ಕ್ರೀಡೆ
Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-2024; “ಅವಕಾಶಗಳ ಸದುಪಯೋಗ ಸದೃಢ ಜೀವನಕ್ಕೆ ಅಡಿಪಾಯ”- ನವೀನ್ ಭಂಡಾರಿ
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಕಡಬ ಹಾಗೂ ಪುತ್ತೂರು ತಾಲೂಕಿನ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಮಾತನಾಡಿದರು.
“ಸ್ವಾಮಿ ವಿವೇಕಾನಂದರ ತತ್ವ-ಆದರ್ಶಗಳ ಅಡಿಪಾಯದಲ್ಲಿ ಮುನ್ನಡೆಯುತ್ತಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಅವಕಾಶಗಳಿಗೆ ಯಾವುದೇ ಬರವಿಲ್ಲ. ವಿದ್ಯಾರ್ಥಿಗಳು ತಮ್ಮ ಇಚ್ಚಾಶಕ್ತಿ, ಕ್ರೀಡಾಶಕ್ತಿ ಹಾಗೂ ವಿದ್ಯಾಶಕ್ತಿಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ, ಸದೃಢ ಆರೋಗ್ಯದ ಜತೆಗೆ ಭವಿಷ್ಯದ ಉತ್ತುಂಗಕ್ಕೆ ಏರಲು ಸಾಧ್ಯವಿದೆ.” ಎರಡು ವರ್ಷಗಳ ವಿದ್ಯಾರ್ಥಿ ಜೀವನದ ವಿವಿಧ ಒತ್ತಡಗಳನ್ನು ಬದಿಗಿರಿಸಿಕೊಂಡು, ತಮ್ಮೊಳಗಿನ ಕ್ರೀಡಾಪಟುವನ್ನು ಗುರುತಿಸಿ, ಇಂದಿನ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಬೇಕೆಂದು ಕಡಬ ಹಾಗೂ ಪುತ್ತೂರು ತಾಲೂಕಿನ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಇವರು ಕರೆ ನೀಡಿದರು. ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡಾಕೂಟದ ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ, ರಾಷ್ಟ್ರಮಟ್ಟದ ಕ್ರೀಡಾಪಟು ಹಾಗೂ ರಾಮಕೃಷ್ಣ ಪ್ರೌಢಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕರಾದ ಅಜಿತ್ ಇವರು ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿಯ ಸದಸ್ಯರಾದ ಇಂದಿರಾ ಬಿ.ಕೆ ಇವರು ವಹಿಸಿಕೊಂಡು “ಪ್ರತಿಯೊಬ್ಬ ವಿದ್ಯಾರ್ಥಿಯು ಒಂದಲ್ಲ ಒಂದು ಕನಸನ್ನು ಹೊತ್ತಿರುತ್ತಾನೆ. ತಾನೊಬ್ಬ ಉತ್ತಮ ಕ್ರೀಡಾಪಟುವಾಗಬೇಕೆನ್ನುವ ಕನಸು ಒಂದೆಡೆಯಾದರೆ, ಉತ್ತಮ ಉದ್ಯೋಗದ ಆಕಾಂಕ್ಷೆ ಇನ್ನೊಂದೆಡೆ. ಇವೆಲ್ಲವುಗಳಿಗೆ ಬೆನ್ನೆಲುಬಾಗಿ ನಿಂತು, ಕ್ರೀಡಾ ಕ್ಷೇತ್ರ, ಸಾಂಸ್ಕೃತಿಕ ಕ್ಷೇತ್ರ ಹಾಗೂ ಶಿಕ್ಷಣ ಕ್ಷೇತ್ರ ಇವುಗಳಲ್ಲಿ ತಮ್ಮ ಮಕ್ಕಳು ಸಾಧನೆ ಮಾಡಬೇಕೆನ್ನುವ ಹೆತ್ತವರ ಹಂಬಲಕ್ಕೆ ಬೆಂಬಲವಾಗಿ ವಿವೇಕಾನಂದ ವಿದ್ಯಾಸಂಸ್ಥೆ ಇಂದು ಕಾರ್ಯನಿರ್ವಹಿಸುತ್ತಿದೆ.

ಇಂತಹ ವಿದ್ಯಾಸಂಸ್ಥೆಗೆ ದಾಖಲುಗೊಂಡ ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ನನಸಾಗಿಸಲು ದೊರೆಯುವ ಎಲ್ಲಾ ಅವಕಾಶಗಳನ್ನು ಗುರುತಿಸಿ, ಅದರ ಸದುಪಯೋಗವನ್ನು ಪಡೆಯಬೇಕು. ಕ್ರೀಡೆಯಲ್ಲಿ ಸೋಲು,ಗೆಲುವು ಸಾಮಾನ್ಯ. ಗೆಲುವು ಸಾಧಿಸಿದ ವಿದ್ಯಾರ್ಥಿ ಉತ್ತಮ ನಾಯಕನಾದರೆ, ಸೋತವನು ಉತ್ತಮ ಮಾರ್ಗದರ್ಶಕನಾಗಬಲ್ಲ. ಆದುದರಿಂದ ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕು” ಎಂದು ಆಶಿಸಿದರು.

ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಕ್ರೀಡಾಸಮವಸ್ತ್ರವನ್ನು ಧರಿಸಿದ ಕಾಲೇಜಿನ ವಿದ್ಯಾರ್ಥಿಗಳು ಶಿಸ್ತುಬದ್ಧವಾದ ಪಥಸಂಚಲನವನ್ನು ನಡೆಸಿದರು. ಆಯಾ ತರಗತಿ ಪ್ರತಿನಿಧಿಗಳು ಮುಖ್ಯ ಅತಿಥಿಗಳಿಗೆ ತಮ್ಮ ತರಗತಿ ಹಾಗೂ ತರಗತಿಯ ಕ್ರೀಡಾ ಸಾಧಕರನ್ನು ಪರಿಚಯಿಸಿದರು. ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿದ ಕಾಲೇಜಿನ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಬೆಳಗಿಸಿ ಮುಖ್ಯ ಅತಿಥಿಗಳಿಗೆ ಹಸ್ತಾಂತರಿಸಿದರು. ಬಳಿಕ ರಾಷ್ಟ್ರಮಟ್ಟದ ಕಬಡ್ಡಿ, ಖೋ-ಖೋ , ವಾಲಿಬಾಲ್, ಅಥ್ಲೆಟಿಕ್ಸ್ ಹಾಗೂ ಕರಾಟೆಯಲ್ಲಿ ಕಾಲೇಜನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಕಾಲೇಜು ಆಡಳಿತಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ. ಇವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ಅವರ ಮಾರ್ಗದರ್ಶನದೊಂದಿಗೆ ಕ್ರೀಡಾಪ್ರತಿನಿಧಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು. ಯತೀಶ್ ಕುಮಾರ್ ಹಾಗೂ ಡಾ.ಜ್ಯೋತಿ ಇವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ, ಉಪಪ್ರಾಂಶುಪಾಲರಾದ ದೇವಿಚರಣ್ ರೈ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಕ್ರೀಡಾ ಜತೆ ಕಾರ್ಯದರ್ಶಿಯಾದ ತ್ರಿಷಾ ಸ್ವಾಗತಿಸಿ, ಕ್ರೀಡಾ ಕಾರ್ಯದರ್ಶಿಯಾದ ಕೀರ್ತನ್ ಎಸ್. ಕೆ. ವಂದಿಸಿದರು. ಉಪನ್ಯಾಸಕರಾದ ಪಿ. ಕೆ. ಪರಮೇಶ್ವರ ಶರ್ಮ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.
ಕ್ರೀಡೆ
Vaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್‌ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
ಭಾರತದ ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಂಗಳವಾರ ದೋಹಾದಲ್ಲಿ ನಡೆದ ‘ಎಸಿಸಿ ಪುರುಷರ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026’ ಟೂರ್ನಿಯ ಯುಎಇ ವಿರುದ್ಧದ ಪಂದ್ಯದಲ್ಲಿ ಕೇವಲ 52 ಎಸೆತಗಳಲ್ಲಿ ದ್ವಿಶತಕ ಪೂರೈಸುವ ಮೂಲಕ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ಅತಿ ವೇಗದ ದ್ವಿಶತಕದ ವಿಶ್ವದಾಖಲೆ ನಿರ್ಮಿಸಿದ್ದಾರೆ.
ದೋಹಾ: ಭಾರತದ ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಂಗಳವಾರ ದೋಹಾದಲ್ಲಿ ನಡೆದ ‘ಎಸಿಸಿ ಪುರುಷರ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026’ ಟೂರ್ನಿಯ ಯುಎಇ ವಿರುದ್ಧದ ಪಂದ್ಯದಲ್ಲಿ ಕೇವಲ 52 ಎಸೆತಗಳಲ್ಲಿ ದ್ವಿಶತಕ ಪೂರೈಸುವ ಮೂಲಕ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ಅತಿ ವೇಗದ ದ್ವಿಶತಕದ ವಿಶ್ವದಾಖಲೆ ನಿರ್ಮಿಸಿದ್ದಾರೆ.
28 ಸಿಕ್ಸರ್, 7 ಬೌಂಡರಿಗಳೊಂದಿಗೆ 204 ರನ್..!
ಯುಎಇ ನಾಯಕ ಬಾಸಿಲ್ ಹಮೀದ್ ಎಸೆತವನ್ನು ಸಿಕ್ಸರ್‌ಗೆ ಅಟ್ಟುವ ಮೂಲಕ ವೈಭವ್ ತಮ್ಮ ಐತಿಹಾಸಿಕ ದ್ವಿಶತಕ ಪೂರೈಸಿದರು. ಆದರೆ, ದ್ವಿಶತಕದ ಸಂಭ್ರಮದ ಬೆನ್ನಲ್ಲೇ ಮುಂದಿನ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಕೇವಲ 53 ಎಸೆತಗಳನ್ನು ಎದುರಿಸಿದ ಅವರು 28 ಸಿಕ್ಸರ್ ಹಾಗೂ 7 ಬೌಂಡರಿಗಳ ನೆರವಿನಿಂದ 204 ರನ್ ಸಿಡಿಸಿದರು.
2024ರಲ್ಲಿ ನ್ಯೂಜಿಲೆಂಡ್‌ನ ಚಾಡ್ ಬೋವ್ಸ್ 103 ಎಸೆತಗಳಲ್ಲಿ ದ್ವಿಶತಕ ಬಾರಿಸಿ ನಿರ್ಮಿಸಿದ್ದ ದಾಖಲೆಯನ್ನು ವೈಭವ್ ಇದೀಗ ಹಿಂದಿಕ್ಕಿದ್ದಾರೆ.
ಅತಿ ವೇಗದ ಶತಕದ ದಾಖಲೆಯೂ ವೈಭವ್ ಹೆಸರಿಗೆ
ದ್ವಿಶತಕದ ಜೊತೆಗೆ ವೈಭವ್ ಮತ್ತೊಂದು ವಿಶ್ವದಾಖಲೆಯನ್ನೂ ತಮ್ಮದಾಗಿಸಿಕೊಂಡಿದ್ದಾರೆ. ಕೇವಲ 28 ಎಸೆತಗಳಲ್ಲಿ ಶತಕ ಪೂರೈಸಿದ ಅವರು, ಲಿಸ್ಟ್-ಎ ಕ್ರಿಕೆಟ್‌ನ ಅತಿ ವೇಗದ ಶತಕದ ದಾಖಲೆ ನಿರ್ಮಿಸಿದ್ದಾರೆ.
ಇದಕ್ಕೂ ಮೊದಲು ಆಸ್ಟ್ರೇಲಿಯಾದ ಜೇಕ್ ಫ್ರೇಸರ್-ಮೆಕ್‌ಗುರ್ಕ್ 29 ಎಸೆತಗಳಲ್ಲಿ ಹಾಗೂ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ 31 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದೀಗ ಈ ಇಬ್ಬರ ದಾಖಲೆಗಳನ್ನು ವೈಭವ್ ಮುರಿದಿದ್ದಾರೆ.
ಹರ್‌ಪ್ರೀತ್ ಭಾಟಿಯಾ ಶತಕ ವ್ಯರ್ಥ
ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಯುಎಇ ತಂಡ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ಭಾರತದ ವೇಗಿಗಳಾದ ಹರ್ಷಿತ್ ರಾಣಾ ಮತ್ತು ಅರ್ಷದ್ ಖಾನ್ ದಾಳಿಗೆ ತತ್ತರಿಸಿದ ಯುಎಇ 20 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡಿತು.
ಈ ಹಂತದಲ್ಲಿ ತಂಡಕ್ಕೆ ಆಸರೆಯಾದ ಭಾರತದ ಮಾಜಿ ದೇಶೀಯ ಕ್ರಿಕೆಟಿಗ ಹರ್‌ಪ್ರೀತ್ ಸಿಂಗ್ ಭಾಟಿಯಾ 144 ಎಸೆತಗಳಲ್ಲಿ 130 ರನ್ ಸಿಡಿಸಿ ಗಮನ ಸೆಳೆದರು. ಅವರಿಗೆ ಮುಹಮ್ಮದ್ ಶಹದಾದ್ (28) ಹಾಗೂ ಇಥಾನ್ ಡಿಸೋಜಾ (25) ಉತ್ತಮ ಸಾಥ್ ನೀಡಿದರು.
ಕೊನೆಯಲ್ಲಿ ನಾಯಕ ಬಾಸಿಲ್ ಹಮೀದ್ ಅಜೇಯ 36 ರನ್ ಗಳಿಸುವ ಮೂಲಕ ಯುಎಇ ತಂಡ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 249 ರನ್ ಕಲೆಹಾಕಿತು.
ಭಾರತ ‘ಎ’ ಪರ ಅರ್ಷದ್ ಖಾನ್ 43 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಹರ್ಷ್ ದುಬೆ, ಶಹಬಾಜ್ ಅಹ್ಮದ್, ಸೂರ್ಯಾಂಶ್ ಶೆಡ್ಗೆ ಹಾಗೂ ಹರ್ಷಿತ್ ರಾಣಾ ತಲಾ ಒಂದು ವಿಕೆಟ್ ಪಡೆದರು.
ಬಳಿಕ ಬ್ಯಾಟಿಂಗ್‌ಗೆ ಇಳಿದ ಭಾರತ ‘ಎ’ ತಂಡದ ಪರ ವೈಭವ್ ಸೂರ್ಯವಂಶಿ ನಡೆಸಿದ ಸಿಕ್ಸರ್‌ಗಳ ಅಬ್ಬರಕ್ಕೆ ಯುಎಇ ಬೌಲರ್‌ಗಳು ತತ್ತರಿಸಿದರು.
ಕ್ರೀಡೆ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
ಕ್ರೀಡೆ
IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.
ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.
ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.
10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2
ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.
2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.
ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.
-
Uncategorized21 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಕ್ರೈಂ8 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ7 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು6 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಬಿಗ್ ನ್ಯೂಸ್7 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ6 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಕ್ರೀಡೆ6 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್‌ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
-
ಸಿನೆಮಾ6 hours agoAakasham Lo Ok Tara-ಬಾಕ್ಸ್ ಆಫೀಸ್ನಲ್ಲಿ ದುಲ್ಕರ್ ಸಲ್ಮಾನ್ ಅಬ್ಬರ: 4 ದಿನಕ್ಕೆ 20 ಕೋಟಿ ರೂ. ಗಳಿಸಿದ ‘ಆಕಾಶಮ್ ಲೋ ಒಕ ತಾರ’















