ಪುತ್ತೂರು
ವಿಧಾನಪರಿಷತ್ ಚುನಾವಣೆಯ ಹಿನ್ನಲೆಯಲ್ಲಿ ಪುತ್ತೂರು ಸಂತೆ ರದ್ದು : ಕಿಲ್ಲೆ ಮೈದಾನದಲ್ಲೇ ನಡೆಸುವಂತೆ ಶಾಸಕ ಅಶೋಕ್ ರೈ ಸೂಚನೆ
ಪುತ್ತೂರು; ವಿಧಾನಪರಿಷತ್ ಚುನಾವಣಾ ಹಿನ್ನೆಲೆಯಲ್ಲಿ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ಸೋಮವಾರದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದು , ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಶಾಸಕರು ಕಿಲ್ಲೆ ಮೈದಾನದಲ್ಲೇ ಸಂತೆ ನಡೆಸಲು ಅವಕಾಶ ನೀಡುವಂತೆ ಸೂಚನೆಯನ್ನು ನೀಡಿದ್ದು, ಶಾಸಕ ಅಶೋಕ್ ರೈ ಅವರ ಸೂಚನೆಯಂತೆ ಕಿಲ್ಲೆ ಮೈದಾನದಲ್ಲೇ ಸಂತೆ ನಡೆಯಲಿದೆ.
ಪುತ್ತೂರು ನಗರಸಭಾ ವ್ಯಾಪ್ತಿಯ ಮತಗಟ್ಟೆಯಿಂದ 200 ಮೀಟರ್ ದೂರದಲ್ಲಿ ಕಿಲ್ಲೆ ಮೈದಾನ ಇರುವ ಕಾರಣ ನೀತಿ ಸಂಹಿತೆಯ ನೆಪದಲ್ಲಿ ವಾರದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದರು.
ಈ ಬಗ್ಗೆ ಸಂತೆ ವ್ಯಾಪಾರಿಗಳು ಶಾಸಕರ ಗಮನಕ್ಕೆ ತಂದಿದ್ದರು. ತಕ್ಷಣ ಸ್ಪಂದಿಸಿದ ಶಾಸಕರು ಅಧಿಕಾರಿಗಳ ಜೊತೆ ಈ ವಿಚಾರದಲ್ಲಿ ಮಾತುಕತೆ ನಡೆಸಿ ವಾರದ ಸಂತೆ ಕಿಲ್ಲೆ ಮೈದಾನದಲ್ಲೇ ನಡೆಯುತ್ತದೆ ಅದಕ್ಕೆ ಯಾವುದೇ ಅಡಚಣೆಯಾಗಬಾರದು, ಕಿಲ್ಲೆ ಮೈದಾನದಲ್ಲೇ ಸಂತೆ ನಡೆಸಲು ಅವಕಾಶ ನೀಡಬೇಕು ಎಂದು ಸೂಚನೆಯನ್ನು ನೀಡಿದ್ದಾರೆ.
ಶಾಸಕರ ಆದೇಶದಂತೆ ನಾಳೆ ಎಂದಿನಂತೆ ಕಿಲ್ಲೆ ಮೈದಾನದಲ್ಲೇ ಸಂತೆ ವ್ಯಾಪಾರ ನಡೆಯಲಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
Uncategorized4 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized2 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized2 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized1 hour ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized1 hour ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















