Connect with us

ಉಡುಪಿ

Post-mortem report-ಅಜೆಕಾರು : ರೀಲ್ಸ್ ರಾಣಿಯಿಂದ ಗಂಡನ ಕೊಲೆ -ಪೋಸ್ಟ್ ಮಾರ್ಟಮ್ ವರದಿಯಲ್ಲೆನಿದೆ ?; ಸ್ಲೋ ಪಾಯ್ಸನ್ ಸುಂದರಿಯ ಸಹೋದರನ ಆರೋಗ್ಯದಲ್ಲೂ ವ್ಯತ್ಯಾಸ – ಅನುಮಾನ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಮಣಿಪಾಲ ಬಳಿಯ ಮರ್ಣೆ ಗ್ರಾಮದ ಅಜೆಕಾರು ದೆಪುತ್ತೆಯ ಬಾಲಕೃಷ್ಣ ಪೂಜಾರಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷಾ ವರದಿ ಇದೀಗ ಹೊರಬಿದ್ದಿದ್ದು, ಅವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ. ಈ ವರದಿ ಪ್ರಕರಣಕ್ಕೆ ಹೊಸ ತಿರುವು ನೀಡಿದೆ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿಯನ್ನು, ಆತನ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿಕೊಂಡು ಹತ್ಯೆಗೈದಿದ್ದು, ಈ ಸಾವನ್ನು ಸಹಜವಾಗಿ ಸಂಭವಿಸಿದಂತೆ ನಾಟಕವಾಡಲಾಗಿತ್ತು. ಈ ಸಂಬಂಧ ಬಾಲಕೃಷ್ಣ ಅವರ ತಂದೆ ಸಂಜೀವ ಪೂಜಾರಿ ಮತ್ತು ಪತ್ನಿ ಪ್ರತಿಮಾಳ ಸಹೋದರ ಸಂದೀಪ್ ಪೂಜಾರಿ ತಮ್ಮ ಶಂಕೆ ವ್ಯಕ್ತಪಡಿಸಿದ್ದರು. ಪ್ರಕರಣದ ನಂತರ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣವನ್ನು ದಾಖಲಿಸಿಕೊಂಡು, ಶವದ ಮರಣೋತ್ತರ ವರದಿ ಹಾಗೂ ಶವದ ಅಂಗಾಗಗಳ ಸ್ಯಾಂಪಲ್‌ಗಳನ್ನು ಎಫ್‌ಎಸ್‌ಎಲ್‌ಗೆ ರವಾನಿಸಿದರು.

Ad Widget

Ad Widget <> Ad Widget

ಮಣಿಪಾಲ ಆಸ್ಪತ್ರೆಯಿಂದ ಪೊಲೀಸ್ ಇಲಾಖೆಗೆ ವರದಿ ಬಂದಿದ್ದು, ಬಾಲಕೃಷ್ಣ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಲ್ಲಿ ವಿವರಿಸಲಾಗಿದೆ. ಅವರ ಮುಖದ ಮೇಲೆ ಗಾಯದ ಗುರುತುಗಳೂ ಕಾಣಿಸಿಕೊಂಡಿವೆ ಎಂದು ವರದಿಯ ವಿವರಗಳು ಬಹಿರಂಗವಾಗಿವೆ. ಇದರಿಂದ ಪ್ರಕರಣದಲ್ಲಿ ಇನ್ನಷ್ಟು ತೀವ್ರತೆ ಬಂದಿದ್ದು, ಪೊಲೀಸರು ತಮ್ಮ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಪ್ರಕರಣದ ತಾತ್ವಿಕ ಮೂಲವನ್ನೇ ಬದಲಿಸಲು ಆರೋಪಿಗಳು ಯತ್ನಿಸುತ್ತಿದ್ದಾರೆ ಎಂಬುದಾಗಿ ಬಾಲಕೃಷ್ಣ ಅವರ ತಮ್ಮ ಪ್ರಕಾಶ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿಲೀಪ್ ಹೆಗ್ಡೆಯ ಕುಟುಂಬದವರು ಪ್ರಕರಣದ ಹಾದಿ ತಪ್ಪಿಸಲು ಪ್ರಭಾವ ಬೀರುತ್ತಿದ್ದಾರೆ ಎಂದು ಹೇಳಿದ್ದಾರೆ. ಪ್ರತಿಮಾಳ ಸಹೋದರ ಸಂದೀಪ್ ಮತ್ತು ಕುಟುಂಬದ ಸದಸ್ಯರಿಗೆ ಅಪರಿಚಿತರಿಂದ ಬೆದರಿಕೆ ಕರೆಗಳು ಬರುತ್ತಿದ್ದು, ಪ್ರಕರಣದಿಂದ ಹಿಂದೆ ಸರಿಯುವಂತೆ ಒತ್ತಡ ಹಾಕಲಾಗುತ್ತಿದೆ ಎಂಬುದಾಗಿ ತಿಳಿಸಿದರು.

Ad Widget

Ad Widget

ಪ್ರಕರಣದಲ್ಲಿ ತೀವ್ರ ಸಂಕಟ ಎದುರಿಸುತ್ತಿರುವ ಕುಟುಂಬವು, ಸರಿಯಾದ ತನಿಖೆ ನಡೆಸುವಂತೆ ಜಿಲ್ಲಾ ಎಸ್.ಪಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಮೃತರ ಮಕ್ಕಳು ಮತ್ತು ಕುಟುಂಬದವರು ನ್ಯಾಯಕ್ಕಾಗಿ ಹೋರಾಟ ಮುಂದುವರಿಸುತ್ತಿದ್ದು, ಸರ್ಕಾರ ಮತ್ತು ಪೊಲೀಸ್ ಇಲಾಖೆಯಿಂದ ಸೂಕ್ತ ನ್ಯಾಯ ದೊರಕುವ ನಿರೀಕ್ಷೆಯಲ್ಲಿದ್ದಾರೆ.

ಸಹೋದರ ಸಂದೀಪ್‌ ಆರೋಗ್ಯದಲ್ಲೂ ವ್ಯತ್ಯಯ:
ಆರೋಪಿ ಪ್ರತಿಮಾಳ ಸಹೋದರ ಸಂದೀಪ್‌ ಮಾತನಾಡಿ, ನಾನು ಮತ್ತು ಭಾವ ಅನ್ನೋನ್ಯವಾಗಿದ್ದೆವು. ತಾವಿಬ್ಬರು ಒಟ್ಟಿಗೆ ಇರುತ್ತಿದ್ದೆವು. ಈಗೀಗ ನನ್ನ ಆರೋಗ್ಯದಲ್ಲೂ ವ್ಯತ್ಯಾಸ ಉಂಟಾಗುತ್ತಿದೆ. ಸ್ನಾಯು ಸೆಳೆತ, ಕುತ್ತಿಗೆ ಭಾಗದಲ್ಲಿ ನೋವು ಆಗಾಗ ಕಾಣಿಸಿಕೊಳ್ಳುತ್ತಿದೆ. ನನಗೂ ಅನುಮಾನವಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವೆ ಎಂದರು.

Ad Widget
Click to comment

Leave a Reply

ಉಡುಪಿ

Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Published

on

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

Ad Widget

Ad Widget alt="Ad Widget"/>

Ad Widget

ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Ad Widget

Ad Widget <> Ad Widget

ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Ad Widget

Ad Widget

ಉಡುಪಿ ನಗರ ಪೊಲೀಸ್ ಠಾಣೆಯ ಎಸ್‌ಐ ರತ್ನಾಕರ ಹಾಗೂ ಸಿಬ್ಬಂದಿಗಳಾದ ಆನಂದ ಗಾಣಿಗ, ಎಲ್ಲಾಲಿಂಗ ಮತ್ತು ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿದರು.

Ad Widget
Continue Reading

ಉಡುಪಿ

H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ

Published

on

Ad Widget

Ad Widget

Ad Widget

Ad Widget

ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.

Ad Widget

Ad Widget alt="Ad Widget"/>

Ad Widget

ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.

ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

ಕೊಲ್ಲೂರು ಬಳಿಕ ಕಾಪು ಹೊಸ ಮಾರಿಗುಡಿ ದೇವಿ ಸನ್ನಿಧಾನದಕ್ಕೆ ಹೆಚ್ ಡಿಕೆ ಕುಟುಂಬ ಭೇಟಿ ನೀಡಲಿದೆ.

Ad Widget
Continue Reading

ಉಡುಪಿ

Udupi-ಉಡುಪಿ: ತಾಯಿ ಅಂತ್ಯಕ್ರಿಯೆಗೆ ಹಾಜರಾಗಲು ಭೂಗತ ಪಾತಕಿ ರವಿ ಪೂಜಾರಿಗೆ ಕೋರ್ಟ್ ಅನುಮತಿ

Published

on

Ad Widget

Ad Widget

Ad Widget

Ad Widget

ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.

Ad Widget

Ad Widget

Ad Widget

Ad Widget

ಉಡುಪಿ: ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.

Ad Widget

Ad Widget alt="Ad Widget"/>

Ad Widget

ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರಿ ಅವರು ನವೆಂಬರ್ 12ರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದ್ದು, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ಸೂಚಿಸಿದೆ.

Ad Widget

Ad Widget <> Ad Widget

ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಭದ್ರತೆಯ ಜವಾಬ್ದಾರಿಯನ್ನು ಬೆಂಗಳೂರು ಕಾರಾಗೃಹ ಸಿಬ್ಬಂದಿ ವಹಿಸಿಕೊಳ್ಳಲಿದ್ದು, ಹೆಚ್ಚುವರಿ ಭದ್ರತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಒದಗಿಸಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಪ್ರಭಾವ ಹೊಂದಿದ್ದ ರವಿ ಪೂಜಾರಿ 2019ರ ಜನವರಿ 19ರಂದು ಆಫ್ರಿಕಾದ ಸೆನೆಗಲ್‌ನಲ್ಲಿ ಬಂಧಿತನಾಗಿದ್ದ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಬೆಂಗಳೂರಿಗೆ ಕರೆತರಲಾಗಿತ್ತು.

Ad Widget

Ad Widget

ಕರ್ನಾಟಕ ಮತ್ತು ಮುಂಬೈ ಸೇರಿದಂತೆ ವಿವಿಧೆಡೆ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆಂಧ್ರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿಯೂ ಈತನ ವಿರುದ್ಧ ಪ್ರಕರಣಗಳಿವೆ.

ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿಯ ಬಪ್ಪು ತೋಟದ ನಿವಾಸಿಯಾಗಿರುವ ರವಿ ಪೂಜಾರಿ, ಚಿಕ್ಕ ವಯಸ್ಸಿನಲ್ಲೇ ತಂದೆಯೊಂದಿಗೆ ಮುಂಬೈಗೆ ತೆರಳಿದ್ದ. 1992ರಲ್ಲಿ ಬಂಧನಕ್ಕೊಳಗಾಗಿದ್ದ ಈತ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!