ಸಿನೆಮಾ
Bagheera | ಶ್ರೀಮುರಳಿ ನಟನೆಯ ‘ಬಘೀರ’ ಸಿನಿಮಾ ಕಲೆಕ್ಷನ್ ಎಷ್ಟು ಗೊತ್ತಾ..?
‘ರೋರಿಂಗ್ ಸ್ಟಾರ್’ ಶ್ರೀಮುರಳಿ, ರುಕ್ಮಿಣಿ ವಸಂತ್, ಪ್ರಕಾಶ್ ರಾಜ್, ‘ಗರುಡ’ ರಾಮ್ ಮುಂತಾದವರು ನಟಿಸಿರುವ ‘ಬಘೀರ’ (Bagheera) ಸಿನಿಮಾವು ಅಕ್ಟೋಬರ್ 31ರಂದು ದೀಪಾವಳಿ ಹಬ್ಬದ ಪ್ರಯುಕ್ತ ತೆರೆಕಂಡಿತ್ತು. ‘ಮದಗಜ’ ನಂತರ ತೆರೆಗೆ ಬಂದಿರುವ ಶ್ರೀಮುರಳಿ ಅವರ ಹೊಸ ಸಿನಿಮಾ ಇದಾಗಿದೆ.
ಆಕ್ಷನ್ ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಹಾಗಾದರೆ, ಈ ಸಿನಿಮಾ ಮೊದಲ ಎರಡು ದಿನಗಳಿಗೆ ಎಷ್ಟು ಕೋಟಿ ಕಲೆಕ್ಷನ್ ಮಾಡಿದೆ? ಇಲ್ಲಿದೆ ಆ ಕುರಿತ ಮಾಹಿತಿ.
7 ಕೋಟಿ ರೂ. ಬಾಚಿಕೊಂಡ ‘ಬಘೀರ’ : ಶ್ರೀಮುರಳಿ ಅವರ ‘ಬಘೀರ’ ಸಿನಿಮಾವು ಮೊದಲ ಎರಡು ದಿನಗಳಿಗೆ ಭರ್ತಿ 7 ಕೋಟಿ ರೂಪಾಯಿಗಳನ್ನು ಬಾಚಿಕೊಂಡಿದೆ ಎಂಬ ಮಾಹಿತಿ ಸಿಕ್ಕಿದೆ. ಮೊದಲ ದಿನದ (ಗುರುವಾರ ಅಕ್ಟೋಬರ್ 31) ಗಳಿಕೆಗಿಂತ ಎರಡನೇ ದಿನದ (ಶುಕ್ರವಾರ ನವೆಂಬರ್ 1) ಕಲೆಕ್ಷನ್ ಜಾಸ್ತಿ ಇದೆ ಎಂಬುದು ಮೂಲಗಳ ಮಾಹಿತಿ. ಇನ್ನು, ಶನಿವಾರ ಮತ್ತು ಭಾನುವಾರ ರಜೆ ಇರುವುದಿರಂದ ಗಳಿಕೆ ಪ್ರಮಾಣ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಮೊದಲ ವಾರಾಂತ್ಯಕ್ಕೆ ‘ಬಘೀರ’ ಸುಲಭವಾಗಿ 10 ಕೋಟಿ ರೂ.ಗಳಿಗೂ ಅಧಿಕ ಕಲೆಕ್ಷನ್ ಮಾಡಲಿದ್ದಾನೆ.
ಹೊಂಬಾಳೆ ಫಿಲ್ಸ್ಮ್ನ ವಿಜಯ್ ಕಿರಗಂದೂರು ನಿರ್ಮಿಸಿರುವ ಈ ಸಿನಿಮಾವನ್ನು ಡಾ. ಸೂರಿ ನಿರ್ದೇಶನ ಮಾಡಿದ್ದಾರೆ. ವಿಶೇಷವೆಂದರೆ, ‘ಕೆಜಿಎಫ್’, ‘ಸಲಾರ್’ ಖ್ಯಾತಿಯ ಪ್ರಶಾಂತ್ ನೀಲ್ ಅವರು ‘ಬಘೀರ’ ಸಿನಿಮಾಗೆ ಕಥೆ ಬರೆದಿದ್ದಾರೆ. ಸದ್ಯ ರಾಜ್ಯಾದ್ಯಂತ ಶನಿವಾರ 180ಕ್ಕೂ ಅಧಿಕ ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿದ್ದು, ಪ್ರೇಕ್ಷಕರು ತೋರುತ್ತಿರುವ ಪ್ರೀತಿಗೆ ಚಿತ್ರತಂಡ ಧನ್ಯವಾದ ತಿಳಿಸಿದೆ.
ಬಘೀರನ ಕೊಂಡಾಡಿದ ಪ್ರಭಾಸ್: ಅತ್ತ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರು ಕೂಡ ‘ಬಘೀರ’ ಸಿನಿಮಾವನ್ನು ವೀಕ್ಷಣೆ ಮಾಡಿ, ಮೆಚ್ಚಿಕೊಂಡಿದ್ದಾರೆ. “ಶ್ರೀಮುರಳಿ ಅವರ ಅಭಿನಯ, ಪ್ರಶಾಂತ್ ನೀಲ್ ಅವರ ಕಥೆ, ಡಾ. ಸೂರಿ ಅವರ ನಿರ್ದೇಶನ, ಹೊಂಬಾಳೆ ಫಿಲ್ಮ್ಸ್ನ ಅದ್ದೂರಿ ನಿರ್ಮಾಣ ಹಾಗೂ ಇಡೀ ಚಿತ್ರತಂಡದ ಕಾರ್ಯವೈಖರಿ ಉತ್ತಮವಾಗಿದೆ” ಎಂದು ಪ್ರಭಾಸ್ ಮೆಚ್ಚುಗೆ ಮಾತುಗಳಾಡಿದ್ದಾರೆ.
ನೆಟ್ಫ್ಲಿಕ್ಸ್ಗೆ ಓಟಿಟಿ ಹಕ್ಕುಗಳು ಸೇಲ್: ಕನ್ನಡ ಸಿನಿಮಾಗಳನ್ನು ಓಟಿಟಿ ಪ್ಲಾಟ್ಫಾರ್ಮ್ಗಳು ಖರೀದಿ ಮಾಡುವುದಿಲ್ಲ ಎಂಬ ಆರೋಪ ಆರಂಭದಿಂದಲೂ ಇದೆ. ಅದರಲ್ಲೂ ನೆಟ್ಫ್ಲಿಕ್ಸ್ ಅಂತೂ ಕೆಲ ವರ್ಷಗಳಿಂದ ಯಾವುದೇ ಕನ್ನಡ ಸಿನಿಮಾಗಳನ್ನು ಖರೀದಿ ಮಾಡಿಲ್ಲ. ಆದರೆ ‘ಬಘೀರ’ ಚಿತ್ರದ ಓಟಿಟಿ ಹಕ್ಕುಗಳು ರಿಲೀಸ್ಗೂ ಮುನ್ನವೇ ನೆಟ್ಫ್ಲಿಕ್ಸ್ಗೆ ಸೇಲ್ ಆಗಿರುವುದು ವಿಶೇಷ.
‘ಬಘೀರ’ ಸಿನಿಮಾದಲ್ಲಿ ಯಾರೆಲ್ಲಾ ಇದ್ಧಾರೆ?ಪೊಲೀಸ್ ಆಫೀಸರ್ ವೇದಾಂತ್ ಪ್ರಭಾಕರ್ ಪಾತ್ರದಲ್ಲಿ ನಟ ಶ್ರೀಮುರಳಿ ಕಾಣಿಸಿಕೊಂಡಿದ್ದು, ವೈದ್ಯೆಯಾಗಿ ನಟಿ ರುಕ್ಮಿಣಿ ವಸಂತ್ ಅವರು ಬಣ್ಣ ಹಚ್ಚಿದ್ದಾರೆ. ಸಿಬಿಐ ಅಧಿಕಾರಿಯಾಗಿ ಪ್ರಕಾಶ್ ರಾಜ್ ನಟಿಸಿದ್ದು, ಗರುಡ ರಾಮ್ ವಿಲನ್ ಆಗಿ ಅಬ್ಬರಿಸಿದ್ದಾರೆ. ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಾರಾಣಿ, ಪ್ರಕಾಶ್ ತುಮ್ಮಿನಾಡು, ರಘು ರಾಮನಕೊಪ್ಪ, ಪುನೀತ್ ರುದ್ರನಾಗ್, ಅಶ್ವಿನ್ ಹಾಸನ್, ಅವಿನಾಶ್ ಮುಂತಾದವರು ಈ ಸಿನಿಮಾದಲ್ಲಿದ್ದಾರೆ. ಅಜನೀಶ್ ಲೋಕನಾಥ್ ಅವರು ಹಾಡುಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.
ಸಿನೆಮಾ
Bana-ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ
ಬಹು ನಿರೀಕ್ಷೆಯ ಬನ ಚಿತ್ರದ ಮೊದಲ ಎರಡು ಪ್ರೀಮಿಯರ್ ಮುಂಬೈನ ಮುಲುಂದ್ ಮತ್ತು ಕಲ್ಯಾಣ್ ನಲ್ಲಿ ನಡೆದಿದ್ದು ಅಲ್ಲಿನ ತುಳು ಪ್ರೇಕ್ಷಕರು ಚಿತ್ರದ ಬಗ್ಗೆ ಪ್ರಶಂಸೆಯ ಸುರಿಮಳೆ ಗೈದಿದ್ದಾರೆ. ಯುವ ಕಲಾವಿದರು ಅದ್ಭುತವಾಗಿ ನಟಿಸಿದ್ದು ಚಿತ್ರದ ಕಥೆ ಎಲ್ಲರ ಗಮನ ಸೆಳೆದಿದೆ. ಇದು ಮೊದಲ ನಾಗ ಆಧಾರಿತ ತುಳುಚಿತ್ರವಾಗಿದ್ದು ಅದ್ಭುತವಾಗಿ ಮೂಡಿಬಂದಿದೆ
ಬಹು ನಿರೀಕ್ಷೆಯ ಬನ ಚಿತ್ರದ ಮೊದಲ ಎರಡು ಪ್ರೀಮಿಯರ್ ಮುಂಬೈನ ಮುಲುಂದ್ ಮತ್ತು ಕಲ್ಯಾಣ್ ನಲ್ಲಿ ನಡೆದಿದ್ದು ಅಲ್ಲಿನ ತುಳು ಪ್ರೇಕ್ಷಕರು ಚಿತ್ರದ ಬಗ್ಗೆ ಪ್ರಶಂಸೆಯ ಸುರಿಮಳೆ ಗೈದಿದ್ದಾರೆ.
ಯುವ ಕಲಾವಿದರು ಅದ್ಭುತವಾಗಿ ನಟಿಸಿದ್ದು ಚಿತ್ರದ ಕಥೆ ಎಲ್ಲರ ಗಮನ ಸೆಳೆದಿದೆ. ಇದು ಮೊದಲ ನಾಗ ಆಧಾರಿತ ತುಳುಚಿತ್ರವಾಗಿದ್ದು ಅದ್ಭುತವಾಗಿ ಮೂಡಿಬಂದಿದೆ. ಅಲ್ಲಿನ ಪ್ರೇಕ್ಷಕರ ಪ್ರಕಾರ ಚಿತ್ರವನ್ನು ಕಥೆ ಆವರಿಸಿಕೊಂಡಿದ್ದು ಹಿರಿಯ ಕಿರಿಯ ಕಲಾವಿದರು ತಮ್ಮ ತಮ್ಮ ಪಾತ್ರಕ್ಕೆ ಜೀವ ತುಂಬಿದ್ದಾರೆ.
ಬಾಬಪ್ರಸಾದ್ ಅರಸ ಹಾಗೂ ನಾಗಕಿರಣ್ ಶೆಟ್ಟಿ ಮುಂಬಯಿ ನೇತೃತ್ವದಲ್ಲಿ ಮುಂಬೈ ಶೋ ಯಶಸ್ವಿಯಾಗಿ ನೆರವೇರಿದೆ. ಶನಿವಾರ ಶೋ ನಡೆದು ಹೌಸ್ಫುಲ್ ಪ್ರದರ್ಶನ ಗೊಂಡ ದಾಕಲೆ ಬನ ಚಿತ್ರದ್ದು.ಚಿತ್ರ ಇದೆ ತಿಂಗಳು 23 ಕ್ಕೆ ಬಿಡುಗಡೆಯಾಗಲಿದೆ.
ಸಿನೆಮಾ
Nana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.
ಪಣಜಿ: ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.
ಡೋನಾ ಪೌಲಾದ ಓಷನ್ ಪಾರ್ಕ್ನಲ್ಲಿರುವ ತಮ್ಮ ನಿವಾಸದಿಂದ ಬಾಂಬೋಲಿಮ್ನ ಮಣಿಪಾಲ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿ 75 ವರ್ಷದ ನಾನಾ ಪಾಟೇಕರ್ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.
ತನಿಖೆಯ ಭಾಗವಾಗಿ ನಟನ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಗೋವಾ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಸಾವಿಗೆ ಕಾರಣವಾದ ಸಂದರ್ಭಗಳ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕುಟುಂಬಸ್ಥರು ಹಾಗೂ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆಯೂ ನಡೆದಿದೆ.
ನಾನಾ ಪಾಟೇಕರ್ ಅವರ ಸಾವಿಗೆ ಹೃದಯಾಘಾತ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ, ಸಾವಿನ ನಿಖರ ಕಾರಣ ಮತ್ತು ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ. ಅಸಹಜ ಸಾವು ಪ್ರಕರಣ ದಾಖಲಿಸಿರುವುದು ಮಾತ್ರವೇ ಸಾವಿನಲ್ಲಿ ಅಪರಾಧ ಅಥವಾ ಸಂಶಯಾಸ್ಪದ ಕೃತ್ಯ ನಡೆದಿದೆ ಎಂಬುದನ್ನು ಸೂಚಿಸುವುದಿಲ್ಲ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
ಸಿನೆಮಾ
Drishyam 3-ಮಲಯಾಳಂ ನ ದಾಖಲೆ ಮುರಿದು ಬಾಕ್ಸ್ ಆಫೀಸ್ನಲ್ಲಿ ‘ದೃಶ್ಯಂ 3’ ಧಮಾಕಾ; 4 ದಿನದಲ್ಲೇ ₹300 ಕೋಟಿ ಕ್ಲಬ್ಗೆ ಎಂಟ್ರಿ..!
ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ ಇದೀಗ ₹303 ಕೋಟಿ ತಲುಪಿದೆ.
ಮುಂಬೈ: ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ ಇದೀಗ ₹303 ಕೋಟಿ ತಲುಪಿದೆ.
ಬಿಡುಗಡೆಯ ನಾಲ್ಕನೇ ದಿನ ಚಿತ್ರವು ಭಾರತದಲ್ಲಿ 16,274 ಪ್ರದರ್ಶನಗಳಿಂದ ಸುಮಾರು ₹21 ಕೋಟಿ ನಿವ್ವಳ ಗಳಿಸಿದೆ. ಇದರೊಂದಿಗೆ ಭಾರತದಲ್ಲಿ ಚಿತ್ರದ ಒಟ್ಟು ನಿವ್ವಳ ಗಳಿಕೆ ₹197.50 ಕೋಟಿಗೆ ತಲುಪಿದ್ದು, ಒಟ್ಟು ಕಲೆಕ್ಷನ್ ಸುಮಾರು ₹237 ಕೋಟಿ ಆಗಿದೆ.
ಚಿತ್ರಕ್ಕೆ ಭಾರತ ಮಾತ್ರವಲ್ಲದೆ ಸಾಗರೋತ್ತರ ಮಾರುಕಟ್ಟೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಾಲ್ಕನೇ ದಿನ ವಿದೇಶಿ ಮಾರುಕಟ್ಟೆಯಲ್ಲಿ ಸುಮಾರು ₹5 ಕೋಟಿ ಗಳಿಸಿದ್ದು, ಇದರೊಂದಿಗೆ ವಿದೇಶದಲ್ಲಿನ ಒಟ್ಟು ಗಳಿಕೆ ₹66 ಕೋಟಿ ತಲುಪಿದೆ.
ಮಲಯಾಳಂ ‘ದೃಶ್ಯಂ 3’ ಗಳಿಕೆಯನ್ನೂ ಮೀರಿಸಿದ ಹಿಂದಿ ಸಿನಿಮಾ
ಅಜಯ್ ದೇವಗನ್ ಅಭಿನಯದ ಹಿಂದಿ ‘ದೃಶ್ಯಂ 3’ಗೂ ಮುನ್ನ ಮೋಹನ್ಲಾಲ್ ನಟನೆಯ ಮಲಯಾಳಂ ‘Drishyam 3: The Past Never Stays Silent’ ಬಿಡುಗಡೆಯಾಗಿತ್ತು. ಆ ಚಿತ್ರವು ವಿಶ್ವಾದ್ಯಂತ ₹237.70 ಕೋಟಿ ಗಳಿಕೆ ದಾಖಲಿಸಿತ್ತು ಎಂದು ವರದಿಯಾಗಿದೆ.
-
ಬಿಗ್ ನ್ಯೂಸ್13 hours agoPuttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ
-
ನಿಧನ ವಾರ್ತೆ16 hours agoಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ನಿಧನ
-
ಸ್ಥಳೀಯ10 hours agoKadaba-ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಕಡಬ ನಿವಾಸಿ ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹50 ಸಾವಿರ ದಂಡ..!
-
ಅಂತರ ರಾಜ್ಯ16 hours agoBJP minister-ಪತಿ ಎರಡು ಮದುವೆಯಾಗಿದ್ದರೆಂದು ದೂರು ದಾಖಲಿಸಿದ ಬಿಜೆಪಿ ಸಚಿವೆ..!
-
ಅಂತರ ರಾಜ್ಯ14 hours agoRamleela-ನವದೆಹಲಿ: ರಾಮಲೀಲಾದಲ್ಲಿ ಈ ಬಾರಿ ಅಸುರರ ಜತೆಗೆ ʻಜಿರಳೆʼಯೂ ದಹನ..!
-
ಕಾರ್ಯಕ್ರಮಗಳು14 hours agoMangalore-ಮಂಗಳೂರಿಗೆ ಲಗ್ಗೆ ಇಟ್ಟ ಅಲರ್ಜಿ ಪರೀಕ್ಷೆಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರಾಜ್ಯದ ಪ್ರತಿಷ್ಠಿತ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ : ಅ.19ರಂದು 11ನೇ ಶಾಖೆ ಉದ್ಘಾಟನೆ
-
ಅಪರಾಧ15 hours agoUdupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ
-
ಅಂತರ ರಾಜ್ಯ15 hours agoTruecaller service-ಟೆಲಿಕಾಂ ಸಂಸ್ಥೆಗಳೇ ಒದಗಿಸಲಿವೆ ಟ್ರೂ ಕಾಲರ್ ಸೇವೆ; ಅಪರಿಚಿತ ನಂಬರ್ನಿಂದ ಕರೆ ಬಂದರೂ ಹೆಸರು ಪ್ರದರ್ಶನ ಕಡ್ಡಾಯ?


















