ರಾಜಕೀಯ
Ashok Rai-ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ನಿರಂತರ ಹೋರಾಟ; ಗೋವಾ ತುಳು ಕೂಟ ಉದ್ಘಾಟಿಸಿ ಶಾಸಕ ಅಶೋಕ್ ರೈ
ತುಳು ಕರಾವಳಿಗರ ಮಾತೃಭಾಷೆ, ತುಳುವಿಗೆ ಅದರದೇ ಆದ ಇತಿಹಾಸವಿದೆ, ತುಳು ಭಾಷೆಯನ್ನು ಕರ್ನಾಟಕದ ಎರಡನೇ ಹೆಚ್ಚುವರಿಭಾಷೆಯನ್ನಾಗಿಸುವಲ್ಲಿನಿರಂತರ ಹೋರಾಟ ಅಗತ್ಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಅ. 20 ರಂದು ತುಳು ಕೂಟ ಗೋವಾ ಇದರ ವತಿಯಿಂದ ಉತ್ತರ ಗೋವಾದ ಪೋವರಿಂ ಪುಂಡಲೀಕ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಗೋವಾ ತುಳುಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಪುತ್ತೂರು: ತುಳು ಕರಾವಳಿಗರ ಮಾತೃಭಾಷೆ, ತುಳುವಿಗೆ ಅದರದೇ ಆದ ಇತಿಹಾಸವಿದೆ, ತುಳು ಭಾಷೆಯನ್ನು ಕರ್ನಾಟಕದ ಎರಡನೇ ಹೆಚ್ಚುವರಿಭಾಷೆಯನ್ನಾಗಿಸುವಲ್ಲಿನಿರಂತರ ಹೋರಾಟ ಅಗತ್ಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.
ಅವರು ಅ. 20 ರಂದು ತುಳು ಕೂಟ ಗೋವಾ ಇದರ ವತಿಯಿಂದ ಉತ್ತರ ಗೋವಾದ ಪೋವರಿಂ ಪುಂಡಲೀಕ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಗೋವಾ ತುಳುಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ತುಳು ಭಾಷಿಗರು ,ತುಳು ಮಾತನಾಡುವವರು ವಿಶ್ವದ ಎಲ್ಲೆಡೆ ಇದ್ದಾರೆ.ನಮ್ಮ ದೇಶದ ಪ್ರತೀಯೊಂದು ರಾಜ್ಯದಲ್ಲೂ ತುಳುವರು ವ್ಯಾಪಾರ,ವಹಿವಾಟು ನಡೆಸುತ್ತಿದ್ದಾರೆ ಇದು ಹೆಮ್ಮೆಯ ಸಂಗತಿಯಾಗಿದೆ. ನಮ್ಮ ತುಳು ಭಾಷೆಯನ್ನು ಉಳಿಸಬೇಕಾದರೆ ಎಲ್ಲರ ಸಹಕಾರ ಅಗತ್ಯವಾಗಿದೆ.
ತುಳು ಭಾಷೆಗೆ ಎರಡನೇ ಭಾಷೆಯ ಪ್ರಾಧಾನ್ಯತೆ ನೀಡಬೇಕೆಂದು ನಾನು ವಿಧಾನಸಭಾ ಅಧಿವೇಶನದಲ್ಲಿಯೂ ಸರಕಾರದ ಗಮನ ಸೆಳೆದಿದ್ದೆ. ಇತರೆ ರಾಜ್ಯಗಳಲ್ಲಿ ಅಲ್ಲಿನ ಸ್ಥಳೀಯ ಭಾಷೆಗೆ ಹೇಗೆ ಮಾನ್ಯತೆ ನೀಡಿದ್ದಾರೆ ಎಂಬುದನ್ನು ಅಧ್ಯಯನ ನಡೆಸಿ ಆ ವರದಿಯನ್ನು ಸರಕಾರದ ಮುಂದೆ ಇಟ್ಟಿದ್ದೇನೆ. ತುಳು ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ನನ್ನ ಪ್ರಯತ್ನ ನಿರಂತರ ಸಾಗಲಿದೆ ಎಂದು ಹೇಳಿದರು. ಗೋವಾ ತುಳುಕೂಟ ನಿರಂತರ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ಗೋವಾದಲ್ಲಿ ತುಳುವಿನ ಕಂಪನ್ನು ಹೆಚ್ಚಿಸುವಂತಾಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಸುನಿಲ್ ಕುಮಾರ್, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡಾ, ಡಾ ಅರುಣ್ ಉಳ್ಳಾಲ್, ಗೋವಾ ಪೋವರಿಂ ಶಾಸಕರೋಹನ್ ಅಶೋಕ್ ಕಂಠ, ದ ಕ ಜಿಲ್ಲಾ ಕಂಬಳ ಅಕಾಡೆಮಿ ಕಾರ್ಯದರ್ಶಿ ಗೋಪಾಲ ಕದಂಬ,ತುಳು ಸಿನಿಮಾ ನಿರ್ದೇಶಕವಿಜಯಕುಮಾರ್ ಕೋಡಿಯಾಲ್ ಬೈಲ್, ಉದ್ಯಮಿ ಸುದಾಕರ ಶೆಟ್ಟಿ ನೆಲ್ಲಿಕಟ್ಡೆ,ತುಳು ನಡಪ್ರಸನ್ನ ಶೆಟ್ಟಿ ಬಲ್ಲೂರು,ಮೂಡಬಿದ್ರೆ ತುಳುಕೂಟದ ಅಧ್ಯಕ್ಷ ಧನಕೀರ್ತಿ ಬಲಿಪ,ಗೋವಾ ತುಳು ಕೂಟ ಅಧ್ಯಕ್ಷ ಸದಾನಂದ ಶೆಟ್ಟಿ ಬೆಳುವಾಯಿ,ಚಂದ್ರಹಾಸ ಅಮೀನ್, ವಿಜಯೇಂದ್ರ ಶೆಟ್ಟಿ,ಶಶಿಧರ್ ನಾಯ್ಕ್,ಪ್ರಶಾಂತ್ ಜೈನ್, ಅಶೋಕ ಶೆಟ್ಟಿ ಮುಡೂರು ಉಪಸ್ಥಿತರಿದ್ದರು.ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಬಳಿಕ ಶಿವಧೂತೆ ಗುಳಿಗ ಯಕ್ಷಗಾನ ಪ್ರದರ್ಶನ ನಡೆಯಿತು
ಸ್ಥಳೀಯ
Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್‌ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್‌ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.
ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.
ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.
ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಂತರ ರಾಜ್ಯ
Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
-
ಅಂತರ ರಾಜ್ಯ24 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ23 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ18 hours agoRakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
-
ಅಂತರ ರಾಜ್ಯ24 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಸ್ಥಳೀಯ23 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ
-
ಅಂತರ ರಾಜ್ಯ24 hours agoWomen’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
-
ಶಿಕ್ಷಣ22 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮವರ್ಷದ ವಿದ್ಯಾರ್ಥಿಗಳ ಹೆತ್ತವರ ಮತ್ತು ಪೋಷಕರ ಸಭೆ
-
ಶಿಕ್ಷಣ22 hours agoPhilomena-ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ















