Uncategorized
ಬಾಲಕಿ ಜತೆ ದೈಹಿಕ ಸಂಪರ್ಕದಲ್ಲಿ ತೊಡಗಿದ್ದ ಮಧ್ಯ ವಯಸ್ಕ ಹಠಾತ್ ಹೃದಯಘಾತಕ್ಕೆ ತುತ್ತಾಗಿ ಮೃತ್ಯು- ಕಾರಣವೇನು ಗೊತ್ತಾ ?

ಮುಂಬೈನಿಂದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ವಜ್ರ ಕಂಪೆನಿಯ ಮ್ಯಾನೇಜರ್ ಒಬ್ಬ 14 ವರ್ಷದ ಬಾಲಕಿಯೊಂದಿಗೆ ದೈಹಿಕ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದಾಗ, ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು BNS ಮತ್ತು POCSO ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.
41ರ ಹರೆಯದ ಗುಜರಾತ್ ಮೂಲದ ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯನ್ನು ಮುಂಬೈಗೆ ಕರೆತಂದು ಹೊಟೇಲ್ ರೂಮಿನಲ್ಲಿ ಆಕೆಯ ಜೊತೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ . ಈ ವೇಳೆ ಹಠಾತ್ ಹೃದಯಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾನೆ. ಮಿತಿಮೀರಿ ವಯಾಗ್ರ ಮಾತ್ರೆಯನ್ನು ಸೇವಿಸಿದ ಕಾರಣ ಸಂಭೋಗದ ವೇಳೆ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.
ಬಾಲಕಿಯ ತಾಯಿ ಮೃತ ಮ್ಯಾನೇಜರ್ ವಿರುದ್ಧ ಪೊಲೀಸ್ ದೂರನ್ನು ನೀಡಿದ್ದಾರೆ. ಪೊಲೀಸರು BNS ಮತ್ತು POCSO ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಬದುಕಿಲ್ಲ ಹೀಗಾಗಿ ಸಾರಾಂಶ ವರದಿ ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಸೂರತ್‌ನ ಡೈಮಂಡ್ ಫ್ಯಾಕ್ಟರಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ 41 ವರ್ಷದ ಈ ವ್ಯಕ್ತಿ ಬಾಲಕಿಯ ಕುಟುಂಬಕ್ಕೆ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದನು. ಅಲ್ಲದೆ ಬಾಲಕಿಗೂ ವಜ್ರದ ಫ್ಯಾಕ್ಟರಿಯಲ್ಲಿಯೇ ಕೆಲಸವನ್ನು ಸಹ ಕೊಟ್ಟಿದ್ದನು.
ಬಾಲಕಿಯ ಕುಟುಂಬದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದ ಮ್ಯಾನೇಜರ್ ಹಣದ ಸಹಾಯವನ್ನು ಕೂಡಾ ಮಾಡುತ್ತಿದ್ದನು. ಅಷ್ಟೇ ಅಲ್ಲದೆ ಅವರು ಆತನ ಮೇಲಿನ ನಂಬಿಕೆಯಿಂದ ಮಗಳನ್ನು ಆತನೊಂದಿಗೆ ಕೆಲಸದ ನಿಮಿತ್ತ ಹೊರಗಡೆ ಕೂಡಾ ಕಳುಹಿಸಿಕೊಡುತ್ತಿದ್ದರು.
ಹೀಗೆ ನವೆಂಬರ್ 2 ರಂದು ಮ್ಯಾನೇಜರ್ ಕೆಲಸದ ನಿಮಿತ್ತ ಆ ಬಾಲಕಿಯನ್ನು ಮುಂಬೈಗೆ ಕರೆತಂದು ಇಲ್ಲಿನ ಗ್ರಾಂಟ್ ರಸ್ತೆಯಲ್ಲಿರುವ ಹೊಟೇಲ್‌ನಲ್ಲಿ ಬಾಲಕಿಯ ನಕಲಿ ಆಧಾರ್ ಕಾರ್ಡ್ ತೋರಿಸಿ ಆಕೆಯೊಂದಿಗೆ ಹೊಟೇಲ್ ರೂಮ್‌ನಲ್ಲಿ ತಂಗಿದ್ದಾನೆ. ಜೊತೆಗೆ ನೀನು ದೈಹಿಕ ಸಂಪರ್ಕಕ್ಕೆ ಸಹಕರಿಸದಿದ್ದರೆ ನಿನ್ನ ಕುಟುಂಬಕ್ಕೆ ಹಣ ನೀಡುವುದನ್ನು ನಿಲ್ಲಿಸುತ್ತೇನೆ, ಇಲ್ಲಿಯವರೆಗೆ ಕೊಟ್ಟ ಹಣವನ್ನು ಸಹ ವಾಪಸ್ ಪಡೆಯುತ್ತೇನೆ ಎಂದು ಬ್ಲ್ಯಾಕ್‌ಮೇಲ್ ಮಾಡಿ ಬಾಲಕಿಯ ಜೊತೆ ಬಲವಂತವಾಗಿ ಸಂಭೋಗ ನಡೆಸಿದ್ದಾನೆ.
Uncategorized
CJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ CJP, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ಪ್ರತಿಭಟನೆಗೆ ಕರೆ ನೀಡಿದೆ.
ಹೊಸದಿಲ್ಲಿ: ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಲಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಪ್ರತಿಭಟನೆಯಿಂದ ಸಂಚಾರ ದಟ್ಟಣೆ ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳು ಉಂಟಾಗಬಹುದೆಂಬ ಕಾರಣಕ್ಕೆ 250 ಹೆಚ್ಚು ರೈಲುಗಳ ಸಂಚಾರ ರದ್ದುಪಡಿಸಲಾಗಿದ್ದು, 57 ಮೆಟ್ರೋ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚುವ ಕ್ರಮ ಕೈಗೊಳ್ಳಲಾಗಿದೆ. ಇದರ ಜತೆಗೆ, ನಿರ್ದಿಷ್ಟ ಪ್ರದೇಶದಲ್ಲಿ 24 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲು ದಿಲ್ಲಿ ಪೊಲೀಸರು ಆದೇಶಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ CJP, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಿದೆ.
38 ರೈಲುಗಳ ಸಂಚಾರ ರದ್ದು
ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 10ರ ಬೆಳಿಗ್ಗೆ 4ರಿಂದ ಮಧ್ಯಾಹ್ನ 2ರ ನಡುವೆ ಹೊಸದಿಲ್ಲಿ ಮತ್ತು ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಗಳನ್ನು ತಲುಪಬೇಕಿದ್ದ 38 ರೈಲುಗಳ ಸಂಚಾರವನ್ನು ಉತ್ತರ ರೈಲ್ವೆ ರದ್ದುಗೊಳಿಸಿದೆ. ಈ ಅವಧಿಯಲ್ಲಿ ಎರಡು ನಿಲ್ದಾಣಗಳಲ್ಲಿ ಪ್ರಯಾಣ ಮುಕ್ತಾಯಗೊಳಿಸಬೇಕಿದ್ದ ಒಟ್ಟು 165 ರೈಲುಗಳ ಪೈಕಿ 38 ರೈಲುಗಳನ್ನು ಮಾತ್ರ ರದ್ದುಗೊಳಿಸಲಾಗಿದೆ ಎಂದು ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಿಮಾಂಶು ಶೇಖರ್ ಉಪಾಧ್ಯಾಯ ತಿಳಿಸಿದ್ದಾರೆ.
ರದ್ದುಗೊಂಡ ರೈಲುಗಳಲ್ಲಿ ಮಗಧ್ ಎಕ್ಸ್‌ಪ್ರೆಸ್, ಸಂಪೂರ್ಣ ಕ್ರಾಂತಿ ಎಕ್ಸ್‌ಪ್ರೆಸ್, ಅಮೃತ್ ಭಾರತ್ ಎಕ್ಸ್‌ಪ್ರೆಸ್, ಶತಾಬ್ದಿ ಎಕ್ಸ್‌ಪ್ರೆಸ್, ಪ್ರಯಾಗ್‌ರಾಜ್ ಎಕ್ಸ್‌ಪ್ರೆಸ್ ಮತ್ತು ಹಂಸಫರ್ ಎಕ್ಸ್‌ಪ್ರೆಸ್ ಸೇರಿವೆ. ಕೆಲವು ರೈಲುಗಳ ಪ್ರಯಾಣವನ್ನು ಅಂತಿಮ ನಿಲ್ದಾಣ ತಲುಪುವ ಮೊದಲೇ ಅಂತ್ಯಗೊಳಿಸುವ ನಿರ್ಧಾರವೂ ಕೈಗೊಳ್ಳಲಾಗಿದೆ.
ಮುಂಬೈನಿಂದ ದಿಲ್ಲಿಗೆ ಸಂಚರಿಸುವ ಹಲವು ದೂರದ ಪ್ರಯಾಣದ ರೈಲುಗಳ ಮೇಲೂ ಪರಿಣಾಮ ಬೀರಿದೆ. ಮುಂಬೈ ಸೆಂಟ್ರಲ್–ಹೊಸದಿಲ್ಲಿ ರಾಜಧಾನಿ ಎಕ್ಸ್‌ಪ್ರೆಸ್ ಮತ್ತು ಆಗಸ್ಟ್ ಕ್ರಾಂತಿ ರಾಜಧಾನಿ ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯನ್ನು ಐದು ಗಂಟೆಗಳಷ್ಟು ಬದಲಾಯಿಸಲಾಗಿದೆ. ಬಾಂದ್ರಾ ಟರ್ಮಿನಸ್–ಹಜರತ್ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಸೇರಿದಂತೆ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ರದ್ದಾದ ರೈಲುಗಳ ಟಿಕೆಟ್ ಹಣವನ್ನು ಮರುಪಾವತಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
57 ಮೆಟ್ರೋ ನಿಲ್ದಾಣಗಳ ಪ್ರವೇಶ ಬಂದ್
ಪ್ರತಿಭಟನಾಕಾರರು ಜಂತರ್ ಮಂತರ್ ತಲುಪುವುದನ್ನು ತಡೆಯುವ ಉದ್ದೇಶದಿಂದ ದಿಲ್ಲಿ ಮೆಟ್ರೋದ 57 ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚುವಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ರಾಜೀವ್ ಚೌಕ್, ಹೊಸದಿಲ್ಲಿ, ಸೆಂಟ್ರಲ್ ಸೆಕ್ರೆಟರಿಯೇಟ್, ಪಟೇಲ್ ಚೌಕ್ ಮತ್ತು ಕಾಶ್ಮೀರಿ ಗೇಟ್ ಸೇರಿದಂತೆ ಪ್ರಮುಖ ಮೆಟ್ರೋ ನಿಲ್ದಾಣಗಳು ಈ ನಿರ್ಬಂಧದ ವ್ಯಾಪ್ತಿಗೆ ಒಳಪಟ್ಟಿವೆ.
24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ
ಜಂತರ್ ಮಂತರ್ ಸಮೀಪದ ಜನಪಥ್–ಕರ್ತವ್ಯ ಪಥ್ ಜಂಕ್ಷನ್‌ನ ಸುತ್ತಲಿನ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಅಕ್ಟೋಬರ್ 9ರ ರಾತ್ರಿ 10ರಿಂದ ಅಕ್ಟೋಬರ್ 10ರ ರಾತ್ರಿ 10ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲು ದಿಲ್ಲಿ ಪೊಲೀಸರು ಆದೇಶಿಸಿದ್ದಾರೆ.
ಏರ್‌ಟೆಲ್, ವೊಡಾಫೋನ್-ಐಡಿಯಾ, ಜಿಯೋ ಮತ್ತು ಎಂಟಿಎನ್‌ಎಲ್ ದೂರಸಂಪರ್ಕ ಕಂಪನಿಗಳಿಗೆ ಈ ಸಂಬಂಧ ಸೂಚನೆ ನೀಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದೂರಸಂಪರ್ಕ ಸೇವೆಗಳ ತಾತ್ಕಾಲಿಕ ಸ್ಥಗಿತಕ್ಕೆ ಸಂಬಂಧಿಸಿದ ನಿಯಮಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ನಿರ್ಬಂಧದಿಂದ ಕನ್ನಾಟ್ ಪ್ಲೇಸ್, ಮಂಡಿ ಹೌಸ್, ಪ್ರಗತಿ ಮೈದಾನ, ಬಾಂಗ್ಲಾ ಸಾಹಿಬ್ ಗುರುದ್ವಾರ, ಬರಾಖಂಬಾ ರಸ್ತೆ, ಖಾನ್ ಮಾರ್ಕೆಟ್, ಲೋಧಿ ರಸ್ತೆ ಮತ್ತು ಜಂಗ್‌ಪುರದ ಕೆಲವು ಭಾಗಗಳಿಗೂ ಪರಿಣಾಮ ಬೀರಲಿದೆ.
‘ಯುವಜನರ ಬಗ್ಗೆ ಭಯವಿದ್ದರೆ ದೇಶವನ್ನೇ ಮುಚ್ಚಿಬಿಡಲಿ’
ಪ್ರತಿಭಟನೆಗೆ ಮುನ್ನ ರೈಲುಗಳ ರದ್ದತಿ ಮತ್ತು ಸಾರಿಗೆ ನಿರ್ಬಂಧಗಳ ಕುರಿತು CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಹೆದರಿದ್ರಾ ಮೋದಿಜೀ..?’ ಎಂದು ಪ್ರಶ್ನಿಸಿದ್ದಾರೆ. ಯುವಜನರ ಪ್ರತಿಭಟನೆಗೆ ಸರ್ಕಾರ ಹೆದರುತ್ತಿದೆ ಎಂದು ಆರೋಪಿಸಿದ ಅವರು, ಸರ್ಕಾರಕ್ಕೆ ಅಷ್ಟು ಭಯವಿದ್ದರೆ ಇಡೀ ದೇಶವನ್ನೇ ಮುಚ್ಚಿಬಿಡಲಿ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರಿನಿಂದ ಮುಂಬೈಗೆ ಮರಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧೈರ್ಯವಿದ್ದರೆ ತಮ್ಮನ್ನು ಬಂಧಿಸಲಿ ಎಂದು ಸರ್ಕಾರಕ್ಕೆ ಸವಾಲು ಹಾಕಿದರು. ಅಧಿಕಾರಿಗಳು ಎಷ್ಟೇ ನಿರ್ಬಂಧ ವಿಧಿಸಿದರೂ ಪಕ್ಷದ ಸ್ವಯಂಸೇವಕರು ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
CJP ನಾಯಕ ಸೌರವ್ ದಾಸ್ ಕೂಡ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಪಕ್ಷದ ಸ್ವಯಂಸೇವಕರನ್ನು ಬಂಧಿಸಲಾಗುತ್ತಿದೆ ಮತ್ತು ಕೆಲವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ಆರೋಪಿಸಿದ್ದಾರೆ. ದಿಲ್ಲಿಯನ್ನು ಭದ್ರಕೋಟೆಯನ್ನಾಗಿ ಪರಿವರ್ತಿಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿರುವುದನ್ನೂ ಅಭಿಜಿತ್ ದೀಪ್ಕೆ ಪ್ರಶ್ನಿಸಿದ್ದಾರೆ. ಪ್ರತಿಭಟನೆಗೆ ಮೀಸಲಿಟ್ಟಿರುವ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅನುಮತಿಯ ಅಗತ್ಯವೇನು ಎಂದು ಅವರು ಆಕ್ಷೇಪಿಸಿದ್ದಾರೆ.
ನಿರ್ಬಂಧಗಳಿಗೆ ಸುಪ್ರೀಂ ಕೋರ್ಟ್ ಆಕ್ಷೇಪ
ರೈಲು ಮತ್ತು ಮೆಟ್ರೋ ಸಂಚಾರದ ಮೇಲಿನ ನಿರ್ಬಂಧಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಕಾನೂನು ಸುವ್ಯವಸ್ಥೆ ಕಾಪಾಡಲು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಅಧಿಕಾರ ಕಾನೂನು ಜಾರಿ ಸಂಸ್ಥೆಗಳಿಗೆ ಇದೆ. ಆದರೆ, ಎಲ್ಲ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ.
‘ನೊಣವನ್ನು ಕೊಲ್ಲಲು ದೊಡ್ಡ ಸುತ್ತಿಗೆಯನ್ನು ಬಳಸಲಾಗದು’ ಎಂಬ ಮಾತಿನ ಮೂಲಕ ಅತಿಯಾದ ನಿರ್ಬಂಧಗಳ ಬಗ್ಗೆ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ. ನಿರ್ಬಂಧ ವಿಧಿಸುವುದು ಮತ್ತು ಸಂಪೂರ್ಣವಾಗಿ ಮುಚ್ಚುವುದು ಬೇರೆಬೇರೆ ಎಂದು ಹೇಳಿದ ನ್ಯಾಯಾಲಯ, ಯುವಕರು, ವೃದ್ಧರು ಸೇರಿದಂತೆ ಎಲ್ಲ ವಯೋಮಾನದ ಜನರು ಪ್ರಯಾಣಿಸುತ್ತಾರೆ. ಅವರಿಗೆ ಮೂಲಭೂತ ಸಾರಿಗೆ ಸೌಲಭ್ಯಗಳನ್ನು ಪಡೆಯುವ ಹಕ್ಕಿದೆ ಎಂದು ತಿಳಿಸಿದೆ.
ಅನಿಯಂತ್ರಿತ ಸಂಚಾರವನ್ನು ತಡೆಯಲು ಕ್ರಮ ಕೈಗೊಳ್ಳಬಹುದು. ಆದರೆ, ಅದರ ಹೆಸರಿನಲ್ಲಿ ಜನರಿಗೆ ಯಾವುದೇ ಸಾರಿಗೆ ಸೌಲಭ್ಯವಿಲ್ಲದಂತೆ ಮಾಡುವುದು ಸರಿಯಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪ್ರತಿಭಟನೆ ನಡೆಸುವ ಹಕ್ಕಿನ ಜತೆಗೆ ಸಾರ್ವಜನಿಕರ ಹಕ್ಕುಗಳು ಮತ್ತು ಸುರಕ್ಷತೆಯನ್ನು ರಕ್ಷಿಸುವ ಜವಾಬ್ದಾರಿಯೂ ಸರ್ಕಾರದ ಮೇಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಪ್ರತಿಭಟನೆ, ಸಾರಿಗೆ ನಿರ್ಬಂಧ ಮತ್ತು ಇಂಟರ್ನೆಟ್ ಸ್ಥಗಿತದ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಪ್ರಯಾಣಿಸುವವರು ರೈಲುಗಳ ಪರಿಷ್ಕೃತ ವೇಳಾಪಟ್ಟಿಯನ್ನು ಪರಿಶೀಲಿಸಿಕೊಂಡು ಪ್ರಯಾಣ ಯೋಜನೆ ರೂಪಿಸುವಂತೆ ರೈಲ್ವೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
Uncategorized
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿಗೆ ‘ಅಂಬಿಯೋರ- 2026’; ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ
ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸ್ವಿನಿಕಾ ವಿಯೋಲಾ ಕ್ರಾಸ್ತಾ ಹಾಗೂ ಧ್ಯಾನ್ ಬಿ ಪ್ರಥಮ, ಪ್ರಾಡಕ್ಟ್ ಇನ್ನೊವೇಟಿವ್ ಚಾಲೆಂಜ್ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಿವಾನಿ ಹಾಗೂ ಗಾನವಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಅದ್ವಿತಿ ಜಿ ಹಾಗೂ ಎ ಜಿ ಕೃತಿಕಾ ಪ್ರಥಮ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವೇದಿತಾ ಕೆ ಮತ್ತು ತನುಶ್ರೀ ಬಿ ದ್ವಿತೀಯ, ಬಿಸ್ನೆಸ್ ಮಾಡೆಲ್ ಸ್ಪರ್ಧೆಯಲ್ಲಿ ಹೆಫ್ಜಿಬಾ ಎಂ ರಿನ್ಸಾನ್ ಹಾಗೂ ಪ್ರೀತಾ ಎ ದ್ವಿತೀಯ, ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸಜ್ನಾಜ್ ಮತ್ತು ಹಲೀಮತ್ ಸೌಧ ದ್ವಿತೀಯ ಹಾಗೂ ಮಿನಿ ಮಿಲಿಟಿಯ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಹಾದ್ ಅಜಾರ್ ಮತ್ತು ಮೊಹಮ್ಮದ್ ರಫಾಜ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.
Uncategorized
Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಮಾತನಾಡಿದರು.

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ ಬಗ್ಗೆ ಮಾತ್ರವಲ್ಲ. ಇಲ್ಲಿ ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ ಮನಸ್ಥಿತಿ ಮತ್ತು ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ ತಿಳಿದುಕೊಳ್ಳಬಹುದು. ಇದರ ನಡುವೆ ಬರುವ ಸೋಲು-ಗೆಲುವುಗಳನ್ನು ವಿದ್ಯಾರ್ಥಿಗಳು ಸಮನಾಗಿ ಸ್ವೀಕರಿಸಬೇಕು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಗೌರವ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ ವಿಚಾರಗಳು ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ ಮೇಳಗಳು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಉಪಸ್ಥಿತರಿದ್ದರು.
ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು:
ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದು ಫ್ರೋಜನ್ ಡಿಲೈಟ್ ತಂಡ ಪ್ರಥಮ ಸ್ಥಾನ, ಬೈಟ್ ಬೈ ಬೈಟ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಹಾಗೂ ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.
ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ. ಕೃತಿಕಾ ನಿರ್ವಹಿಸಿದರು.
-
ನಿಧನ ವಾರ್ತೆ10 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು9 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ10 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಮಂಗಳೂರು6 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ10 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ10 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ10 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ11 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















