ಸ್ಥಳೀಯ
Marukumbi case-ಒಂದೇ ಕೇಸಿನಲ್ಲಿ ಬರೋಬ್ಬರಿ 98 ಮಂದಿಗೆ ಜೀವಾವಧಿ ಶಿಕ್ಷೆ .. ಏನಿದು ಕೊಪ್ಪಳದ ಮರುಕುಂಬಿ ಪ್ರಕರಣ.. ಈ ಅತ್ಯಾಪರೂಪದ ಪ್ರಕರಣದ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..?
ಕೊಪ್ಪಳ
ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷ ಹಿಂದಿನ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ರೂ. 5 ಸಾವಿರ ದಂಡ ವಿಧಿಸುವಂತೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಆದೇಶಿಸಿದೆ. ಈ ತೀರ್ಪಿನಲ್ಲಿ ಇನ್ನೂ ಮೂವರಿಗೆ 5 ವರ್ಷ ಜೈಲು ಶಿಕ್ಷೆ ಮತ್ತು ರೂ. 2 ಸಾವಿರ ದಂಡ ಹೇರಲಾಗಿದೆ.
ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷ ಹಿಂದಿನ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ರೂ. 5 ಸಾವಿರ ದಂಡ ವಿಧಿಸುವಂತೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಆದೇಶಿಸಿದೆ. ಈ ತೀರ್ಪಿನಲ್ಲಿ ಇನ್ನೂ ಮೂವರಿಗೆ 5 ವರ್ಷ ಜೈಲು ಶಿಕ್ಷೆ ಮತ್ತು ರೂ. 2 ಸಾವಿರ ದಂಡ ಹೇರಲಾಗಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ. ಚಂದ್ರಶೇಖರ ಈ ತೀರ್ಪು ನೀಡಿದ್ದು, ದೇಶದಲ್ಲಿ ಅಷ್ಟು ಸಂಖ್ಯೆಯ ಜನರಿಗೆ ಜೀವಾವಧಿ ಶಿಕ್ಷೆ ನೀಡಲಾಗಿರುವುದು ಮೊದಲ ಸಲ ಎಂದು ಹಿರಿಯ ವಕೀಲರು ಅಭಿಪ್ರಾಯಪಟ್ಟಿದ್ದಾರೆ. ಜೀವಾವಧಿ ಶಿಕ್ಷೆಗೆ ಗುರಿಯಾದ ಎಲ್ಲಾ ಆರೋಪಿಗಳು ಸವರ್ಣೀಯರಾಗಿದ್ದಾರೆ.
98 ಆರೋಪಿಗಳಿಗೆ ಏಕಕಾಲಕ್ಕೆ ಜೀವಾವಧಿ ಶಿಕ್ಷೆ ವಿಧಿಸಲಾಗಿರುವುದರಿಂದ ಈ ತೀರ್ಪು ಅಪರೂಪದ ಪ್ರಕರಣವಾಗಿದೆ. ಹಲವು ಸಂತ್ರಸ್ತರ ಕುಟುಂಬ ಸದಸ್ಯರು ಕಳೆದ ಹತ್ತು ವರ್ಷಗಳಿಂದ ಈ ತೀರ್ಪಿಗಾಗಿ ಕಾಯುತ್ತಿದ್ದರು. ಸೋಮವಾರ ಒಟ್ಟು 101 ಆರೋಪಿಗಳನ್ನು ಬಂಧಿಸಲಾಗಿದ್ದು, ತೀರ್ಪನ್ನು ಅಕ್ಟೋಬರ್ 24ಕ್ಕೆ ಕಾಯ್ದಿರಿಸಲಾಗಿತ್ತು. 117 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, 101 ಮಂದಿಗೆ ಶಿಕ್ಷೆ ವಿಧಿಸಲಾಗಿದ್ದು, 16 ಆರೋಪಿಗಳು ಮೃತಪಟ್ಟಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.
ಪ್ರಕರಣದ ಹಿನ್ನೆಲೆ:
2014ರಲ್ಲಿ ಮರಕುಂಬಿ ಗ್ರಾಮದಲ್ಲಿ ಜಾತಿ ಸಂಘರ್ಷ ಉಲ್ಬಣಗೊಂಡಿತ್ತು. ದಲಿತರಿಗೆ ಸ್ಥಳೀಯ ಕ್ಷೌರದಂಗಡಿ ಮತ್ತು ಹೋಟೆಲ್ಗಳಲ್ಲಿ ಪ್ರವೇಶವಿರಲಿಲ್ಲ. ಈ ವಿಚಾರವು ವಾದ ವಿವಾದಕ್ಕೆ ತಿರುಗಿದ್ದು, ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ ನಡೆಯಿತು. ಗ್ರಾಮದ ಚಿತ್ರಮಂದಿರಕ್ಕೆ ಹೋದ ಮಂಜುನಾಥ ಎಂಬ ಯುವಕನಿಗೆ ಟಿಕೆಟ್ ಪಡೆಯುವಾಗ ಹಲ್ಲೆ ನಡೆದಿತ್ತು. ಈ ಘಟನೆ ನಂತರ, ಸವರ್ಣೀಯರು ಸೇರಿ ದಲಿತರ ಕೇರಿಯಲ್ಲಿ ದಾಂಧಲೆ ನಡೆಸಿದ್ದು, ಕೇರಿಯ ಗುಡಿಸಲಿಗೆ ಬೆಂಕಿ ಹಚ್ಚಿದರು. ದಲಿತ ಪರ ಹೋರಾಟಗಾರ ಗಂಗಾಧರ ಸ್ವಾಮಿಯ ಮನೆಗೂ ನುಗ್ಗಿ ಹೊಡೆದು ಹಾಕಿದ್ದರು.
ಗಲಾಟೆಯ ವೇಳೆ ಕೇರಿಯಲ್ಲಿ ಯಾರೂ ಇಲ್ಲದ ಕಾರಣ ಬೆಂಕಿ ಹಚ್ಚಿದರೂ ಜೀವಹಾನಿಯಾಗಿಲ್ಲ. ಆದರೆ, ಕೇರಿಯಲ್ಲಿರುವ ಹಲವಾರು ಜನರು ಗಾಯಗೊಂಡು ಗಂಗಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾಯಿತು. ಈ ಕುರಿತು ಭೀಮೇಶ್ ಎಂಬುವವರು 2014ರ ಆ.29ರಂದು ಗಂಗಾವತಿ ಪೊಲೀಸ್ ಠಾಣೆಯಲ್ಲಿ 98 ಆರೋಪಿಗಳು ಮತ್ತು ಇತರರ ವಿರುದ್ಧ ದೂರು ದಾಖಲಿಸಿದ್ದರು. ಬಳಿಕ, ಪೊಲೀಸರು 117 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಈ ಪ್ರಕರಣವನ್ನು ಐದು ವರ್ಷಗಳ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯ, 101 ಜನರ ವಿರುದ್ಧ ಆರೋಪಗಳನ್ನು ಪುರಾವೆ ಮಾಡಿದ ಹಿನ್ನೆಲೆಯಲ್ಲಿ ಶಿಕ್ಷೆಯ ಪ್ರಮಾಣ ಪ್ರಕಟವಾಯಿತು, 98 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಪರಾಧದಲ್ಲಿರುವ ಪರಿಷ್ಕೃತ ಸಮುದಾಯದ ಮೂವರಿಗೆ 5 ವರ್ಷ ಜೈಲು ಶಿಕ್ಷೆ ಮತ್ತು ರೂ. 2 ಸಾವಿರ ದಂಡ ವಿಧಿಸಲಾಗಿದೆ.
ಮರು ಜೈಲು:
ಶಿಕ್ಷೆ ಪ್ರಮಾಣ ಪ್ರಕಟವಾದ ನಂತರ, ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ತೀರ್ಪು ಹೊರಬಿದ್ದ ಬಳಿಕ ಭಾರೀ ಭದ್ರತೆಯ ನಡುವೆ ಅವರನ್ನು ಜೈಲಿಗೆ ವಾಪಸ್ಸು ಕಳುಹಿಸಲಾಯಿತು.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್22 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್14 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ20 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು22 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized21 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್22 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ20 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್21 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















