ಕಾರ್ಯಕ್ರಮಗಳು
Ambika-ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್ನಲ್ಲಿ ಪಾರಂಪರಿಕ ದಿನಾಚರಣೆಯ ಸಂಭ್ರಮ; ಜ್ಞಾನವೇ ನಮ್ಮ ದೇಶದ ನಿಜವಾದ ಸಂಪತ್ತು – ಹಾರಿಕಾ ಮಂಜುನಾಥ್
ಸಾವಿರಾರು ವರ್ಷಗಳ ದಾಳಿಯ ನಂತರವೂ ಭಾರತ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳದೆ ಉಳಿದಿರುವುದು ಇಲ್ಲಿನ ಜ್ಞಾನ ರಾಶಿಯ ಕಾರಣಕ್ಕಾಗಿ. ನಮ್ಮ ಪರಂಪರೆಯು ಸಂಪತ್ತಿಗಿAತ ಜ್ಞಾನ ಮಿಗಿಲೆಂಬ ಆದರ್ಶವನ್ನು ತಲೆ ತಲಾಂತರಗಳಿಂದ ಪಸರಿಸುತ್ತಾ ಬಂದಿದೆ. ಇದನ್ನು ಮುಂದುವರೆಸುತ್ತಾ ಮುಂದಿನ ಪೀಳಿಗೆಗೆ ಜ್ಞಾನವಾರಿಧಿಯನ್ನು ಹರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ವಾಗ್ಮಿ ಹಾರಿಕಾ ಮಂಜುನಾಥ್ ಹೇಳಿದರು.
ಪುತ್ತೂರು: ಸಾವಿರಾರು ವರ್ಷಗಳ ದಾಳಿಯ ನಂತರವೂ ಭಾರತ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳದೆ ಉಳಿದಿರುವುದು ಇಲ್ಲಿನ ಜ್ಞಾನ ರಾಶಿಯ ಕಾರಣಕ್ಕಾಗಿ. ನಮ್ಮ ಪರಂಪರೆಯು ಸಂಪತ್ತಿಗಿಂತ ಜ್ಞಾನ ಮಿಗಿಲೆಂಬ ಆದರ್ಶವನ್ನು ತಲೆ ತಲಾಂತರಗಳಿಂದ ಪಸರಿಸುತ್ತಾ ಬಂದಿದೆ. ಇದನ್ನು ಮುಂದುವರೆಸುತ್ತಾ ಮುಂದಿನ ಪೀಳಿಗೆಗೆ ಜ್ಞಾನವಾರಿಧಿಯನ್ನು ಹರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ವಾಗ್ಮಿ ಹಾರಿಕಾ ಮಂಜುನಾಥ್ ಹೇಳಿದರು.
ವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಹಾಗೂ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಆಶ್ರಯದಲ್ಲಿ ಆಯೋಜಿಸಲಾದ ಪಾರಂಪರಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶನಿವಾರ ಮಾತನಾಡಿದರು.
ಎಲ್ಲಾ ಹೆತ್ತವರೂ ತಮ್ಮ ಮಕ್ಕಳು ತಮಗಿಂತ ಉತ್ತಮ ಸ್ಥಿತಿಗೆ ತಲಪಬೇಕೆಂದು ಬಯಸುತ್ತಾರೆ.
ಅದಕ್ಕಾಗಿ ತಮ್ಮ ಸರ್ವಸ್ವವನ್ನೂ ಸಮರ್ಪಿಸಿಕೊಳ್ಳುತ್ತಾರೆ. ಹಾಗಾಗಿ ಶಾಲಾ ಕಾಲೇಜುಗಳಿಗೆ ತೆರಳುವಾಗ ಕೇವಲ ನಾವಷ್ಟೇ ತೆರಳುವುದಿಲ್ಲ ಬದಲಾಗಿ ನಮ್ಮ ಹೆತ್ತವರ ಕನಸುಗಳೂ ನಮ್ಮೊಂದಿಗಿರುತ್ತವೆ ಎಂಬುದನ್ನು ಮರೆಯಬಾರದು. ನಮ್ಮೆಲ್ಲಾ ಕಷ್ಟ ಸುಖಕ್ಕೆ ನಿಸ್ವಾರ್ಥದಿಮದ ಸ್ಪಂದಿಸುವವರು ಹೆತ್ತ ತಂದೆ ತಾಯಿ ಮಾತ್ರ ಎಂಬುದನ್ನು ಸದಾ ನೆನಪಿಸಿಕೊಳ್ಳುತ್ತಿಬೇಕು ಎಂದು ಕಿವಿಮಾತು ಹೇಳಿದರು.

ಪ್ರತಿಯೊಬ್ಬನೂ ತನ್ನಲ್ಲಿ ಮೂರು ಬಗೆಗಿನ ಬಲಗಳನ್ನು ಹೆಚ್ಚಿಸುವಲ್ಲಿ ಪ್ರಯತ್ನಿಸುತ್ತಿರಬೇಕು. ಆ ಮೂರು ಬಲಗಳೆಂದರೆ ದೇಹಬಲ, ಆತ್ಮಬಲ ಹಾಗೂ ಮನೋಬಲ. ನಮ್ಮ ದೇಹವನ್ನು ದಂಡಿಸಿದಷ್ಟೂ ದೇಹ ಚುರುಕಾಗಿ ಕಾರ್ಯನಿರ್ವಹಿಸುತ್ತದೆ. ಯಾವುದನ್ನಾದರೂ ಗೆದ್ದೇನು ಎನ್ನುವ ಆತ್ಮಬಲ ಹಾಗೂ ಯಾವುದನ್ನಾದರೂ ನಿಗ್ರಹಿಸಿಯೇನು ಎನ್ನುವ ಮನೋಬಲ ನಮ್ಮೊಳಗೆ ಅಡಕವಾದಾಗ ಸಾಧನೆ ಸಾಧ್ಯವಾಗುತ್ತದೆ ಎಂದರಲ್ಲದೆ ದೊಡ್ಡದಾದ ಕನಸನ್ನು ಕಂಡು ಅದನ್ನು ನನಸಾಗಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿರಬೇಕು ಎಂದು ಅಭಿಪ್ರಾಯಪಟ್ಟರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜ ಮಾತನಾಡಿ ಪಾರಂಪರಿಕ ದಿನಾಚರಣೆಯ ನೆಲೆಯಲ್ಲಿ ಪರಂಪರೆಯಿಂದ ಸಾಗಿಬಂದ ವಸ್ತ್ರ ಧರಿಸುವುದರೊಂದಿಗೆ ಅದರ ಹಿನ್ನೆಲೆ, ಅದಕ್ಕಿರುವ ಪಾವಿತ್ರ್ಯತೆಯನ್ನು ಅರ್ಥ ಮಾಡಿಕೊಳ್ಳಬೇಕು. ಹಣೆಗೆ ಕುಂಕುಮ ಧರಿಸುವುದರ ಹಿಂದೆ ಆಧ್ಯಾತ್ಮಿಕವಾದ ಕಾರಣಗಳಿವೆ. ಹಣೆಗೆ ಹಚ್ಚುವ ಕುಂಕುಮ, ಗಂಧವೇ ಮೊದಲಾದವುಗಳು ನಮ್ಮನ್ನು ಜಾಗೃತಾವಸ್ಥೆಯಲ್ಲಿಡುವಂತೆ ಮಾಡುವ ಚೈತನ್ಯವನ್ನು ಪ್ರೇರೇಪಿಸುತ್ತವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಹಿಂದೂ ಸಮಾಜಕ್ಕಾಗಿ ದೇಶದಾದ್ಯಂತ ಸಂಚರಿಸಿ ಜಾಗೃತಿ ಮೂಡಿಸುವಂತಹ ಹಾರಿಕಾ ಮಂಜುನಾಥ್ ಅಂಥವರ ಬಗೆಗೆ ಸಮಾಜಕ್ಕೂ ಜವಾಬ್ದಾರಿ ಇರಬೇಕಾದದ್ದು ಅತ್ಯಂತ ಅಗತ್ಯ ಎಂದು ನುಡಿದರು.
ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರಾದ ಸುರೇಶ ಶೆಟ್ಟಿ, ಡಾ.ಎಚ್.ಮಾಧವ ಭಟ್, ಪ್ರಸನ್ನ ಭಟ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾಲೇಜು ವಾರ್ಷಿಕೋತ್ಸವ ಪ್ರಯುಕ್ತ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಹಾರಿಕಾ ಮಂಜುನಾಥ್ ಹಾಗೂ ಅವರ ಹೆತ್ತವರನ್ನು ಗೌರವಿಸಿ, ಸನ್ಮಾನಿಸಲಾಯಿತು.

ವಿದ್ಯಾರ್ಥಿನಿ ಪ್ರಣತಿ ಮತ್ತು ತಂಡದವರು ಪ್ರಾರ್ಥಿಸಿದರು. ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿ, ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯೆ ಸುಚಿತ್ರಾ ಪ್ರಭು ವಂದಿಸಿದರು. ಉಪನ್ಯಾಸಕಿಯರಾದ ಅಪರ್ಣಾ ಉಪಾಧ್ಯಾಯ, ಚೈತ್ರಿಕಾ ನನ್ಯ, ಜಯಂತಿ ಹೊನ್ನಮ್ಮ ಹಾಗೂ ಅಕ್ಷತಾ ಬಹುಮಾನಿತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿಗಳಾದ ಅನಘ ಶೆಟ್ಟಿ ಹಾಗೂ ಶ್ರೀವತ್ಸ ಕಾರ್ಯಕ್ರಮ ನಿರ್ವಹಿಸಿದರು.
ಅನೇಕ ಶಾಲಾ ಕಾಲೇಜುಗಳ ಪಾರಂಪರಿಕ ದಿನಾಚರಣೆಗಳಲ್ಲಿ ಭಾಗವಹಿಸಿದ್ದೇನೆ. ಆದರೆ ನಮ್ಮ ಪರಂಪರೆಯ ನಿಜವಾದ ವೇಷಭೂಷಣ ಹಾಗೂ ಸಂಸ್ಕಾರವನ್ನು ಮೊದಲಬಾರಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ನೋಡುತ್ತಿದ್ದೇನೆ ಎಂದು ಹಾರಿಕಾ ಮಂಜುನಾಥ್ ಹೇಳಿದರು. ಹಾರಿಕಾ ಮಂಜುನಾಥ್ ಅವರು ಯಾವುದೇ ಶಿಕ್ಷಣ ಪಡೆಯಬಯಸಿದರೂ ಅವರ ಮುಂದಿನ ಸಂಪೂರ್ಣ ಶಿಕ್ಷಣ ವೆಚ್ಚವನ್ನು ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಭರಿಸುವುದಾಗಿ ಅಂಬಿಕಾ ಶಿಕ್ಷಣ ಸಂಸ್ತೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಘೋಷಿಸಿದರು. ಅಂತೆಯೇ ಶಿಕ್ಷಣದ ನಂತರ ಉದ್ಯೋಗಕ್ಕಾಗಿ ಆಗಮಿಸುವುದಿದ್ದರೆ ಅಂಬಿಕಾ ಸಂಸ್ಥೆಗಳಲ್ಲಿ ಉದ್ಯೋಗದ ಭರವಸೆಯನ್ನೂ ನೀಡಿದರು.
ಕಾರ್ಯಕ್ರಮಗಳು
Mangalore-ಮಂಗಳೂರಿಗೆ ಲಗ್ಗೆ ಇಟ್ಟ ಅಲರ್ಜಿ ಪರೀಕ್ಷೆಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರಾಜ್ಯದ ಪ್ರತಿಷ್ಠಿತ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ : ಅ.19ರಂದು 11ನೇ ಶಾಖೆ ಉದ್ಘಾಟನೆ
ವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ನಿಖರ, ತ್ವರಿತ ಹಾಗೂ ವಿಶ್ವಾಸಾರ್ಹ ಸೇವೆಯ ಮೂಲಕ ರಾಜ್ಯದಲ್ಲೇ ವಿಶೇಷ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಅ. 19ರಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಎಸ್ಸೆಲ್ ಟವರ್ಸ್ನಲ್ಲಿ ಉದ್ಘಾಟನೆಗೊಳ್ಳಲಿದೆ.
ಪುತ್ತೂರು: ವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ನಿಖರ, ತ್ವರಿತ ಹಾಗೂ ವಿಶ್ವಾಸಾರ್ಹ ಸೇವೆಯ ಮೂಲಕ ರಾಜ್ಯದಲ್ಲೇ ವಿಶೇಷ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಅ. 19ರಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಎಸ್ಸೆಲ್ ಟವರ್ಸ್ನಲ್ಲಿ ಉದ್ಘಾಟನೆಗೊಳ್ಳಲಿದೆ.
ಅಂದು ಬೆಳಗ್ಗೆ 11.20ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ವ್ಯವಹಾರ, ಹಜ್ ಮತ್ತು ವಕ್ಸ್ ಸಚಿವ ಡಾ. ಯು.ಟಿ. ಖಾದರ್ ಫರೀದ್ ಅವರು ನೆರವೇರಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಸೋಮಯಾಜಿ ಎಸ್ಟೇಟ್ಸ್ ಪ್ರೈವೇಟ್ ಲಿಮಿಟೆಡ್ನ ಆಡಳಿತ ನಿರ್ದೇಶಕ ಬಿ.ಆರ್. ಸೋಮಯಾಜಿ ಹಾಗೂ ಸಾಮಾಜಿಕ ಜಾಲತಾಣದ ಪ್ರಭಾವಿ ವ್ಯಕ್ತಿ ವಿ.ಜಿ. ವಿಖ್ಯಾತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
2004ರಲ್ಲಿ ಆರಂಭವಾದ ಸೇವಾ ಪಯಣವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ ಹಾಗೂ ಸೇವಾ ಮನೋಭಾವ ಹೊಂದಿರುವ ಚೇತನ್ ಪ್ರಕಾಶ್ ಕಜೆ ಅವರು 2004ರಲ್ಲಿ ಪುತ್ತೂರಿನ ಧನ್ವಂತರಿ ಆಸ್ಪತ್ರೆಯಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯನ್ನು ಸ್ಥಾಪಿಸಿದರು.
ಆರಂಭದಿಂದಲೇ ಜನಸಾಮಾನ್ಯರಿಗೆ ನಿಖರ, ತ್ವರಿತ, ವಿಶ್ವಾಸಾರ್ಹ ಹಾಗೂ ಪಾರದರ್ಶಕ ಪರೀಕ್ಷಾ ಸೇವೆಗಳನ್ನು ಒದಗಿಸುವ ಗುರಿಯೊಂದಿಗೆ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಸಣ್ಣ ಮಟ್ಟದಲ್ಲಿ ಆರಂಭಗೊಂಡ ಪ್ರಯೋಗಾಲಯವು ಕಾಲಕ್ರಮೇಣ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ
ಮೂಲಕ ಬೆಳವಣಿಗೆ ಸಾಧಿಸಿದೆ.
2006ರಿಂದ ಸ್ವಯಂಚಾಲಿತ ಪರೀಕ್ಷಾ ವ್ಯವಸ್ಥೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಸಂಸ್ಥೆಯು, ಬಯೋಕೆಮಿಸ್ಟ್ರಿ, ಹೆಮಟಾಲಜಿ, ಮೈಕ್ರೋಬಯಾಲಜಿ, ಇಮ್ಯುನೊಅಸ್ಸೇ, ಹಾರ್ಮೋನ್ ಹಾಗೂ ಇತರ ವಿಶೇಷ ಪರೀಕ್ಷೆಗಳಿಗೆ ಸುಧಾರಿತ ಉಪಕರಣಗಳನ್ನು ಅಳವಡಿಸಿಕೊಂಡಿದೆ. ಅತ್ಯಾಧುನಿಕ ಅಲರ್ಜಿ ಪರೀಕ್ಷಾ ವ್ಯವಸ್ಥೆ ಆಸ್ಟ್ರಿಯಾದ ವಿಯೆನ್ನಾದಿಂದ ಆಮದು ಮಾಡಲಾದ ALEX Allergy Explorer ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವುದು ಸಂಸ್ಥೆಯ ಪ್ರಮುಖ ವಿಶೇಷತೆಗಳಲ್ಲಿ ಒಂದಾಗಿದೆ. ಈ ತಂತ್ರಜ್ಞಾನದ ಮೂಲಕ ವಿವಿಧ ಅಲರ್ಜಿ ಸಂಬಂಧಿತ ಅಂಶಗಳನ್ನು ಗುರುತಿಸಲು ನೆರವಾಗುವ ಪರೀಕ್ಷೆಗಳನ್ನು ನಡೆಸಲಾಗುತ್ತದೆ.
ಪ್ರಸ್ತುತ ಸುಮಾರು 23ಕ್ಕೂ ಅಧಿಕ ಅತ್ಯಾಧುನಿಕ ವೈದ್ಯಕೀಯ ಪ್ರಯೋಗಾಲಯ ಉಪಕರಣಗಳನ್ನು ಹೊಂದಿರುವ ಸಂಸ್ಥೆಯು, ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಪ್ರಯೋಗಾಲಯಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 10 ಶಾಖೆಗಳ ಮೂಲಕ ಸೇವೆ ನೀಡುತ್ತಿರುವ ಸಂಸ್ಥೆ ಇದೀಗ ಮಂಗಳೂರಿನಲ್ಲಿ 11ನೇ ಶಾಖೆಯನ್ನು ಆರಂಭಿಸುವ ಮೂಲಕ ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ.
ವಿವಿಧ ವೈದ್ಯಕೀಯ ಪರೀಕ್ಷೆಗಳ ಸೌಲಭ್ಯರಕ್ತದ ಸಾಮಾನ್ಯ ಪರೀಕ್ಷೆ (CBC), ಸಕ್ಕರೆ ಕಾಯಿಲೆ ಪರೀಕ್ಷೆ, ಥೈರಾಯ್ಡ್ ಪ್ರೊಫೈಲ್, ಲಿಪಿಡ್ ಪ್ರೊಫೈಲ್, ಮೂತ್ರ ಮತ್ತು ಮಲ ಪರೀಕ್ಷೆಗಳು ಸೇರಿದಂತೆ ವಿವಿಧ ಸಾಮಾನ್ಯ ಹಾಗೂ ವಿಶೇಷ ಪರೀಕ್ಷೆಗಳು ಇಲ್ಲಿ ಲಭ್ಯವಿವೆ. ಸಂಪೂರ್ಣ ಸ್ವಯಂಚಾಲಿತ ಪರೀಕ್ಷಾ ವ್ಯವಸ್ಥೆಗಳ ಮೂಲಕ ಗುಣಮಟ್ಟದ ರೋಗನಿರ್ಣಯ ಸೇವೆ ಒದಗಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ.
ಚೇತನ್ ಪ್ರಕಾಶ್ ಕಜೆಗೆ ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ:
ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನ ಕ್ಷೇತ್ರದಲ್ಲಿನ ಸಾಧನೆ ಹಾಗೂ ಬದ್ಧತೆಯನ್ನು ಗುರುತಿಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಚೇತನ್ ಪ್ರಕಾಶ್ ಕಜಿ ಅವರಿಗೆ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಅವಾರ್ಡ್-2026’ ನೀಡಿ ಗೌರವಿಸಲಾಗಿದೆ.ಪುತ್ತೂರಿನ ದರ್ಬೆಯ ಧನ್ವಂತರಿ ಕಾಂಪ್ಲೆಕ್ಸ್ನಲ್ಲಿರುವ ಮುಖ್ಯ ಕಚೇರಿಯನ್ನು ಹೊಂದಿರುವ ಸಂಸ್ಥೆಯು ದರ್ಬೆ, ಬೊಳುವಾರು, ನೆಹರೂ ನಗರ, ವಿಟ್ಲ, ಕೆಯ್ಯರು, ಈಶ್ವರಮಂಗಲ, ಬೆಳ್ಳಾರೆ ಹಾಗೂ ಸುಳ್ಯ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಶಾಖೆಗಳ ಮೂಲಕ ಸೇವೆ ಸಲ್ಲಿಸುತ್ತಿದೆ.ಮಂಗಳೂರಿನ ಹೊಸ ಶಾಖೆಯ ಉದ್ಘಾಟನಾ ಸಮಾರಂಭಕ್ಕೆ ಸಾರ್ವಜನಿಕರು ಹಾಗೂ ಹಿತೈಷಿಗಳು ಆಗಮಿಸುವಂತೆ ವ್ಯವಸ್ಥಾಪಕ ನಿರ್ದೇಶಕ ಚೇತನ್ ಪ್ರಕಾಶ್ ಕಜೆ ಆಹ್ವಾನಿಸಿದ್ದಾರೆ.
ಉದ್ಘಾಟನಾ ಸ್ಥಳ: ಎಸ್ಸೆಲ್ ಟವರ್ಸ್, ಬಿಎಸ್-1, ಆಕ್ಸಿಸ್ ಬ್ಯಾಂಕ್ ಕೆಳಭಾಗ, ಬಂಟ್ಸ್ ಹಾಸ್ಟೆಲ್ ವೃತ್ತ, ಮಂಗಳೂರು-575003.
ಸಂಪರ್ಕ: 9180477075
ಕಾರ್ಯಕ್ರಮಗಳು
Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಕಾರ್ಯಕ್ರಮಗಳು
‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಪುತ್ತೂರು: ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ.

ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಹ್ಯಾವೆಲ್ಸ್ ಕಂಪನಿಯ ವಿದ್ಯುತ್ ಉಪಕರಣಗಳು ಹಾಗೂ ಗೃಹ ಬಳಕೆಯ ವಿವಿಧ ಉತ್ಪನ್ನಗಳು ಮತ್ತು ಪರಿಹಾರಗಳ ಸಂಪೂರ್ಣ ಶ್ರೇಣಿಯನ್ನು ಗ್ರಾಹಕರು ವೀಕ್ಷಿಸಿ, ಮಾಹಿತಿ ಪಡೆಯಲು ಇಲ್ಲಿ ಅವಕಾಶವಿರಲಿದೆ.

1997ರಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯು ಈ ನೂತನ ಕೇಂದ್ರದ ಮೂಲಕ ಗ್ರಾಹಕರಿಗೆ ಹ್ಯಾವೆಲ್ಸ್ ಉತ್ಪನ್ನಗಳ ಪರಿಚಯ ಹಾಗೂ ಉತ್ತಮ ಖರೀದಿ ಅನುಭವ ಒದಗಿಸುವ ಉದ್ದೇಶ ಹೊಂದಿದೆ.
-
ನಿಧನ ವಾರ್ತೆ9 hours agoಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ನಿಧನ
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ
-
ಅಂತರ ರಾಜ್ಯ9 hours agoBJP minister-ಪತಿ ಎರಡು ಮದುವೆಯಾಗಿದ್ದರೆಂದು ದೂರು ದಾಖಲಿಸಿದ ಬಿಜೆಪಿ ಸಚಿವೆ..!
-
ಅಂತರ ರಾಜ್ಯ7 hours agoRamleela-ನವದೆಹಲಿ: ರಾಮಲೀಲಾದಲ್ಲಿ ಈ ಬಾರಿ ಅಸುರರ ಜತೆಗೆ ʻಜಿರಳೆʼಯೂ ದಹನ..!
-
ಅಪರಾಧ8 hours agoUdupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ
-
ಕಾರ್ಯಕ್ರಮಗಳು7 hours agoMangalore-ಮಂಗಳೂರಿಗೆ ಲಗ್ಗೆ ಇಟ್ಟ ಅಲರ್ಜಿ ಪರೀಕ್ಷೆಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರಾಜ್ಯದ ಪ್ರತಿಷ್ಠಿತ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ : ಅ.19ರಂದು 11ನೇ ಶಾಖೆ ಉದ್ಘಾಟನೆ
-
ರಾಜಕೀಯ9 hours agoSting operation case-ಸ್ಟಿಂಗ್ ಆಪರೇಷನ್ ಕೇಸ್ : ಎಸ್ಐಟಿ ಅಥವಾ ಸಿಐಡಿ? ಸಚಿವ ಸಂಪುಟದಲ್ಲಿ ಏನು ನಿರ್ಧಾರ ಆಯಿತು ?
-
ಅಂತರ ರಾಜ್ಯ8 hours agoTruecaller service-ಟೆಲಿಕಾಂ ಸಂಸ್ಥೆಗಳೇ ಒದಗಿಸಲಿವೆ ಟ್ರೂ ಕಾಲರ್ ಸೇವೆ; ಅಪರಿಚಿತ ನಂಬರ್ನಿಂದ ಕರೆ ಬಂದರೂ ಹೆಸರು ಪ್ರದರ್ಶನ ಕಡ್ಡಾಯ?



















