Connect with us

ಬಿಗ್ ನ್ಯೂಸ್

Arogya Mela-ಪೆರ್ನೆಯಲ್ಲಿ ಬೃಹತ್ ಆರೋಗ್ಯ ಮೇಳ – ಉಚಿತ ಆರೋಗ್ಯ ತಪಾಸಣ ಶಿಬಿರ ಹಾಗೂ ರಕ್ತದಾನ ಶಿಬಿರ; ಲಭ್ಯವಿರುವ ವೈದ್ಯರು ಮತ್ತು ಸೇವಾ ಸೌಲಭ್ಯಗಳ ವಿವರ ಇಲ್ಲಿದೆ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಪೆರ್ನೆ: ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯಾನಗರ-ಪೆರ್ನೆ ಬಂಟ್ವಾಳ ತಾಲೂಕು ಇದರ ನೂತನ ಹಿರಿಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ’ಪದಗ್ರಹಣ’ದ ಪ್ರಯುಕ್ತ, ಯೇನಪೋಯ ವಿಶ್ವವಿದ್ಯಾಲಯ, ದೇರಳಕಟ್ಟೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ ಇವರ ಜಂಟಿ ಆಶ್ರಯದಲ್ಲಿ “ಬೃಹತ್ ಆರೋಗ್ಯ ಮೇಳ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ” ವನ್ನು ಆದಿತ್ಯವಾರ ನ 10ರಂದು ಪೆರ್ನೆ ಶ್ರೀ ರಾಮಚಂದ್ರ ವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಪೆರ್ನೆ ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯದ ಸಂಚಾಲಕರಾದ ಹರೀಶ್ ಭಂಡಾರಿ.ಟಿ. ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಪೆರ್ನೆ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ತೋಯಜಾಕ್ಷ ಶೆಟ್ಟಿ ಯವರು ಉದ್ಘಾಟಿಸಲಿದ್ದಾರೆ.

Ad Widget

Ad Widget <> Ad Widget

ಡಾ.ತಿಮ್ಮಯ್ಯ ಹೆಚ್.ಆರ್.ಜಿಲ್ಲಾ ಆರೋಗ್ಯಾಧಿಕಾರಿ ದ.ಕ.ಜಿಲ್ಲೆ,ಡಾ.ಅಶೋಕ ಕುಮಾರ್ ರೈ ತಾಲೂಕು ಅರೋಗ್ಯಾಧಿಕಾರಿ ಬಂಟ್ವಾಳ,ಡಾ.ಶಶಿಕಲಾ ವೈಧ್ಯಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ,ಡಾ.ಅಶ್ವಿನಿ ವಿಸ್ತರಣಾಧಿಕಾರಿ ಯೇನಪೋಯ ವಿಶ್ವವಿದ್ಯಾನಿಲಯ,ಡಾ.ಮಹಾಲಿಂಗೇಶ್ವರ ಭಟ್ ಧನ್ವಂತರಿ ಆಸ್ಪತ್ರೆ ಪುತ್ತೂರು, ರಾಮಕಿಶನ್ ನೆಲ್ತೋಟ್ಟು ಅಧ್ಯಕ್ಷರು ಲಯನ್ಸ್ ಕ್ಲಬ್ ಮಾಣಿ, ಹನೀಫ್ ಹಾಜಿ ಅಧ್ಯಕ್ಷರು ಎಮ್.ಫ್ರ್ರೆಂಡ್ಸ್ ಹಾಗೂ ಹದಾಯ ಫೌಂಡೇಶನ್, ಕೇಶವ ರಾಮ್ ವ್ಯವಸ್ಥಾಪಕ ನಿರ್ದೇಶಕರು COCO Guru Puttur,ಸುನೀಲ್ ಕುಮಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೆರ್ನೆ,ಮುಸ್ತಫಾ ಕಡಂಬು ಉಧ್ಯಮಿಗಳು ಅನಿತಾ ಬೀಡಿ,ಶ್ರೀಮತಿ ಆಯಿಷಾ ಪೆರ್ನೆ ಆರೋಗ್ಯ ತಪಾಸಣಾಧಿಕಾರಿ ಮಂಗಳೂರು ವಿಶ್ವವಿದ್ಯಾನಿಲಯ,ಶ್ರೀ ಸತ್ಯನಾರಾಯಣ ರೈ ಮುಖ್ಯ ಗುರುಗಳು ಶ್ರೀ ರಾಮಚಂದ್ರ ವಿದ್ಯಾಲಯ ಪೆರ್ನೆ,ಶ್ರೀ ಸುಲೈಮಾನ್ ಸಂಚಾಲಕರು ಮೀದಿಯಾ ಹಿರಿಯ ಪ್ರಾಥಮಿಕ ಶಾಲೆ ದೋರ್ಮೆ ಇವರಗಳು ಉಪಸ್ಥಿತರಿರಲಿದ್ದಾರೆ.

ಈ ಆರೋಗ್ಯ ಮೇಳದಲ್ಲಿ ಲಭ್ಯವಿರುವ ವೈದ್ಯರು ಮತ್ತು ಸೇವಾ ಸೌಲಭ್ಯಗಳು:-
1.ವೈದ್ಯಕೀಯ ತಜ್ಞರು
2.ಶಸ್ತ್ರ ಚಿಕಿತ್ಸಕರು
3.ಮಕ್ಕಳ ತಜ್ಞರು
4.ಸ್ತ್ರೀ ರೋಗ ತಜ್ಞರು
5.ಎಲುಬು ಮತ್ತು ಕೀಲು ತಜ್ಞರು
6.ಚರ್ಮ ಮತ್ತು ಲೈಂಗಿಕ ತಜ್ಞರು
7.ಕಿವಿ, ಮೂಗು, ಗಂಟಲು ತಜ್ಞರು
8.ಕಣ್ಣಿನ ಪರೀಕ್ಷಾ ಕೇಂದ್ರ
9.ದಂತ ಚಿಕಿತ್ಸಾ ಕೇಂದ್ರ
10.ಉಚಿತ ಔಷಧಿ ಮತ್ತು ಪ್ರಯೋಗಾಲಯ ಸೇವೆ
11.ಅಸಾಂಕ್ರಾಮಿಕ ರೋಗ ತಪಾಸಣೆ (NCP Clinic)
12.ಆಯುಷ್ಯ, ಆಯುರ್ವೇದಿಕ್, ಸಿದ್ಧ,ಹೋಮಿಯೋಪತಿ, ಯುನಾನಿ ಔಷದಿ
13.ಕ್ಷಯರೋಗ, ಮಲೇರಿಯಾ, ಹಿಮೋಗ್ಲೋಬಿನ್ ಪರೀಕ್ಷೆ
14.ಆಪ್ತ ಸಮಾಲೋಚನೆ (ಹದಿಹರೆಯದ ಮಕ್ಕಳಿಗೆ)
15.ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್ ತಪಾಸಣೆ
ಮತ್ತು “ಮಹಿಳೆಯರಿಗೆ ಅತ್ಯಾಧುನಿಕ ತಂತ್ರಜ್ಞಾನದ Screening test for breast (Mammogram) ಮೊಬೈಲ್ ಕ್ಲಿನಿಕ್ ಬಸ್ಸಿನಲ್ಲಿ ತಪಾಸಣಾ ವ್ಯವಸ್ಥೆಯಿರುತ್ತದೆ.

Ad Widget

Ad Widget

ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದಲ್ಲಿ ಭಾಗವಹಿಸಿ ಇದರ ಪ್ರಯೋಗಗಳನ್ನು ಪಡೆದುಕೊಳ್ಳುವಂತೆ ಈ ಕಾರ್ಯಕ್ರಮದ ಆಯೋಜಕರಾದ ಹಿರಿಯ ವಿದ್ಯಾರ್ಥಿ ಸಂಘದ ಪರವಾಗಿ ಅಧ್ಯಕ್ಷರಾದ ಶ್ರೀ ಮಾಕ್ಸಿಂ ಲೋಬೋ ,ಕಾರ್ಯದರ್ಶಿ ಯಾದ ಶ್ರೀ ಸನತ್ ಆಳ್ವ ಹಾಗೂ ವಿದ್ಯಾಲಯದ ಪರವಾಗಿ ಶ್ರೀ ಶೇಖರ ರೈ ಪ್ರಾಂಶುಪಾಲರು ಮತ್ತು ಉಪನ್ಯಾಸಕರು/ಸಹ ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ವಿನಂತಿಸಿಕೊಂಡಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!