ಪುತ್ತೂರು
waqf Land Row: ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟಿಕರಣದಿಂದ ರೈತರು ಕಣ್ಣೀರಿನಲ್ಲಿ ಜೀವನ ನಡೆಸುವಂತಾಗಿದೆ – RTCಯಲ್ಲಿ ನಮೊದಾಗಿರುವ ವಕ್ಫ್ ತೆಗೆಯುವಂತೆ ಬೀದಿಗಿಳಿದು ಹೋರಾಟ : ಮಾಜಿ ಶಾಸಕ ಸಂಜೀವ ಮಠಂದೂರು

ನ.4ಕ್ಕೆ ರಾಜ್ಯದ ಎಲ್ಲ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೀದಿಗಿಳಿದು ಹೋರಾಟ ನಡೆಸಲಿದೆ. ಪುತ್ತೂರಿನಲ್ಲಿ 10ಗಂಟೆಗೆ ದರ್ಭೆ ವೃತ್ತದಲ್ಲಿ ಹೋರಾಟ ನಡೆಯಲಿದೆ. ಮುಂದಿನ ದಿನ ಹೋಬಳಿ ಮಟ್ಟಕ್ಕೂ ಹೋರಾಟವನ್ನು ವಿಸ್ತರಿಸಿ ಮುಖ್ಯ ಮಂತ್ರಿಯನ್ನು ಹಾಗೂ ಸರ್ಕಾರವನ್ನು ಅಧಿಕಾರದಿಂದ ಇಳಿಸುವ ನಿಟ್ಟಿನಲ್ಲಿ ಮುಂದುವರಿಸಲಿದ್ದೇವೆ ಎಂದು ಮಠಂದೂರು ತಿಳಿಸಿದರು
ಪುತ್ತೂರು ನಾಡಿನೆಲ್ಲಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆ ಮಾಡಿದ್ದರೆ, ಕರ್ನಾಟಕದ ರೈತರು ಕತ್ತಲೆಯಲ್ಲಿದ್ದಾರೆ . ಗ್ಯಾರೆಂಟಿಗಳಿಂದ ಜನರ ಜೀವನ ಸುಧಾರಣೆಯಾಗಬಹುದೆಂದು ಬಹುಮತನ್ನು ಕಾಂಗ್ರೆಸ್ಸ್‌ಗೆ ನೀಡಿದ್ದರು. ಸರ್ಕಾರ ಅಲ್ಪಸಂಖ್ಯಾತರ ತುಷ್ಠೀಕರಣ ಉದ್ದೇಶದಿಂದ ರೈತರು ಕಣ್ಣೀರಿನಲ್ಲಿ ಜೀವನ ನಡೆಸುವಂತಾಗಿದೆ. ಭಷ್ಟಾಚಾರದ ಮೂಲಕ ರಾಜ್ಯದ ಖಜಾನೆ ಕೊಳ್ಳೆಹೊಡೆಯುವ ಕಾರ್ಯ ನಡೆಸಲಾಗುತ್ತಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು.
ಉಪಚುನಾವಣೆಯ ಸಂದರ್ಭ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ವ್ವಕ್ ಆಸ್ತಿಯ ಹೆಸರಿನಲ್ಲಿ ರೈತರ ಭೂಮಿಯನ್ನು ಕಬಳಿಸುವ ಕೆಲಸಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರ ವ್ವಕ್ ಆಸ್ತಿಯನ್ನು ಪುನರ್ ವಿಮರ್ಷೆ ಮಾಡುವ ಜತೆಗೆ ಕಾನೂನಿಗೆ ತಿದ್ದುಪಡಿ ಮಾಡಲು ಸಮಿತಿಯ ರಚನೆಮಾಡಲಾಗಿದೆ. ಈ ಸಂದರ್ಭದಲ್ಲೇ ಕರ್ನಾಟಕದ ಸಚಿವರು ಮುಖ್ಯಮಂತ್ರಿಗಳ ಸೂಚನೆಯಂತೆ ನಿರ್ಧಾರ ತೆಗೆದುಕೊಂಡಿರುವುದನ್ನು ಹೇಳುತ್ತಿದ್ದಾರೆ. ಈ ಮೂಲಕ ಬಹುಸಂಖ್ಯಾತರನ್ನು ತುಳಿಯುವ ಕೆಲಸವಾಗುತ್ತಿದೆ. ಇದನ್ನು ಬಿಜೆಪಿ ಖಂಡಿಸಿ ಹೋರಾಟ ಕೈಗೆತ್ತುಕೊಳ್ಳುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರೈತರ ಸ್ವಾಧೀನ ಇರುವ ಆಸ್ತಿಯನ್ನು ಅವರಿಗೆ ನೀಡುವ ಕೆಲಸವಾಗಬೇಕು. ಮುಖ್ಯಮಂತ್ರಿಗಳಿಗೆ ಒಂದೇ ಆದೇಶದಲ್ಲಿ ಪಹಣಿಯಲ್ಲಿರುವ ಸಮಸ್ಯೆಯನ್ನು ತೆಗೆಯಬಹುದು. ನ.4ಕ್ಕೆ ರಾಜ್ಯದ ಎಲ್ಲ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೀದಿಗಿಳಿದು ಹೋರಾಟ ನಡೆಸಲಿದೆ. ಪುತ್ತೂರಿನಲ್ಲಿ 10ಗಂಟೆಗೆ ದರ್ಭೆ ವೃತ್ತದಲ್ಲಿ ಹೋರಾಟ ನಡೆಯಲಿದೆ. ಮುಂದಿನ ದಿನ ಹೋಬಳಿ ಮಟ್ಟಕ್ಕೂ ಹೋರಾಟವನ್ನು ವಿಸ್ತರಿಸಿ ಮುಖ್ಯ ಮಂತ್ರಿಯನ್ನು ಹಾಗೂ ಸರ್ಕಾರವನ್ನು ಅಧಿಕಾರದಿಂದ ಇಳಿಸುವ ನಿಟ್ಟಿನಲ್ಲಿ ಮುಂದುವರಿಸಲಿದ್ದೇವೆ ಎಂದು ತಿಳಿಸಿದರು.
ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ಉಪಸ್ಥಿತರಿದ್ದರು
ಶಿಕ್ಷಣ
Philomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ
ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಡಿ 27 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಡಬ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರೆ. ಫಾ. ಸುನಿಲ್ ಪಿಂಟೋ ವಹಿಸಲಿದ್ದಾರೆ. ನ 28 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ (ಪೀಡಿಯಾಟ್ರಿಕ್ಸ್) ನ
ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರೀತಮ್ ಫಿಲಿಪ್ ತಾವ್ರೋ ವಹಿಸಲಿದ್ದಾರೆ.

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಾಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅ್ಯಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀಪ್ರಕಾಶ್ ಬಿ, ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ, ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಗ್ ನ್ಯೂಸ್
Puttur-ಎಸ್‌ಐಆರ್ ರದ್ದುಗೊಳಿಸುವವರೆಗೆ ಯಾವುದೇ ಚುನಾವಣೆ ನಡೆಸಬಾರದು: ಅನ್ವರ್ ಸಾದಾತ್ ಎಸ್.; ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಲು ಹಾಗೂ ಎಸ್‌ಐಆರ್ ರದ್ದುಗೊಳಿಸಲು ಆಗ್ರಹಿಸಿ ಕಬಕದಲ್ಲಿ ಎಸ್‌ಡಿಪಿಐ ಜಂತರ್ ಮಂತರ್ ಪ್ರತಿಭಟನಾ ಧರಣಿ
ಎಸ್‌ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಎಸ್. ಆಗ್ರಹಿಸಿದರು.
ಪುತ್ತೂರು: ಎಸ್‌ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಎಸ್. ಆಗ್ರಹಿಸಿದರು.

ನವೆಂಬರ್ 24ರಂದು ಕಬಕ ಜಂಕ್ಷನ್‌ನಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಂತರ್ ಮಂತರ್ ಪ್ರತಿಭಟನಾ ಧರಣಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರು ಮತದಾನದ ಹಕ್ಕನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಪ್ರಜಾಪ್ರಭುತ್ವದ ಮೂಲ ಆಶಯವಾದ ಮತದಾನದ ಹಕ್ಕನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಅರ್ಹ ಮತದಾರರಿಗೆ ಯಾವುದೇ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಯಂಗ್ ಡೆಮಾಕ್ರಟ್ಸ್ ಕೇರಳ ರಾಜ್ಯ ಸಮಿತಿ ಸದಸ್ಯರಾದ ಅಹ್ಮದ್ ನಿಸಾರ್ ಮಾತನಾಡಿ, ಸಂಘಪರಿವಾರದ ರಾಜಕೀಯ ನಿಲುವುಗಳು ಹಾಗೂ ಬಿಜೆಪಿ ಸರ್ಕಾರದ ನೀತಿಗಳನ್ನು ಟೀಕಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತು ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸುವ ಅಗತ್ಯವನ್ನು ಒತ್ತಿಹೇಳಿದ ಅವರು, ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗಬಾರದು ಎಂದು ಆಗ್ರಹಿಸಿದರು.
SDPI ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅಡ್ವೊಕೇಟ್ ಮಜೀದ್ ಖಾನ್ ಮಾತನಾಡಿ, ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಖಾತರಿಯಾಗಬೇಕು. ಎಸ್‌ಐಆರ್ ಪ್ರಕ್ರಿಯೆಯಿಂದ ಮತದಾರರ ಪಟ್ಟಿಯಲ್ಲಿ ಉಂಟಾಗಬಹುದಾದ ಲೋಪಗಳನ್ನು ತಡೆಯುವ ನಿಟ್ಟಿನಲ್ಲಿ ಈ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
WIM ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಮಾತನಾಡಿ, ಮಹಿಳೆಯರು ಸೇರಿದಂತೆ ಸಮಾಜದ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ಸಮಾನವಾಗಿ ದೊರೆಯಬೇಕು. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಪರಿಸ್ಥಿತಿ ನಿರ್ಮಾಣವಾಗದಂತೆ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.

ಮತದಾನ ವಂಚನೆ, ಬೆಲೆ ಏರಿಕೆ ವಿರುದ್ಧ ಹೆನ್ರಿ ಡಿಸೋಜಾ ಆಕ್ರೋಶ:
SDTU ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಹೆನ್ರಿ ಡಿಸೋಜಾ ಮಾತನಾಡಿ, ಮತದಾನದ ಹಕ್ಕು ಕಸಿಯುವ ಹುನ್ನಾರ ನಡೆಯುತ್ತಿದ್ದು, ಹಕ್ಕಿಗಾಗಿ ಹೋರಾಡುವವರನ್ನು ಜೈಲಿಗೆ ಹಾಕುವ ಪ್ರಯತ್ನ ಖಂಡನೀಯ ಎಂದರು. ಮತದಾನ ವಂಚನೆಯ ಆರೋಪ ಹೊತ್ತಿರುವ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಅಧಿಕಾರದಿಂದ ವಜಾಗೊಳಿಸಿ, ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಮಾಜಸೇವಕ ಹರೇಕಳ ಹಾಜಬ್ಬ ಅವರಂತಹವರ ಹೆಸರೇ ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗಿದ್ದು, ಸುಮಾರು 13 ಕೋಟಿಗೂ ಅಧಿಕ ಮತದಾರರ ಹೆಸರುಗಳು ಪಟ್ಟಿಯಿಂದ ಡಿಲೀಟ್ ಆಗಿರುವುದು ಆತಂಕಕಾರಿಯಾಗಿದೆ ಎಂದರು. ಇದೇ ವೇಳೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣ ಮತ್ತು ಪ್ರವೇಶ ಶುಲ್ಕ ವಸೂಲಾತಿಯ ವಿರುದ್ಧವೂ ಅವರು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು SDPI ಪುತ್ತೂರು ಕ್ಷೇತ್ರಾಧ್ಯಕ್ಷರಾದ ಅಶ್ರಫ್ ಬಾವು ವಹಿಸಿದ್ದರು.
ವೇದಿಕೆಯಲ್ಲಿ SDTU ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಮೀದ್ ಸಾಲ್ಮರ, SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ಶಾಕಿರ್ ಅಲಕೆಮಜಲು, ಉಪಾಧ್ಯಕ್ಷ ಇನಾಸ್ ರೊಡ್ರಿಗಸ್, ಸದಸ್ಯ ಸಿದ್ದೀಕ್ ಅಲೆಕ್ಕಾಡಿ, ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಸದಸ್ಯರಾದ ಹಮ್ದಾ ಮೆಲ್ಕಾರ್, ಹಮೀದ್ ಪುತ್ತೂರು, SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್., ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಇಸ್ಮಾಯಿಲ್ ಕೆಮ್ಮಾಯಿ ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಸಿರಾಜ್ ಕೂರ್ನಡ್ಕ ಮತ್ತು ತಂಡ ಎಸ್‌ಐಆರ್ ವಿರೋಧಿ ಹಾಡುಗಳನ್ನು ಹಾಡುವ ಮೂಲಕ ಪ್ರತಿಭಟನೆಗೆ ಧ್ವನಿಗೂಡಿಸಿದರು.
ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸ್ವಾಗತಿಸಿದರು. ಪುತ್ತೂರು ನಗರ ಸಮಿತಿ ಅಧ್ಯಕ್ಷ ತಾಜುದ್ದೀನ್ ಸಾಲ್ಮರ ವಂದಿಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಸ್ಮಾನ್ ಎ.ಕೆ. ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮಗಳು
Medland Cup-2026-ಮೆಡ್‌ಲ್ಯಾಂಡ್ ಆಸ್ಪತ್ರೆಯ ವಾರ್ಷಿಕ ಸಂಭ್ರಮ: ನ.29ರಂದು ‘ಮೆಡ್‌ಲ್ಯಾಂಡ್ ಕಪ್-2026’ ಕ್ರಿಕೆಟ್ ಪಂದ್ಯಾಟ
ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್‌ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.
ಪುತ್ತೂರು: ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್‌ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.

ಪುತ್ತೂರಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ಎಂಟು ತಂಡಗಳು ಈ ಕ್ರೀಡಾಕೂಟದಲ್ಲಿ ಸೆಣಸಾಡಲಿವೆ. ಪುತ್ತೂರು ಪೊಲೀಸ್ ಎಲೆವೆನ್, ಫಾರೆಸ್ಟ್ ಎಲೆವೆನ್, ಮೆಡ್ಲ್ಯಾಂಡ್ ಫಾಲ್ಕನ್ಸ್, ಪುತ್ತೂರು ಬಾರ್ ಅಸೋಸಿಯೇಷನ್, ಮೆಸ್ಕಾಂ ಪುತ್ತೂರು ಪರ್ಲ್ಸ್, ಕ್ಯಾಂಪ್ಕೋ ಪುತ್ತೂರು, ಕೆಎಸ್‌ಆರ್‌ಟಿಸಿ ಪುತ್ತೂರು ಹಾಗೂ ಸಿಎಂಸಿ ಎಲೆವೆನ್ ಪುತ್ತೂರು ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಲಿವೆ.
ಆಸ್ಪತ್ರೆಯ ಒಂದು ವರ್ಷದ ವೈದ್ಯಕೀಯ ಸೇವೆಯ ಸಂಭ್ರಮವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ವಿವಿಧ ಇಲಾಖೆಗಳ ನಡುವೆ ಪರಸ್ಪರ ಬಾಂಧವ್ಯ ವೃದ್ಧಿಸುವುದರ ಜತೆಗೆ ಕ್ರೀಡಾಸ್ಫೂರ್ತಿ, ತಂಡದ ಒಗ್ಗಟ್ಟು ಹಾಗೂ ಸ್ನೇಹಭಾವವನ್ನು ಉತ್ತೇಜಿಸುವುದು ಪಂದ್ಯಾಟದ ಆಶಯವಾಗಿದೆ.
ಈ ಕುರಿತು ಮಾಹಿತಿ ನೀಡಿದ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯ ಡಾ. ವಿಶಾಲ್ ಅವರು, ಆಸ್ಪತ್ರೆಯ ಪ್ರಥಮ ವರ್ಷದ ಸಂಭ್ರಮವನ್ನು ಕ್ರೀಡಾಕೂಟದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
-
ಬಿಗ್ ನ್ಯೂಸ್22 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ21 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಸುಳ್ಯ15 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ19 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ20 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ19 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ಸ್ಥಳೀಯ16 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ21 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು















