Connect with us

ದಕ್ಷಿಣ ಕನ್ನಡ

ಇಬ್ಬರು ನಟೋರಿಯಸ್‌ ಕಳ್ಳರನ್ನು ಬಂಧಿಸಿದ ವಿಟ್ಲ ಪೊಲೀಸರು

Published

on



Ad Widget

Ad Widget

Ad Widget

Ad Widget

ಆರೋಪಿಗಳ ಬಳಿಯಿಂದ  1.35 ಲಕ್ಷ ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು, ಕಳ್ಳತನಕ್ಕೆ ಉಪಯೋಗಿಸಿದ ಅಟೊ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಸ್ವಾದೀನಪಡಿಸಿಕೊಂಡ ಸೊತ್ತುಗಳು 2.83 ಲಕ್ಷ ಮೌಲ್ಯದ್ದೆಂದು ಅಂದಾಜಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ಮನೆ, ಶಾಲೆ, ಅಂಗನವಾಡಿ ಕಳ್ಳತನದಲ್ಲಿ ಭಾಗಿಯಾದ ಕಳ್ಳರಿಬ್ಬರನ್ನು ವಿಟ್ಲ ಪೊಲೀಸ್ ಠಾಣೆಯ ಅಪರಾದ ತಂಡ ಮಾಣಿ ಜಂಕ್ಷನ್ ನಲ್ಲಿ ಬಂಧಿಸಿ, 2.85 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಉಳ್ಳಾಲ ಬೋಳುಯಾರು ಧರ್ಮನಗರ ನಿವಾಸಿ ಮಹಮ್ಮದ್ ರಿಯಾಜ್ ಹಸನಬ್ಬ ಯಾನೆ ರಿಯಾಜ್ (38) ಹಳೆಕೋಟೆ ನಿವಾಸಿ ಮೊಹಮ್ಮದ್ ಇಂತಿಯಾಜ್ (38) ಬಂಧಿತರು.

Ad Widget

Ad Widget

Ad Widget alt="Ad Widget"/>

Ad Widget

ವಿಚಾರಣೆ ಸಂದರ್ಭದಲ್ಲಿ ವಿಟ್ಲ ಠಾಣೆ ವ್ಯಾಪ್ತಿಯ ಮಿತ್ತೂರು, ಕೊಡಾಜೆ ಮನೆ ಕಳ್ಳತನದ ಎರಡು ಪ್ರಕರಣ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿ ಕಳವು ಪ್ರಕರಣದಲ್ಲಿ ಬಾಗಿಯಾಗುವುದಾಗಿ ತಿಳಿಸಿದ್ದಾರೆ. ಮಹಮ್ಮದ್ ರಿಯಾಜ್ ಹಸನಬ್ಬ ವಿರುದ್ದ ಕೇರಳದ ಕುಂಬಳೆ ಹಾಗೂ ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿರುತ್ತವೆ.

Ad Widget

Ad Widget <> Ad Widget

 ಆರೋಪಿಗಳ ಬಳಿಯಿಂದ  1.35 ಲಕ್ಷ ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು, ಕಳ್ಳತನಕ್ಕೆ ಉಪಯೋಗಿಸಿದ ಅಟೊ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಸ್ವಾದೀನಪಡಿಸಿಕೊಂಡ ಸೊತ್ತುಗಳು 2.83 ಲಕ್ಷ ಮೌಲ್ಯದ್ದೆಂದು ಅಂದಾಜಿಸಲಾಗಿದೆ.



Ad Widget

ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ ಡಿ. ಎಸ್. ಮಾರ್ಗದರ್ಶನದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಸ್. ವಿಜಯ ಪ್ರಸಾದ್ ನಿರ್ದೇಶನದಂತೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ನಾಗರಾಜ್ ಹೆಚ್ ನೇತ್ರತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ರತ್ನಕುಮಾರ್, ಕೌಶಿಕ್ ಸಿಬ್ಬಂಧಿಗಳಾದ ಉದಯ ರೈ, ರಾಧಾಕೃಷ್ಣ, ರಕ್ಷೀತ್ ರೈ, ಶ್ರೀಧರ ಸಿ ಎಸ್, ಕೃಷ್ಣ ನಾಯ್ಕ್, ಗದಿಗೆಪ್ಪ ಕಲ್ಲೂರ, ಶಂಕರ ಶಂಶಿ, ಮನೋಜ್, ಸತೀಶ್, ಗಣಕಯಂತ್ರ ವಿಭಾಗದ ಸಂಪತ್, ದಿವಾಕರ್ ಭಾಗವಹಿಸಿದ್ದಾರೆ.

Click to comment

Leave a Reply

ಬಿಗ್ ನ್ಯೂಸ್

AYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ

Published

on



Ad Widget

Ad Widget

Ad Widget

Ad Widget

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Ad Widget

Ad Widget

Ad Widget

Ad Widget

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಡಾ. ಪ್ರದೀಪ್ ನಾವೂರು ಅವರು ವೈದ್ಯಕೀಯ ಸೇವೆಯ ಜೊತೆಗೆ ಸಮಾಜದ ಆರೋಗ್ಯ ಮತ್ತು ಜಾಗೃತಿಯ ದೃಷ್ಟಿಯಿಂದ ಹಲವಾರು ಉಪನ್ಯಾಸ ಹಾಗೂ ಆರೋಗ್ಯ ಸಂಬಂಧಿತ ಕಾರ್ಯ ಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ದೇವಸ್ಥಾನ,ದೈವಸ್ಥಾನ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಮುಂಚೂಣಿ ವ್ಯಕ್ತಿಯಾಗಿದ್ದಾರೆ.

Ad Widget

Ad Widget <> Ad Widget

ಇಂತಹ ಸಮಾಜಮುಖಿ ಹಾಗೂ ಸೇವಾಮನೋಭಾವದ ವ್ಯಕ್ತಿಯ ಆರೋಗ್ಯ ಕ್ಲಿನಿಕ್ ಗೆ ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಬೆಂಕಿ ಹಚ್ಚಿರುವುದು ಅತ್ಯಂತ ಕಳವಳಕಾರಿ ಹಾಗೂ ಖಂಡನೀಯ ಸಂಗತಿಯಾಗಿದೆ. ವೈದ್ಯರು ಸಮಾಜದ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದು ಅವರ ಸೇವಾಕೇಂದ್ರದ ಮೇಲೆಯೇ ಇಂತಹ ಕೃತ್ಯಕ್ಕೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.



Ad Widget

ಡಾ. ಪ್ರದೀಪ್ ನಾವೂರು ಅವರು ಕೇವಲ ವೈದ್ಯರಲ್ಲ, ಸಮಾಜದ ಪ್ರತಿಯೊಬ್ಬರಿಗೂ ಅಗತ್ಯವಿರುವ ಒಬ್ಬ ಉತ್ತಮ ವ್ಯಕ್ತಿತ್ವದ ಸಮಾಜಮುಖಿ ವ್ಯಕ್ತಿ. ಅವರ ಆರೋಗ್ಯ ಸೇವೆ ಹಾಗೂ ಸಾಮಾಜಿಕ ಕಾಳಜಿ ಶ್ಲಾಘನೀಯವಾಗಿದೆ. ಇಂತಹ ವ್ಯಕ್ತಿಯ ಕ್ಲಿನಿಕ್ ಗೆ ಬೆಂಕಿ ಹಚ್ಚಿರುವುದು ಅತ್ಯಂತ ಖಂಡನೀಯ.

Ad Widget

Ad Widget

ಇದು ಸಮಾಜ ಘಾತುಕ ಕೆಲಸ .ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ಕೃತ್ಯದ ಹಿಂದಿರುವ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ಅಧ್ಯಕ್ಷ ಡಾ. ಹರಿಕೃಷ್ಣ ಪಾಣಾಜೆ ಒತ್ತಾಯಿಸಿದ್ದಾರೆ.

Ad Widget
Continue Reading

ರಾಜಕೀಯ

Sanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅ.8ರಂದು ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕುಗಳ ರೈತರು ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಸುಮಾರು ₹840 ಕೋಟಿ ಪರಿಹಾರ ಬರಬೇಕಿದ್ದು, ವಾಸ್ತವವಾಗಿ ರೈತರಿಗೆ ಎಷ್ಟು ಮೊತ್ತ ವಿತರಿಸಲಾಗಿದೆ ಎಂಬುದನ್ನು ಸರಕಾರ ಹಾಗೂ ವಿಮಾ ಕಂಪನಿಗಳು ಅಂಕಿ-ಅಂಶಗಳ ಸಹಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

Ad Widget

Ad Widget <> Ad Widget

ರೈತರು ಪಾವತಿಸಿದ ವಿಮಾ ಮೊತ್ತಕ್ಕೆ ಅನುಗುಣವಾಗಿ ಎಷ್ಟು ಪರಿಹಾರ ನೀಡಲಾಗಿದೆ? ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಾಗಲು ಕಾರಣವೇನು? ಯಾವ ವೈಜ್ಞಾನಿಕ ಮಾನದಂಡದ ಆಧಾರದಲ್ಲಿ ಪರಿಹಾರ ನಿಗದಿಪಡಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.



Ad Widget

ಟರ್ಮ್‌ಶೀಟ್ ಬದಲಾದ ಬಳಿಕ ಸಮಸ್ಯೆ

Ad Widget

Ad Widget

2023-24ನೇ ಸಾಲಿನವರೆಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಪರಿಹಾರ ವಿತರಣೆಯಲ್ಲಿ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಟರ್ಮ್‌ಶೀಟ್ ಬದಲಾವಣೆಯಾದ ನಂತರ ಸಮಸ್ಯೆಗಳು ಆರಂಭವಾಗಿವೆ ಎಂದು ಮಠಂದೂರು ಆರೋಪಿಸಿದರು.

ಒಂದೇ ತಾಲೂಕು, ಹೋಬಳಿ ಹಾಗೂ ಒಂದೇ ರೀತಿಯ ಭೌಗೋಳಿಕ ಪರಿಸ್ಥಿತಿಯಲ್ಲಿರುವ ಗ್ರಾಮಗಳ ನಡುವೆ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ. ಕೆಲವೆಡೆ ಕೇವಲ 100 ಮೀಟರ್ ಅಂತರದಲ್ಲಿರುವ ರೈತರಿಗೂ ₹10 ಸಾವಿರದಿಂದ ₹15 ಸಾವಿರದವರೆಗೆ ವ್ಯತ್ಯಾಸವಾಗುತ್ತಿದೆ. ಪಂಚಾಯಿತಿಯಿಂದ ಪಂಚಾಯಿತಿಗೆ, ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಬದಲಾಗುತ್ತಿರುವುದರ ಹಿಂದಿನ ಕಾರಣವನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರವೂ ವಿಮಾ ಮೊತ್ತದ ಶೇ.20ರಷ್ಟು ಪಾಲು ಪಾವತಿಸುತ್ತಿರುವುದರಿಂದ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ರಾಜ್ಯ ಸರಕಾರವೇ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದರು.

274 ಗ್ರಾಮ ಪಂಚಾಯಿತಿಗಳ ಪೈಕಿ 231 ಮಳೆ ಮಾಪಕ ಮಾತ್ರ ಕಾರ್ಯನಿರ್ವಹಣೆ

ಬಿಜೆಪಿ ಸತ್ಯಶೋಧನ ಸಮಿತಿ ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ನಡೆಸಿದ ಅಧ್ಯಯನದಲ್ಲಿ ಹಲವು ಕಡೆ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಬಳಿಕ ಕೆಲವು ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾಮ ಪಂಚಾಯಿತಿಗಳಲ್ಲಿ ಮಳೆ ಮಾಪಕಗಳನ್ನು ಅಳವಡಿಸಲಾಗಿದ್ದು, 231 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕಗಳಿವೆ. ಮಳೆ ಹಾಗೂ ಉಷ್ಣಾಂಶದ ದಾಖಲೆಗಳ ಆಧಾರದಲ್ಲಿ ಟರ್ಮ್‌ಶೀಟ್ ಪ್ರಕಾರ ವಿಮಾ ಪರಿಹಾರ ನಿರ್ಧರಿಸಲಾಗುತ್ತದೆ ಎಂದು ವಿವರಿಸಿದರು.

‘ಗ್ರಾಮಕ್ಕೊಂದು ಮಾನದಂಡ ಸಲ್ಲ’

ತಾಲೂಕಿನ ಎಲ್ಲ ಗ್ರಾಮಗಳ ರೈತರಿಗೆ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಲು ಅನ್ವಯಿಸುವ ಮಾನದಂಡವಿದ್ದರೆ, ಅದೇ ಮಾನದಂಡವನ್ನು ಇತರ ಗ್ರಾಮಗಳಿಗೂ ಅನ್ವಯಿಸಬೇಕು. ಪಂಚಾಯಿತಿ, ಹೋಬಳಿ ಹಾಗೂ ಗ್ರಾಮವಾರು ಪ್ರತ್ಯೇಕ ಮಾನದಂಡಗಳಿಂದ ಪರಿಹಾರ ನೀಡಿದರೆ ರೈತರು ಬೆಳೆ ವಿಮಾ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಮಠಂದೂರು ಹೇಳಿದರು.

2025-26ನೇ ಸಾಲಿನಲ್ಲಿ ರೈತರು ಶೇ.5, ರಾಜ್ಯ ಸರಕಾರ ಶೇ.20 ಹಾಗೂ ಕೇಂದ್ರ ಸರಕಾರ ಶೇ.10ರಷ್ಟು ಪಾಲನ್ನು ಪಾವತಿಸಿವೆ. ಜಿಲ್ಲೆಯ ರೈತರಿಂದ ₹42.03 ಕೋಟಿ, ಕೇಂದ್ರದಿಂದ ₹84.07 ಕೋಟಿ ಹಾಗೂ ರಾಜ್ಯದಿಂದ ₹168.14 ಕೋಟಿ ಸೇರಿದಂತೆ ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ ಎಂದರು.

ರೈತರು ಪ್ರತಿ ಹೆಕ್ಟೇರ್ ಅಡಿಕೆಗೆ ₹6,475 ಹಾಗೂ ಕಾಳುಮೆಣಸಿಗೆ ₹2,377ರಂತೆ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹45 ಸಾವಿರ ವಿಮಾ ಮೊತ್ತ ಪಾವತಿಸಿದ್ದರೂ ಕೆಲ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹10,800 ಮಾತ್ರ ಪರಿಹಾರ ದೊರೆತಿದೆ. ಅದೇ ಪ್ರದೇಶದ ಕೆಲವು ರೈತರ ಖಾತೆಗೆ ₹51,824 ಪರಿಹಾರ ಜಮೆಯಾಗಿರುವುದಾಗಿ ಅವರು ತಿಳಿಸಿದರು.

‘ರಾಜ್ಯ ಸರಕಾರ ರೈತ ವಿರೋಧಿ’

ಅಡಿಕೆ ಬೆಳೆಗಾರರು ವಿಮಾ ಮೊತ್ತ ಪಾವತಿಸಿದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಮತ್ತೊಂದೆಡೆ ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಹಿಂದಿನ ಅವಧಿಯಲ್ಲಿ ರೈತರಿಗೆ ದೊರೆಯುತ್ತಿದ್ದ ಕಿಸಾನ್ ಸನ್ಮಾನ್ ಹಾಗೂ ವಿದ್ಯಾನಿಧಿ ಯೋಜನೆಗಳನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ರೈತರಿಗೆ ಒಂದಲ್ಲೊಂದು ರೀತಿಯಲ್ಲಿ ತೊಂದರೆ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಠಂದೂರು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ರೈತ ಮೋರ್ಚಾ ಅಧ್ಯಕ್ಷ ಶರತ್ನಂದ ಬೈಪಾಡಿತ್ತಾಯ ಉಪಸ್ಥಿತರಿದ್ದರು.

Ad Widget
Continue Reading

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading