ರಾಜಕೀಯ
Donald Trump-ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ನಡೆದು ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ನಡುವೆ ತೀವ್ರ ಪೈಪೋಟಿ ನಡೆದು ಟ್ರಂಪ್ ಗೆಲುವು ಕಂಡಿದ್ದಾರೆ. ಈ ಮೂಲಕ ಟ್ರಂಪ್ ಅಮೇರಿಕಾದ 47ನೇ ಅಧ್ಯಕ್ಷರಾಗಿದ್ದಾರೆ
ಅಮೆರಿಕ: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ನಡೆದು ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ನಡುವೆ ತೀವ್ರ ಪೈಪೋಟಿ ನಡೆದು ಟ್ರಂಪ್ ಗೆಲುವು ಕಂಡಿದ್ದಾರೆ. ಈ ಮೂಲಕ ಟ್ರಂಪ್ ಅಮೇರಿಕಾದ 47ನೇ ಅಧ್ಯಕ್ಷರಾಗಿದ್ದಾರೆ
ಡೊನಾಲ್ಡ್ ಟ್ರಂಪ್ ಈಗಾಗಲೇ 230 ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದು, ಕಮಲಾ ಹ್ಯಾರಿಸ್ 210 ಮತಗಳನ್ನು ಹೊಂದಿದ್ದಾರೆ. ಗೆಲುವಿಗಾಗಿ 270 ಮತಗಳು ಅಗತ್ಯವಿತ್ತು.
ಟ್ರಂಪ್ ಉತ್ತರ ಕೆರೊಲಿನಾ, ಮೊಂಟಾನಾ, ಉತಾಹ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ. ಯೊಮಿಂಗ್ (3), ವೆಸ್ಟ್ ವರ್ಜೀನಿಯಾ (4), ಟೆಕ್ಸಾಸ್ (40), ಟೆನೆಸ್ಸೀ (11), ದಕ್ಷಿಣ ಕರೋಲಿನಾ (16), ಒಹಿಯೊ (17) ಮುಂತಾದ ಸ್ಥಳಗಳಲ್ಲಿ ಮತಗಳನ್ನು ತಮ್ಮತ್ತ ಸೆಳೆದಿದ್ದಾರೆ.
ಮತ್ತೊಂದೆಡೆ, ಕಮಲಾ ಹ್ಯಾರಿಸ್ ವಾಷಿಂಗ್ ಟನ್, ಕ್ಯಾಲಿಫೋರ್ನಿಯಾದಲ್ಲಿ ಗೆದ್ದಿದ್ದಾರೆ. ಕೊಲೊರಾಡೊ (10), ಮೇರಿಲ್ಯಾಂಡ್ (10), ನ್ಯೂಯಾರ್ಕ್ (28) ಸೇರಿದಂತೆ ಡೆಮಾಕ್ರಟಿಕ್ ಬಲದ ಪ್ರದೇಶಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಅಂತರ ರಾಜ್ಯ
DK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.
ನವದೆಹಲಿ: ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ”ನನ್ನ ಬಳಿ “ಸ್ಟಿಂಗ್ ಆಪರೇಷನ್” ಬಗ್ಗೆ ಎಲ್ಲ ಮಾಹಿತಿ ಇದೆ. ನಾನು ಸಿಎಂ ಆದ ಬಳಿಕ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ.ನಾನು ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಸುಮ್ಮನೆ ಮಾತನಾಡುವುದಿಲ್ಲ. ಎಲ್ಲ ಸಾಕ್ಷ್ಯಾಧಾರಗಳು ಇವೆ” ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಫಾರ್ಮ್-7 ಮುದ್ರಣ
ಬಿಜೆಪಿ ಕಾರ್ಯಕರ್ತರು ಅಲ್ಪಸಂಖ್ಯಾಕರ ಮತಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸಲು, ಮತದಾರರ ವಿವರಗಳನ್ನು ಮೊದಲೇ ಭರ್ತಿ ಮಾಡಲಾಗಿರುವ ಫಾರ್ಮ್-7ಗಳನ್ನು ಮುದ್ರಿಸಿ ಬಳಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಮತದಾರರ ವಿವರಗಳನ್ನು ಮೊದಲೇ ನಮೂದಿಸಿರುವ ಫಾರ್ಮ್-7ಗಳನ್ನು ಪ್ರದರ್ಶಿಸಿದ ಅವರು, ಈ ಫಾರ್ಮ್‌ಗಳನ್ನು ಬಿಜೆಪಿಯವರು ಮತದಾರರ ಹೆಸರುಗಳನ್ನು ಅಳಿಸಲು ಬಳಸಿದ್ದಾರೆ ಎಂದು ಆರೋಪಿಸಿದರು.
‘ಫಾರ್ಮ್-7 ದುರ್ಬಳಕೆಯನ್ನು ತಡೆಯಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಯಾವುದೇ ಕ್ರಮ ಕೈಗೊಂಡಿಲ್ಲ. ಇಡೀ ಜಗತ್ತು ಈ ಬೆಳವಣಿಗೆಯನ್ನು ಗಮನಿಸುತ್ತಿದೆ’ ಎಂದು ಶಿವಕುಮಾರ್ ಹೇಳಿದರು.
ಜಿಎಸ್‌ಟಿ ಮಂಡಳಿ ಸಭೆಗೆ ದೆಹಲಿಗೆ
ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿರುವುದಾಗಿ ತಿಳಿಸಿದ ಶಿವಕುಮಾರ್, ‘ಇಂದು ಕೆಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ’ ಎಂದರು.
ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ದೇಶಾದ್ಯಂತ ನಡೆದಿರುವ ಬೆಳವಣಿಗೆಗಳು ಈಗಾಗಲೇ ಬಹಿರಂಗಗೊಂಡಿವೆ. ಚುನಾವಣಾ ಆಯೋಗದ ಸದಸ್ಯರೂ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ನ್ಯಾಯಾಲಯಗಳೂ ಇದನ್ನು ಗಮನಕ್ಕೆ ತೆಗೆದುಕೊಂಡಿವೆ. ಸೂಕ್ತ ನಿರ್ದೇಶನ ನೀಡಿದ ನ್ಯಾಯಾಲಯಗಳಿಗೆ ನಾನು ಕೃತಜ್ಞನಾಗಿದ್ದೇನೆ’ ಎಂದರು.
‘ನನ್ನ ರಾಜ್ಯದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಲಾಗುತ್ತಿದೆ. ಫಾರ್ಮ್-7 ಅರ್ಜಿಗಳನ್ನು ಬಿಜೆಪಿ ಕೇಂದ್ರ ಕಚೇರಿಯಲ್ಲೇ ಮುದ್ರಿಸಲಾಗಿದೆ ಎಂಬ ಆರೋಪವಿದೆ. ನಾವು ದೂರು ಸಲ್ಲಿಸಿದ ಬಳಿಕ ಅವರು ಕೂಡಲೇ ಹಲವು ಬಿಎಲ್‌ಒಗಳನ್ನು ಸಂಪರ್ಕಿಸಿ, ಆ ಫಾರ್ಮ್‌ಗಳನ್ನು ವಾಪಸ್ ಪಡೆದಿದ್ದಾರೆ. ಇದು ಅಪರಾಧವಲ್ಲವೇ? ತಡೆಯುವ ಮುನ್ನವೇ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನ ನಡೆದಿತ್ತು’ ಎಂದು ಸಿಎಂ ಪ್ರಶ್ನಿಸಿದರು.
ಸ್ಟಿಂಗ್ ಆಪರೇಷನ್
ಡಿ.ಕೆ.ಶಿವಕುಮಾರ್ ಅವರೇ ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಈ ಎಚ್ಚರಿಕೆ ನೀಡಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ವಿಪಕ್ಷಗಳಿಂದ ಕೆಲ ಸಚಿವರು ‘ಟಾರ್ಗೆಟ್’ ಆಗಿದ್ದು, ರಹಸ್ಯ ಕಾರ್ಯಾಚರಣೆ ನಡೆಸಲು ತಂಡಗಳನ್ನೇ ರಚನೆ ಮಾಡಲಾಗಿದೆ ಎಂಬುದಾಗಿ ಹೇಳಿದ್ದಾರೆನ್ನಲಾಗಿದೆ. ಈ ಬೆಳವಣಿಗೆ ಬಗ್ಗೆ ವಿಪಕ್ಷಗಳು ಖಾರವಾದ ಪ್ರತಿಕ್ರಿಯೆಯನ್ನೂ ನೀಡಿವೆ.
ಅಂತರ ರಾಜ್ಯ
Rahul Gandhi-‘45 FIR ನನಗೆ ಪದಕವಿದ್ದಂತೆ, 100 FIR ನನ್ನ ಗುರಿ’-ರಾಹುಲ್ ಗಾಂಧಿ
ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.
ಹೊಸದಿಲ್ಲಿ, ಅ.7: ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧವೂ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು. ಅವರ ಕಾರ್ಯವೈಖರಿ ಹಾಗೂ ಅಧೀನ ಅಧಿಕಾರಿಗಳೊಂದಿಗಿನ ಭಿನ್ನಮತದ ಕುರಿತು ಪ್ರತಿಪಕ್ಷಗಳು ಪ್ರಶ್ನೆಗಳನ್ನು ಎತ್ತುತ್ತಿರುವ ಹಿನ್ನೆಲೆಯಲ್ಲಿ ರಾಹುಲ್, ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ದಿಢೀರ್ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ ಅವರು, ಜ್ಞಾನೇಶ್ ಕುಮಾರ್ ಅವರನ್ನು ‘ಅಕ್ರಮ ಚುನಾವಣಾ ಆಯೋಗದ ಮುಖ್ಯಸ್ಥ’ ಎಂದು ಆರೋಪಿಸಿದರು.
“ನಾವು ಜಂತರ್ ಮಂತರ್‌ಗೆ ತೆರಳಿ ಒಟ್ಟಾಗಿ ಕುಳಿತು, ಕುಮಾರ್ ಈ ದೇಶದ ಕಾನೂನುಬದ್ಧ ಚುನಾವಣಾ ಆಯುಕ್ತರಲ್ಲ ಎಂಬುದನ್ನು ದೇಶಕ್ಕೆ ತಿಳಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧವೂ ಅವರು ಆರೋಪಗಳನ್ನು ಮಾಡಿದರು. ಈ ಮೂವರು ಜ್ಞಾನೇಶ್ ಕುಮಾರ್ ಅವರೊಂದಿಗೆ ಸೇರಿ ದೇಶದ ಪ್ರಜಾಪ್ರಭುತ್ವವನ್ನು ನಾಶಗೊಳಿಸಿದ್ದಾರೆ ಎಂದು ರಾಹುಲ್ ಗಾಂಧಿ ದೂರಿದರು.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ಕುರಿತು ಮಾತನಾಡಿದ ಅವರು, “ನನ್ನ ವಿರುದ್ಧ 45 ಎಫ್‌ಐಆರ್‌ಗಳಿವೆ. 100 ಎಫ್‌ಐಆರ್‌ಗಳನ್ನು ಹೊಂದುವುದು ನನ್ನ ಗುರಿ. ಪ್ರತಿಯೊಂದು ಎಫ್‌ಐಆರ್ ನನಗೆ ಪದಕವಿದ್ದಂತೆ” ಎಂದು ಹೇಳಿದರು.
ಇದೇ ವೇಳೆ, ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮಂಗಳವಾರ ಪ್ರತಿಪಕ್ಷಗಳ ನಾಯಕರು ದಿನವಿಡೀ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದರು. ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.
ಮತ್ತೊಂದೆಡೆ, ‘ಮತ ಕಳವು’ ಆರೋಪಕ್ಕೆ ಸಂಬಂಧಿಸಿ ದೆಹಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲು ಮುಂದಾದ ಆಮ್ ಆದ್ಮಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್‌ಗಳ ಮೂಲಕ ತಡೆದರು.
ಅಂತರ ರಾಜ್ಯ
Jnanesh kumar-ವಿಪಕ್ಷಗಳ ರಾಜೀನಾಮೆ ಒತ್ತಾಯದ ನಡುವೆ ಜ್ಞಾನೇಶ್ ಕುಮಾರ್ ಛತ್ತೀಸ್‌ಗಢ ಭೇಟಿ ಮುಂದೂಡಿಕೆ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಅಕ್ಟೋಬರ್ 7 ಮತ್ತು 8ರಂದು ಜ್ಞಾನೇಶ್ ಕುಮಾರ್ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಈ ಭೇಟಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎಂಬ ವದಂತಿಗಳು ಹರಿದಾಡುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಆಕ್ರೋಶ
ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹಾಗೂ ಅರ್ಜಿ ನಮೂನೆ-6ರಲ್ಲಿನ ಮಾರ್ಪಾಡು ಸೇರಿದಂತೆ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ.
ದೇವಾಲಯ, ಜಲಪಾತಗಳಿಗೆ ಭೇಟಿ ನೀಡಬೇಕಿತ್ತು
ಎರಡು ದಿನಗಳ ಛತ್ತೀಸ್‌ಗಢ ಪ್ರವಾಸದ ವೇಳೆ ಜ್ಞಾನೇಶ್ ಕುಮಾರ್ ಅವರು ದಾಂತೇವಾಡದಲ್ಲಿರುವ ದಾಂತೇಶ್ವರಿ ದೇವಾಲಯ, ಬಸ್ತಾರ್‌ನ ಚಿತ್ರಕೋಟೆ ಜಲಪಾತ ಹಾಗೂ ಕಬೀರ್ ಧಾಮ್ ಜಿಲ್ಲೆಯ ಭೋರಂಡಿಯೊ ದೇವಾಲಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.
ಈ ಭೇಟಿಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಸರ್ಕಾರವು ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಅತಿಥಿಯ ಗೌರವ ನೀಡಲು ನಿರ್ಧರಿಸಿತ್ತು. ಅವರನ್ನು ಸ್ವಾಗತಿಸುವುದು ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲು ರಾಯ್‌ಪುರ ಜಿಲ್ಲಾಡಳಿತ, ಪೊಲೀಸರು ಮತ್ತು ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ ಪ್ರಾಧಿಕಾರಗಳು ಸಿದ್ಧತೆ ಆರಂಭಿಸಿದ್ದವು. ಇದೀಗ ಭೇಟಿಯನ್ನು ಮುಂದೂಡಲಾಗಿದೆ.
-
Uncategorized21 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized23 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized9 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
Uncategorized8 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಮಂಗಳೂರು7 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ಅಪರಾಧ8 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ7 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ನಿಧನ ವಾರ್ತೆ7 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು


















