ಸ್ಥಳೀಯ
Rupa-Rohini-ಮುಗಿಯಲೊಲ್ಲದ ರೂಪಾ – ರೋಹಿಣಿ ʼಮಾನʼ ಕದನ : ಸುಪ್ರೀಂಕೋರ್ಟ್ ನಿಂದ ಮತ್ತೆ ಹೈಕೋರ್ಟ್ ಗೆ
ಐಪಿಎಸ್ ಡಿ. ರೂಪಾ ವಿರುದ್ಧ ಐಎಎಸ್ ರೋಹಿಣಿ ಸಿಂಧೂರಿ ಅವರು ದಾಖಲಿಸಿದ್ದ ಮಾನನಷ್ಟದ ಮೊಕದ್ದಮೆಯನ್ನು ರದ್ದುಗೊಳಿಸುವ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಈ ವಿಚಾರವನ್ನು ಹೈಕೋರ್ಟ್ ನಲ್ಲಿ ಇತ್ಯರ್ಥಗೊಳಿಸಲು ಸಲಹೆ ನೀಡಿದೆ.
ಐಪಿಎಸ್ ಡಿ. ರೂಪಾ ವಿರುದ್ಧ ಐಎಎಸ್ ರೋಹಿಣಿ ಸಿಂಧೂರಿ ಅವರು ದಾಖಲಿಸಿದ್ದ ಮಾನನಷ್ಟದ ಮೊಕದ್ದಮೆಯನ್ನು ರದ್ದುಗೊಳಿಸುವ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಈ ವಿಚಾರವನ್ನು ಹೈಕೋರ್ಟ್ ನಲ್ಲಿ ಇತ್ಯರ್ಥಗೊಳಿಸಲು ಸಲಹೆ ನೀಡಿದೆ.
2023ರ ಮಾರ್ಚ್ 24ರಂದು ಬೆಂಗಳೂರಿನ ಮೆಟ್ರೊಪಾಲಿಟನ್ ಮೆಜಿಸ್ಟ್ರೇಟ್ ಕೋರ್ಟ್ ರೋಹಿಣಿ ಸಿಂಧೂರಿ ಅವರ ಖಾಸಗಿ ಮೊಕದ್ದಮೆಯನ್ನು ಪರಿಗಣಿಸಿ, ಡಿ. ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ಆದೇಶಿಸಿತ್ತು.
ಈ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿದರೂ, ಹೈಕೋರ್ಟ್ ರೂಪಾ ಅವರ ಮನವಿಯನ್ನು ತಳ್ಳಿ ಹಾಕಿತ್ತು. ಇದರಿಂದಾಗಿ ರೂಪಾ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಸಿಂಧೂರಿ ಪರ ವಕೀಲರು ಬೇಷರತ್ ಕ್ಷಮೆಯಾಚಿಸಿದರೆ ಮಾನನಷ್ಟ ಮೊಕದ್ದಮೆ ಅರ್ಜಿ ವಾಪಸ್ ಪಡೆಯುವುದಾಗಿ ತಿಳಿಸಿದರು. ಆದರೆ, ಕ್ಷಮೆ ಕೋರಲು ರೂಪಾ ಒಪ್ಪಲಿಲ್ಲ. ಅರ್ಜಿ ವಾಪಸ್ ಪಡೆದು ಹೈಕೋರ್ಟ್ ನಲ್ಲಿ ಇತ್ಯರ್ಥ ಮಾಡಿಕೊಳ್ಳುವುದಾಗಿ ತಿಳಿಸಿದರು.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್11 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಮಂಗಳೂರು12 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized11 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್12 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಅಂತರ ರಾಜ್ಯ9 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ರಾಜಕೀಯ10 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್10 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಬಿಗ್ ನ್ಯೂಸ್4 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

















