ಅಪರಾಧ
Toxic-‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಗಾಗಿ ಅಪಾರ ಪ್ರಮಾಣದ ಅರಣ್ಯ ನಾಶ : ಸೆಟ್ ನೋಡಿ ಸಚಿವ ಖಂಡ್ರೆ ಗರಂ – ಯಶ್ ಸೇರಿದಂತೆ ಹಲವರ ವಿರುದ್ದ ಗಂಭೀರ ಪ್ರಕರಣ ದಾಖಲಾಗುವ ಸಾಧ್ಯತೆ
ಯಶ್ ನಟನೆಯ ‘ಟಾಕ್ಸಿಕ್’ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಕಡಿದಿರುವ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಸ್ಥಳೀಯರಿಂದ ಬಂದ ದೂರಿನ ನಂತರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳ ಪರಿಶೀಲನೆ ನಡೆಸಿದ್ದು, ಸೂಕ್ತ ಮತ್ತು ಬಿಗಿಯಾದ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಚಿತ್ರತಂಡದ ವಿರುದ್ಧ ಅರಣ್ಯ ಅಪರಾಧ ಕೇಸು ದಾಖಲಿಸುವ ಬಗ್ಗೆ ಆಲೋಚನೆ ನಡೆಸಲಾಗುತ್ತಿದೆ.
ಬೆಂಗಳೂರು: ಯಶ್ ನಟನೆಯ ‘ಟಾಕ್ಸಿಕ್’ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಕಡಿದಿರುವ ಆರೋಪಗಳು ಕೇಳಿಬಂದಿದ್ದು, ಇದು ಸಂಚಲನ ಮೂಡಿಸಿದೆ. ಈ ಬಗ್ಗೆ ಸ್ಥಳೀಯರಿಂದ ಬಂದ ದೂರಿನ ನಂತರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳ ಪರಿಶೀಲನೆ ನಡೆಸಿದ್ದು, ಸೂಕ್ತ ಮತ್ತು ಬಿಗಿಯಾದ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಚಿತ್ರತಂಡದ ವಿರುದ್ಧ ಅರಣ್ಯ ಅಪರಾಧ ಕೇಸು ದಾಖಲಿಸುವ ಬಗ್ಗೆ ಆಲೋಚನೆ ನಡೆಸಲಾಗುತ್ತಿದೆ.
ಎಚ್.ಎಂ.ಟಿ. ಯ ಪ್ರದೇಶದಲ್ಲಿರುವ ಅರಣ್ಯ ಪ್ರದೇಶದಲ್ಲಿ ‘ಟಾಕ್ಸಿಕ್’ ಚಿತ್ರದ ಸೆಟ್ ನಿರ್ಮಿಸಲು ಅನೇಕ ಮರಗಳನ್ನು ಅಕ್ರಮವಾಗಿ ಕಡಿದು ಹಾನಿ ಮಾಡಲಾಗಿದೆ ಎಂದು ಅರಣ್ಯ ಸಚಿವರೇ ದೃಢಪಡಿಸಿದ್ದಾರೆ. ಈ ವಿಷಯ ಸಂಬಂಧ ಖಂಡ್ರೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಅವರಿಂದ ಸ್ಯಾಟಲೈಟ್ ಫೋಟೋಗಳನ್ನು ಬಳಸಿ ಪರಿಶೀಲನೆ ಮಾಡಲಾಗುತ್ತಿದ್ದು, ಚಿತ್ರೀಕರಣ ಸ್ಥಳಕ್ಕೂ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಸಚಿವರ ಈ ಆರೋಪದ ಬೆನ್ನಿಗೇ, ಚಿತ್ರತಂಡವು ತಮ್ಮ ದೃಷ್ಠಿಕೋನವನ್ನೂ ಬಿಚ್ಚಿಟ್ಟಿದೆ. “ಸೆಟ್ ಹಾಕಲು ಅನುಮತಿ ಕರಾರು ಪತ್ರಕ್ಕೆ ಸಹಿ ಹಾಕುವ ಮೊದಲು ತೆಗೆದ ಸ್ಯಾಟಲೈಟ್ ಫೋಟೋಗಳು ನಮ್ಮಲ್ಲಿಯೂ ಸಿದ್ಧವಿದೆ; 2022ರಲ್ಲಿ ತೆಗೆದ ಫೋಟೋ ಸಾಕ್ಷ್ಯವಾಗಿದೆ,” ಎಂದು ಚಿತ್ರತಂಡವು ಸ್ಪಷ್ಟನೆ ನೀಡಿದೆ. ಈ ಕುರಿತು ತನಿಖೆ ಮುಂದುವರಿದಿದೆ.
ಸಚಿವರ ಆರೋಪವೇನು?
- * ಟಾಕ್ಸಿಕ್ ಚಿತ್ರೀಕರಣದ ಸೆಟ್ ಹಾಕಲು ಅರಣ್ಯಭೂಮಿ ನಾಶ ಮಾಡಲಾಗಿದೆ
- * ಚಿತ್ರೀಕರಣಕ್ಕಾಗಿ ಅಪಾರ ಪ್ರಮಾಣದಲ್ಲಿ ಅರಣ್ಯ ಪ್ರದೇಶ ಅಕ್ರಮವಾಗಿ ಬಳಕೆ ಮಾಡಿಕೊಳ್ಳಲಾಗಿದೆ
- * 2023ರಲ್ಲಿ ಅಲ್ಲಿ ಪ್ರದೇಶ ಅರಣ್ಯ ಒಳಗೊಂಡಿತ್ತು
- * ಸೆಟ್ ಪೂರ್ವದ ಹಾಗೂ ಸೆಟ್ ಬಳಿಕ ಹಾಕಿರುವ ಸ್ಯಾಟಲೈಟ್ ಫೋಟೋ ಇದೆ
- * 2024 ರಿಂದ ಟಾಕ್ಸಿಕ್ ಚಿತ್ರೀಕರಣಕ್ಕಾಗಿ ಸೆಟ್ ಕಾರ್ಯ ಪ್ರಾರಂಭವಾದ ಬಳಿಕ ಅರಣ್ಯ ಪ್ರದೇಶ ನಾಶವಾಗಿದೆ
- * ಚಿತ್ರತಂಡದ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸುವ ಕುರಿತು ಚಿಂತನೆ
ಟಾಕ್ಸಿಕ್ ಟೀಮ್ ಹೇಳೋದೇನು?
- * ಸೆಟ್ ಹಾಕಲು ಅನುಮತಿ ಕರಾರು ಪತ್ರಕ್ಕೆ ಸಹಿ ಹಾಕೋಕೂ ಮುನ್ನ ತೆಗೆದ ಸ್ಯಾಟಲೈಟ್ ಪಿಕ್ಚರ್ ನಮ್ಮ ಬಳಿಯೂ ಇದೆ
- * ಖಾಲಿ ಇದ್ದ ಜಾಗವನ್ನೇ ಬಳಸಿಕೊಂಡು ಸೆಟ್ ನಿರ್ಮಾಣ ಮಾಡಿದ್ದೇವೆ
- * ಸೆಟ್ ಹಾಕೋದಕ್ಕೂ ಮುನ್ನ ಅಲ್ಲಿನ ಚಿತ್ರಣದ ದಾಖಲೆ ಇದೆ ಎಂದು ಹೇಳಿದೆ.
- * 2022 ರಲ್ಲೇ ದಾಖಲಾದ ಸ್ಯಾಟಲೈಟ್ ಫೋಟೋ ಸಾಕ್ಷ್ಯ ಇದೆ
- * ಯಾವುದೇ ಪರಿಸರ ನಾಶ ಮಾಡಿಲ್ಲ
ಅಂತರ ರಾಜ್ಯ
Viral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ನವದೆಹಲಿ: ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ವೈರಲ್ ವಿಡಿಯೋದಲ್ಲಿ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಶಂಖ ಊದುತ್ತಾ ಆರತಿ ಮಾಡುತ್ತಿರುವುದು ಕಂಡುಬಂದಿದೆ. ಅವರ ಪಕ್ಕದಲ್ಲಿರುವ ಸಣ್ಣ ಟೇಬಲ್ ಮೇಲೆ ದೀಪ, ದೇವರ ಫೋಟೋ, ಹೂವು ಹಾಗೂ ಇತರ ಪೂಜಾ ಸಾಮಗ್ರಿಗಳನ್ನು ಇರಿಸಲಾಗಿದೆ. ಪಂಚೆ ಧರಿಸಿ, ಹಣೆಗೆ ವಿಭೂತಿ ಹಚ್ಚಿಕೊಂಡಿರುವ ವ್ಯಕ್ತಿ ರೈಲು ಚಲಿಸುತ್ತಿರುವಾಗಲೇ ಪೂಜಾ ವಿಧಿವಿಧಾನಗಳನ್ನು ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.
ಮುಚ್ಚಿದ ಹಾಗೂ ಜನನಿಬಿಡ ರೈಲು ಬೋಗಿಯೊಳಗೆ ಬೆಂಕಿ ಹಚ್ಚಲು ಅವಕಾಶ ನೀಡಿರುವುದು ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಧಾರ್ಮಿಕ ಆಚರಣೆ ವೈಯಕ್ತಿಕ ವಿಚಾರವಾದರೂ, ಹಲವು ಪ್ರಯಾಣಿಕರಿರುವ ಬೋಗಿಯೊಳಗೆ ತೆರೆದ ಜ್ವಾಲೆಯೊಂದಿಗೆ ದೀಪ ಹಚ್ಚುವುದು ಅಗ್ನಿ ಅವಘಡಕ್ಕೆ ಕಾರಣವಾಗುವ ಅಪಾಯವಿದೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.
ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿರುವ ಭಾರತೀಯ ರೈಲ್ವೆ, ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚಿನ ಮಾಹಿತಿಯನ್ನು ಕೇಳಿದೆ. ಪ್ರಯಾಣದ ದಿನಾಂಕ, ರೈಲು ಸಂಖ್ಯೆ ಹಾಗೂ ಪಿಎನ್ಆರ್ (PNR) ಸಂಖ್ಯೆಯಂತಹ ವಿವರಗಳನ್ನು ಹಂಚಿಕೊಳ್ಳುವಂತೆ ರೈಲ್ವೆಯ ಅಧಿಕೃತ ‘ರೈಲ್ವೆ ಸೇವಾ’ ಖಾತೆಯ ಮೂಲಕ ಮನವಿ ಮಾಡಲಾಗಿದೆ.
ಸ್ಥಳೀಯ
Arrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
ಕುಂದಾಪುರ: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
2026ರ ಸೆಪ್ಟೆಂಬರ್ 14ರಂದು ಬೈಂದೂರು ತಾಲೂಕಿನ ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಅವರು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ವೇಳೆ ಜನಸಂದಣಿಯ ನಡುವೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ ತಮಿಳುನಾಡು ಮೂಲದ ವಲ್ಲಿಯಮ್ಮ, ದೇವಿ ಯಾನೆ ತಿಲೋತ್ತಮ ಹಾಗೂ ಪೊನ್ನಿ ಎಂಬ ಮೂವರು ಮಹಿಳೆಯರನ್ನು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸರು ಬಂಧಿಸಿರುವ ಮಾಹಿತಿ ಕುಂದಾಪುರ ಪೊಲೀಸರಿಗೆ ಲಭ್ಯವಾಗಿತ್ತು.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನಿರ್ದೇಶನದಂತೆ, ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕರು ನ್ಯಾಯಾಲಯದ ಅನುಮತಿ ಪಡೆದು ಮಾನಂತವಾಡಿ ಜೈಲಿನಲ್ಲಿದ್ದ ಮೂವರು ಆರೋಪಿಗಳನ್ನು ಕುಂದಾಪುರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ಬಿಗ್ ನ್ಯೂಸ್20 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಬಿಗ್ ನ್ಯೂಸ್20 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ಅಪರಾಧ23 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
-
ನಿಧನ ವಾರ್ತೆ58 minutes agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ಶಿಕ್ಷಣ24 hours agoNarendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”
-
ಸ್ಥಳೀಯ49 minutes agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ನಿಧನ ವಾರ್ತೆ38 minutes agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ30 minutes agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!















