ಅಪರಾಧ
Queen of reels-ಚೌತಿಯ ದಿನ ಹಬ್ಬದೂಟದಲ್ಲಿ ವಿಷ ಬೆರೆಸಿದ್ದ ರೀಲ್ಸ್ ರಾಣಿ – ಸ್ಲೋ ಪಾಯ್ಸನ್ ಆರ್ಸನಿಕ್ ಟ್ರೈ ಆಕ್ಸೆಡ್ ಬಗ್ಗೆ ನಿಮಗೆಷ್ಟು ಗೊತ್ತು ?
ಅಜೆಕಾರಿನ ಇನ್‌ಸ್ಟಾಗ್ರಾಂ ರೀಲ್ಸ್ ರಾಣಿ ಪ್ರತಿಮಾ ಪತಿಗೆ ಸ್ಲೋ ಪಾಯ್ಸನ್ ನೀಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿಯ ರಾಮನ್ಸ್ ಲ್ಯಾಬ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಲ್ಯಾಬ್‌ನ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ಮೊಬೈಲ್ ಅನ್ನು ಸಹ ವಶಕ್ಕೆ ಪಡೆದಿದ್ದಾರೆ.
ಕಾರ್ಕಳ: ಅಜೆಕಾರಿನ ಇನ್‌ಸ್ಟಾಗ್ರಾಂ ರೀಲ್ಸ್ ರಾಣಿ ಪ್ರತಿಮಾ ಪತಿಗೆ ಸ್ಲೋ ಪಾಯ್ಸನ್ ನೀಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿಯ ರಾಮನ್ಸ್ ಲ್ಯಾಬ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಲ್ಯಾಬ್‌ನ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ಮೊಬೈಲ್ ಅನ್ನು ಸಹ ವಶಕ್ಕೆ ಪಡೆದಿದ್ದಾರೆ.
ಆರೋಪಿ ಪ್ರತಿಮಾ ತನ್ನ ಪತಿ ಬಾಲಕೃಷ್ಣ ಅವರಿಗೆ ಅಹಾರದಲ್ಲಿ ಸೇರಿಸಿದ್ದ ವಿಷ ಪದಾರ್ಥವು ಆರ್ಸೆನಿಕ್ ಟ್ರೈ ಆಕ್ಸೆಡ್ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮೃತರ ಮೂಳೆಗಳಲ್ಲಿ ಆರ್ಸೆನಿಕ್ ಟ್ರೈಆಕ್ಸೆ,,ಡ್ ರಾಸಾಯನಿಕ ಇರುವ ಸಾಧ್ಯತೆ ಬಗ್ಗೆ ಮೃತರ ತಂದೆಯಾದ ಸಂಜೀವ ಸಾಲಿಯಾನ್ ಅವರಲ್ಲಿ ವಿಚಾರಿಸಿ, ಅವರ ಒಪ್ಪಿಗೆಯಂತೆ ಮೃತರ ಉತ್ತರಕ್ರಿಯೆ ಬಗ್ಗೆ ತೆಗೆದಿರಿಸಿದ್ದ ಮೂಳೆಗಳ 2 ತುಂಡುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಚೌತಿ ಊಟದಲ್ಲಿ ವಿಷ ಪ್ರಾಶನ:
ಬಾಲಕೃಷ್ಣ ಅವರನ್ನು ಮುಗಿಸಲು ವ್ಯವಸ್ಥಿತ ಷಡ್ಯಂತ್ರ ಹೆಣೆದಿದ್ದ ಪ್ರತಿಮಾ ಚೌತಿಯ ದಿನ ಹಬ್ಬದ ಊಟದಲ್ಲಿ ಪತಿಗೆ ಮೊದಲು ವಿಷ ಬೆರೆಸಿ ಕೊಟ್ಟಿದ್ದಳು. ಆ ದಿನ ಅವರು ವಾಂತಿ ಮಾಡಿದ್ದು ಅನಂತರ ಸ್ವಲ್ಪ ಸ್ವಲ್ಪವೇ ವಿಷ ನೀಡಿದ್ದರಿಂದ ಅವರ ಆರೋಗ್ಯ ಬಿಗಡಾಯಿಸುತ್ತ ಸಾಗಿತ್ತು. ಅದರ ನಡುವೆ ಜ್ವರ ಕೂಡ ಬಂದಿತ್ತು.
ಖಾಲಿಯಾದ ವಿಷದ ಬಾಟಲಿಯನ್ನು ಪ್ರತಿಮಾ ಪ್ರಿಯಕರ ದಿಲೀಪ್ ಹೆಗ್ಡೆಗೆ ನೀಡಿದ್ದು, ಆತ ಕಾರ್ಕಳ ಕುಕ್ಕುಂದೂರಿನ ಅಯ್ಯಪ್ಪನಗರದ ಕುಕ್ಕುಂದೂರು- ಹಿರ್ಗಾನ ಸಂಪರ್ಕ ರಸ್ತೆಯ ಬಳಿ ಬಾಟಲಿ ಎಸೆದಿರುವುದಾಗಿ ಪೊಲೀಸರಲ್ಲಿ ಬಾಯಿ ಬಿಟ್ಟಿದ್ದ. ಆದರೆ ಅ. 27ರಂದು ಪೊಲೀಸರು ಬಾಟಲಿ ಪತ್ತೆಗಾಗಿ ಆರೋಪಿಯನ್ನು ಆ ಸ್ಥಳಕ್ಕೆ ಕರೆದೊಯ್ದು ಹುಡುಕಿದಾಗ ಅಲ್ಲಿ ಯಾವುದೇ ಬಾಟಲಿ ಪತ್ತೆಯಾಗಿಲ್ಲ.
ವಿಷದ ಬಾಟಲಿ ಸಹಿತ ಇನ್ನೂ ಕೆಲ ಸೊತ್ತುಗಳನ್ನು ವಶಕ್ಕೆ ಪಡೆಯಬೇಕಾಗಿರುವ ಕಾರಣ ಮತ್ತು ಇನ್ನಷ್ಟು ಹೆಚ್ಚಿನ ವಿಚಾರಣೆ ನಡೆಯಬೇಕಿರುವ ಕಾರಣ ಆರೋಪಿಯನ್ನು ಮತ್ತಷ್ಟು ದಿನ ಪೊಲೀಸರು ತಮ್ಮ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.
ಇನ್ನೊಂದು ಹಂತದಲ್ಲಿ ದಿಲೀಪ್‌ನನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಹಿರಿಯಡಕ ಸಬ್‌ಜೈಲಿನಲ್ಲಿರುವ ಆರೋಪಿ ಪ್ರತಿಮಾಳನ್ನು ಪೊಲೀಸರು ಕಸ್ಟಡಿಗೆ ಕೇಳುವ ಪ್ರಕ್ರಿಯೆಯನ್ನು ನಡೆಸಬಹುದು. ಅನಂತರ ಇಬ್ಬರನ್ನೂ ಒಟ್ಟಿಗೆ ಕಸ್ಟಡಿಗೆ ಕೇಳುವ ಸಾಧ್ಯತೆ ಹೆಚ್ಚಾಗಿದೆ.
ಏನಿದು ಆರ್ಸೆನಿಕ್ ಟ್ರೈ ಆಕ್ಸೆಡ್ ?
ಆರ್ಸೆನಿಕ್ ಟ್ರೈ ಆಕ್ಸೆಡ್ ರಾಸಾಯನಿಕ ಪದಾರ್ಥ ಹೆಚ್ಚು ವಿಷಕಾರಿ ಮತ್ತು ಬಹುಮುಖ ಸಂಯುಕ್ತ ವಸ್ತು ಎನ್ನಲಾಗಿದ್ದು, ಇದನ್ನು ಹೆಚ್ಚಾಗಿ ಶಾಲಾ ಕಾಲೇಜು ಗಳ ಲ್ಯಾಬ್‌ಗಳಲ್ಲಿ ಬಳಸಲಾಗುತ್ತದೆ. ಬಿಳಿ ಅಥವಾ ಹಳದಿ ಬಣ್ಣದ ಪುಡಿಯಾಗಿದ್ದು, ವಾಸನೆಯಿಲ್ಲ. ಈ ವಿಷಕಾರಿ ಪದಾರ್ಥ ನೀರು, ಎಥೆನಾಲ್ ಮತ್ತು ಇತರ ಸಾವಯವ ದ್ರಾವಕಗಳಲ್ಲಿ ಕರಗುತ್ತದೆ.
ಆರ್ಸೆನಿಕ್ ಟ್ರೈ ಆಕ್ಸೆಡ್ ಸೇವನೆಯಿಂದ ವಾಕರಿಕೆ, ಅತಿಸಾರ ಹೊಟ್ಟೆ ನೋವು, ಆಯಾಸ, ತಲೆನೋವು, ತಲೆತಿರುಗುವಿಕೆ, ದೌರ್ಬಲ್ಯ, ರಕ್ತಹೀನತೆ, ಥಂಬೋಸೈಟೋಪೆನಿಯಾ (ಕಡಿಮೆ ಪ್ಲೇಬ್ಲೆಟ್ ಎಣಿಕೆ), ಲ್ಯುಕೋಪೆನಿಯಾ (ಕಡಿಮೆ ಬಿಳಿ ರಕ್ತ ಕಣಗಳ ಸಂಖ್ಯೆ), ಪ್ಲಾಸ್ಟಿಕ್ ರಕ್ತಹೀನತೆ (ಮೂಳೆ ಮಜ್ಜೆಯ ವೈಫಲ್ಯ) ಕಾರ್ಡಿಯಾಕ್ ಆರ್ಹೆತ್ಮಿಯಾಸ್, ರಕ್ತ ಕಟ್ಟಿ ಹೃದಯ ಸ್ಥಂಭನ, ಉಸಿರಾಟದ ವೈಫಲ್ಯ, ರೋಗಗ್ರಸ್ತವಾಗುವಿಕೆಗಳು ಕೋಮಾ, ನರವೈಜ್ಞಾನಿಕ ಹಾನಿ ಹೆಪಟೊಟಾಕ್ಸಿಸಿಟಿ (ಯಕೃತ್ತಿನ ಹಾನಿ) ನೆಫ್ರಾಟಾಕ್ಸಿಸಿಟಿ (ಮೂತ್ರಪಿಂಡದ ಹಾನಿ), ಕ್ಯಾನ್ಸರ್‌ಗಳು ಕಾಡುತ್ತವೆ.
ಅಪರಾಧ
Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್‌ಐ ವಶಕ್ಕೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.
ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಡಿಆರ್‌ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್‌ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.
ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.
ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
ಅಪರಾಧ
Cyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್‌ಲೈನ್ ಆಫರ್‌ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಮಂಗಳೂರು: ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್‌ಲೈನ್ ಆಫರ್‌ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಮಂಗಳೂರು, ನ.25: ಅ.31ರಂದು ವೈದ್ಯರು ತಮ್ಮ ಮೊಬೈಲ್‌ನಲ್ಲಿ ‘INDIA STORES FOR YOU’ ಎಂಬ ಆನ್‌ಲೈನ್ ಜಾಹೀರಾತನ್ನು ಗಮನಿಸಿದ್ದರು. ಒಂದು ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆಯಾಗಿ ನೀಡುವುದಾಗಿ ಜಾಹೀರಾತಿನಲ್ಲಿ ತಿಳಿಸಲಾಗಿತ್ತು. ಇದನ್ನು ನಂಬಿದ ಅವರು 734 ರೂ. ಪಾವತಿಸಿ ಆನ್‌ಲೈನ್ ಮೂಲಕ ಟೀ ಶರ್ಟ್ ಬುಕ್ ಮಾಡಿದ್ದರು.
ಅದೇ ದಿನ ಮಧ್ಯಾಹ್ನ ಸುಮಾರು 2.30 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬರು ವೈದ್ಯರಿಗೆ ಕರೆ ಮಾಡಿ, ಟೀ ಶರ್ಟ್ ಜೊತೆಗೆ ಐ-ಫೋನ್ ಕೂಡ ರವಾನೆಯಾಗಲಿದೆ ಎಂದು ತಿಳಿಸಿದ್ದರು. ಐ-ಫೋನ್‌ಗೆ ಇನ್ಶೂರೆನ್ಸ್ ಹಣ ಪಾವತಿಸಬೇಕಿದ್ದು, ಬಳಿಕ ಆ ಹಣವನ್ನು ಅವರ ಖಾತೆಗೆ ಮರಳಿ ಜಮೆ ಮಾಡಲಾಗುತ್ತದೆ ಎಂದು ನಂಬಿಸಿದ್ದರು.
ವಂಚಕರ ಮಾತು ನಂಬಿದ ವೈದ್ಯರು, ‘Gurdit Singh Bhasin And Sons’ ಹಾಗೂ ‘Rinki Urf Gopal’ ಎಂಬ ಪೇಮೆಂಟ್ ಐಡಿಗಳಿಗೆ ಫೋನ್ ಪೇ ಮೂಲಕ ಹಂತ ಹಂತವಾಗಿ 72,640 ರೂ. ವರ್ಗಾಯಿಸಿದ್ದರು.
ಇಷ್ಟಕ್ಕೆ ನಿಲ್ಲದ ವಂಚಕರು ನ.22ರಂದು ಮತ್ತೆ ಕರೆ ಮಾಡಿ, ಇನ್ನೂ 71,906 ರೂ. ಪಾವತಿಸುವಂತೆ ಸೂಚಿಸಿದ್ದರು. ಈ ಹಣವನ್ನೂ ಬಳಿಕ ಮರಳಿ ಜಮೆ ಮಾಡುವುದಾಗಿ ಭರವಸೆ ನೀಡಿದ್ದರಿಂದ ವೈದ್ಯರು ಅದನ್ನು ವರ್ಗಾಯಿಸಿದ್ದರು. ಬಳಿಕ ಹಣವನ್ನು IMPS ಮೂಲಕ ಮರಳಿ ಕಳುಹಿಸಲು ಕಮಿಷನ್ ಶುಲ್ಕವೆಂದು ಹೇಳಿ ಮತ್ತೆ 20,856 ರೂ. ಪಾವತಿಸಿಕೊಂಡಿದ್ದಾರೆ.
ಆದರೆ, ಈವರೆಗೆ ಯಾವುದೇ ಹಣ ವೈದ್ಯರ ಖಾತೆಗೆ ಮರಳಿಲ್ಲ. ವಂಚಕರಿಗೆ ಕರೆ ಮಾಡಿದಾಗ ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ವೈದ್ಯರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.
ಅಪರಾಧ
Renukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.
ಪಟ್ಟಣಗೆರೆಯ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜನ್ ಮತ್ತು ವಿಜಯ್ ಕುಮಾರ್ ಅವರು ಈ ಹಿಂದೆ ಪೊಲೀಸರಿಗೆ ಹಾಗೂ ನ್ಯಾಯಾಲಯದಲ್ಲಿ ಘಟನೆಯ ಕುರಿತು ಮಾಹಿತಿ ನೀಡಿದ್ದರು. ಘಟನೆ ನಡೆದ ದಿನ ಇಬ್ಬರೂ ಶೆಡ್‌ನಲ್ಲಿ ಹಾಜರಿದ್ದರು ಎನ್ನಲಾಗಿದೆ.
ಆದರೆ, ಮಂಗಳವಾರ ನಡೆದ ವಿಚಾರಣೆಯ ವೇಳೆ ಇಬ್ಬರೂ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನೀಡಿದ್ದಾರೆ.
‘ನಾವು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದೆವು. ಬಳಿಕ ಮನೆಗೆ ತೆರಳುತ್ತಿದ್ದೆವು. ಅಂದು ಶೆಡ್‌ನಲ್ಲಿ ಇದ್ದರೂ ಕಾರಿನಲ್ಲಿ ಯಾರೆಲ್ಲ ಬಂದಿದ್ದರು ಎಂಬುದು ನಮಗೆ ತಿಳಿದಿಲ್ಲ. ಶೆಡ್‌ನಲ್ಲಿ ನಡೆದ ಘಟನೆಗಳನ್ನು ನಾವು ಕಣ್ಣಾರೆ ನೋಡಿಲ್ಲ’ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.
ಈಗಾಗಲೇ ಪಟ್ಟಣಗೆರೆ ಶೆಡ್‌ನ ಕಾವಲುಗಾರ ನರೇಂದ್ರ ಸಿಂಗ್ ಹಾಗೂ ಸಿಬ್ಬಂದಿ ಕಿರಣ್ ಕೂಡ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದರು.
ಧನ್ವಿರ್‌ಗೆ ನ.30ರಂದು ಸಿಸಿಬಿ ಮುಂದೆ ಹಾಜರಾಗಲು ಹೈಕೋರ್ಟ್ ಸೂಚನೆ
ಇನ್ನೊಂದೆಡೆ, ಪರಪ್ಪನ ಅಗ್ರಹಾರ ಜೈಲಿನ ವಿಡಿಯೊ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವಿರ್ ಅವರು ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.
ತಮ್ಮನ್ನು ಆರೋಪಿಯನ್ನಾಗಿ ಹೆಸರಿಸಿರುವ ಪ್ರಕರಣದಲ್ಲಿ ಬೆಂಗಳೂರಿನ ಒಂದನೇ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನವೆಂಬರ್ 18ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಧನ್ವಿರ್ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ನಡೆಸಿತು.
ವಿಚಾರಣೆ ವೇಳೆ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಅನೂಪ್ ಕುಮಾರ್ ಅವರು, ಅರ್ಜಿದಾರರ ವಿರುದ್ಧದ ವಾರಂಟ್‌ಗೆ ಹೈಕೋರ್ಟ್ ತಡೆ ನೀಡಿದ್ದರೂ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಆದ್ದರಿಂದ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಧನ್ವಿರ್‌ಗೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸುತ್ತಿದ್ದ ದೃಶ್ಯಗಳು ಬಹಿರಂಗಗೊಂಡ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೊ ಹರಿದಾಡಲು ನಟ ಧನ್ವಿರ್ ಅವರ ಮೊಬೈಲ್ ಬಳಕೆಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ತನಿಖೆಗೆ ಒಳಪಡಿಸಲಾಗಿದೆ.
-
ಸ್ಥಳೀಯ18 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ19 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಅಪರಾಧ23 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಕ್ರೀಡೆ23 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
-
ಅಂತರ ರಾಜ್ಯ19 hours agoSabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ
-
ಅಪರಾಧ18 hours agoCyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
-
ಬಿಗ್ ನ್ಯೂಸ್19 hours agoChetan Prakash-ಧನ್ವಂತರಿ ಕ್ಲಿನಿಕಲ್ ಲ್ಯಾಬೋರೆಟರಿಯ ಚೇತನ್ ಪ್ರಕಾಶ್ ಕಜೆ ಯವರಿಗೆ ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026’ ಪ್ರಶಸ್ತಿ ಪ್ರಧಾನ















