ಉಡುಪಿ
Raghupathi Bhat-ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಆಣೆ ಪ್ರಮಾಣಕ್ಕೆ ಕರೆದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿಗಳ ಪತ್ರ ವೈರಲ್ !
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿಗಳು ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಎಸಗುವ ಮೂಲಕ 1413 ಮಂದಿ ಗ್ರಾಹಕರಿಗೆ ವಂಚಿಸಿರುವುದಾಗಿ ಮಾಜಿ ಶಾಸಕ ರಘುಪತಿ ಭಟ್ ಅವರು ಮಾಡಿರುವ ಆರೋಪ ಅಧಾರ ರಹಿತ. ನೀವು ಈ ಆರೋಪವನ್ನು ಪ್ರಮಾಣಿಕರಿಸುವುದಾದರೇ ದೇವರ ಸನ್ನಿಧಿಯಲ್ಲಿ ಪ್ರಮಾಣಕ್ಕೆ ಬನ್ನಿ ಎಂದು ಮಹಾಲಕ್ಷ್ಮೀ ಬ್ಯಾಂಕ್ ಸಿಬ್ಬಂದಿಗಳು ಭಟ್ ಅವರಿಗೆ ಸವಾಲೆಸೆದಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳು ಬರೆದಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿಗಳು ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಎಸಗುವ ಮೂಲಕ 1413 ಮಂದಿ ಗ್ರಾಹಕರಿಗೆ ವಂಚಿಸಿರುವುದಾಗಿ ಮಾಜಿ ಶಾಸಕ ರಘುಪತಿ ಭಟ್ ಅವರು ಮಾಡಿರುವ ಆರೋಪ ಅಧಾರ ರಹಿತ. ನೀವು ಈ ಆರೋಪವನ್ನು ಪ್ರಮಾಣಿಕರಿಸುವುದಾದರೇ ದೇವರ ಸನ್ನಿಧಿಯಲ್ಲಿ ಪ್ರಮಾಣಕ್ಕೆ ಬನ್ನಿ ಎಂದು ಮಹಾಲಕ್ಷ್ಮೀ ಬ್ಯಾಂಕ್ ಸಿಬ್ಬಂದಿಗಳು ಭಟ್ ಅವರಿಗೆ ಸವಾಲೆಸೆದಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳು ಬರೆದಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹಾಲಕ್ಮೀ ಕೋ. ಆಪರೇಟಿವ್ ಬ್ಯಾಂಕ್ ಲಿ. ಇದರ ಮಲ್ಪೆ ಶಾಖೆಯಲ್ಲಿ ಸುಮಾರು 1413 ಮಂದಿ ಗ್ರಾಹಕರಿಗೆ ತಲಾ ರೂ. 20 ಸಾವಿರದಂತೆ ಸಾಲ ನೀಡಿ ನಕಲಿ ದಾಖಲೆ ಸೃಷ್ಟಿಸಿ ಅದನ್ನು ತಲಾ ರೂ. 2.00 ಲಕ್ಷ ಸಾಲ ನೀಡಿದಂತೆ ದಾಖಲಿಸಿ ಒಟ್ಟು ರೂ. 28.26 ಕೋಟಿ ಮೊತ್ತ ಪಡೆದು ಅಕ್ರಮ ನಡೆಸಿ ಸದರಿ ಮೊತ್ತದ ಪಾವತಿಗೆ ಬ್ಯಾಂಕ್ ನ ಗ್ರಾಹಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ರಘುಪತಿ ಭಟ್ ಅವರು ಸಾಮಾಜಿಕ ಜಾಲತಾಣದಲ್ಲಿ ಆರೋಪ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಆರೋಪಕ್ಕೆ ಉತ್ತರವಾಗಿ ಮಹಾಲಕ್ಷ್ಮೀ ಬ್ಯಾಂಕ್ ನ ಮಲ್ಪೆ ಶಾಖೆಯ ಸಿಬ್ಬಂದಿಗಳು ಪತ್ರ ಬರೆದು ಆಣೆ ಪ್ರಮಾಣಕ್ಕೆ ಕರೆದಿದ್ದಾರೆ.

ಸಿಬ್ಬಂದಿಗಳು ಬರೆದ ಪತ್ರದಲ್ಲೆನಿದೆ ?
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ 3 ಬಾರಿ ಆಯ್ಕೆಯಾಗಿ ವಿವಿಧ ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಸಮಾಜದ ಓರ್ವ ಜವಾಬ್ದಾರಿಯುತ ವ್ಯಕ್ತಿಯಾಗಿರುವ ತಾವು ಮಹಾಲಕ್ಷ್ಮೀ ಬ್ಯಾಂಕ್ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ನಡೆದಿರುವುದಾಗಿ ತಮ್ಮ ಆಧಾರರಹಿತ ಹೇಳಿಕೆ ತೀವು ಆಘಾತ ತಂದಿದೆ.
ಇತ್ತೀಚಿನ ಕೆಲವು ದಿನಗಳಿಂದ ನಿರಂತರವಾಗಿ ಬ್ಯಾಂಕಿನ ವಿರುದ್ಧ ಹಲವಾರು ಮಂದಿ ಆಧಾರರಹಿತ ಆರೋಪಗಳನ್ನು ಮಾಡುತ್ತಾ ದಿನಪತ್ರಿಕೆ, ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ನಡೆಸುತ್ತಾ ಬ್ಯಾಂಕಿನ ಘನತೆ ಹಾಗೂ ವಿಶ್ವಾಸಾರ್ಹತೆಗೆ ಧಕ್ಕೆ ತರಲು ಯತ್ನಿಸುತ್ತಿದ್ದು ಇದಕ್ಕೆ ಪೂರಕವಾಗಿ ತಾವು ಕೂಡ ನಿನ್ನೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬ್ಯಾಂಕಿನಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಉಲ್ಲೇಖಿಸಿದ್ದೀರಿ.
ತಾವು ನಮ್ಮ ಬ್ಯಾಂಕಿನ ಓರ್ವ ಗ್ರಾಹಕರಾಗಿ ಬ್ಯಾಂಕಿನ ಕಾರ್ಯವೆ.ಖರಿ ಹಾಗೂ ಆಡಳಿತ ವ್ಯವಸ್ಥೆಯನ್ನು ಬಹಳ ಹತ್ತಿರದಿಂದ ಬಲ್ಲವರಾಗಿದ್ದು, ತಾವು ಕೂಡ ಉಡುಪಿಯ ಪರಿವಾರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಸಹಕಾರಿ ಸಂಸ್ಥೆಯ ಕಾರ್ಯ ಚಟುವಟಿಕೆಯ ಬಗ್ಗೆ ಮಾಹಿತಿ ಇದ್ದರೂ ಬ್ಯಾಂಕಿನ ವಿರುದ್ಧ ಅಪಪ್ರಚಾರ ನಿರತ ವ್ಯಕ್ತಿಗಳ ಜೊತೆಗೂಡಿ ಸ್ವಲ್ಪವೂ ವಿಚಾರ ವಿಮರ್ಶೆ ಮಾಡದೇ ಬ್ಯಾಂಕಿನ ವಿರುದ್ಧ ಸುಳ್ಳು ಆರೋಪ ಮಾಡಿರುವುದು ದುರದೃಷ್ಟಕರ.

ನಿಮ್ಮ ಈ ಹೇಳಿಕೆಯಿಂದ ಬ್ಯಾಂಕಿನ ಸಿಬ್ಬಂದಿಗಳಾದ ನಮಗೆ ತೀವು ಬೇಸರವಾಗಿದ್ದು, ಸಿಬ್ಬಂದಿಗಳ ಘನತೆಗೆ ಈ ಸುಳ್ಳು ಆರೋಪದಿಂದ ಧಕ್ಕೆಯಾಗಿದ್ದು, ತಾವು ನಮ್ಮ ಬ್ಯಾಂಕ್ ಮೇಲೆ ತಾವು ಮಾಡಿರುವ ಆರೋಪವನ್ನು ಖಡಾಖಂಡಿತವಾಗಿ ನಿರಾಕರಿಸುತ್ತಿದ್ದೇವೆ ಹಾಗೂ ಈ ಬಗ್ಗೆ ಯಾವುದೇ ಉನ್ನತ ಮಟ್ಟದ ತನಿಖೆಗೂ ಬದ್ಧರಾಗಿದ್ದೇವೆ.
ಈ ಬಗ್ಗೆ ಉಡುಪಿಯ ಆರಾಧ್ಯ ದೇವರಾದ ಉಡುಪಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಅಥಾವ ತಮ್ಮ ಊರಿನ ತಾವೇ ಮೊಕ್ತೆಸರರಾಗಿರುವ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿಯೂ ಪ್ರಮಾಣ ಮಾಡಲು ಸಿದ್ಧರಿದ್ದು, ತಾವು ತಮ್ಮ ಆರೋಪವನ್ನು ಪ್ರಮಾಣಿಕರಿಸಲು ಬದ್ದರಿದ್ದಲ್ಲಿ ನಿಮ್ಮ ಕುಟುಂಬ ಸದಸ್ಯರೊಂದಿಗೆ ನಮ್ಮೊಂದಿಗೆ ಭಾಗವಹಿಸಿ ಆ ಮೂಲಕ ಸಾರ್ವಜನಿಕರ ಮುಂದೆ ಸತ್ಯಾಸತ್ಯತೆ ಸಾಬೀತು ಮಾಡಿ ಎಂದು ವಿನಂತಿಸಿಕೊಂಡಿದ್ದಾರೆ.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಉಡುಪಿ
H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.
ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.
ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.
-
ಬಿಗ್ ನ್ಯೂಸ್21 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ23 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ6 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ5 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ5 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ5 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ5 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಸಿನೆಮಾ4 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು















