ನಿಧನ ವಾರ್ತೆ
Kadaba-ಕಡಬ: ಬೃಹತ್ ಗಾತ್ರದ ಮರ ಬಿದ್ದು ಸ್ಕೂಟಿ ಸವಾರ ಮೃತ
ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸಮೀಪ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಎಡಮಂಗಲದ ಸೊಸೈಟಿವೊಂದರಲ್ಲಿ ಪಿಗ್ಗಿ ಸಂಗ್ರಹಕಾರರಾಗಿದ್ದ ದೇವಸ್ಯ ನಿವಾಸಿ ಸೀತಾರಾಮ (58ವ) ಮೃತ ಪಟ್ಟ ಸ್ಕೂಟಿ ಸವಾರ ಎಂದು ಗುರುತಿಸಲಾಗಿದೆ.
ಕಡಬ: ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸಮೀಪ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಎಡಮಂಗಲದ ಸೊಸೈಟಿವೊಂದರಲ್ಲಿ ಪಿಗ್ಗಿ ಸಂಗ್ರಹಕಾರರಾಗಿದ್ದ ದೇವಸ್ಯ ನಿವಾಸಿ ಸೀತಾರಾಮ (58ವ) ಮೃತ ಪಟ್ಟ ಸ್ಕೂಟಿ ಸವಾರ ಎಂದು ಗುರುತಿಸಲಾಗಿದೆ.
ಶನಿವಾರ ಮುಂಜಾನೆ ಕಡಬಕ್ಕೆ ಆಗಮಿಸಿ ವಾಪಾಸು ಮನೆಯತ್ತ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಪಂಜ ಕಡಬ ರಸ್ತೆಯ ಮೊರಚೆಡವು ಬಳಿ ರಸ್ತೆ ಬದಿಯಲ್ಲಿದ್ದ ದೂಪದ ಮರ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ.
ಘಟನಾ ಸಳಕೆ, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ನಿಧನ ವಾರ್ತೆ
Puttur-ಮುಕ್ರಂಪಾಡಿಯಲ್ಲಿ ಸ್ಕೂಟರ್–ರಿಕ್ಷಾ ಡಿಕ್ಕಿ: ಪುತ್ತೂರು ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಮೃತ್ಯು
ಪುತ್ತೂರು ನಗರದ ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಅಂಚೆ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮಮತಾ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಪುತ್ತೂರು: ನಗರದ ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಅಂಚೆ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಮಮತಾ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೃತರು ಪುತ್ತೂರು ಕೆಎಸ್ಆರ್ಟಿಸಿಯಲ್ಲಿ ಟ್ರಾಫಿಕ್ ಕಂಟ್ರೋಲರ್ ಆಗಿರುವ ಸೀತಾರಾಮ ಅವರ ಪತ್ನಿಯಾಗಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ನಿಧನ ವಾರ್ತೆ
Cheruvayal Raman-ಸಾಂಪ್ರದಾಯಿಕ ಭತ್ತದ ತಳಿಗಳ ಸಂರಕ್ಷಕ, ಪದ್ಮಶ್ರೀ ಪುರಸ್ಕೃತ ಚೆರುವಯಲ್ ರಾಮನ್ ನಿಧನ
ಕೇರಳದ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವುದಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಪದ್ಮಶ್ರೀ ಪುರಸ್ಕೃತ ಬುಡಕಟ್ಟು ಸಮುದಾಯದ ರೈತ ಚೆರುವಯಲ್ ರಾಮನ್ (74) ಅವರು ಬುಧವಾರ ನಿಧನರಾಗಿದ್ದಾರೆ.
ತಿರುವನಂತಪುರಂ, ಅ.15: ಕೇರಳದ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವುದಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಪದ್ಮಶ್ರೀ ಪುರಸ್ಕೃತ ಬುಡಕಟ್ಟು ಸಮುದಾಯದ ರೈತ ಚೆರುವಯಲ್ ರಾಮನ್ (74) ಅವರು ಬುಧವಾರ ನಿಧನರಾಗಿದ್ದಾರೆ. ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ಸಮೀಪದ ಕಮ್ಮನಂ ನಿವಾಸಿಯಾಗಿದ್ದ ರಾಮನ್ ಅವರು, ಅಳಿವಿನಂಚಿನಲ್ಲಿದ್ದ 45ಕ್ಕೂ ಹೆಚ್ಚು ಸ್ಥಳೀಯ ಭತ್ತದ ತಳಿಗಳನ್ನು ಸಂರಕ್ಷಿಸುವ ಮೂಲಕ ದೇಶದ ಗಮನ ಸೆಳೆದಿದ್ದರು. ದಶಕಗಳ ಕಾಲ ಸಾಂಪ್ರದಾಯಿಕ ಸಾವಯವ ಕೃಷಿ ಪದ್ಧತಿಗಳನ್ನು ಅನುಸರಿಸಿದ್ದ ಅವರು, ಕೃಷಿ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸಲು ನಿರಂತರವಾಗಿ ಶ್ರಮಿಸಿದ್ದರು.
10ನೇ ವಯಸ್ಸಿನಿಂದಲೇ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು
1952ರ ಜೂನ್ 6ರಂದು ಜನಿಸಿದ್ದ ರಾಮನ್, ಕಮ್ಮನಂ ನವೋದಯ ಲೋವರ್ ಪ್ರೈಮರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದರು. ಬಳಿಕ ತಮ್ಮ 10ನೇ ವಯಸ್ಸಿನಿಂದಲೇ ಕೃಷಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಕೃಷಿಯ ಮೇಲಿನ ಅಪಾರ ಆಸಕ್ತಿಯಿಂದಾಗಿ 1969ರಲ್ಲಿ ಕಣ್ಣೂರು ಜಿಲ್ಲಾ ವೈದ್ಯಕೀಯ ಕಚೇರಿಯಲ್ಲಿ (DMO) ದೊರೆತ ಸರ್ಕಾರಿ ಉದ್ಯೋಗವನ್ನೂ ಅವರು ತಿರಸ್ಕರಿಸಿದ್ದರು.
ಕುರುಚ್ಯ ಬುಡಕಟ್ಟು ಸಮುದಾಯಕ್ಕೆ ಸೇರಿದ ರಾಮನ್, ತಮ್ಮ ಕೃಷಿ ಭೂಮಿಯಲ್ಲಿ ಸಾಂಪ್ರದಾಯಿಕ ತರಕಾರಿಗಳು, ಔಷಧೀಯ ಸಸ್ಯಗಳು ಹಾಗೂ ವಿವಿಧ ಜಾತಿಯ ಮರಗಳನ್ನು ಬೆಳೆಸಿ ಸಂರಕ್ಷಿಸಿದ್ದರು.
ಸಾಂಪ್ರದಾಯಿಕ ವಿಧಾನದಲ್ಲಿ ಬೀಜ ಸಂರಕ್ಷಣೆ
ಭತ್ತದ ಬೀಜಗಳನ್ನು ಸಂರಕ್ಷಿಸಲು ರಾಮನ್ ಅವರು ಸಾಂಪ್ರದಾಯಿಕ ವಿಧಾನಗಳನ್ನು ಅನುಸರಿಸುತ್ತಿದ್ದರು. ಕೊಯ್ಲು ಮಾಡಿದ ಭತ್ತವನ್ನು ಒಂದು ವಾರದವರೆಗೆ ಬಿಸಿಲು ಮತ್ತು ಇಬ್ಬನಿಗೆ ಒಡ್ಡಿದ ಬಳಿಕ, ಬೀಜಗಳನ್ನು ಬಿಸಿಮಾಡಿದ ಬಿದಿರಿನ ಪಾತ್ರೆಗಳಲ್ಲಿ ಹಾಗೂ ಹುಲ್ಲಿನಿಂದ ತಯಾರಿಸಿದ ಬುಟ್ಟಿಗಳಲ್ಲಿ ಸಂಗ್ರಹಿಸುತ್ತಿದ್ದರು. ಈ ವಿಧಾನದಿಂದ ಬೀಜಗಳ ಮೊಳಕೆಯೊಡೆಯುವ ಸಾಮರ್ಥ್ಯವನ್ನು ಎರಡು ವರ್ಷಗಳವರೆಗೆ ಉಳಿಸಿಕೊಳ್ಳಲು ಸಾಧ್ಯವಾಗುತ್ತಿತ್ತು.
2011ರಲ್ಲಿ ಹೈದರಾಬಾದ್ನಲ್ಲಿ ನಡೆದ ಅಂತರರಾಷ್ಟ್ರೀಯ ಜೀವವೈವಿಧ್ಯ ಸಂರಕ್ಷಣಾ ಸಮ್ಮೇಳನದಲ್ಲಿ 11 ದೇಶಗಳ ಪ್ರತಿನಿಧಿಗಳ ನಡುವೆ ಕೇರಳದ ರೈತ ಸಮುದಾಯವನ್ನು ರಾಮನ್ ಪ್ರತಿನಿಧಿಸಿದ್ದರು.
ಸ್ಥಳೀಯ ಸಸ್ಯ ಪ್ರಭೇದಗಳ ಸಂರಕ್ಷಣೆ ಹಾಗೂ ಪರಿಸರ ಸ್ನೇಹಿ ಕೃಷಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, 2023ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಇದಕ್ಕೂ ಮೊದಲು 2016ರಲ್ಲಿ ರಾಷ್ಟ್ರೀಯ ಸಸ್ಯ ಜೀನೋಮ್ ಸಂರಕ್ಷಕ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಅವರಿಗೆ ಲಭಿಸಿದ್ದವು.
ಗಣ್ಯರಿಂದ ಸಂತಾಪ
ರಾಮನ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್, ಅವರನ್ನು ವಯನಾಡಿನ ಕೃಷಿ ಪರಂಪರೆಯ ರಕ್ಷಕ ಎಂದು ಬಣ್ಣಿಸಿದ್ದಾರೆ. ಭವಿಷ್ಯದ ಪೀಳಿಗೆಗಾಗಿ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಉಳಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದ್ದಾರೆ.
ಸ್ಥಳೀಯ ಭತ್ತದ ತಳಿಗಳ ಸಂರಕ್ಷಣೆ, ಸಾವಯವ ಕೃಷಿ ಮತ್ತು ಜೀವವೈವಿಧ್ಯ ರಕ್ಷಣೆಗೆ ತಮ್ಮ ಬದುಕನ್ನೇ ಅರ್ಪಿಸಿದ್ದ ಚೆರುವಯಲ್ ರಾಮನ್ ಅವರ ನಿಧನದಿಂದ ಕೃಷಿ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದೆ.
ನಿಧನ ವಾರ್ತೆ
ಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ನಿಧನ
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರಿನ ನೆಹರೂನಗರ ನಿವಾಸಿ ಶಿವಪ್ರಸಾದ್ ಜಿ.ಎಸ್. (45) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರಿನ ನೆಹರೂನಗರ ನಿವಾಸಿ ಶಿವಪ್ರಸಾದ್ ಜಿ.ಎಸ್. (45) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಅವರು ಅ.14ರಂದು ಕರ್ತವ್ಯಕ್ಕೆ ತೆರಳದೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಅ.15ರ ಮುಂಜಾನೆ ಸುಮಾರು 2 ಗಂಟೆಯ ವೇಳೆಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಮನೆಯವರು ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಶಿವಪ್ರಸಾದ್ ಅವರು ಸುಳ್ಯ ತಾಲೂಕು ಪಂಚಾಯತ್ನಲ್ಲಿ ಅಕ್ಷರ ದಾಸೋಹ ವಿಭಾಗದ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಆರಂಭಿಸಿದ್ದರು. ಎರಡು ವರ್ಷಗಳ ಹಿಂದೆ ಪದೋನ್ನತಿ ಹೊಂದಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡಿದ್ದರು.
ಸುಳ್ಯ ತಾಲೂಕಿನ ಉಬರಡ್ಕದ ಹುಳಿಯಡ್ಕ ನಿವಾಸಿ ಶಿವರಾಮ ನಾಯಕ್ ಅವರ ಪುತ್ರರಾಗಿದ್ದ ಶಿವಪ್ರಸಾದ್, ಪುತ್ತೂರಿನ ನೆಹರೂನಗರ ಸಮೀಪ ವಾಸವಾಗಿದ್ದರು.
-
ಕಾರ್ಯಕ್ರಮಗಳು24 hours agoPraveen Capital-ಪ್ರವೀಣ್ ಕ್ಯಾಪಿಟಲ್ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ: 2030ರ ವೇಳೆಗೆ 100 ಶಾಖೆ ಸ್ಥಾಪನೆಯ ಗುರಿ; ಸತ್ಯ ಶಂಕರ್ ಅವರ ಸಾಧನೆಯನ್ನು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿ ಉಲ್ಲೇಖಿಸುತ್ತೇನೆ – ಅಶೋಕ್ ರೈ
-
ದಕ್ಷಿಣ ಕನ್ನಡ15 minutes ago
ಬಂಟ್ವಾಳ : ಹಣ ವಾಪಸ್ ಕೇಳಿದ್ದಕ್ಕೆ ಚೂರಿ ಇರಿತ ಆರೋಪ: ಆರೋಪಿ ಪೊಲೀಸ್ ವಶಕ್ಕೆ


















