Connect with us

ಉಡುಪಿ

ಕಾರ್ಕಳ : ಪತ್ನಿಯೇ ವಿಷವುಣಿಸಿ ಉಸಿರುಗಟ್ಟಿಸಿ ಪತಿಯ ಕೊಂದ ಪ್ರಕರಣ – ಮನೆಯವರಿಗೆ ಸಾವಿನ ಬಗ್ಗೆ ಅನುಮಾನ ಬಂದದ್ದು ಯಾಕೇ ಗೊತ್ತೆ ?

Published

on



Ad Widget

Ad Widget

Ad Widget

Ad Widget

ಉಡುಪಿ: ರಾಜ್ಯದ್ಯಂತ ಸಂಚಲನ ಮೂಡಿಸಿರುವ ಅಜೆಕಾರಿನ  ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದಡಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಭಾಲಕೃಷ್ಣ ಅವರ ಪತ್ನಿ ಪ್ರಕರಣದ ಕಿಂಗ್‌ ಪಿನ್‌ʼಗಿದ್ದು, ಅವರಿಗೆ ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನೊರ್ವ ಆರೋಪಿ ಆಕೆಯ ಪ್ರಿಯಕರ, ದಿಲೀಪ್‌ ಹೆಗ್ಡೆಯನ್ನು ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಉಡುಪಿ  ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ|ಅರುಣ್‌ ಕೆ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಕೊಲೆ ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ  ಬಹಿರಂಗವಾಗಿದ್ದು, “ ಆರೋಪಿಗಳಿಬ್ಬರು, ಪ್ರತಿಮಾ ಅವರ ಮೂಲಕ ಪ್ರತೀ ದಿನ ಬಾಲಕೃಷ್ಣ ಅವರ ಊಟದಲ್ಲಿ ವಿಷ ಪದಾರ್ಥ ಮಿಶ್ರಣ ಮಾಡಿ ನೀಡುತ್ತಿದ್ದರು ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ರೀಲ್ಸ್‌ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಅದನ್ನು ಹಂಚುವ ಪರಿಪಾಠ ಇಟ್ಟುಕೊಂಡಿದ್ದ ಪ್ರತಿಮಾಗೆ, ಕಾರ್ಕಳದ ಹೊಟೇಲ್‌ ಒಂದರ ಮಾಲಕನ ಪುತ್ರ ದಿಲೀಪ್‌ ಹೆಗ್ಡೆ ಪರಿಚಯ Instagram ಮೂಲಕ ಆಗಿದೆ.  ಆರಂಭದಲ್ಲಿ ಪ್ರತಿಮಾಳ ರೀಲ್ಸ್‌ ಗಳಿಗೆ ಲೈಕ್‌ ಕಾಮೇಂಟ್‌ ನೀಡುವ ಮೂಲಕ ಹತ್ತಿರವಾದ ದಿಲೀಪ್‌ ಬಳಿಕದ ದಿನಗಳಲ್ಲಿ ಪರಸ್ಪರ ಮೊಬೈಲ್‌ ಸಂಖ್ಯೆಯನ್ನು ವಿನಿಮಯ ಮಾಡಿಕೊಂಡಿದ್ದರು.

Ad Widget

Ad Widget <> Ad Widget

ಮುಂದಿನ ದಿನಗಳಲ್ಲಿ ಈ ಆತ್ಮೀಯತೆ ದೈಹಿಕ ಸಂಬಂಧದವರೆಗೂ ಮುಂದುವರಿದಿತ್ತು . ಇದು ಪ್ರತಿಮಾಳ ಪತಿಗೆ ಗೊತ್ತಾಗಿ ಮನೆಯಲ್ಲಿ ದೊಡ್ಡ ರಾದ್ದಾಂತ ಆಗಿತ್ತು ಎನ್ನಲಾಗುತ್ತಿದೆ. ಈ ಬಳಿಕವೇ ಆರೋಪಿಗಳು ಬಾಲಕೃಷ್ಣ ಅವರ ಕೊಲೆಗೆ ಸಂಚು ರೂಪಿಸಿದ್ದರು. ಮಾನವನ ದೇಹದಲ್ಲಿ ನಿಧಾನವಾಗಿ ಪ್ರಭಾವ ಬೀರುವ ವಿಷ ಪದಾರ್ಥವನ್ನು ನಿತ್ಯ ಆಹಾರದಲ್ಲಿ ಬೆರೆಸಿ ನೀಡುವ ಮೂಲ ಭಾಲಕೃಷ್ಣ ಅವರ ಆರೋಗ್ಯ ಹದಗೆಡುವಂತೆ ಆರೋಪಿಗಳು ಮಾಡಿದ್ದರು. ದಿಲೀಪ್‌ ಹೆಗ್ಡೆಯು ಪ್ರತಿಮಾಳಿಗೆ ವಿಷ ಪದಾರ್ಥ ತಂದು ಕೊಟ್ಟಿದ್ದ . ಪ್ರತಿಮಾ ಆಹಾರದಲ್ಲಿ ಬೆರೆಸಿ ನೀಡುತ್ತಿದ್ದಳು.



Ad Widget

ಆಹಾರದಲ್ಲಿ ಬೆರೆಸಿದ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿದ್ದ ಬಾಲಕೃಷ್ಣ ಅವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದರು. ಅವರಿಗೆ  ಕಾರ್ಕಳ, ಮಣಿಪಾಲ ಕೆಎಂಸಿ, ಮಂಗಳೂರಿನ ವೆನ್‌ಲಾಕ್‌ ಮತ್ತು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಗುಣಮುಖರಾದ ಕಾರಣ ಅ.19 ರಂದು ರಾತ್ರಿ ಅಜೆಕಾರಿನ ದೆಪ್ಪುತ್ತೆಗೆ ಕರೆದುಕೊಂಡು ಬರಲಾಗಿತ್ತು. ಹೀಗಾಗಿ ಅವರನ್ನು ಬೇರೆಯೆ ವಿಧಾನದಲ್ಲಿ ಹತ್ಯೆ ಗೆಯ್ಯಲು ಆರೋಪಿಗಳು ಸಂಚು ರೂಪಿಸಿದ್ದರು.

Ad Widget

Ad Widget

ಅದರಂತೆ  ಮಧ್ಯರಾತ್ರಿ 1:30 ಗಂಟೆಯ ಸುಮಾರಿಗೆ ಪ್ರತಿಮಾಳ ಮನೆಗೆ‌ ದಿಲೀಪ್‌ ಹೆಗ್ಡೆ  ಬಂದಿದ್ದು, ಪ್ರತಿಮಾ ಬಾಗಿಲು ತೆಗೆದು ಒಳಗೆ ಬರಮಾಡಿ ಕೊಂಡಿದ್ದಾಳೆ. ಬಳಿಕ  ದಿಲೀಪ್‌ ಹೆಗ್ಡೆ ಮತ್ತು ಪ್ರತಿಮಾ ಇಬ್ಬರೂ ಸೇರಿ ಬೆಡ್‌ ಶೀಟನ್ನು ಬಾಲಕೃಷ್ಣ ಮುಖಕ್ಕೆ ಒತ್ತಿ ಹಿಡಿದು ಕೊಲೆ ಮಾಡಿದ್ದಾರೆ. ಮಧ್ಯರಾತ್ರಿ ಸುಮಾರು 3:30 ಗಂಟೆಗೆ ಮನೆಯಲ್ಲಿ ಬೊಬ್ಬೆ ಕೇಳಿಬಂದಿತ್ತು. ಬಾಲಕೃಷ್ಣ ತಂದೆ ಸಂಜೀವ ಹೋಗಿ ನೋಡಿದಾಗ ಬಾಲಕೃಷ್ಣ ಮಾತನಾಡದ ಸ್ಥಿತಿಯಲ್ಲಿದ್ದರು.

 ಬೆಳಿಗ್ಗೆ 8 ಗಂಟೆಗೆ ಅಜೆಕಾರಿನ ಸರಕಾರಿ ಆಸ್ಪತ್ರೆಯ ವೈದ್ಯರನ್ನು ಕರೆಸಿ ಪರೀಕ್ಷಿಸಿದಾಗ ಬಾಲಕೃಷ್ಣ ಮೃತ ಪಟ್ಟಿರುವುದು ತಿಳಿದು ಬಂದಿತ್ತು. ಮಧ್ಯರಾತ್ರಿ ಜೋರಾಗಿ ಕೇಳಿದ ಶಭ್ಧ ಹಾಗೂ ಒಮ್ಮೆಲೆ ಅನಾರೋಗ್ಯದಿಂದ ಬಾಲಕೃಷ್ಣ ಮೃತಪಟ್ಟ ಬಗ್ಗೆ ಅನುಮಾನ ಉಂಟಾಗಿ ಮನೆಯವರು ಪೊಲೀಸರಿಗೆ ದೂರು ನೀಡಿದ್ದು,  ಪೊಲೀಸರು ತನಿಖೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

Ad Widget
Click to comment

Leave a Reply

ಅಪರಾಧ

Udupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್‌ ವಶಕ್ಕೆ..!

Published

on



Ad Widget

Ad Widget

Ad Widget

Ad Widget

ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಬೆದರಿಕೆ ಕರೆಗಳ ಹಿಂದೆ ಹೇಮಂತ್ ಪೂಜಾರಿಯ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ಅ.11: ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಬೆದರಿಕೆ ಕರೆಗಳ ಹಿಂದೆ ಹೇಮಂತ್ ಪೂಜಾರಿಯ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಕರೆ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಎರಡು, ಕಾಪು, ಶಿರ್ವ ಹಾಗೂ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದ್ದು, ಇನ್ನೂ ಎರಡು-ಮೂರು ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ದೂರುಗಳು ಲಭಿಸಿವೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಈ ಪ್ರಕರಣಗಳ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಸಂಬಂಧಪಟ್ಟ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ತನಿಖೆಯ ಪ್ರಗತಿ ಕುರಿತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ವರದಿಗಳನ್ನು ಸಲ್ಲಿಸಲಾಗುತ್ತಿದೆ.



Ad Widget

ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಈ ಹಿಂದೆ ಉಡುಪಿ ಜಿಲ್ಲಾ ಪೊಲೀಸರು ಹೇಮಂತ್ ಪೂಜಾರಿಗಾಗಿ ಬಾಂಗ್ಲಾದೇಶದ ಗಡಿಯವರೆಗೂ ಶೋಧ ನಡೆಸಿದ್ದರು. ಆದರೆ, ಆ ಕಾರ್ಯಾಚರಣೆಯಲ್ಲಿ ಆತನ ಪತ್ತೆಯಾಗಿರಲಿಲ್ಲ. ಇದೀಗ ಬೆದರಿಕೆ ಕರೆಗಳ ಪ್ರಕರಣಗಳಲ್ಲಿನ ಸಾಕ್ಷ್ಯಗಳನ್ನು ಆಧರಿಸಿ ತನಿಖೆ ಮುಂದುವರಿಸಲಾಗಿದೆ.

Ad Widget

Ad Widget

ಕಾಪು ಪೊಲೀಸರ ವಶಕ್ಕೆ ಅನುಜ್ ಪಾಟೀಲ್
ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಶಾರ್ಪ್ ಶೂಟರ್‌ಗಳನ್ನು ಕಳುಹಿಸಿದ್ದ ಆರೋಪ ಎದುರಿಸುತ್ತಿರುವ ಮುಂಬೈ ಮೂಲದ ಗ್ಯಾಂಗ್‌ಸ್ಟರ್, ಬಿಹಾರದ ನಳಂದ ಜಿಲ್ಲೆಯ ಅನುಜ್ ಪಾಟೀಲ್ (35)ನನ್ನು ಕಾಪು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಈ ಹಿಂದೆ ಬೈಂದೂರು ಹಾಗೂ ಹೆಬ್ರಿ ಪೊಲೀಸರು ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಕಾಪು ಪೊಲೀಸರು ವಶಕ್ಕೆ ಪಡೆದು, ಹೇಮಂತ್ ಪೂಜಾರಿಯೊಂದಿಗಿನ ಆತನ ಸಂಪರ್ಕ ಹಾಗೂ ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಬಂದಿರುವ ಬೆದರಿಕೆ ಕರೆಗಳ ಆಡಿಯೋಗಳನ್ನು ಪರಿಶೀಲಿಸಲಾಗುತ್ತಿದೆ. ಈ ಕರೆಗಳನ್ನು ಹೇಮಂತ್ ಪೂಜಾರಿಯೇ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರಿನಲ್ಲಿ ಬೇರೆ ಯಾರಾದರೂ ಬೆದರಿಕೆ ಹಾಕುತ್ತಿದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

ಪೊಲೀಸ್ ಆಯುಧ ಕಸಿದು ಗುಂಡು ಹಾರಿಸಲು ಯತ್ನಿಸಿದ್ದ ಆರೋಪ
2017ರಿಂದ ತಲೆಮರೆಸಿಕೊಂಡಿದ್ದ ಅನುಜ್ ಪಾಟೀಲ್ ಮುಂಬೈ ಕೇಂದ್ರವಾಗಿಸಿಕೊಂಡು ಕಾರ್ಯಾಚರಿಸುತ್ತಿದ್ದ ಎನ್ನಲಾಗಿದೆ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಒಟ್ಟು 11 ಕ್ರಿಮಿನಲ್ ಪ್ರಕರಣಗಳು ಆತನ ವಿರುದ್ಧ ದಾಖಲಾಗಿದ್ದು, ಅವುಗಳಲ್ಲಿ 10 ಪ್ರಕರಣಗಳು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದ್ದಾಗಿವೆ ಎಂದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್‌ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿತ್ತು.

ಉಡುಪಿ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿ ಕರೆತರುತ್ತಿದ್ದಾಗ, ಹೆಬ್ರಿ ತಾಲೂಕಿನ ಸೋಮೇಶ್ವರದಲ್ಲಿ ಮೂತ್ರ ವಿಸರ್ಜನೆಗೆಂದು ಪೊಲೀಸ್ ವಾಹನದಿಂದ ಕೆಳಗಿಳಿದಿದ್ದ ಅನುಜ್ ಪಾಟೀಲ್, ಕೊಲ್ಲೂರು ಪೊಲೀಸ್ ಠಾಣೆಯ ಪಿಎಸ್‌ಐ ವಿನಯ್ ಅವರ ಸೇವಾ ಆಯುಧವನ್ನು ಕಸಿದು ಗುಂಡು ಹಾರಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್‌ಐ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದರು. ಗಾಯಗೊಂಡ ಆತನನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಚಿಕಿತ್ಸೆಯ ಬಳಿಕ ತನಿಖೆ ಮುಂದುವರಿಸಿರುವ ಪೊಲೀಸರು, ಬೈಂದೂರು ಮತ್ತು ಹೆಬ್ರಿ ಠಾಣೆಗಳ ನಂತರ ಇದೀಗ ಕಾಪು ಪೊಲೀಸರ ವಶದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಅನುಜ್ ಪಾಟೀಲ್‌ನ ಅಪರಾಧ ಚಟುವಟಿಕೆಗಳು, ಹೇಮಂತ್ ಪೂಜಾರಿಯೊಂದಿಗಿನ ಸಂಪರ್ಕ ಹಾಗೂ ಬೆದರಿಕೆ ಕರೆಗಳ ಹಿಂದಿನ ಜಾಲದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

Ad Widget
Continue Reading

ಅಪರಾಧ

Udupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ಅ.8: ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕೊಲೆಯಾದ ಉದ್ಯಮಿ ಡೇವಿಡ್ ಡಿಸೋಜಾ ಅವರ ಪುತ್ರನಿಗೆ ವಾಟ್ಸಾಪ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿಯೊಬ್ಬ, ₹5 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

Ad Widget

Ad Widget <> Ad Widget

“ನಿನ್ನ ತಂದೆಯಿಂದ ನನ್ನ ಸಹೋದರನಿಗೆ ಸಾಕಷ್ಟು ನಷ್ಟವಾಗಿತ್ತು. ಆ ಕಾರಣಕ್ಕೆ ನಾನೇ ಕೊಲೆ ಮಾಡಿಸಿದ್ದೆ. ನಮಗಾಗಿರುವ ನಷ್ಟವನ್ನು ತುಂಬಿಕೊಡಲು ₹5 ಕೋಟಿ ನೀಡಬೇಕು” ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Ad Widget

ಇನ್ನೊಬ್ಬ ಉದ್ಯಮಿ ಹಾಗೂ ಖಾಸಗಿ ಸಂಸ್ಥೆಯ ವ್ಯಕ್ತಿಗೂ ಹೇಮಂತ್ ಪೂಜಾರಿ ಹೆಸರಿನಲ್ಲಿ ವಾಟ್ಸಾಪ್ ಕರೆಗಳು ಬಂದಿದ್ದು, ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ.

Ad Widget

Ad Widget

25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಆರೋಪಿ
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಆತನ ಸಹೋದರ ಹಾಗೂ ಇತರ ಸಹಚರರ ನೆರವಿನಿಂದ ಹೊರರಾಜ್ಯದ ಶೂಟರ್‌ಗಳನ್ನು ಕರೆಸಿ ಕೊಲೆ ಮಾಡಿಸಲಾಗಿದೆ ಎಂಬ ಆರೋಪ ಪ್ರಕರಣದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿಯನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಕಳೆದ 25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಹೇಮಂತ್ ಪೂಜಾರಿ ಬಗ್ಗೆ ಇದುವರೆಗೂ ಸ್ಪಷ್ಟ ಸುಳಿವು ಲಭ್ಯವಾಗಿಲ್ಲ. ಈ ನಡುವೆ ಆತನ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬಂದಿರುವುದು ಪೊಲೀಸರ ಗಮನ ಸೆಳೆದಿದೆ.

ಕರೆ ಮಾಡುತ್ತಿರುವವರು ಯಾರು?
ಹೇಮಂತ್ ಪೂಜಾರಿಯೇ ಕರೆ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಬೇರೆಯವರು ಬೆದರಿಕೆ ಹಾಕುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕರೆಗಳ ಮೂಲ, ಹಣದ ಬೇಡಿಕೆಯ ಹಿಂದಿನ ಉದ್ದೇಶ ಹಾಗೂ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಜೈಲಿನಲ್ಲೇ ವಾರ್ಡನ್‌ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ

Published

on



Ad Widget

Ad Widget

Ad Widget

Ad Widget

ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ಉಡುಪಿ: ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget alt="Ad Widget"/>

Ad Widget

2011ರ ಡಿಸೆಂಬರ್ 3ರಂದು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಉಡುಪಿ ಜಿಲ್ಲಾ ಕಾರಾಗೃಹದ ಮೊದಲ ಬ್ಯಾರಕ್ ಎದುರಿನ ವರಾಂಡದಲ್ಲಿ ಘಟನೆ ನಡೆದಿತ್ತು. ಜೈಲ್ ವಾರ್ಡನ್ ಅವರು ಪ್ರಭಾರ ವಹಿಸಿಕೊಳ್ಳುವ ಸಲುವಾಗಿ ಬಂಧಿಗಳ ಲೆಕ್ಕ ತೆಗೆದುಕೊಳ್ಳಲು ತಮ್ಮ ತಮ್ಮ ಬ್ಯಾರಕ್‌ಗಳಿಗೆ ತೆರಳುವಂತೆ ಸೂಚಿಸಿದ್ದರು. ಈ ವೇಳೆ ಅಡುಗೆ ಕೋಣೆಯ ಎದುರುಗಡೆ ಇದ್ದ ವಿಚಾರಣಾ ಬಂಧಿ ಸಫಾನ್ ಹುಸೈನ್ ಅಲಿಯಾಸ್ ರಜಾಕ್ ಎಂಬಾತ ಜೈಲ್ ವಾರ್ಡನ್ ಅವರನ್ನು ಉದ್ದೇಶಿಸಿ ಅವಾಚ್ಯವಾಗಿ ನಿಂದಿಸಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದ.

Ad Widget

Ad Widget <> Ad Widget

ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು 2012ರ ಜನವರಿ 10ರಂದು ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿಗೆ 2013ರ ಮೇ 29ರಂದು ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣೆಗೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದರಿಂದ ಪ್ರಕರಣವು 2022ರ ಜೂನ್ 24ರಂದು ಎಲ್‌ಪಿಸಿ ನಂ.02/2022ರಂತೆ ದಾಖಲಾಗಿತ್ತು.



Ad Widget

ತಲೆಮರೆಸಿಕೊಂಡಿದ್ದ ಸಫಾನ್ ಹುಸೈನ್‌ನನ್ನು 2026ರ ಏಪ್ರಿಲ್ 23ರಂದು ಬಾಡಿ ವಾರಂಟ್ ಮೂಲಕ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40,000 ದಂಡ ವಿಧಿಸಿ ತೀರ್ಪು ನೀಡಿದೆ

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading