Connect with us

ಸ್ಥಳೀಯ

Dharmasthala-ಧರ್ಮಸ್ಥಳ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಉಜಿರೆ: ರಾಷ್ಟ್ರಕವಿ ಕುವೆಂಪು ಸಾರಿದ ವಿಶ್ವಮಾನವ ಸಂದೇಶವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಕ್ಷರಶಃ ಸೇವಾ ರೂಪದಲ್ಲಿ ಮಾಡಿ ತೋರಿಸಿದ್ದಾರೆ. ಜೈನಧರ್ಮಕ್ಕೂ ಹಿಂದೂ ಧರ್ಮಕ್ಕೂ ಅವಿನಾಭಾವ ಸಂಬಂಧವಿದ್ದು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ – ಎಲ್ಲಾ ರಂಗಗಳಲ್ಲಿಯೂ ಹೆಗ್ಗಡೆಯವರು ಹೊಗಳಿಕೆಗೆ ಹಿಗ್ಗದೆ, ಟೀಕೆಗಳಿಗೆ ಅಂಜದೆ, ಸ್ಥಿತಪ್ರಜ್ಞೆಯಿಂದ ಎಲ್ಲಾ ಮಠ-ಮಂದಿರಗಳಿಗೂ ಮಾದರಿಯಾಗಿ ಅನವರತ ಸೇವೆ ಮಾಡಿ ಧರ್ಮಸ್ಥಳದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಪಸರಿಸಿದ್ದಾರೆ ಎಂದು ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಗುರುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

Ad Widget

Ad Widget <> Ad Widget

ಜನರು ರಾಜಕಾರಣಿಗಳಿಗಿಂತಲೂ ಹೆಚ್ಚು ಧರ್ಮಾಧಿಕಾರಿಗಳಾದ ಹೆಗ್ಗಡೆಯವರಿಂದ ನಿರೀಕ್ಷೆ ಮಾಡುತ್ತಾರೆ. ಮಾತು ಬಿಡ ಮಂಜುನಾಥ ಎಂಬ ಮಾತಿನಿಂತೆ ಚತುರ್ವಿಧ ದಾನ ಪರಂಪರೆಯೊಂದಿಗೆ ಅರಿಷಡ್ವರ್ಗಗಳನ್ನು ಗೆದ್ದು ಬಹುಮುಖಿ ಸಮಾಜಸೇವಾ ಕಾರ್ಯಗಳಿಂದ ಇಂದು ಹೆಗ್ಗಡೆಯವರು ವಿಶ್ವ ಮಾನವರಾಗಿದ್ದಾರೆ ಎಂದು ಸ್ವಾಮೀಜಿ ಶ್ಲಾಘಿಸಿ ಅಭಿನಂದಿಸಿದರು.



Ad Widget

ಸರ್ವಜನಾಂಗದ ಶಾಂತಿಯ ತೋಟ ಧರ್ಮಸ್ಥಳ :
ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪ್ರತಿಮೆ ಅನಾವರಣ ಮಾಡಿ ಶುಭಾಶಂಸನೆ ಮಾಡಿದ ಬೆಂಗಳೂರು ಗ್ರಾಮಾಂತರದ ಸಂಸದ ಡಾ. ಸಿ.ಎನ್. ಮಂಜುನಾಥ್ ಮಾತನಾಡಿ, ದೈಹಿಕ ಆರೋಗ್ಯಕ್ಕಿಂತಲೂ ಮಾನಸಿಕಆರೋಗ್ಯ ಮುಖ್ಯವಾದುದರಿಂದ ಸರ್ವಧರ್ಮೀಯರಿಗೂ ಶ್ರದ್ಧಾ-ಭಕ್ತಿಯ ಕೇಂದ್ರವಾದ ಧರ್ಮಸ್ಥಳವು ಮಾನಸಿಕ ಶಾಂತಿ-ನೆಮ್ಮದಿ ನೀಡುವ ಸರ್ವಜನಾಂಗದ ಶಾಂತಿಯ ತೋಟವಾಗಿದೆ ಎಂದು ಬಣ್ಣಿಸಿದರು.

Ad Widget

Ad Widget

ಲಕ್ಷಾಂತರ ಮನೆಗಳಲ್ಲಿ ಇಂದು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ, ಉಚಿತ ಸಾಮೂಹಿಕ ವಿವಾಹ, ಸ್ವ-ಉದ್ಯೋಗ ತರಬೇತಿ ಕೇಂದ್ರ ಇತ್ಯಾದಿ ಯೋಜನೆಗಳಿಂದ ಜನರು ಸಾರ್ಥಕ ಬದುಕನ್ನು ಕಟ್ಟಿಕೊಂಡು ಎಲ್ಲಾ ಮನೆಗಳಲ್ಲಿ ನಂದಾದೀಪದಂತೆ ಬೆಳಗುತ್ತಿದ್ದಾರೆ. ಯಾವುದೇ ವ್ಯಾಪಾರೀಕರಣದ ಭಾವನೆಯಿಲ್ಲದೆ ನಿಸ್ವಾರ್ಥ ಸೇವಾಮನೋಭಾವದಿಂದ ಆರೋಗ್ಯ ಶಿಸ್ತು, ಸಂಯಮ, ಉತ್ತಮ ಸಂಸ್ಕಾರ ಮೂಡಿಸಿರುವುದು ಸಮಾಜಕ್ಕೆ ಕೊಟ್ಟ ಅಮೂಲ್ಯ ಕೊಡುಗೆಯಾಗಿದೆ. ಹುಂಡಿಯ ಹಣವನ್ನು ಲೋಕಕಲ್ಯಾಣಕ್ಕಾಗಿ ಬಳಿಸಿದ ಏಕೈಕ ಕ್ಷೇತ್ರ ಧರ್ಮಸ್ಥಳ ಆಗಿದೆ ಎಂದು ಅವರು ಶ್ಲಾಘಿಸಿದರು.
ಅನುದಾನಕ್ಕಿಂತ ಅನುಷ್ಠಾನ ಮುಖ್ಯ. ಅನುಷ್ಠಾನಕ್ಕಿಂತ ನಿರ್ವಹಣೆ ಮುಖ್ಯ. ಧರ್ಮಸ್ಥಳದ ಸಮಾಜಮುಖಿ ಸೇವಾಕಾರ್ಯಗಳಿಂದಾಗಿ ಇಂದು ಕೂಲಿಕಾರ್ಮಿಕರು ಮಾಲಿಕರಾಗಿದ್ದಾರೆ. ಪೂಜಾ ಕ್ಷೇತ್ರವನ್ನು ಸೇವಾ ಕ್ಷೇತ್ರವಾಗಿ ರೂಪಿಸಿದ ಹೆಗ್ಗಡೆಯವರು ದೈವತ್ವ ಮತ್ತು ಮಾನವೀಯತೆಯೊಂದಿಗೆ ಬಡವರ ಕಣ್ಣೀರು ಒರೆಸುವ ಕಾಯಕ ಮಾಡಿದ್ದಾರೆ.

ದೃಷ್ಠಿ ಇದ್ದರೆ ಸಾಲದು, ದೂರದೃಷ್ಠಿ ಇರಬೇಕು. ಜಾಣ್ಮೆ ಇದ್ದರೆ ಸಾಲದು, ತಾಳ್ಮೆ ಇರಬೇಕು. ಸಂಪತ್ತಿನಲ್ಲಿ ಸರಳತೆ, ಅಧಿಕಾರದಲ್ಲಿ ಸೌಮ್ಯ ಸ್ವಭಾವ ಹಾಗೂ ಕೋಪದಲ್ಲಿ ಮೌನ ಇರಬೇಕು ಎಂದು ಅವರು ಹೇಳಿದರು. ಕಾಲ ಬದಲಾಗಿಲ್ಲ ಆದರೆ ಜನರ ಆಸೆ-ಆಕಾಂಕ್ಷೆಗಳು, ನಿರೀಕ್ಷೆಗಳು ಹೆಚ್ಚಾಗಿವೆ. ಶೇ. ೭೫ ರಷ್ಟು ಜನ ಇಂದು ಮದ್ಯಪಾನಕ್ಕೆ ಬಲಿಯಾಗಿ ಅಧಿಕಾರ, ಆರೋಗ್ಯ, ಸ್ಥಾನ-ಮಾನ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಆದುದರಿಂದಲೇ ಕ್ಯಾನ್ಸರ್, ಮಧುಮೇಹ, ರಕ್ತದೊತ್ತಡದಂತಹ ಭೀಕರ ರೋಗಳಿಂದ ಎಳೆಯ ಪ್ರಾಯದವರೂ ಸಾವನ್ನಪ್ಪುತ್ತಿರುವುದು ಖೇದಕರವಾಗಿದೆ ಎಂದರು.
ಇನ್‌ಕಮ್ ಇದ್ದವರನ್ನು ಮಾತ್ರ ಇಂದು ವೆಲ್‌ಕಮ್ ಮಾಡುತ್ತಾರೆ. ಅಧಿಕ ಹಣ ಮತ್ತು ಸಂಚಾರಿ ದೂರವಾಣಿ ಬಳಕೆಯಿಂದ ಇಡೀ ಸಮಾಜವೇ ಹಾಳಾಗುತ್ತಿದೆ. ಆದರ್ಶ ವ್ಯಕ್ತಿತ್ವದಿಂದ ಮಾತ್ರ ನಮಗೆ ಗೌರವ ಸಿಗುತ್ತದೆ. ಧರ್ಮಸ್ಥಳವು ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸಂಜೀವಿನಿಯಾಗಿದೆ ಎಂದು ಅವರು ಅಭಿಪಾಯಪಟ್ಟರು.

ಜಪ, ತಪ, ಉಪವಾಸ, ಧ್ಯಾನ, ವಿಶ್ರಾಂತಿ, ಒಳ್ಳೆಯ ನಿದ್ರೆ, ದಯೆ, ಅನುಕಂಪ, ಕೃತಜ್ಞತೆ ಮೊದಲಾದ ಮಾನವೀಯ ಮೌಲ್ಯಗಳಿದ್ದಾಗ ಮನೆಯೇ ಶಾಂತಿ, ನೆಮ್ಮದಿಯ ಸಾಂತ್ವನ ಕೇಂದ್ರವಾಗುತ್ತದೆ ಎಂದು ಅವರು ಹೇಳಿದರು. ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ಹೆಗ್ಗಡೆಯವರು ಮಾಡುತ್ತಿರುವ ಬಹಮುಖಿ ಸಮಾಜಸೇವೆಗೆ ಅಭಿನಂದಿಸಿದರು.

ಹೆಗ್ಗಡೆಯವರಿಂದ ನೂತನ ಯೋಜನೆಗಳ ಪ್ರಕಟ:
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಧರ್ಮಸ್ಥಳದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆ ಮಾಡಿ ಭಕ್ತಾದಿಗಳಿಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು. ಇದೇ ನವೆಂಬರ್ ೮ ರಂದು ಧರ್ಮಸ್ಥಳದಲ್ಲಿ ಉಪರಾಷ್ಟಪತಿ ಜಗದೀಪ್ ಧನ್ಕರ್ ಆರಾಮದಾಯಕ ಸರತಿ ಸಾಲಿನ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಿಸಿದರು.

ಸೇವಾಕಾರ್ಯಗಳ ಮೂಲಕ ಜನರ ಹೃದಯ ಪರಿವರ್ತನೆಯ ಕಾರ್ಯಮಾಡಲಾಗುತ್ತದೆ. ತನ್ಮೂಲಕ ನವಚೈತನ್ಯದೊಂದಿಗೆ ಪರಿವರ್ತನೆ ಹಾಗೂ ಪ್ರಗತಿಯ ಹರಿಕಾರರನ್ನು ರೂಪಿಸಲಾಗುತ್ತದೆ. ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ದೇಶದಲ್ಲಿ ಇನ್ನೂ 120 ಹೊಸ ರುಡ್‌ಸೆಟ್ ಸಂಸ್ಥೆಗಳನ್ನು ಸದ್ಯದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಹೆಗ್ಗಡೆಯವರು ತಿಳಿಸಿದರು.

ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಸ್ವಾಗತಿಸಿದರು.
ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಿತಿ ಸಂಚಾಲಕ ಹಾಗೂ ದೇವಳ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್ ಧನ್ಯವಾದವಿತ್ತರು. ಅನ್ನಪೂರ್ಣ ಛತ್ರದ ಪ್ರಬಂಧಕ ಸುಬ್ರಹ್ಮಣ್ಯ ಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.

ಗಣ್ಯರಿಂದ ಅಭಿನಂದನೆಗಳ ಮಹಾಪೂರ:
ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ಕೆ.ಪಿ.ಸಿ.ಸಿ. ಜಿಲ್ಲಾ ಘಟಕದ ಅಧ್ಯಕ್ಷ ಕೆ. ಹರೀಶ್ ಕುಮಾರ್, ದ.ಕ. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಡಿ. ಸಂಪತ್‌ಸಾಮ್ರಾಜ್ಯ, ಶಿರ್ತಾಡಿ, ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಕೆ. ರಾಜವರ್ಮ ಬಲ್ಲಾಳ್, ವಿಜಯಾ ಬ್ಯಾಂಕ್ ನಿವೃತ್ತ ಪ್ರಬಂಧಕ ಎಮ್. ಜಿನರಾಜ ಶೆಟ್ಟಿ, ಮಂಗಳೂರು, ಸುದರ್ಶನ್ ಜೈನ್, ಬಂಟ್ವಾಳ,  ಪಿ. ಜಯರಾಜ ಕಂಬಳಿ, ಪೆರಿಂಜೆಗುತ್ತು, ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಮೊಕ್ತೆಸರ ಜೀವಂಧರ ಕುಮಾರ್, ಕೆ. ಪ್ರದೀಪ್‌ಕುಮಾರ್ ಕಲ್ಕೂರ, ಹರಿಕೃಷ್ಣ ಪುನರೂರು, ಮೊದಲಾದ ಗಣ್ಯರು ಹೆಗ್ಗಡೆಯವರಿಗೆ ಗೌರವಾರ್ಪಣೆ ಮಾಡಿ ಅಭಿನಂದಿಸಿದರು.

Ad Widget
Click to comment

Leave a Reply

ಶಿಕ್ಷಣ

Air Force Day-ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ 94ನೇ ವಾಯುಸೇನಾ ದಿನಾಚರಣೆ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ಮಾಜಿ ಸೈನಿಕರ ಸಂಘ, ಅಮರ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ನಗರದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಗುರುವಾರ 94ನೇ ವಾಯುಸೇನಾ ದಿನಾಚರಣೆಯನ್ನು ಆಚರಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ಮಾಜಿ ಸೈನಿಕರ ಸಂಘ, ಅಮರ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ಯರದಲ್ಲಿ ನಗರದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಗುರುವಾರ 94ನೇ ವಾಯುಸೇನಾ ದಿನಾಚರಣೆಯನ್ನು ಆಚರಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುಡಾ ಅಧ್ಯಕ್ಷ ಅಮಲಾ ರಾಮಚಂದ್ರ ಮಾತನಾಡಿ ದೇಶಕ್ಕಾಗಿ ಸೇವೆ ಸಲ್ಲಿಸುವುದು ಜೀವನದಲ್ಲಿ ಸಿಗುವ ಅಪೂರ್ವ ಕ್ಷಣ. ಸಾಹಸ, ಧೈರ್ಯ, ದೇಶಸೇವೆಗೆ ವಾಯುಸೇನೆ ಉತ್ತಮ ಆಯ್ಕೆ. ಆಧುನಿಕ ಕಾಲದ ಯುದ್ಧದಲ್ಲಿ ವಾಯುಸೇನೆಯ ಕೊಡುಗೆ ಅತ್ಯಂತ ಮಹತ್ವದ್ದು ಎಂದರು.

Ad Widget

Ad Widget <> Ad Widget

ಶ್ರೀಪ್ರಕಾಶ್ ಕುಕ್ಕಾಜೆ ಪ್ರಧಾನ ಭಾಷಣಗೈದು ವಾಯುಪಡೆಯ ಬಗೆಗೆ ಹಾಗೂ ಸಶಸ್ತ್ರ ಪಡೆಗಳಲ್ಲಿನ ಉದ್ಯೋಗಾವಕಾಶಗಳ ಬಗೆಗೆ ಮಾಹಿತಿ ನೀಡಿದರು. ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಸಾರ್ಜೆಂಟ್ ವಸಂತ್ ವಹಿಸಿದ್ದರು. ವೇದಿಕೆಯಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮತ್ತು ಕರ್ನಲ್ ಡಿ.ಜಿ. ಭಟ್ ಉಪಸ್ಥಿತರಿದ್ದರು.



Ad Widget

ಕಾರ್ಯಕ್ರಮದಲ್ಲಿ ಅಂಬಿಕಾ ವಿದ್ಯಾಲಯದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜಿನಲ್ಲಿ ವಂದೇ ಮಾತರಂ 150ನೇ ವರ್ಷದ ಆಚರಣೆ; ವಂದೇ ಮಾತರಂ ಗೀತೆ ನಮ್ಮ ಅಸ್ಮಿತೆಯ ಗುರುತು : ರಾಜೇಶ ಪದ್ಮಾರ್

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ವಿದ್ಯಾರ್ಥಿ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ನಡೆದ ವಂದೇ ಮಾತರಂ 150ನೇ ವರ್ಷದ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ ಪದ್ಮಾರ್ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ಅ. 15: ವಂದೇ ಮಾತರಂ ಗೀತೆಯೂ ಏಕತೆಯನ್ನು ಸಾರುವುದರ ಜೊತೆಗೆ ಜನರಲ್ಲಿ ಪ್ರೇರಣೆಯನ್ನು ಮೂಡಿಸುತ್ತದೆ. ಇದರ ನಿರ್ಮಾತೃ ಬಂಕಿಮ ಚಂದ್ರ ಚಟರ್ಜಿ. ಯಾವುದೇ ಜಾತಿ, ಬೇಧವಿಲ್ಲದೆ ರೂಪಿಸಿದ ಈ ವಂದೇ ಮಾತರಂ ಗೀತೆಯು ಬ್ರಿಟಿಷರ ಆಳ್ವಿಕೆಯನ್ನು ಅಂತ್ಯಗೊಳಿಸುವ ಉದ್ದೇಶದಿಂದ ಬಂಗಾಳ ವಿಭಜನೆಯ ವಿರೋಧವಾಗಿ ವಂಗ ಭಂಗ ಚಳವಳಿಯ ಧ್ಯೇಯ ಗೀತೆಯಾಗಿ ಮೂಡಿಬಂದ ಗೀತೆಯಿದು. ಕೊಲ್ಕತ್ತಾದಿಂದ ಹೊರಟ ಹೋರಾಟದ ಗೀತೆ ವಿಶ್ವಾದ್ಯಂತ ವ್ಯಾಪಿಸಿತು ಮತ್ತು ಯುಗಾಂತರ ಸಂಘಟನೆಯ ಆರಂಭಕ್ಕೆ ಮುಂದಡಿಯಿಟ್ಟಿತು. ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಈ ಜಯಘೋಷವನ್ನು ಕೂಗಿದರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ ಪದ್ಮಾರ್ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ವಿದ್ಯಾರ್ಥಿ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ನಡೆದ ವಂದೇ ಮಾತರಂ 150ನೇ ವರ್ಷದ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಮಾತನಾಡಿ, ಸಮಾಜದ ಪ್ರತಿಯೊಂದು ಸ್ಥರಗಳಲ್ಲೂ ವಂದೇ ಮಾತರಂ ಕುರಿತು ಜಾಗೃತಿ ಮೂಡಬೇಕು. ವಂದೇ ಮಾತರಂ ಕುರಿತ ಈ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬಂದಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯನ್ನು ರಾಷ್ಟ್ರೀಯತೆಯೆಡೆಗೆ ಎಚ್ಚರಿಸುವ ಕಾರ್ಯ ಇದು ಎಂದರು.



Ad Widget

ಸಮಾರಂಭದ ಬಳಿಕ ವಿದ್ಯಾರ್ಥಿಗಳು ಒಕ್ಕೊರಲಿನಿಂದ ವಂದೇ ಮಾತರಂ ಗೀತೆಯನ್ನು ಹಾಡಿದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ಅಧ್ಯಯನ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ ಬಿ ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ವಿಶೇಷ ಅಧಿಕಾರಿ ಹಾಗೂ ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ವಂದಿಸಿ, ಪ್ರಥಮ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ದೀಕ್ಷಾ ಜೆ.ರೈ ನಿರೂಪಿಸಿದರು.

Continue Reading

ಶಿಕ್ಷಣ

Vidyamata Academy-ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ “ವಾಯ್ಸ್ ಅಂಡ್ ವಿಷನ್” ತರಬೇತಿ ಕಾರ್ಯಕ್ರಮ ಮತ್ತು ಶಾರದಾ ಪೂಜೆ

Published

on



Ad Widget

Ad Widget

Ad Widget

Ad Widget

ಸರಕಾರಿ ನೇಮಕಾತಿಗಳು, ಬ್ಯಾಂಕಿಂಗ್, ಸಶಸ್ತ್ರ ಪಡೆಗಳ ನೇಮಕಾತಿ, ಖಾಸಗಿ ಉದ್ಯೋಗ, ಕೌಶಲ್ಯ ತರಬೇತಿ ನೀಡುವ ಕರಾವಳಿಯ ಪ್ರತಿಷ್ಠಿತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ ವಾಯ್ಸ್ ಅಂಡ್ ವಿಷನ್ ಎಂಬ ಭಾಷಣ ಕಲೆ ಮತ್ತು ನಾಯಕತ್ವ ವೃದ್ಧಿಯನ್ನು ಸಂಯೋಜಿಸುವ ಕಾರ್ಯಕ್ರಮವನ್ನು ದಿನಾಂಕ: 12-10-2026 ಸೋಮವಾರದಿಂದ 14-10- 2026 ಬುಧವಾರದವರೆಗೆ ಹಮ್ಮಿಕೊಳ್ಳಲಾಗಿತ್ತು.

Ad Widget

Ad Widget

Ad Widget

Ad Widget

ಸರಕಾರಿ ನೇಮಕಾತಿಗಳು, ಬ್ಯಾಂಕಿಂಗ್, ಸಶಸ್ತ್ರ ಪಡೆಗಳ ನೇಮಕಾತಿ, ಖಾಸಗಿ ಉದ್ಯೋಗ, ಕೌಶಲ್ಯ ತರಬೇತಿ ನೀಡುವ ಕರಾವಳಿಯ ಪ್ರತಿಷ್ಠಿತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ ವಾಯ್ಸ್ ಅಂಡ್ ವಿಷನ್ ಎಂಬ ಭಾಷಣ ಕಲೆ ಮತ್ತು ನಾಯಕತ್ವ ವೃದ್ಧಿಯನ್ನು ಸಂಯೋಜಿಸುವ ಕಾರ್ಯಕ್ರಮವನ್ನು ದಿನಾಂಕ: 12-10-2026 ಸೋಮವಾರದಿಂದ 14-10- 2026 ಬುಧವಾರದವರೆಗೆ ಹಮ್ಮಿಕೊಳ್ಳಲಾಗಿತ್ತು.

Ad Widget

Ad Widget

Ad Widget alt="Ad Widget"/>

Ad Widget

ವಿದ್ಯಾರ್ಥಿಗಳ ಆಲೋಚನಾ ಶಕ್ತಿ, ಭವಿಷ್ಯದ ದೃಷ್ಟಿಕೋನ, ಮಾತುಗಾರಿಕೆಗಳನ್ನು ಹೆಣೆದು, ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿಶೇಷ ಅಂದರೆ, ವಿದ್ಯಾರ್ಥಿಗಳನ್ನು, ತರಬೇತುದಾರರನ್ನು ಮತ್ತು ಪೋಷಕರನ್ನು ಒಂದೇ ವೇದಿಕೆಯಲ್ಲಿ ತರಬೇತಿಗೆ ಒಳಪಡಿಸಲಾಗಿತ್ತು.

Ad Widget

Ad Widget <> Ad Widget

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ, ಪುತ್ತೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ನಿಹಾಲ್ ಪಿ ಶೆಟ್ಟಿಯವರು ಉದ್ಘಾಟಿಸಿ, ಮಾತನಾಡುತ್ತಾ, “ಪ್ರಸ್ತುತ ಯಾವ ಪದವಿ, ಸ್ನಾತಕೋತ್ತರ ಪದವಿ ಓದುತ್ತೇವೆ ಅನ್ನೋದು ಮುಖ್ಯ ಅಲ್ಲ, ಆಧುನಿಕ ಜಗತ್ತಿನಲ್ಲಿ ಉದ್ಯೋಗ ಕೌಶಲ್ಯತೆ ಪ್ರಮುಖ ಮಾನದಂಡವಾಗಿರುತ್ತದೆ. ವಿದ್ಯಾಮಾತಾ ಕೇವಲ ಪುಸ್ತಕದ ಓದಿಗೆ ಮಾತ್ರ ಸೀಮಿತವಾಗಿರದೆ, ಬದುಕಿನ ಅಡಿಪಾಯವನ್ನೇ ಹಾಕಿಕೊಡುತ್ತಿದೆ. ಇಂತಹ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವುದು ನಿಮ್ಮೆಲ್ಲರ ಭಾಗ್ಯ” ಎಂದು ಸಂಸ್ಥೆಗೆ ಮತ್ತು ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.



Ad Widget

ಮೂರು ದಿನದ ತರಬೇತಿಯನ್ನು ಶ್ರೀರಾಮಕುಂಜೇಶ್ವರ ಪ್ರೌಢಶಾಲೆಯ ವಿಶ್ರಾಂತ ಮುಖ್ಯ ಗುರುಗಳಾದ ಸತೀಶ್ ಭಟ್ ಬಿಳಿನೆಲೆ ಹಾಗೂ ಜೆಸಿಐ ರಾಷ್ಟ್ರೀಯ ತರಬೇತುದಾರರಾದ ಕೃಷ್ಣ ಮೋಹನ್ ರವರು ನಡೆಸಿಕೊಟ್ಟರು.

Ad Widget

Ad Widget

ಸಮಾರೋಪ ಮತ್ತು ಶಾರದಾ ಪೂಜೆ
ದಿನಾಂಕ: 12-10-2026 ಸೋಮವಾರದಂದು ಗಣಪತಿ ಹೋಮ ಹಾಗೂ ದುರ್ಗಾ ನಮಸ್ಕಾರ ಪೂಜೆ ನಡೆದು, 14-10-2026 ಬುಧವಾರದಂದು ಮಧ್ಯಾಹ್ನ ವಿದ್ಯಾರ್ಥಿಗಳಿಂದ ಭಜನೆ ನಡೆಯಿತು. ಶಾರದಾ ಪೂಜೆಯನ್ನು ಸತೀಶ್ ಭಟ್ ಹಾಗೂ ಸುಮನ್ ಸತೀಶ್ ಭಟ್ ದಂಪತಿಗಳು ನೆರವೇರಿಸಿದರು. ತಾಲೂಕು ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ ಅವರು ತರಬೇತಿ ಕಾರ್ಯಗಾರದಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ, ಮಾತನಾಡುತ್ತಾ ತಾನು ಕೂಡ ಸರಕಾರಿ ಹುದ್ದೆಯ ಆಕಾಂಕ್ಷಿಯಾಗಿ ಪ್ರಯತ್ನ ಮಾಡುವಾಗ ಇದು ನಿಮ್ಮಿಂದ ಸಾಧ್ಯವಾ? ಅಂತ ಪ್ರಶ್ನೆ ಮಾಡಿದವರು ಹೆಚ್ಚು. ನಮ್ಮ ಭಾಗದಲ್ಲಿ ಸರಕಾರಿ ಹುದ್ದೆಗಳಿಗೆ ಪ್ರಯತ್ನ ಮಾಡುವವರು ತುಂಬಾ ಕಡಿಮೆ, ಪ್ರಯತ್ನ ಮಾಡುವವರಿಗೆ ಪ್ರೋತ್ಸಾಹ ಕೊಡುವವರು ಇನ್ನೂ ಕಡಿಮೆ, ಆದರೆ ನಿರಂತರ ಪ್ರಯತ್ನದಿಂದ ನಮ್ಮ ಭಾಗದಲ್ಲೂ ಸರಕಾರಿ ಹುದ್ದೆಗೆ ಹೋಗಲು ಸಾಧ್ಯವಿದೆ ಎಂದು ವಿದ್ಯಾಮಾತ ಅಕಾಡೆಮಿಯು ಸಾಭೀತು ಮಾಡಿದೆ.

ಈ ನಿಟ್ಟಿನಲ್ಲಿ ವಿದ್ಯಾಮಾತಾ ಅಕಾಡೆಮಿಯು ಮಾಡುತ್ತಿರುವ ಎಲ್ಲಾ ಸಮಾಜಮುಖಿ ಸಾಧನಗಳು ಮತ್ತು ತರಬೇತಿಗಳು ಯಶಸ್ವಿಯಾಗಲಿ” ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪೋಷಕರೊಂದಿಗೆ ಸಂಪನ್ಮೂಲ ವ್ಯಕ್ತಿಗಳು ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಯವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈ, ತರಬೇತುದಾರರು, ಪೋಷಕರು, ವಿದ್ಯಾರ್ಥಿಗಳು, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading