Connect with us

ಬಿಗ್ ನ್ಯೂಸ್

Bantwala Jayaram Acharya | ತೆಂಕುತಿಟ್ಟಿನ ಯಕ್ಷಗಾನದ ಹಾಸ್ಯರಾಜ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Published

on



Ad Widget

Ad Widget

Ad Widget

Ad Widget

ಬಂಟ್ವಾಳ: ತೆಂಕುತಿಟ್ಟಿನ ಯಕ್ಷಗಾನದ ಹಾಸ್ಯರಾಜ ಎಂದೇ ಪ್ರಖ್ಯಾತಿ ಪಡೆದ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ (Bantwala Jayaram Acharya) ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿನಲ್ಲಿ ಹೃದಯಘಾತವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.

Ad Widget

Ad Widget <> Ad Widget

ಬಂಟ್ವಾಳದಲ್ಲಿ 1957, ಅಕ್ಟೋಬರ್ 12ರಂದು ಬಂಟ್ವಾಳ ಗಣಪತಿ ಆಚಾರ್ಯ, ಭವಾನಿ ಅಮ್ಮ ಅವರ ಪುತ್ರರಾಗಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಬೋರ್ಡ್ ಶಾಲೆ)ಯಲ್ಲಿ ವಿದ್ಯಾಭ್ಯಾಸ ನಡೆಸಿದ್ದಾರೆ. ತಂದೆಯವರ ಪ್ರೇರಣೆಯಿಂದ ಅಮ್ಹಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿ ವೇಷವನ್ನೂ ಮಾಡಿದ್ದರು.



Ad Widget

ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ’ಕ್ಕೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆ ಕಲಿತರು.ಅದಾದ ಬಳಿಕ ಕಟೀಲು ಮೇಳದಲ್ಲಿ 4 ವರ್ಷ, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲಿ ತಿರುಗಾಟ ನಡೆಸಿದರು.ಮತ್ತೆ ಕಟೀಲು ಮೇಳ, ಎಡನೀರು ಮೇಳ, ಹೊಸನಗರ ಮೇಳ, ಬಳಿಕ ಹನುಮಗಿರಿ ಮೇಳ ಹೀಗೆ ಸುಮಾರು 50 ವರ್ಷಗಳ ಯಕ್ಷಗಾನ ತಿರುಗಾಟದಲ್ಲಿ ಹಾಸ್ಯಗಾರ ಪಾತ್ರವಲ್ಲದೆ, ಅಗತ್ಯ ಬಿದ್ದರೆ ಇತರ ಪಾತ್ರಗಳನ್ನೂ ಅವರು ನಿರ್ವಹಿಸಿದ್ದಾರೆ.

Ad Widget

Ad Widget

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ , ಪುತ್ತೂರು ಶೀನಪ್ಪ ಭಂಡಾರಿ ಪ್ರತಿಷ್ಠಾನದ ಗೌರವ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ. ಅವರು ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಕಳೆದ 2 ದಿನಗಳ ಹಿಂದಷ್ಟೇ ಅವರಿಗೆ ಕಡಬದ್ವಯರ ಸಂಸ್ಕರಣಾ ಪ್ರಶಸ್ತಿ ಘೋಷಣೆಯಾಗಿದ್ದು, ಅ. 27ರಂದು ಅವರು ಪ್ರಶಸ್ತಿ ಸ್ವೀಕರಿಸಬೇಕಿತ್ತು. ಯಕ್ಷಗಾನದ ಜತೆಗೆ ರಂಗಭೂಮಿ, ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದರು.

Ad Widget
Click to comment

Leave a Reply

ಬಿಗ್ ನ್ಯೂಸ್

ಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ

Published

on



Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್‌ ಶಾಕ್‌ ಕೊಟ್ಟಿದೆ. ಹಾಲಿನ (Milk Price Hike) ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೂ ಒಪ್ಪಿಗೆ ಸೂಚಿಸಲಾಗಿದೆ.

Ad Widget

Ad Widget

Ad Widget

Ad Widget

ಬಹುತೇಕ ನವೆಂಬರ್ 1 ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. 80:20 ರಂತೆ ದರ ಏರಿಕೆ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಅಂದರೆ, 8 ರೂ. ಏರಿಕೆಯಾದರೆ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ಸಿಗಲಿದೆ. ಸರ್ಕಾರಕ್ಕೆ 70:30 ರಂತೆ ದರ ಏರಿಕೆಗೆ ಒಕ್ಕೂಟಗಳು ಮನವಿ ಮಾಡಿದ್ದವು. ಆದರೆ, 80:20 ರಂತೆ ದರ ಏರಿಕೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಅದರಂತೆಯೇ 8 ರೂ. ಪೈಕಿ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ನೀಡುವ ಸಾಧ್ಯತೆಯಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಸ್ ಟಿಕೆಟ್ ದರ ಹಾಗೂ ಹಾಲಿನ ದರ ಎರಡು ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಆದರೆ, ಅಧಿಕೃತ ಘೋಷಣೆ ಮಾಡದಿರಲು ತೀರ್ಮಾನಿಸಿದೆ. ಚುನಾವಣಾ ಆಯೋಗಕ್ಕೆ ಪ್ರಸ್ತಾಪ ಕಳುಹಿಸಿ ಅವರ ಅನುಮತಿ ಸಿಕ್ಕ ಮೇಲೆ ಅಧಿಕೃತ ಘೋಷಣೆ ಮಾಡಲು ಸರ್ಕಾರ ನಿರ್ಧರಿಸಿದೆ.

Ad Widget

Ad Widget <> Ad Widget

ಹಾಲಿನ ಮೇಲೆ ಪೂರ್ಣ 8 ರೂ. ದರ ಏರಿಕೆಯಾದರೆ
1 ಲೀಟರ್ ದರ
ಟೋನ್ಡ್‌ ಹಾಲು
46- 54 ರೂ.



Ad Widget

ಹೋಮೋಜಿನೈಸ್ಡ್‌ ಟೋನ್ಡ್‌ ಹಾಲು
47- 55 ರೂ.

Ad Widget

Ad Widget

ಹೋಮೋಜಿನೈಸ್ಡ್‌ ಹಸುವಿನ ಹಾಲು
50- 58 ರೂ.

ಶುಭಂ ಹಾಲು
52- 60 ರೂ.

ಸಮೃದ್ಧಿ ಹಾಲು
55- 64 ರೂ.

ಸ್ಪೆಷಲ್‌ ಹಾಲು
52- 60 ರೂ.

ಡಬಲ್‌ ಟೋನ್ಡ್‌ ಹಾಲು
43- 51 ರೂ.

ಆರೆಂಜ್ ಪ್ಯಾಕೆಟ್: ಹಸುವಿನ ಹಾಲು: 50 – 58 ರೂ.
ಗ್ರೀನ್ ಸ್ಪೆಷಲ್: 50 – 58 ರೂ.
ನಾರ್ಮಲ್ ಗ್ರೀನ್: ಹಸುವಿನ‌ ಹಾಲು – 50- 58 ರೂ.

Ad Widget
Continue Reading

ಅಂತರ ರಾಜ್ಯ

ID-ಪ್ರತಿಭಟನೆ ವರದಿ ಮಾಡುವ ಪತ್ರಕರ್ತರಿಗೆ ಐಡಿ ಕಡ್ಡಾಯ; ಮಹಿಳಾ ಪತ್ರಕರ್ತರ ಲೈಂಗಿಕ ಕಿರುಕುಳ ಆರೋಪ ಬೆನ್ನಲ್ಲೇ ದಿಲ್ಲಿ ಪೊಲೀಸರ ಹೊಸ ಮಾರ್ಗಸೂಚಿ

Published

on



Ad Widget

Ad Widget

Ad Widget

Ad Widget

ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಈ ಮಾರ್ಗಸೂಚಿ ಪ್ರಕಟಿಸಲಾಗಿದೆ.

Ad Widget

Ad Widget <> Ad Widget

‘ಸುದ್ದಿ ಮುಖ್ಯ, ಅದನ್ನು ಹೇಗೆ ಪಡೆಯುತ್ತೀರಿ ಎಂಬುದೂ ಮುಖ್ಯ’ ಎಂಬ ಸಂದೇಶದೊಂದಿಗೆ ದಿಲ್ಲಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪತ್ರಕರ್ತರು ಕರ್ತವ್ಯ ನಿರ್ವಹಿಸುವ ವೇಳೆ ಪಾಲಿಸಬೇಕಾದ ನಾಲ್ಕು ಪ್ರಮುಖ ನಿರ್ದೇಶನಗಳನ್ನು ಹಂಚಿಕೊಂಡಿದ್ದಾರೆ.



Ad Widget

ಪ್ರತಿಭಟನೆಗಳನ್ನು ವರದಿ ಮಾಡಲು ನಿಯೋಜಿಸಲ್ಪಟ್ಟಿರುವ ಎಲ್ಲ ಪತ್ರಕರ್ತರು ತಮ್ಮ ಸಂಸ್ಥೆಗಳು ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ ಮಾನ್ಯ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕೊಂಡೊಯ್ಯಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

Ad Widget

Ad Widget

ಸ್ಥಳದಲ್ಲಿರುವ ಕಾನೂನು ಜಾರಿ ಸಿಬ್ಬಂದಿಗೆ ಪತ್ರಕರ್ತರ ಗುರುತು ಸುಲಭವಾಗಿ ತಿಳಿಯುವಂತೆ ಗುರುತಿನ ಚೀಟಿಗಳನ್ನು ಸದಾ ಗೋಚರಿಸುವಂತೆ ಪ್ರದರ್ಶಿಸಬೇಕು ಎಂದು ತಿಳಿಸಿದ್ದಾರೆ.

ಅದೇ ರೀತಿ, ಪತ್ರಕರ್ತರ ಉಪಸ್ಥಿತಿ ಅಥವಾ ಚಟುವಟಿಕೆಗಳು ಪೊಲೀಸ್ ಕಾರ್ಯಾಚರಣೆಗಳಿಗೆ ಹಾಗೂ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಯಾವುದೇ ರೀತಿಯಲ್ಲೂ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಉದ್ವಿಗ್ನ ಪರಿಸ್ಥಿತಿಗಳಲ್ಲಿ ಘಟನೆಗಳನ್ನು ವರದಿ ಮಾಡುವಾಗ ಹಾಗೂ ದೃಶ್ಯಗಳನ್ನು ದಾಖಲಿಸುವಾಗ ಪತ್ರಕರ್ತರು ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಪ್ರತಿಭಟನಾಕಾರರಿಂದ ತಮ್ಮನ್ನು ಸ್ಪಷ್ಟವಾಗಿ ಪ್ರತ್ಯೇಕಿಸುವ ರೀತಿಯಲ್ಲಿ ಅಂತರ ಕಾಯ್ದುಕೊಂಡು ವರದಿ ಮಾಡಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

#EthicsofJournalism ಹ್ಯಾಶ್‌ಟ್ಯಾಗ್‌ನೊಂದಿಗೆ ದಿಲ್ಲಿ ಪೊಲೀಸರು ಈ ನಾಲ್ಕು ನಿರ್ದೇಶನಗಳನ್ನು ಪ್ರಕಟಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ವಿರುದ್ಧ ಮೂವರು ಮಹಿಳಾ ಪತ್ರಕರ್ತರಿಂದ ಲೈಂಗಿಕ ಕಿರುಕುಳ ಆರೋಪ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಶನಿವಾರ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ದಿಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಈ ಸಂಬಂಧ ದಿಲ್ಲಿ ಪೊಲೀಸರು ದೂರುಗಳನ್ನು ಸ್ವೀಕರಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಿದ್ದಾರೆ.

ಅಕ್ಟೋಬರ್ 3ರಂದು ಹೊಸದಿಲ್ಲಿ ಪ್ರದೇಶದಲ್ಲಿ ನಡೆದ ಪ್ರತಿಭಟನೆ ವೇಳೆ ‘ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ’ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ ಎಂದು ದಿಲ್ಲಿ ಪೊಲೀಸರು ರವಿವಾರ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದರು.

ಮೂವರು ಮಹಿಳಾ ಪತ್ರಕರ್ತರಿಂದ ಬಂದ ದೂರುಗಳನ್ನು ಹೊಸದಿಲ್ಲಿ ಜಿಲ್ಲೆ ಸ್ವೀಕರಿಸಿದ್ದು, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಆರೋಪಗಳ ಬಳಿಕ ಹಲವು ಸ್ವತಂತ್ರ ಪತ್ರಕರ್ತರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು. ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅವರು ಒತ್ತಾಯಿಸಿದರು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ

Published

on



Ad Widget

Ad Widget

Ad Widget

Ad Widget

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು, ಅ.6: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಕೃಷ್ಣಪ್ರಸನ್ನ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಸಮಸ್ತ ಹಿಂದೂ ಸಮಾಜಕ್ಕೆ ಸೇರಿದ್ದಾಗಿದ್ದು, ದೇವಸ್ಥಾನದ ಪ್ರಮುಖ ವಿಚಾರಗಳಲ್ಲಿ ಭಕ್ತರ ವಿಶ್ವಾಸ ಪಡೆದುಕೊಳ್ಳುವುದು ಅಗತ್ಯ ಎಂದರು.

Ad Widget

Ad Widget <> Ad Widget

ಭಕ್ತರ ಸಭೆ ನಡೆಸದೆ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಸಮಿತಿ ರಚಿಸದಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದರು.



Ad Widget

ದೇವಸ್ಥಾನದ ಐತಿಹಾಸಿಕ ಪವಿತ್ರ ಪುಷ್ಕರಿಣಿಯ ಅಭಿವೃದ್ಧಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ಅಪೂರ್ಣವಾಗಿರುವ ನಡುವೆಯೇ ಜಾತ್ರಾ ಸಂದರ್ಭದಲ್ಲಿ ದೇವರಿಗೆ ಕೆರೆ ಉತ್ಸವ ನಡೆಸಿರುವುದು ಆಗಮ ಶಾಸ್ತ್ರಕ್ಕೆ ವಿರುದ್ಧವಾಗಿದೆ ಎಂದು ಕೃಷ್ಣಪ್ರಸನ್ನ ಆಕ್ಷೇಪಿಸಿದರು. ಪುಷ್ಕರಿಣಿಯ ಕಾಮಗಾರಿಯನ್ನು ವ್ಯವಸ್ಥಾಪನಾ ಸಮಿತಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

Ad Widget

Ad Widget

ದೇವಸ್ಥಾನದ ಆಡಳಿತದ ಕಾರ್ಯವೈಖರಿಯಿಂದ ಭಕ್ತರ ಧಾರ್ಮಿಕ ಭಾವನೆ ಹಾಗೂ ನಂಬಿಕೆಗಳಿಗೆ ಧಕ್ಕೆ ಉಂಟಾಗುವ ಸಂದರ್ಭಗಳಲ್ಲಿ ವಿಶ್ವಹಿಂದು ಪರಿಷತ್ ಧ್ವನಿ ಎತ್ತಲಿದೆ. ಅಗತ್ಯ ಬಿದ್ದರೆ ಹಿಂದೂ ಸಮಾಜವನ್ನು ಒಗ್ಗೂಡಿಸಿಕೊಂಡು ಹೋರಾಟ ನಡೆಸಲೂ ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ, ಉಪಾಧ್ಯಕ್ಷ ಸತೀಶ್ ಬಿ.ಎಸ್., ನಗರ ಸಂಚಾಲಕ ಚೇತನ್ ಹಾಗೂ ಸೇವಾ ಪ್ರಮುಖ್ ಹರೀಶ್ ದೋಳ್ಪಾಡಿ ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading