Uncategorized
Mangalore ಮಂಗಳೂರು : ಸೈಟ್ ತೋರಿಸಲು ಕರೆದೊಯ್ದು ಬಿಲ್ಡರ್ ನೈಟ್ ಸಹಕರಿಸು ಎಂದ ! ಒಪ್ಪದ ಯುವತಿಯ ಕಾರಿನಲ್ಲೇ ಮಾನಭಂಗ

ಮಂಗಳೂರು: ಸೈಟ್ ತೋರಿಸುವ ನೆಪದಲ್ಲಿ ಹೊರ ಜಿಲ್ಲೆಗೆ ಕರೆದುಕೊಂಡು ಹೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ನಗರದ ಬಿಲ್ಡರ್ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರು ನಿವಾಸಿ ಬಿಲ್ಡರ್ ರಶೀದ್ ಪ್ರಕರಣದ ಆರೋಪಿ.
ಸಂತ್ರಸ್ತ ಯುವತಿಯೂ ಸೈಟ್ ಖರೀದಿಸಲು ಇಚ್ಚಿಸಿದ್ದು ಹೀಗಾಗಿ ಆರೋಪಿಯನ್ನು ಸಂಪರ್ಕಿಸಿದ್ದಾರೆ. ಈ ವೇಳೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಒಳ್ಳೆಯ ಸೈಟ್ ಇದ್ದು ಅದನ್ನು ಖರೀದಿ ಮಾಡಬಹುದು. ನಿಮಗೆ ಅದನ್ನು ಒಳ್ಳೆಯ ರೇಟ್ ನಲ್ಲಿ ಕೊಡಿಸುವುದಾಗಿ ಆರೋಪಿ ನಂಬಿಸಿದ್ದಾನೆ ಎನ್ನಲಾಗಿದೆ.
ಇದಕ್ಕೆ ಒಪ್ಪಿದ ಸಂತ್ರಸ್ತೆ ಆರೋಪಿ ಜತೆ ಅ 21 ರಂದು ಸಂಜೆ ರಶೀದ್ ಕಾರಿನಲ್ಲಿ ಕುಶಾಲನಗರಕ್ಕೆ ತೆರಳಿದ್ದಾರೆ. ರಾತ್ರಿ 8 ಗಂಟೆಗೆ ಅವರು ತಲುಪಿದ್ದು, ಅಲ್ಲಿ ರಾತ್ರಿ ಉಳಿದುಕೊಳ್ಳಲು ಯುವತಿಯೂ ಹೊಟೇಲ್ ಒಂದರಲ್ಲಿ ಇಬ್ಬರಿಗೆ ಪ್ರತ್ಯೇಕ ರೂಂ ಮಾಡಿದ್ದಾರೆ. ಆಗ ರಶೀದ್ ಎರಡು ರೂಂ ಯಾಕೇ ? ನಾವು ಒಂದೇ ರೂಂ ನಲ್ಲಿ ಇರಬಹುದಿತ್ತು ಎಂದು ಹೇಳಿದ್ದಾರೆ ಎನ್ನಲಾಗಿದೆ.
ರಶೀದ್ ನ ಈ ದೋರಣೆಯಿಂದ ಹೆದರಿದ ಯುವತಿ ಅಲ್ಲಿಂದ ತೆರಳಿ , ವಿರಾಜಪೇಟೆಯಲ್ಲಿರುವ ತಂಗಿಯ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಮರುದಿನ ಬೆಳಿಗ್ಗೆ ರಶೀದ್ ಮಹಿಳೆಗೆ ಕರೆ ಮಾಡಿದ್ದು, ಸೈಟ್ ನೋಡಲು ಹೋಗುವುದಕ್ಕೆ ಕರೆದಿದ್ದಾರೆ. ಅದರಂತೆ ಮಹಿಳೆ ಅಲ್ಲಿಗೆ ಹೋಗಿದ್ದಾರೆ. ಕಾರಿನಲ್ಲಿ ಸೈಟ್ ನೋಡಲು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಮತ್ತೆ ರಶೀದ್ ಅಸಭ್ಯವಾಗಿ ವರ್ತಿಸಿದ್ದು “ ರಾತ್ರಿ ನಾವು ಒಂದೇ ರೂಂ ನಲ್ಲಿ ನಿಲ್ಲಬಹುದಿತ್ತು … ನಾನು ಬಾರೀ ನಿರೀಕ್ಷೆ ಇಟ್ಟುಕೊಂಡಿದೆ” ಎಂದಿದ್ದಾನೆ . ಇದಕ್ಕೆ ಯುವತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಆಗ ಕ್ಷಮೆಯಾಚಿಸಿದ್ದಾನೆ
ಸೈಟ್ ತೋರಿಸಿ ವಾಪಸ್ಸು ಬರುತ್ತಿರುವಾಗ ಒಂದು ಲಕ್ಷದ ನೋಟಿನ ಕಟ್ಟು ತೋರಿಸಿ, ಇದನ್ನು ನಿನಗೆ ಕೊಡುತ್ತೇನೆ , ನನ್ನ ಜತೆ ಸಹಕರಿಸು ಎಂದು ಹೇಳಿರುವುದಾಗಿ ಯುವತಿ ಆರೋಪಿಸಿದ್ದಾಳೆ. ಇದಕ್ಕೆ ಯುವತಿ ನಿರಾಕರಿಸಿದಾಗ, ಕುಶಾಲನಗರದಲ್ಲಿರುವ ತನ್ನ ಎರಡು ಪ್ಲ್ಯಾಟ್ ಅನ್ನು ನಿನ್ನ ಹೆಸರಿಗೆ ಮಾಡುವುದಾಗಿ ಆಮೀಷವೊಡ್ಡಿದ್ದು ಅದಕ್ಕೂ ನಾನು ಬಗ್ಗದಿದ್ದಾಗ, ಕಾರಿನಲ್ಲಿ ಬಲವಂತವಾಗಿ ಮಾನಭಂಗ ಮಾಡಿದ್ದಾನೆ ಬಳಿಕ ಫ್ಲ್ಯಾಟ್ಗೆ ತಂದು ಬಿಟ್ಟಿದ್ದಾರೆ. ಈ ವಿಚಾರವನ್ನು ನನ್ನ ಮ್ಯಾನೇಜರ್ಗೆ ತಿಳಿಸಿದಾಗ ರಶೀದ್ ಅವಾಚ್ಯ ಶಬ್ದಗಳಿಂದ ಬೈದು ಕೆನ್ನೆಗೆ ಹೊಡೆದು ಜೀವಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uncategorized
Soujanya case-Big Breaking: ಸೌಜನ್ಯ ಪ್ರಕರಣ: ಎಸ್ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.
ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.
ಇಂದು ಐವರ ಹೇಳಿಕೆಗಳನ್ನು ಎಸ್ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.
Uncategorized
Modi visit effect-ಮೋದಿ ಭೇಟಿ ಎಫೆಕ್ಟ್: ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್, ಗಂಟೆಗಟ್ಟಲೆ ಪರದಾಡಿದ ವಾಹನ ಸವಾರರು..!
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.
ಬನ್ನೇರುಘಟ್ಟ ಮುಖ್ಯರಸ್ತೆ, ಆಡುಗೋಡಿ, ಜಯನಗರ, ಜೆ.ಪಿ.ನಗರ, ತಲಘಟ್ಟಪುರ ಹಾಗೂ ಹುಳಿಮಾವು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿತ್ತು.
ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ತಾವರೆಕೆರೆ ಮೆಟ್ರೋ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದಲೂ ತಪಾಸಣೆ ನಡೆಸಲಾಗಿತ್ತು.
ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದರಿಂದ ಐಐಎಂಬಿ ಹಾಗೂ ಜಯದೇವ ಆಸ್ಪತ್ರೆ ಮಾರ್ಗವಾಗಿ ಸಂಚರಿಸುವವರು ತೀವ್ರ ತೊಂದರೆ ಅನುಭವಿಸಿದರು. ಮುಖ್ಯ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿದ್ದರಿಂದ ವಾಹನ ಸವಾರರು ಬಿಟಿಎಂ ಬಡಾವಣೆ, ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳ ಮೂಲಕ ಸಂಚರಿಸಬೇಕಾಯಿತು. ಇದರಿಂದ ಕಿರಿದಾದ ವಸತಿ ಪ್ರದೇಶಗಳ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಹಲವು ಜಂಕ್ಷನ್ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು, ಬಿಟಿಎಂ ಬಡಾವಣೆ ಒಳರಸ್ತೆಗಳಲ್ಲಿ ತೀವ್ರ ಸಂಚಾರ ದಟ್ಟಣೆ ಕಂಡುಬಂದಿತು. ಡೇರಿ ವೃತ್ತ, ಮೈಕೋ ಲೇಔಟ್, ಹುಳಿಮಾವು ಹಾಗೂ ಜಯನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳು ನಿಧಾನವಾಗಿ ಚಲಿಸಿದವು.
ಬೆಳಿಗ್ಗೆ 9 ಗಂಟೆಗೆ ಹುಳಿಮಾವಿನಿಂದ ಹೊರಟು ಡೇರಿ ವೃತ್ತದಲ್ಲಿ 11 ಗಂಟೆಗೆ ನಡೆಯಬೇಕಿದ್ದ ಸಭೆಗೆ ತೆರಳುತ್ತಿದ್ದರೂ ಮಧ್ಯಾಹ್ನ 1 ಗಂಟೆಯಾದರೂ ತಲುಪಲು ಸಾಧ್ಯವಾಗಲಿಲ್ಲ ಎಂದು ಪ್ರಯಾಣಿಕ ರಮೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಪರ್ಯಾಯ ಮಾರ್ಗಗಳಲ್ಲಿಯೂ ವಾಹನ ದಟ್ಟಣೆ ಇತ್ತು. ಯಾವ ರಸ್ತೆಯಲ್ಲಿ ಸಂಚರಿಸಬೇಕು ಎಂಬುದರ ಕುರಿತು ಸ್ಪಷ್ಟ ಸೂಚನಾ ಫಲಕಗಳಿರಲಿಲ್ಲ ಎಂದು ಅವರು ದೂರಿದರು.
ಸಂಚಾರ ನಿರ್ಬಂಧದಿಂದ ಉದ್ಯೋಗಿಗಳಿಗೆ ತೊಂದರೆಯಾಗುವುದನ್ನು ಗಮನದಲ್ಲಿಟ್ಟುಕೊಂಡು ನಗರದ ಹಲವು ಐಟಿ ಕಂಪನಿಗಳು ಶುಕ್ರವಾರ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ (ವರ್ಕ್ ಫ್ರಂ ಹೋಮ್) ಸೂಚಿಸಿದ್ದವು.
ಮಾರ್ಗ ಬದಲಾವಣೆ ಕುರಿತು ಎಫ್ಎಂ ರೇಡಿಯೊ, ಸುದ್ದಿವಾಹಿನಿಗಳು ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಮುಂಚಿತವಾಗಿಯೇ ಮಾಹಿತಿ ನೀಡಲಾಗಿತ್ತು. ಆದರೂ ಪರ್ಯಾಯ ಮಾರ್ಗಗಳ ಪರಿಚಯವಿಲ್ಲದವರು ಕಿರಿದಾದ ಒಳರಸ್ತೆಗಳಿಗೆ ಪ್ರವೇಶಿಸಿದ್ದರಿಂದ ಗೊಂದಲ ಉಂಟಾಗಿ ಸಂಚಾರ ದಟ್ಟಣೆ ಹೆಚ್ಚಾಯಿತು ಎಂದು ಹಿರಿಯ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೆಚ್ಚು ಸಂಚಾರ ದಟ್ಟಣೆ ಕಂಡುಬಂದ ಪ್ರದೇಶಗಳು:
ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು
ಬಿಟಿಎಂ ಬಡಾವಣೆ ಒಳರಸ್ತೆಗಳು
ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳು
ಮೈಕೋ ಲೇಔಟ್ ಜಂಕ್ಷನ್ಗಳು
ಹುಳಿಮಾವು ಜಂಕ್ಷನ್ಗಳು
ಡೇರಿ ವೃತ್ತ
ಜಯದೇವ ಆಸ್ಪತ್ರೆ ಮತ್ತು ಐಐಎಂಬಿ ಮುಂಭಾಗದ ರಸ್ತೆಗಳು
-
ರಾಜಕೀಯ20 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ21 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ21 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್4 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು21 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ21 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್4 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು4 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















