ಬಿಗ್ ನ್ಯೂಸ್
Bengaluru-ರಜೆ ಕಳೆದು ಬೆಂಗಳೂರಿನತ್ತ ಮುಖ ಮಾಡಿದ ಜನರ ದಂಡು : ಟ್ರಾಫಿಕ್ ಜಾಮ್ ಗೆ ಜನತೆ ಕಂಗಾಲು ..! ಐಟಿ ಸಿಟಿ ಸ್ಥಬ್ಧ
ದೀಪಾವಳಿ ಹಬ್ಬದ ಪ್ರಯುಕ್ತ ಹಾಗೂ ಅನೇಕ ದಿನಗಳ ರಜೆ ಹಿನ್ನೆಲೆ ಸ್ವಂತ ಊರುಗಳಿಗೆ ತೆರಳಿದ್ದ ಬೆಂಗಳೂರಿನ ಜನರು ಸೋಮವಾರ ನಗರಕ್ಕೆ ಮರಳುತ್ತಿದ್ದರು. ಇದರಿಂದ ಬೆಂಗಳೂರಿನ ಎಲ್ಲಾ ಮುಖ್ಯ ರಸ್ತೆಗಳಲ್ಲಿಯೂ ಟ್ರಾಫಿಕ್ ಜಾಮ್ ಆಗಿ ಸಂಚಾರ ಸ್ತಬ್ಧವಾಯಿತು. ಇದರಿಂದಾಗಿ ಜನರು ತೀವ್ರ ಪರದಾಡಬೇಕಾಯಿತು.
ದೀಪಾವಳಿ ಹಬ್ಬದ ಪ್ರಯುಕ್ತ ಹಾಗೂ ಅನೇಕ ದಿನಗಳ ರಜೆ ಹಿನ್ನೆಲೆ ಸ್ವಂತ ಊರುಗಳಿಗೆ ತೆರಳಿದ್ದ ಬೆಂಗಳೂರಿನ ಜನರು ಸೋಮವಾರ ನಗರಕ್ಕೆ ಮರಳುತ್ತಿದ್ದರು. ಇದರಿಂದ ಬೆಂಗಳೂರಿನ ಎಲ್ಲಾ ಮುಖ್ಯ ರಸ್ತೆಗಳಲ್ಲಿಯೂ ಟ್ರಾಫಿಕ್ ಜಾಮ್ ಆಗಿ ಸಂಚಾರ ಸ್ತಬ್ಧವಾಯಿತು. ಇದರಿಂದಾಗಿ ಜನರು ತೀವ್ರ ಪರದಾಡಬೇಕಾಯಿತು.
ದೀರ್ಘ ರಜೆಯಿಂದ ತೆರಳಿದ್ದ ಜನರ ವಾಪಸಾತಿ:
ಕನ್ನಡ ರಾಜ್ಯೋತ್ಸವ, ದೀಪಾವಳಿ ಹಾಗೂ ವಾರಾಂತ್ಯದ ರಜೆ ಸೇರಿ ನಿರಂತರ ನಾಲ್ಕು ದಿನ ರಜೆ ಸಿಕ್ಕಿದ್ದರಿಂದ ಜನರು ತಮ್ಮ ಊರಿನತ್ತ ಅಥವಾ ಪ್ರವಾಸದ ಕಡೆಗೆ ತೆರಳಿದ್ದರು. ಈ ರಜಾ ದಿನಗಳ ಸವಿಯನ್ನು ಅನುಭವಿಸಿ ಸೋಮವಾರ ನಗರಕ್ಕೆ ಹಿಂತಿರುಗಿದಾಗ, ಟ್ರಾಫಿಕ್ ಜಾಮ್ ಅವರ ಎಲ್ಲಾ ಹುಮ್ಮಸ್ಸನ್ನು ಕುಗ್ಗಿಸಿತು.
ತುಮಕೂರು ರಸ್ತೆಯಲ್ಲಿ ವಾಹನಗಳ ದಟ್ಟಣೆ
ರಾಜ್ಯದ ಹಲವು ಭಾಗಗಳಿಗೆ ಸಂಪರ್ಕ ಕಲ್ಪಿಸುವ ತುಮಕೂರು ರಸ್ತೆಯಲ್ಲಿ ವಾಹನಗಳ ದಟ್ಟಣೆಯಿಂದಾಗಿ ಜನರು ಸಂಕಷ್ಟಕ್ಕೆ ಒಳಗಾದರು. ನೆಲಮಂಗಲದಿಂದ ಆರಂಭವಾದ ದಟ್ಟಣೆ ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, ಪೀಣ್ಯ, ಯಶವಂತಪುರದವರೆಗೂ ಮುಂದುವರಿದಿತ್ತು. ದಟ್ಟಣೆಯಲ್ಲಿ ಸಿಲುಕಿದ ವಾಹನ ಸವಾರರು ಮುಂದೆ ಹೋಗಲೂ ಹಿಂದಿರುಗಲೂ ಆಗದೇ ತೀವ್ರ ಅಸಹನೀಯ ಸ್ಥಿತಿಯಲ್ಲಿ ಪೇಚಾಡಿದರು.
ವಾರದ ಮೊದಲ ದಿನವಾದ ಕಾರಣ, ಕಚೇರಿಗೆ ಹೊರಟವರು ಹಾಗೂ ಶಾಲಾ ವಿದ್ಯಾರ್ಥಿಗಳು ದಟ್ಟಣೆಯಿಂದಾಗಿ ತೀವ್ರ ಸಮಸ್ಯೆಗೆ ಸಿಲುಕಿದರು. ವಾಹನ ದಟ್ಟಣೆ ಕಾರಣದಿಂದ ತಡವಾಗಿ ಕಚೇರಿಗೆ ಮತ್ತು ಶಾಲೆಗೆ ತಲುಪಬೇಕಾಯಿತು. ಜನಸಾಮಾನ್ಯರಿಗೆ ಇದು ನಿತ್ಯದ ಕೆಲಸಗಳಲ್ಲಿ ತೊಂದರೆ ಉಂಟುಮಾಡಿತು.
ಮೈಸೂರು, ಊಟಿ, ಕೊಡಗು ಸೇರಿದಂತೆ ವಿವಿಧ ಪ್ರವಾಸ ಸ್ಥಳಗಳಿಂದ ಮರಳಿದ ಜನರ ವಾಹನಗಳು ಮೈಸೂರು ರಸ್ತೆಯಲ್ಲಿ ಜಾಮ್ ಆಗಿದ್ದವು. ಮೆಜೆಸ್ಟಿಕ್, ಕೆ.ಆರ್ ವೃತ್ತ, ಆನಂದರಾವ್ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ ಸೇರಿದಂತೆ ಕೇಂದ್ರ ಭಾಗಗಳಲ್ಲಿಯೂ ವಾಹನ ದಟ್ಟಣೆ ಉಲ್ಬಣಗೊಂಡಿತ್ತು.
ರೈಲು ಹಾಗೂ ಬಸ್‌ಗಳಲ್ಲಿ ಪ್ರಯಾಣದ ಮುಂಗಡ ಟಿಕೆಟ್ ಮಾಡಿಸಿಕೊಂಡಿದ್ದರೂ ನಿಗದಿತ ಸಮಯಕ್ಕೆ ನಿಲ್ದಾಣ ತಲುಪಲು ಸಾಧ್ಯವಾಗದೇ, ಪ್ರಯಾಣಿಕರು ಮಧ್ಯಮಾರ್ಗದಲ್ಲಿಯೇ ಬಸ್ಸು ಅಥವಾ ಆಟೋದಿಂದ ಇಳಿದು ನಿಲ್ದಾಣದತ್ತ ಹೆಜ್ಜೆ ಹಾಕಿದರು.
ಪೊಲೀಸರು ಸಂಚಾರ ನಿರ್ವಹಣೆಗೆ ಪೂರ್ವಸಿದ್ಧತೆ ಮಾಡಿಕೊಳ್ಳದೆ ಇರುವುದರಿಂದ ಟ್ರಾಫಿಕ್ ಸಮಸ್ಯೆ ಇನ್ನಷ್ಟು ಗಂಭೀರವಾಗಿ ಪರಿಗಣಿಸಿತು.
ಬಿಗ್ ನ್ಯೂಸ್
ಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಹಾಲಿನ (Milk Price Hike) ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೂ ಒಪ್ಪಿಗೆ ಸೂಚಿಸಲಾಗಿದೆ.
ಬಹುತೇಕ ನವೆಂಬರ್ 1 ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. 80:20 ರಂತೆ ದರ ಏರಿಕೆ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಅಂದರೆ, 8 ರೂ. ಏರಿಕೆಯಾದರೆ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ಸಿಗಲಿದೆ. ಸರ್ಕಾರಕ್ಕೆ 70:30 ರಂತೆ ದರ ಏರಿಕೆಗೆ ಒಕ್ಕೂಟಗಳು ಮನವಿ ಮಾಡಿದ್ದವು. ಆದರೆ, 80:20 ರಂತೆ ದರ ಏರಿಕೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದರಂತೆಯೇ 8 ರೂ. ಪೈಕಿ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ನೀಡುವ ಸಾಧ್ಯತೆಯಿದೆ.
ಬಸ್ ಟಿಕೆಟ್ ದರ ಹಾಗೂ ಹಾಲಿನ ದರ ಎರಡು ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಆದರೆ, ಅಧಿಕೃತ ಘೋಷಣೆ ಮಾಡದಿರಲು ತೀರ್ಮಾನಿಸಿದೆ. ಚುನಾವಣಾ ಆಯೋಗಕ್ಕೆ ಪ್ರಸ್ತಾಪ ಕಳುಹಿಸಿ ಅವರ ಅನುಮತಿ ಸಿಕ್ಕ ಮೇಲೆ ಅಧಿಕೃತ ಘೋಷಣೆ ಮಾಡಲು ಸರ್ಕಾರ ನಿರ್ಧರಿಸಿದೆ.
ಹಾಲಿನ ಮೇಲೆ ಪೂರ್ಣ 8 ರೂ. ದರ ಏರಿಕೆಯಾದರೆ
1 ಲೀಟರ್ ದರ
ಟೋನ್ಡ್ ಹಾಲು
46- 54 ರೂ.
ಹೋಮೋಜಿನೈಸ್ಡ್ ಟೋನ್ಡ್ ಹಾಲು
47- 55 ರೂ.
ಅಂತರ ರಾಜ್ಯ
ID-ಪ್ರತಿಭಟನೆ ವರದಿ ಮಾಡುವ ಪತ್ರಕರ್ತರಿಗೆ ಐಡಿ ಕಡ್ಡಾಯ; ಮಹಿಳಾ ಪತ್ರಕರ್ತರ ಲೈಂಗಿಕ ಕಿರುಕುಳ ಆರೋಪ ಬೆನ್ನಲ್ಲೇ ದಿಲ್ಲಿ ಪೊಲೀಸರ ಹೊಸ ಮಾರ್ಗಸೂಚಿ
ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.
ಹೊಸದಿಲ್ಲಿ: ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.
ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಈ ಮಾರ್ಗಸೂಚಿ ಪ್ರಕಟಿಸಲಾಗಿದೆ.
‘ಸುದ್ದಿ ಮುಖ್ಯ, ಅದನ್ನು ಹೇಗೆ ಪಡೆಯುತ್ತೀರಿ ಎಂಬುದೂ ಮುಖ್ಯ’ ಎಂಬ ಸಂದೇಶದೊಂದಿಗೆ ದಿಲ್ಲಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪತ್ರಕರ್ತರು ಕರ್ತವ್ಯ ನಿರ್ವಹಿಸುವ ವೇಳೆ ಪಾಲಿಸಬೇಕಾದ ನಾಲ್ಕು ಪ್ರಮುಖ ನಿರ್ದೇಶನಗಳನ್ನು ಹಂಚಿಕೊಂಡಿದ್ದಾರೆ.
ಪ್ರತಿಭಟನೆಗಳನ್ನು ವರದಿ ಮಾಡಲು ನಿಯೋಜಿಸಲ್ಪಟ್ಟಿರುವ ಎಲ್ಲ ಪತ್ರಕರ್ತರು ತಮ್ಮ ಸಂಸ್ಥೆಗಳು ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ ಮಾನ್ಯ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕೊಂಡೊಯ್ಯಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.
ಸ್ಥಳದಲ್ಲಿರುವ ಕಾನೂನು ಜಾರಿ ಸಿಬ್ಬಂದಿಗೆ ಪತ್ರಕರ್ತರ ಗುರುತು ಸುಲಭವಾಗಿ ತಿಳಿಯುವಂತೆ ಗುರುತಿನ ಚೀಟಿಗಳನ್ನು ಸದಾ ಗೋಚರಿಸುವಂತೆ ಪ್ರದರ್ಶಿಸಬೇಕು ಎಂದು ತಿಳಿಸಿದ್ದಾರೆ.
ಅದೇ ರೀತಿ, ಪತ್ರಕರ್ತರ ಉಪಸ್ಥಿತಿ ಅಥವಾ ಚಟುವಟಿಕೆಗಳು ಪೊಲೀಸ್ ಕಾರ್ಯಾಚರಣೆಗಳಿಗೆ ಹಾಗೂ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಯಾವುದೇ ರೀತಿಯಲ್ಲೂ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಉದ್ವಿಗ್ನ ಪರಿಸ್ಥಿತಿಗಳಲ್ಲಿ ಘಟನೆಗಳನ್ನು ವರದಿ ಮಾಡುವಾಗ ಹಾಗೂ ದೃಶ್ಯಗಳನ್ನು ದಾಖಲಿಸುವಾಗ ಪತ್ರಕರ್ತರು ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಪ್ರತಿಭಟನಾಕಾರರಿಂದ ತಮ್ಮನ್ನು ಸ್ಪಷ್ಟವಾಗಿ ಪ್ರತ್ಯೇಕಿಸುವ ರೀತಿಯಲ್ಲಿ ಅಂತರ ಕಾಯ್ದುಕೊಂಡು ವರದಿ ಮಾಡಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.
#EthicsofJournalism ಹ್ಯಾಶ್‌ಟ್ಯಾಗ್‌ನೊಂದಿಗೆ ದಿಲ್ಲಿ ಪೊಲೀಸರು ಈ ನಾಲ್ಕು ನಿರ್ದೇಶನಗಳನ್ನು ಪ್ರಕಟಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ವಿರುದ್ಧ ಮೂವರು ಮಹಿಳಾ ಪತ್ರಕರ್ತರಿಂದ ಲೈಂಗಿಕ ಕಿರುಕುಳ ಆರೋಪ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಶನಿವಾರ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ದಿಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.
ಈ ಸಂಬಂಧ ದಿಲ್ಲಿ ಪೊಲೀಸರು ದೂರುಗಳನ್ನು ಸ್ವೀಕರಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಿದ್ದಾರೆ.
ಅಕ್ಟೋಬರ್ 3ರಂದು ಹೊಸದಿಲ್ಲಿ ಪ್ರದೇಶದಲ್ಲಿ ನಡೆದ ಪ್ರತಿಭಟನೆ ವೇಳೆ ‘ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ’ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ ಎಂದು ದಿಲ್ಲಿ ಪೊಲೀಸರು ರವಿವಾರ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದರು.
ಮೂವರು ಮಹಿಳಾ ಪತ್ರಕರ್ತರಿಂದ ಬಂದ ದೂರುಗಳನ್ನು ಹೊಸದಿಲ್ಲಿ ಜಿಲ್ಲೆ ಸ್ವೀಕರಿಸಿದ್ದು, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಆರೋಪಗಳ ಬಳಿಕ ಹಲವು ಸ್ವತಂತ್ರ ಪತ್ರಕರ್ತರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು. ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅವರು ಒತ್ತಾಯಿಸಿದರು.
ಬಿಗ್ ನ್ಯೂಸ್
Puttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.
ಪುತ್ತೂರು, ಅ.6: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಕೃಷ್ಣಪ್ರಸನ್ನ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಸಮಸ್ತ ಹಿಂದೂ ಸಮಾಜಕ್ಕೆ ಸೇರಿದ್ದಾಗಿದ್ದು, ದೇವಸ್ಥಾನದ ಪ್ರಮುಖ ವಿಚಾರಗಳಲ್ಲಿ ಭಕ್ತರ ವಿಶ್ವಾಸ ಪಡೆದುಕೊಳ್ಳುವುದು ಅಗತ್ಯ ಎಂದರು.
ಭಕ್ತರ ಸಭೆ ನಡೆಸದೆ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಸಮಿತಿ ರಚಿಸದಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದರು.
ದೇವಸ್ಥಾನದ ಐತಿಹಾಸಿಕ ಪವಿತ್ರ ಪುಷ್ಕರಿಣಿಯ ಅಭಿವೃದ್ಧಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ಅಪೂರ್ಣವಾಗಿರುವ ನಡುವೆಯೇ ಜಾತ್ರಾ ಸಂದರ್ಭದಲ್ಲಿ ದೇವರಿಗೆ ಕೆರೆ ಉತ್ಸವ ನಡೆಸಿರುವುದು ಆಗಮ ಶಾಸ್ತ್ರಕ್ಕೆ ವಿರುದ್ಧವಾಗಿದೆ ಎಂದು ಕೃಷ್ಣಪ್ರಸನ್ನ ಆಕ್ಷೇಪಿಸಿದರು. ಪುಷ್ಕರಿಣಿಯ ಕಾಮಗಾರಿಯನ್ನು ವ್ಯವಸ್ಥಾಪನಾ ಸಮಿತಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.
ದೇವಸ್ಥಾನದ ಆಡಳಿತದ ಕಾರ್ಯವೈಖರಿಯಿಂದ ಭಕ್ತರ ಧಾರ್ಮಿಕ ಭಾವನೆ ಹಾಗೂ ನಂಬಿಕೆಗಳಿಗೆ ಧಕ್ಕೆ ಉಂಟಾಗುವ ಸಂದರ್ಭಗಳಲ್ಲಿ ವಿಶ್ವಹಿಂದು ಪರಿಷತ್ ಧ್ವನಿ ಎತ್ತಲಿದೆ. ಅಗತ್ಯ ಬಿದ್ದರೆ ಹಿಂದೂ ಸಮಾಜವನ್ನು ಒಗ್ಗೂಡಿಸಿಕೊಂಡು ಹೋರಾಟ ನಡೆಸಲೂ ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ, ಉಪಾಧ್ಯಕ್ಷ ಸತೀಶ್ ಬಿ.ಎಸ್., ನಗರ ಸಂಚಾಲಕ ಚೇತನ್ ಹಾಗೂ ಸೇವಾ ಪ್ರಮುಖ್ ಹರೀಶ್ ದೋಳ್ಪಾಡಿ ಉಪಸ್ಥಿತರಿದ್ದರು.
-
ದಕ್ಷಿಣ ಕನ್ನಡ18 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ18 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್24 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ನಿಧನ ವಾರ್ತೆ17 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಅಪರಾಧ23 hours agoArrested-ಸುಪ್ರೀಂ ಕೋರ್ಟ್ ಆದೇಶ ನಕಲು ಮಾಡಿ ಕೈದಿ ಬಿಡುಗಡೆ; ಜೈಲು ಡಿಐಜಿ ಸೋಮಶೇಖರ್ ಬಂಧನ
-
ಶಿಕ್ಷಣ16 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ17 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ರಾಜಕೀಯ17 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ


















