ಅಪರಾಧ
Karkala-ಕಾರ್ಕಳ : ಪರಸಂಗಕ್ಕೆ ಅಡ್ಡಿಯಾದ ಪತಿಯನ್ನು ಆಹಾರದಲ್ಲಿ ಸ್ಲೋ ಪಾಯಿಸನ್ ಬೆರೆಸಿ ಕೊಂದ ಪತ್ನಿ – ರಿಲ್ಸ್ ರಾಣಿ, ಹಾಗೂ ಆಕೆಯ Instagram ಗೆಳೆಯ ಜೈಲು ಪಾಲು – ಇಬ್ಬರು ಮಕ್ಕಳು ಅನಾಥ
ಪರ ಪುರುಷನೊಂದಿಗಿನ ಲವ್ವಿಡವ್ವಿಗೆ ಗಂಡ ಅಡ್ಡಿಯಾಗುತ್ತಾನೆಂದು ರೀಲ್ಸ್ ರಾಣಿಯೊಬ್ಬಳು ಪತಿಯನ್ನು ಸ್ಲೋ ಪಾಯಿಸನ್ ನೀಡಿ ಕೊಲೆಗೆ ಯತ್ನಿಸಿದ್ದಾಳೆ, ಅಷ್ಟಾದರೂ ಸಾಯದ ಗಂಡನನ್ನು ಪ್ರಿಯಕರನ ನೆರವಿನಿಂದ ಸಪ್ತಪದಿ ತುಳಿದ ಪತ್ನಿಯೇ ಹತ್ಯೆಗೈದಿದ್ದಾಳೆ. ಈ ದಾರುಣ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದಿದೆ.
ಪರ ಪುರುಷನೊಂದಿಗಿನ ಲವ್ವಿಡವ್ವಿಗೆ ಗಂಡ ಅಡ್ಡಿಯಾಗುತ್ತಾನೆಂದು ರೀಲ್ಸ್ ರಾಣಿಯೊಬ್ಬಳು ಪತಿಯನ್ನು ಸ್ಲೋ ಪಾಯಿಸನ್ ನೀಡಿ ಕೊಲೆಗೆ ಯತ್ನಿಸಿದ್ದಾಳೆ, ಅಷ್ಟಾದರೂ ಸಾಯದ ಗಂಡನನ್ನು ಪ್ರಿಯಕರನ ನೆರವಿನಿಂದ ಸಪ್ತಪದಿ ತುಳಿದ ಪತ್ನಿಯೇ ಹತ್ಯೆಗೈದಿದ್ದಾಳೆ. ಈ ದಾರುಣ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದಿದೆ.

ವಿಷ ಪ್ರಾಶನಕ್ಕೆ ಒಳಗಾಗಿ, ವಿವಿಧ ಆಸ್ಫತ್ರೆಯಲ್ಲಿ ತಿಂಗಳುಗಳ ಕಾಲ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿರಲಿಲ್ಲ. ಹಾಗಿದ್ದೂ ಹಾಸಿಗೆಯಲ್ಲಿ ಒದ್ದಾಡುತ್ತಿದ್ದ ಗಂಡನ ಮುಖಕ್ಕೆ ತಲೆ ದಿಂಬನ್ನು ಒತ್ತಿ ಪತ್ನಿ ನಿರ್ದಯವಾಗಿ ಕೊಂದ ಘಟನೆಗೆ ಕಾರ್ಕಳ ಬೆಚ್ಚಿ ಬಿದ್ದಿದೆ .ಪತ್ನಿ ಮತ್ತು ಪ್ರಿಯಕರನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಬಾಲಕೃಷ್ಣ ಮತ್ತು ಪ್ರತಿಮಾ ದಂಪತಿಗೆ ಒಂದು ಗಂಡು ಮತ್ತು ಒಂದು ಹೆಣ್ಣು ಸೇರಿದಂತೆ ಇಬ್ಬರು ಮಕ್ಕಳಿದ್ದು, ಆ ಮಕ್ಕಳು ತಂದೆಯಿಲ್ಲದೇ ಅನಾಥರಾಗಿದ್ದಾರೆ.

ಕಾರ್ಕಳದ ನಿಟ್ಟೆ ಕಾಲೇಜಿನ ಕ್ಯಾಂಟೀನ್ನಲ್ಲಿ ಕೆಲಸ ಮಾಡಿಕೊಂಡಿದ್ದ ಬಾಲಕೃಷ್ಣ ಪೂಜಾರಿ (44) ಹತ್ಯೆಯಾದವರು. ಅಜೆಕಾರಿನಲ್ಲಿ ಬ್ಯೂಟಿ ಪಾರ್ಲರ್ ಹೊಂದಿದ್ದ, ಇನ್ಸ್ಟಾಗ್ರಾಂ ನಲ್ಲಿ ರೀಲ್ಸ್ ಮಾಡುವ ಕ್ರೇಝ್ ಬೆಳೆಸಿಕೊಂಡಿದ್ದ ಪ್ರತಿಮಾ (36) ಗಂಡನ ಕೊಂದ ಕೊಲೆಗಾತಿ. ಆಕೆಗೆ ಹತ್ಯೆ ಮಾಡಲು ಸಹಕರಿಸಿದವ ಆಕೆಯ ಪ್ರಿಯಕರ ಕಾರ್ಕಳದ ಹೊಟೇಲ್ ಮಾಲಕರ ಪುತ್ರ ದಿಲೀಪ್ ಹೆಗ್ಡೆ (28).
ಪ್ರತಿಮಾಳಿಗೆ ರೀಲ್ಸ್ ಮಾಡುವ ಹುಚ್ಚಿದ್ದು ಇದನ್ನು ಇನ್ಸಾಗ್ರಾಮ್ ನಲ್ಲಿ ಹಂಚಿಕೊಳ್ಳುತ್ತಿದ್ದಳು.

ಈಕೆಯ ರೀಲ್ಸ್ ಗೆ ಮರುಳಾದ ದಿಲೀಪ್ ಹೆಗ್ಡೆ ಆಕೆಯನ್ನು Insta ದಲ್ಲಿ ಗೆಳೆತನ ಮಾಡಿಕೊಂಡಿದ್ದಾನೆ . ಬಳಿಕ ಪರಿಚಯ ಅನೈತಿಕ ಸಂಬಂಧಕ್ಕೆ ತಿರುಗಿದೆ. ಸ್ವಲ್ಪ ದಿನದಲ್ಲೇ ಈ ವಿಚಾರ ಗಂಡನಿಗೆ ಗೊತ್ತಾಗಿದ್ದು , ಅವರು ಬುದ್ದಿ ಹೇಳುವಷ್ಟು ಹೇಳಿದ್ದಾರೆ. ಗದರಿಸಿ ನೋಡಿದ್ದಾರೆ . ಇಬ್ಬರು ಯಾವುದಕ್ಕೂ ಬಗ್ಗದಿದ್ದಾಗ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಯಥಾ ಪ್ರಕಾರ ಇಬ್ಬರನ್ನು ಕರೆದು ಮುಚ್ಚಳಿಕೆ ಬರೆಯಿಸಿ ಎನ್ಸಿ ಮಾಡಿ ಕೈ ತೊಳೆದುಕೊಂಡಿದ್ದಾರೆ .

ಯಾವಾಗ ಪ್ರಕರಣ ಠಾಣೆ ಮೆಟ್ಟೀಲೆರಿತ್ತು, ನಮ್ಮಿಬ್ಬರ ಕಾಮದಾಟಕ್ಕೆ ಬಾಲಕೃಷ್ಣ ಪೂಜಾರಿ ಯಾವತ್ತಿದ್ದರೂ ಆಡ್ಡಿ ಎಂಬ ತೀರ್ಮಾನಕ್ಕೆ ಪ್ರೇಮಿಗಳಿಬ್ಬರು ಬಂದಿದ್ದಾರೆ. ಹೀಗಾಗಿ ಭಾಲಕೃಷ್ಣರನ್ನು ಕೊಲ್ಲಲು ನಿರ್ಧರಿಸಿದ್ದಾರೆ. ಇದಕ್ಕೆ ದಿಲೀಪ್ ಖತರ್ನಾಕ್ ಐಡಿಯಾ ಮಾಡಿದ್ದು, ನಿಧಾನವಾಗಿ ಮನುಷ್ಯನ ಅಂಗಾಗಗಳಿಗೆ ಹಾನಿ ಮಾಡುವ ವಿಷವನ್ನು ತಂದು ಪ್ರತಿಮಾ ಕೈಯಲ್ಲಿ ಕೊಟ್ಟಿದ್ದಾನೆ . ಪ್ರತಿಮಾ ಈ ವಿಷವನ್ನು ಆಹಾರದಲ್ಲಿ ಬೆರೆಸಿ ಪತಿಗೆ ತಿನ್ನಿಸಿದ್ದಾಳೆ.

ಈ ಬಳಿಕ ಬಾಲಕೃಷ್ಣ ರವರ ಆರೋಗ್ಯದಲ್ಲಿ ಭಾರೀ ಏರುಪೇರಾಗಿದ್ದು, ಒಟ್ಟು 25 ದಿನಗಳ ಕಾರ್ಕಳ ಮಣಿಪಾಲ ಮಂಗಳೂರು ಹಾಗೂ ಬೆಂಗಳೂರಿನ ಆಸ್ಫತ್ರೆಗಳಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಕಾಮಾಲೆ ರೋಗವಿರುವುದು ಗಮನಕ್ಕೆ ಬಂದಿರುತ್ತದೆ. ಅಲ್ಲಿ 6 ದಿನ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆ ಬಳಿಕ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿರುತ್ತಾರೆ.
ಅಲ್ಲಿ ಪರೀಕ್ಷಿಸಿದ ವೈದ್ಯರು ಬಾಲಕೃಷ್ಣ ಅವರಿಗೆ ನರ ರೋಗವಿರುವುದಾಗಿ ತಿಳಿಸಿರುತ್ತಾರೆ. ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆಯೂ ಸಲಹೆ ನೀಡಿರುತ್ತಾರೆ. ಅದರಂತೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಅಲ್ಲಿಯೂ ಗುಣಮುಖರಾಗದೇ ಇದ್ದಾಗ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಅಲ್ಲಿ 1 ವಾರ ಕಾಲ ಚಿಕಿತ್ಸೆ ಪಡೆದ ಬಳಿಕ ವೈದ್ಯಾಧಿಕಾರಿಯವರು ಬಾಲಕೃಷ್ಣ ಅವರನ್ನು ಉದ್ಯಾವರ ಅಥವಾ ಅಂಕೋಲಾ ಆಯರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ತಿಳಿಸಿರುತ್ತಾರೆ. ಅ. 19ರಂದು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಾಲಕೃಷ್ಣ ಅವರು ರಾತ್ರಿ 10 ಗಂಟೆಗೆ ಅಜೆಕಾರು ದೆಪ್ಪುತ್ತೆಯಲ್ಲಿರುವ ತಮ್ಮ ಮನೆಗೆ ಬಂದಿರುತ್ತಾರೆ.
ವಿಷ ಸೇವಿಸಿ 25 ದಿನಗಳಾದರೂ ಗಂಡ ಸಾಯದೇ ಇದ್ದಾಗ, ಅ 19 ರಂದು ರಾತ್ರಿ ಅನಾರೋಗ್ಯದಿಂದ ಮನೆಯ ಹಾಸಿಗೆಯಲ್ಲಿ ಮಲಗಿದ್ದ ಗಂಡನ ಮುಖಕ್ಕೆ ತಲೆದಿಂಬು ಇಟ್ಟು ಪ್ರತಿಮಾ ಹಾಗೂ ದಿಲೀಪ್ ಸೇರಿ ಹತ್ಯೆಗೈದಿದ್ದಾರೆ. ಮರುದಿನ ಬೆಳಿಗ್ಗೆ ಪತಿ ಅನಾರೋಗ್ಯ ಉಲ್ಭಣಿಸಿ ಮೃತಪಟ್ಟಿರುವುದಾಗಿ ಕಥೆ ಕಟ್ಟಿ ಎಲ್ಲರಲ್ಲಿ ಹೇಳಿದ್ದಾಳೆ.
ಆದರೇ ಸಾವಿನ ಕುರಿತಾಗಿ ಪ್ರತಿಮಾಳ ಸಹೋದರನಿಗೆ ಹಾಗೂ ಕುಟುಂಬದ ಇತರರಿಗೆ ಅನುಮಾನ ಮೂಡಿತ್ತು. ಹೀಗಾಗಿ ಅವರು ಪೊಲೀಸರಿಗೆ ದೂರು ನೀಡಿದ್ದು , ತನಿಖೆ ನಡೆಸಿದ ವೇಳೆ ಕೊಲೆ ವಿಚಾರ ಬಹಿರಂಗವಾಗಿದೆ
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
ಅಪರಾಧ
Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.
ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.
ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಅಪರಾಧ
Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.
ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
ಶಿಕ್ಷಣ9 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ8 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸ್ಥಳೀಯ8 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ7 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ8 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಅಪರಾಧ8 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ3 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಆರೋಗ್ಯ8 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















