Connect with us

ಬಿಗ್ ನ್ಯೂಸ್

Rajyotsava Award-13 ಮಂದಿಗೆ ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯು ಇಂದು ಶಾಸಕ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ಪುರಭವನದಲ್ಲಿ ನಡೆಯಿತು. ಅಲ್ಲಿ ವಿವಿಧ ಕ್ಷೇತ್ರಗಳ 13 ಮಂದಿ ಸಾಧಕರಿಗೆ ಸನ್ಮಾನ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

2024-25 ಸಾಲಿನ ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರಾದ 13 ಮಂದಿಯ ವಿವರ ಈ ಕೆಳಗಿನಂತೆ ಇದೆ 2024-25 ಸಾಲಿನ ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರ ವಿವರ

Ad Widget

Ad Widget <> Ad Widget

1.ಡಾ. ತಾಳ್ತಾಜೆ ವಸಂತ ಕುಮಾರ (ಸಾಹಿತ್ಯ ಕ್ಷೇತ್ರ )
ದಿವಂಗತ ಕೃಷ್ಣ ಭಟ್ಟ ಹಾಗೂ ಲಕ್ಷ್ಮಿ ಅವರ ಸುಪುತ್ರನಾದ ಡಾ ತಾಳ್ತಾಜೆ ವಸಂತ ಕುಮಾರ ಇವರು ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ ಎಂಬ ವಿಷಯದಲ್ಲಿ ಪಿಎಚ್ ಡಿ ಪದವಿಯನ್ನು ಪಡೆದಿರುತ್ತಾರೆ. ಸುದೀರ್ಘ 37 ವರ್ಷಗಳ ಕಾಲ ಉಪನ್ಯಾಸಕ ವೃತ್ತಿಯನ್ನು ಮಾಡಿರುವ ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಹಾಗೂ ಮುಂಬೈ ವಿಶ್ವವಿದ್ಯಾನಿಲಯದ ಮುಖ್ಯಸ್ಥರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ಇವರ ಮಾರ್ಗದರ್ಶನದಲ್ಲಿ 17 ಮಂದಿ ಪಿಎಚ್ಡಿ ಹಾಗೂ 18 ಮಂದಿ ಎಂಫಿಲ್ ಪಡೆಡಿರುತ್ತಾರೆ.



Ad Widget

ಸಾಹಿತ್ಯ ಕ್ಷೇತ್ರದಲ್ಲಿ 55 ವರ್ಷಗಳ ಸುದೀರ್ಘ ಸೇವೆಯನ್ನು ನೀಡಿದ ಇವರು ಈವರೆಗೆ ಒಟ್ಟು 24 ಕೃತಿಗಳನ್ನು ರಚಿಸಿದ್ದು, ಇವರು ರಚಿಸಿದ ಅನೇಕ ಲೇಖನಗಳು ಪ್ರತಿಷ್ಠಿತ ಪತ್ರಿಕೆಗಳಲ್ಲಿ ಪ್ರಕಟವಾಗಿವೆ .
1993ರಲ್ಲಿ ಭಾರತ ಜರ್ಮನಿ ಸಾಂಸ್ಕೃತಿಕ ವಿನಿಮಯ ಯೋಜನೆಯ ಅನ್ವಯ ಜರ್ಮನ್ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಹಾಗೂ ಕರ್ನಾಟಕದ ವಿಷಯದಲ್ಲಿ ಉಪನ್ಯಾಸ ನೀಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಮಹಾರಾಷ್ಟ್ರ ರಾಜ್ಯ ಘಟಕದ ಸ್ಥಾಪಕ ಅಧ್ಯಕ್ಷರಾಗಿಯೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ.

Ad Widget

Ad Widget

2.ಶ್ರೀ ರಾಧಾಕೃಷ್ಣ ಶೆಟ್ಟಿ (ಪಿಲಿ ರಾಧಾ ) .( ಜಾನಪದ/ ಕಲಾ ಕ್ಷೇತ್ರ ) :

ಪಿಲಿ ರಾಧಣ್ಣ ಎಂದು ಹೆಸರುವಾಸಿಯಾದ ಇವರು ಸಂಕಪ್ಪ ಶೆಟ್ಟಿ ಇವರ ಸುಪುತ್ರ. ಇವರು ಕಳೆದ 48 ವರ್ಷಗಳಿಂದ ತುಳುನಾಡಿನ ಜಾನಪದ ಹಾಗೂ ದೈವಿಕ ಹಿನ್ನೆಲೆ ಇರುವ ಹುಲಿ ವೇಷ ಕುಣಿತವನ್ನು ನವರಾತ್ರಿ ಸಂದರ್ಭದಲ್ಲಿ ಸೇವಾ ರೂಪದಲ್ಲಿ ಮಾಡುತ್ತಾ ಬಂದಿದ್ದು, ಹುಲಿವೇಷ ತಂಡದೊಂದಿಗೆ ಪ್ರದರ್ಶನ ನೀಡಿ ತುಳುನಾಡಿನ ಈ ಜಾನಪದ ಕಲೆಯನ್ನು ಉಳಿಸುವುದರ ಜೊತೆಗೆ ಸಂಸ್ಕೃತಿ ಉಳಿವಿಗಾಗಿ ಇವರ ಕೊಡುಗೆ ಅಪಾರ. ಮೈಸೂರು, ಬೆಂಗಳೂರು ಸೇರಿದಂತೆ ನಾಡಿನ ಹಲವು ಊರುಗಳಲ್ಲಿ ಪ್ರದರ್ಶನ ನೀಡಿರುತ್ತಾರೆ.

3.ಶ್ರೀಮತಿ ವೇದಾವತಿ. ಎ ( ಕ್ರೀಡಾಕ್ಷೇತ್ರ )
62 ವರ್ಷ ವಯೋಮಾನದ ಶ್ರೀಮತಿ ವೇದಾವತಿಯವರು ಶ್ರೀ ರಾಜೇಶ್ ಬಂಗೇರವರ ಧರ್ಮಪತ್ನಿಯಾಗಿದ್ದಾರೆ. ಕಳೆದ 29 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ನೀಡಿದ್ದು ಪ್ರಸ್ತುತ ನಿವೃತ್ತರಾಗಿದ್ದಾರೆ. ಸರಕಾರಿ ನೌಕರರ ಸಂಘದ ಮೂಲಕ ನಡೆಸಲ್ಪಡುವ ಕ್ರೀಡಾಕೂಟದಲ್ಲಿ ಜಾವಲಿನ್ ತ್ರೋ,ಡಿಸ್ಕಸ್ ತ್ರೋ, ಶಾಟ್ ಪುಟ್,4×100 ಮೀ ರಿಲೇಯಲ್ಲಿ 1996 ರಿಂದ 2022 ತನಕ ಭಾಗ ವಹಿಸಿ ರಾಷ್ಟ್ರಮಟ್ಟದ ಸಾಧನೆಯನ್ನು ಮಾಡಿದ್ದಾರೆ. 2016ರಲ್ಲಿ ಶ್ರೀಲಂಕಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಮೀಟ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಾವಲಿನ್ ತ್ರೋ, ಡಿಸ್ಕಸ್ ತ್ರೋ,ಶಾಟ್ ಪುಟ್ ನಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ.

4.ಅಬ್ದುಲ್ ರಜಾಕ್ ಬಪ್ಪಳಿಗೆ ( ಸಮಾಜ ಸೇವೆ )
ಅಬ್ದುಲ್ ರಜಾಕ್ ಬಪ್ಪಳಿಗೆ ಇವರು ಬಿ.ಎಸ್. ಮಹಮ್ಮದ್ ಹಾಜಿ ಹಾಗೂ ಅವ್ವಮ್ಮ ಅವರ ದ್ವಿತೀಯ ಪುತ್ರ.ವೃತ್ತಿಯಲ್ಲಿ ಕೃಷಿ ಹಾಗೂ ತರಕಾರಿ ಉತ್ಪನ್ನಗಳ ಮಾರಾಟಗಾರರು . ಸಮಾಜದಲ್ಲಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಅಮರ್ ಅಕ್ಬರ್ ಅಂತೋನಿ ಎಂಬ ಕ್ರಿಕೆಟ್ ಪಂದ್ಯಾಟವನ್ನು ಕಳೆದ 15 ವರ್ಷಗಳಿಂದ ನಡೆಸುತ್ತಾ ಸಾರ್ವಜನಿಕರಲ್ಲಿ ಪರಸ್ಪರ ಸ್ನೇಹ, ಶಾಂತಿ ಸೌಹಾರ್ದತೆಯನ್ನು ಬೆಳೆಸುತ್ತಾ ಪುತ್ತೂರಿನ ಎಲ್ಲಾ ಧರ್ಮದ ಜನರನ್ನು ಒಗ್ಗೂಡಿಸುತ್ತಾ ಮುನ್ನಡೆವ ವ್ಯಕ್ತಿತ್ವ.ಮರಣ ಹೊಂದಿದ ಅನಾಥ ಮೃತದೇಹವನ್ನು ತಮ್ಮದೇ ಖರ್ಚು ವೆಚ್ಚದಲ್ಲಿ ಅಂತಿಮ ಸಂಸ್ಕಾರ ಮಾಡಿದ್ದು, ಅನೇಕ ಬಾರಿ ಮಧ್ಯರಾತ್ರಿಯಲ್ಲು ಕರೆದಾಗ ಬಂದು ರಕ್ತದಾನ ಮಾಡಿ ಅನೇಕರ ಪ್ರಾಣ ಉಳಿಸಿದ್ದಾರೆ.

ಕೊರೋನಾ ಸಂದರ್ಭದಲ್ಲಿ ಬೆನ್ನಿಗೆ ಸಾನಿಟೈಸರ್ ಕಟ್ಟಿ ಏಕಾಂಗಿಯಾಗಿ ಮಂದಿರ ಮಸೀದಿ, ಚರ್ಚ್, ಶಾಲಾ ಆವರಣ, ಪೇಟೆ ಆವರಣದಲ್ಲಿ ಸಾನಿಟೈಸರ್ ಸಿಂಪಡಿಸಿ ಜನರ ಆರೋಗ್ಯ ಕಾಪಾಡುವಲ್ಲಿ ಇವರ ಕೊಡುಗೆ ಅಪಾರ. ಕೋರೋನಾ ಸಂಧರ್ಬದಲ್ಲಿ ಪುತ್ತೂರು ತಾಲೂಕಿನ ಎಲ್ಲಾ ಪೊಲೀಸ್ ಇಲಾಖೆ ನಗರಸಭೆ ಹಾಗೂ ಸರಕಾರಿ ಆಸ್ಪತ್ರೆಗಳಿಗೆ ಹಾಗೂ ವಿವಿಧ ಇಲಾಖೆಗೆ ಸಾನಿಟೈಸರ್ ಕಿಟ್ಗಳನ್ನು ನೀಡುವುದರ ಜೊತೆಗೆ ಪ್ರಾಣಿಗಳ ಸಹಕಾರದಲ್ಲಿ 1200 ಮನೆಗಳಿಗೆ ಆಹಾರದ ಕಿಟ್ ಅನ್ನು ನೀಡಿದ್ದಾರೆ.
ತನ್ನ ಊರು ಬಪ್ಪಳಿಗೆ ಬಲ್ನಾಡು ರಸ್ತೆಯ ಉದ್ದಕ್ಕೂ ಪುತ್ತೂರು ನಗರಸಭೆ ಹಾಗೂ ಮೆಸ್ಕಾಂ ಇಲಾಖೆಯ ಸಹಕಾರದೊಂದಿಗೆ ನನ್ನ ಊರು ನಮ್ಮ ರಕ್ಷಣೆ ಎಂಬ ಸ್ವಚ್ಛತಾ ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ಮಾಡಿದವರು ಇವರು. ಮಾದಕ ವ್ಯಸನವನ್ನು ಮುಕ್ತ ಗೊಳಿಸುವ ನಿಟ್ಟಿನಲ್ಲಿ ಅನೇಕ ಜನಜಾಗೃತಿಗಳನ್ನು ವಿವಿಧ ಸಂಘ ಸಂಸ್ಥೆಗಳೊಂದಿಗೆ ಸೇರಿ ವಿದ್ಯಾರ್ಥಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸಿದ್ದಾರೆ.

5.ತಿಮ್ಮಪ್ಪ ಪೂಜಾರಿ( ರಂಗಭೂಮಿ/ ಸಾಹಿತ್ಯ )
59 ವರ್ಷ ವಯೋಮಾನದ ತಿಮ್ಮಪ್ಪ ಪೂಜಾರಿ ಇವರು ನಾಗಪ್ಪ ಪೂಜಾರಿ ಹಾಗೂ ಲಕ್ಷ್ಮೀ ಇವರು ಸುಪುತ್ರ. ಇವರು ಕಳೆದ 40 ವರ್ಷದಿಂದ ರಂಗಭೂಮಿ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸಿದ್ದು, ನೂರಾರು ಯುವ ಪ್ರತಿಭೆಗಳಿಗೆ ವೇದಿಕೆಯನ್ನು ನೀಡಿ ಕಲಾವಿದರನ್ನಾಗಿ ಮಾಡಿದ ಇವರು ಸುಮಾರು 51 ನಾಟಕಗಳನ್ನು ಬರೆದಿದ್ದು ಇವುಗಳಲ್ಲಿ 11 ಮುದ್ರಣವಾಗಿದೆ. ಈ ಪೈಕಿ ಧ್ರುವ ನಕ್ಷತ್ರ ಎಂಬ ನಾಟಕವು 5000ಕ್ಕೂ ಅಧಿಕ ಪ್ರದರ್ಶನವನ್ನು ಕಂಡಿದೆ.

6.ಕೇಶವ ಮಚ್ಚಿ ಮಲೆ (ರಂಗಭೂಮಿ / ನಾಟಕ)

54 ವರ್ಷವಯೋಮಾನದ ಕೇಶವ ಮಚ್ಚಿಮಲೆ ಅವರು ಶ್ರೀಯುತ ಕೃಷ್ಣಪ್ಪ ಪೂಜಾರಿ ಹಾಗೂ ಕಮಲ ದಂಪತಿಗಳ ಸುಪುತ್ರ. ಇವರು ಕಳೆದ 29 ವರ್ಷಗಳಿಂದ ರಂಗಭೂಮಿ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸಿದವರು. ಈವರೆಗೆ 900ಕ್ಕೂ ಅಧಿಕ ನಾಟಕಗಳಲ್ಲಿ ಪಾತ್ರವನ್ನು ಮಾಡಿದವರು, ಮಾತ್ರವಲ್ಲದೆ ಸಾವಿರಕ್ಕೂ ಅಧಿಕ ಯುವ ಪ್ರತಿಭೆಗಳಿಗೆ ವೇದಿಕೆಯನ್ನು ಕಲ್ಪಿಸಿದ ಗೌರವ ಇವರಿಗೆ ಸಲ್ಲುತ್ತದೆ. ನಾಟಕಗಳಲ್ಲಿ ಪಾತ್ರ ಮಾಡುವ ಜೊತೆಗೆ ಸಂಗೀತ,ನಿರ್ದೇಶನ, ನಾಟಕ ರಚನೆ, ರಂಗ ವಿನ್ಯಾಸ ಹಾಡುಗಾರಿಕೆ ಇತ್ಯಾದಿ ಕಲೆಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ.

7.ಡಾ. ಸತೀಶ್ ಶೆಣೈ ಎಂ- ಮಕ್ಕಳ ತಜ್ಞರು ( ವೈದ್ಯಕೀಯ ಕ್ಷೇತ್ರ )
ಕೋರ್ಟ್ ರಸ್ತೆ ಯಲ್ಲಿ ವೈದ್ಯಕೀಯ ವೃತ್ತಿಯನ್ನು ಮಾಡುತ್ತಿರುವ ಡಾ. ಎಂ.ಎಸ್ ಶಣೈ ಎಂದು ಹೆಸರುವಾಸಿಯಾದ ಇವರು ದಿ.ದಯಾನಂದ ಶೆಣೈ ಹಾಗೂ ಕಲ್ಯಾಣಿ ಶೆಣೈ ಇವರ ಸುಪುತ್ರರಾದ ಇವರು ಕಳೆದ 57 ವರ್ಷಗಳಿಂದ ಮಕ್ಕಳ ತಜ್ಞರಾಗಿ ಅತ್ಯಂತ ಸೇವಾ ಭಾವದಿಂದ ವೈದ್ಯಕೀಯ ಸೇವೆಯನ್ನು ಸಲ್ಲಿಸುವುದರ ಜೊತೆಗೆ ಆರ್ಥಿಕ ಸಂಕಷ್ಟದಲ್ಲಿ ಇರುವ ಸಾವಿರಾರು ಬಡ ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡಿ ಅಪಾರ ಜನಮನ್ನಣೆಯನ್ನು ಪಡೆದಿರುತ್ತಾರೆ .

8.ಡಾ ರಾಜಾರಾಮ್ ಕೆ ಬಿ ( ದಂತ ವೈದ್ಯಕೀಯ ಕ್ಷೇತ್ರ )
ಮೂಲತಃ ಕೃಷಿಕ ಕುಟುಂಬಕ್ಕೆ ಸೇರಿದ ಇವರು ದಿ.ಬಾಬು ಪೂಜಾರಿ ಮತ್ತು ಶ್ರೀಮತಿ ಗಿರಿಜಾ ದಂಪತಿಗಳ ಸುಪುತ್ರ. 1995ರಲ್ಲಿ ಉಪ್ಪಿನಂಗಡಿ ಯಲ್ಲಿ ತನ್ನ ಮಾತೃ ಶ್ರೀಯವರ ನಾಮಾಂಕಿತದ ಗಿರಿಜಾ ದಂತ ಚಿಕಿತ್ಸಾಲಯ ವನ್ನು ತೆರೆದು ಸುದೀರ್ಘ 29 ವರ್ಷಗಳ ವೃತ್ತಿ ಜೀವನದಲ್ಲಿ ಸೇವಾ ಭಾವದಲ್ಲಿ ಸೇವೆಯನ್ನು ನೀಡಿದ್ದು ಹಲವಾರು ಬಡ ರೋಗಿಗಳಿಗೆ ಉಚಿತ ಸೇವೆಯನ್ನು ಕೂಡ ನೀಡಿ ಅತ್ಯಂತ ಜನಪ್ರಿಯತೆಯನ್ನು ಪಡೆದಿದ್ದಾರೆ. ತನ್ನ ಚಿಕಿತ್ಸಾಲಯದಲ್ಲಿ ಹಲವಾರು ಕಿರಿಯ ವೈದ್ಯರುಗಳಿಗೆ ಉದ್ಯೋಗಾವಕಾಶ ಕಲ್ಪಿಸಿ ಅವರಿಗೆ ತರಬೇತಿ ನೀಡಿರುತ್ತಾರೆ. ಸರಳ ಸಜ್ಜನಿಕೆ ವ್ಯಕ್ತಿತ್ವದ ಇವರು ವೈದ್ಯಕೀಯ ವೃತ್ತಿಯ ಜೊತೆಗೆ ಅನೇಕ ಸಮಾಜಮುಖಿ ಸೇವೆಗಳನ್ನು ಮಾಡುತ್ತಾ ಜನಸೇವಕನೆಂದು ಪ್ರಸಿದ್ಧಿಯನ್ನು ಪಡೆದಿದ್ದಾರೆ.

ಸಾಮಾಜಿಕವಾಗಿಯೂ ಹಲವಾರು ಸಂಘಸಂಸ್ಥೆಗಳ ಕೆಲಸ ಮಾಡಿದ್ದಾರೆ. ಭಾರತೀಯ ದಂತ ವೈದ್ಯಕೀಯ ಸಂಘ ಪುತ್ತೂರು ಇದರ ಅಧ್ಯಕ್ಷರಾಗಿ , ಜೆಸಿಐ ಉಪ್ಪಿನಂಗಡಿ ಅಧ್ಯಕ್ಷರಾಗಿ, ರೋಟರಿ ಕ್ಲಬ್ ಉಪ್ಪಿನಂಗಡಿ ಅಧ್ಯಕ್ಷರಾಗಿ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

9.ಜಯ ಗುರು ಹಿಂದಾರು ( ಹೈನುಗಾರಿಕೆ-/ಕೃಷಿ ) :

29 ವರ್ಷ ವಯೋಮಾನದ ಜಯ ಗುರು ಹಿಂದಾರು ಇವರು ಶ್ರೀಯುತ ಭಾಸ್ಕರ್ ಆಚಾರ್ಯ ಹಿಂದಾರು ಹಾಗೂ ಸುಜಾತ ಆಚಾರ್ ಇವರ ಸುಪುತ್ರ. ಇವರು ಕಳೆದ ಏಳು ವರ್ಷಗಳಿಂದ ಹೈನುಗಾರಿಕಾ ಕ್ಷೇತ್ರದಲ್ಲಿ ಅಪಾರ ಕೃಷಿಯನ್ನು ಮಾಡಿದ್ದು,ಸುಮಾರು 130ಕ್ಕೂ ಅಧಿಕ ಗೋವುಗಳ ಸ್ಥಾಪನೆ ಮಾಡುತ್ತಿದ್ದಾರೆ ಇವುಗಳಲ್ಲಿ ಅನೇಕ ದೇಶಿಯ ತಳಿಯ ಗೋವುಗಳ ಸಾಕಣೆ ಮಾಡಿರುತ್ತಾರೆ. ಹೈನುಗಾರಿಕೆಯಲ್ಲಿ ದೇಶ ವಿದೇಶಗಳಲ್ಲಿ ವಿಶೇಷ ಅಧ್ಯಯನ ಪ್ರವಾಸವನ್ನು ಮಾಡಿ ನೂತನ ತಂತ್ರಜ್ಞಾನವನ್ನೂ ಕೂಡ ಅಳವಡಿಸಿದ್ದಾರೆ.

10.ಡಾ ಸುಕುಮಾರ ಗೌಡ ( ಶಿಕ್ಷಣ ಕ್ಷೇತ್ರ )
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಯನ್ನು ಗುರುತಿಸಿ ಇವರಿಗೆ ಪ್ರಶಸ್ತಿಯನ್ನು ನೀಡಲಾಗಿದೆ.

11.ಡಾ ಯು ಪಿ ಶಿವಾನಂದ ( ಪತ್ರಿಕೋದ್ಯಮ ಕ್ಷೇತ್ರ )
73 ವರ್ಷ ವಯೋಮಾನದ ಡಾ. ಯುಪಿ ಶಿವಾನಂದ್ ಅವರು ಯುಕೆ ಪುಟ್ಟಪ್ಪ ಹಾಗೂ ಪದ್ಮಾವತಿಯವರ ಸುಪುತ್ರ. ಎಂಬಿಬಿಎಸ್ ಪದವೀಧರರಾದ ಇವರು ಆಯ್ಕೆ ಮಾಡಿಕೊಂಡದ್ದು ಪತ್ರಿಕೋದ್ಯಮ ಕ್ಷೇತ್ರವನ್ನು. ಕಳೆದ 39 ವರ್ಷಗಳಿಂದ ಸುಳ್ಯ, ಬೆಳ್ತಂಗಡಿ ಮತ್ತು ಪುತ್ತೂರಿನಲ್ಲಿ ಸುದ್ದಿ ಬಿಡುಗಡೆ ಎಂಬ ಪತ್ರಿಕೆಯನ್ನು ನಡೆಸುತ್ತಿದ್ದಾರೆ.

12.ಹರೀಶ್ ರಾವ್ ಪಾಕ ತಜ್ಞರು (ಸಾಮಾಜಿಕ ಕ್ಷೇತ್ರ )
ಪಾಕತಜ್ಞ ದಿ ಕೃಷ್ಣ ರಾವ್ ಹಾಗೂ ಭಾರತಿ ಅವರ ಸುಪುತ್ರ ನಾದ ಹರೀಶ್ ರಾವ್ ಅವರು ವೃತ್ತಿಯಲ್ಲಿ ಪಾಕ ತಜ್ಞರು , ಮಠoತಬೆಟ್ಟು ಮಹಿಷ ಮರ್ದಿನಿ ದೇವಸ್ಥಾನ ಸೇರಿದಂತೆ ಅನೇಕ ದೇವಸ್ಥಾನಗಳ ಜಾತ್ರಾ ಮಹೋತ್ಸವ ಹಾಗೂ ಗಣೇಶೋತ್ಸವ ಇನ್ನಿತರ ಶುಭ ಕಾರ್ಯದಲ್ಲಿ ರಚಿಸುಚಿಯಾದ ಆಹಾರ ತಯಾರಿಕೆಯನ್ನು ಅತ್ಯಂತ ಕಡಿಮೆ ಶುಲ್ಕದಲ್ಲಿ ಸೇವಾ ಭಾವದಲ್ಲಿ ಮಾಡಿರುತ್ತಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶ ಸಂದರ್ಭದಲ್ಲಿ 12 ದಿನದಲ್ಲಿ ಸುಮಾರು 15 ಲಕ್ಷಕ್ಕೂ ಅಧಿಕ ಮಂದಿಗೆ ರುಚಿ ಶುಚಿಯಾದ ಊಟ ಹಾಗೂ ಉಪಹಾರದ ತಯಾರಿಯಲ್ಲಿ ತನ್ನ ವೈಯಕ್ತಿಕ ಸೇವೆಯನ್ನು ಸಂಪೂರ್ಣ ಸೇವಾ ರೂಪದಲ್ಲಿ ನೀಡಿ ಜನ ಮೆಚ್ಚುಗೆಗೆ ಪಾತ್ರರಾದವರು.

13.ರೋಟರಿ ಕ್ಲಬ್ ಪುತ್ತೂರು ( ಸಂಘ ಸಂಸ್ಥೆ ವಿಭಾಗ )
1964 ರಲ್ಲಿ ಪ್ರಾರಂಭವಾದ ಈ ಸಂಸ್ಥೆ ಸಮಾಜ ಸೇವಾ ಕ್ಷೇತ್ರದಲ್ಲಿ 60 ವರ್ಷಗಳನ್ನು ಪೂರೈಸಿದೆ. ಈ 60 ವರ್ಷಗಳಲ್ಲಿ ಸಾವಿರಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಇವುಗಳಲ್ಲಿ ಮುಖ್ಯವಾಗಿ ರೋಟರಿ ಬ್ಲಡ್ ಬ್ಯಾಂಕ್, ರೋಟರಿ ಕಿಡ್ನಿ ಡಯಾಲಿಸಿ ಸೆಂಟರ್, ರೋಟರಿ ರಕ್ತಸಂಗ್ರಹಣ, ರೋಟರಿ ಕಣ್ಣಿನ ಆಸ್ಪತ್ರೆ ಇವುಗಳ ಜೊತೆಗೆ ರೋಟರಿ ಪುರ ಎಂಬಲ್ಲಿ ಬಡವರಿಗೆ ಅನೇಕ ಮನೆಗಳನ್ನು ನಿರ್ಮಾಣ ಮಾಡಿಕೊಟ್ಟ ಗೌರವ ಈ ಸಂಸ್ಥೆಗೆ ಸಲ್ಲುತ್ತದೆ. ಸಾವಿರಾರು ಸಾರ್ವಜನಿಕರು ಈ ವ್ಯವಸ್ಥೆಗಳ ಸದುಪಯೋಗವನ್ನು ಪಡೆದು ಪುನರ್ಜೀವ ಪಡೆದುಕೊಂಡಿರುತ್ತಾರೆ.

ನೂರಾರು ಉಚಿತ ವೈದ್ಯಕೀಯ ತಪಾಸಣಾ ಶಿಬಿರಗಳು, ಉಚಿತ ದಂತ ತಪಾಸಣೆ ಶಿಬಿರ, ರಕ್ತದಾನ ಶಿಬಿರ, ಉಚಿತ ಕಣ್ಣು ತಪಾಸಣಾ ಶಸ್ತ್ರ ಚಿಕಿತ್ಸಾ ಶಿಬಿರ, ಅನೇಕ ಶಾಲಾ ಕಾಲೇಜುಗಳಿಗೆ ಶಿಕ್ಷಣಕ್ಕೆ ಬೇಕಾದ ಸವಲತ್ತುಗಳ ಒದಗಿಸುವಿಕೆ, ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಹಾಯ ಹಸ್ತ, ಬಡ ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯ ಹಸ್ತ , ಸಾರ್ವಜನಿಕರಿಗಾಗಿ ಬಸು ತಂದು ನಿಲ್ದಾಣದ ನಿರ್ಮಾಣ ಹೀಗೆ ಹತ್ತು ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ ಜನಮನ್ನಣೆಗೆ ಪಾತ್ರವಾದ ಸಂಸ್ಥೆ.

Ad Widget
Click to comment

Leave a Reply

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಅಂತರ ರಾಜ್ಯ

Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ

Published

on



Ad Widget

Ad Widget

Ad Widget

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.

Ad Widget

Ad Widget <> Ad Widget

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.



Ad Widget

ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.

Ad Widget

Ad Widget

ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.

ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.

ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.

ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading