾವಣ ರಾಜಕೀಯಕ್ಕೆ – ಮುಂದುವರಿದ ಚನ್ನಪಟ್ಟಣ ಟಿಕೆಟ್ ಸಸ್ಪೆನ್ಸ್

ಬೆಂಗಳೂರಿನ ಅಕ್ಟೋಬರ್ 19: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ಪೈಕಿ ಶಿಗ್ಗಾಂವಿ ಮತ್ತು ಸಂಡೂರಿಗೆ ಬಿಜೆಪಿ ಹೈಕಮಾಂಡ್ ಇಂದು ಅಧಿಕೃತವಾಗಿ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರಕ್ಕೆ ಮತ್ತು ಬಂಗಾರು ಹನುಮಂತು ಸಂಡೂರು ಕ್ಷೇತ್ರಕ್ಕೆ ಟಿಕೆಟ್ ಪಡೆದಿದ್ದಾರೆ.
ಆದರೇ ಹೈ ವೋಲ್ಟೇಜ್ ಕ್ಷೇತ್ರ ಎನಿಸಿದ ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಿಸಿಲ್ಲ. ಬಿಜೆಪಿ ಹಾಗೂ ಅದರ ಮೈತ್ರಿ ಪಕ್ಷ ಜೆಡಿಎಸ್ ಈ ಕ್ಷೇತ್ರದ ಟಿಕೆಟ್ ಗಾಗಿ ಪೈಪೋಟಿಗಿಳಿದಿವೆ . ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿಯವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರಿಂದ ಈ ಕ್ಷೇತ್ರ ತೆರವಾಗಿತ್ತು . ಬಿಜೆಪಿ ಮುಖಂಡ ಸಿಪಿ ಯೋಗೇಶ್ವರ್ ಈ ಕ್ಷೇತ್ರದಿಂದ ಉತ್ಸುಕರಾಗಿದ್ದು , ಇನ್ನೊಂದೆಡೆ ಕುಮಾರಸ್ವಾಮಿ ಪುತ್ರ ನಿಖೀಲ್ ಕೂಡು ಈ ಕ್ಷೇತ್ರದಿಂದ ಸ್ಪರ್ಧೆಗಿಳಿಯಲು ಆಸ್ಕ್ತಿ ಹೊಂದಿದ್ದಾರೆ
ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಬೊಮ್ಮಾಯಿ ಜಯಶಾಲಿ:
ಬಿಜೆಪಿಯೊಳಗೆ ಭರತ್ ಬೊಮ್ಮಾಯಿಗೆ ಟಿಕೆಟ್ ಕೊಡಿಸಲು ಕಳೆದ ಕೆಲವು ಸಮಯದಿಂದ ಬೊಮ್ಮಾಯಿ ಮಾಡುತ್ತಿದ್ದ ಪ್ರಯತ್ನಗಳು ಕೊನೆಗೂ ಯಶಸ್ವಿಯಾಗಿದೆ. ಸಂಸದರಾಗಿದ್ದ, ಶಿಗ್ಗಾಂವಿ ಕ್ಷೇತ್ರದ ಶಾಸಕರಾಗಿದ್ದ ಬಸವರಾಜ ಬೊಮ್ಮಾಯಿಯವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಿ ವಿಜೇತರಾಗಿದ್ದರು. ಲೋಕಸಭೆ ಚುನಾವಣೆ ಸಂದರ್ಭವೇ ಶಿಗ್ಗಾಂವಿ ಕ್ಷೇತ್ರದಲ್ಲಿ ಮಗನಿಗೆ ಟಿಕೆಟ್ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈಗ ನಿರೀಕ್ಷೆಯಂತೆ ಶಿಗ್ಗಾಂವಿ ಕ್ಷೇತ್ರಕ್ಕೆ ತನ್ನ ಮಗನಿಗೆ ಟಿಕೆಟ್ ಕೊಡಿಸುವಲ್ಲಿ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ. ಭರತ್ ಬೊಮ್ಮಾಯಿಯ ಈ ಸ್ಪರ್ಧೆ, ಕ್ಷೇತ್ರದಲ್ಲಿ ಕುತೂಹಲ ಮೂಡಿಸಿದೆ. ಅಲ್ಲದೇ ಬಿಎಸ್‌ವ ೈಬಳಿಕ ಮತ್ತೊಬ್ಬ ಮಾಜಿ ಸಿ ಎಂ ಪುತ್ರನಿಗೂ ಬಿಜೆಪಿಯಲ್ಲಿ ಟಿಕೆಟ್ ಸಿಕ್ಕಂತಾಗಿದೆ . ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದಂತಾಗಿದೆ.
ಬಿಎಸ್ ವೈಯವರ ಓರ್ವ ಪುತ್ರ ಸಂಸದರಾಗಿದ್ದರೇ, ಇನ್ನೊರ್ವ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರದ ಶಾಸಕರಾಗಿದ್ದಾರೆ .ಬಸವರಾಜ ಬೊಮ್ಮಾಯಿ ತಂದೆ ಎಸ್ ಆರ್ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು , ಇದೀಗ ಅವರ ಮೊಮ್ಮಗ ಕೂಡ ರಾಜಕಾರಣಕ್ಕೆ ಕಾಲಿಟ್ಟಂತಾಗಿದೆ
ಮತ್ತೆ ಅದೃಷ್ಟ ಪರೀಕ್ಷೆಗಿಳಿದ ಬಂಗಾರು ಹನುಮಂತು:
ಸಂಡೂರಿನ ಬಂಗಾರು ಹನುಮಂತು, 2018ರ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದರೂ, ಬೈಎಲೆಕ್ಷನ್ ಮೂಲಕ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗಿಳಿಯುತ್ತಿದ್ದಾರೆ. ಹನುಮಂತು, ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ, ಮತ್ತು ಈ ಬಾರಿ ಅವರು ಹಿಂದಿನ ಸೋಲನ್ನು ಪೂರೈಸಲು ಸಕಲ ಪ್ರಯತ್ನ ಮಾಡುತ್ತಿದ್ದಾರೆ. ತುಕಾರಾಮ್ ಅವರ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರದಲ್ಲಿ ಬಂಗಾರು ಹನುಮಂತುಗೆ ಹೈಕಮಾಂಡ್ ಮತ್ತೆ ಟಿಕೆಟ್ ನೀಡಿದ್ದು, ಇದು ಬಿಜೆಪಿ ತಂತ್ರದಲ್ಲಿ ಪ್ರಮುಖ ಹೆಜ್ಜೆಯಾಗಿದೆ.
ಚುನಾವಣೆ ಪ್ರಚಾರ ತೀವ್ರತೆ:
ಈ ಮೂರು ಕ್ಷೇತ್ರಗಳ ಚುನಾವಣಾ ಪ್ರಚಾರ ಈಗಾಗಲೇ ಉತ್ತುಂಗದಲ್ಲಿದೆ . ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿದಂತೆ ಎಲ್ಲ ಪ್ರಮುಖ ಪಕ್ಷಗಳು ತೀವ್ರ ಪ್ರಚಾರ ನಡೆಸುತ್ತಿದ್ದು, ಫಲಿತಾಂಶ ಹೇಗಿರುತ್ತದೋ ಎಂಬ ಕುತೂಹಲ ಎಲ್ಲೆಡೆ ಕಂಡುಬರುತ್ತಿದೆ.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ರಾಜಕೀಯ
U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ
ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ
ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548
ಅಂತರ ರಾಜ್ಯ
Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.
ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.
ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.
ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.
ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.
ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.
ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.
ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.
-
ಪುತ್ತೂರು16 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್19 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು19 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized24 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ22 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್18 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ರಾಜ್ಯ21 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಶಿಕ್ಷಣ18 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ


















