ಬೆಳ್ತಂಗಡಿಯಿಂದ ಬೆಂಗಳೂರಿನ ಹೈಕೋರ್ಟ್‌ಗೆ ಹೋಗಲು 325 ಕಿಲೋಮೀಟರ್‌ ದೂರದಲ್ಲಿ ಪ್ರಯಾಣಿಸಬೇಕಾಗುತ್ತದೆ, ಮತ್ತು ಇದಕ್ಕೆ ಸಂಬಂಧಿಸಿದಂತೆ ವಸತಿ ಹಾಗೂ […]" /> ಬೆಳ್ತಂಗಡಿಯಿಂದ ಬೆಂಗಳೂರಿನ ಹೈಕೋರ್ಟ್‌ಗೆ ಹೋಗಲು 325 ಕಿಲೋಮೀಟರ್‌ ದೂರದಲ್ಲಿ ಪ್ರಯಾಣಿಸಬೇಕಾಗುತ್ತದೆ, ಮತ್ತು ಇದಕ್ಕೆ ಸಂಬಂಧಿಸಿದಂತೆ ವಸತಿ ಹಾಗೂ […]"> Mangalore-ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಲು ಒತ್ತಾಯ - Nikhara News | Kannada News Website
Connect with us

ಮಂಗಳೂರು

Mangalore-ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಲು ಒತ್ತಾಯ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಬೆಳ್ತಂಗಡಿ: ಇಲ್ಲಿನ ವಕೀಲರ ಸಂಘ, ಹೈಕೋರ್ಟ್‌ ಪೀಠ ಹೋರಾಟ ಸಮಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಸಹಕಾರದಿಂದ ಬೆಳ್ತಂಗಡಿ ನ್ಯಾಯಾಲಯದ ವಕೀಲರ ಭವನದಲ್ಲಿ ಶುಕ್ರವಾರ ಸಮಾಲೋಚನಾ ಸಭೆ ಆಯೋಜಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆಳ್ತಂಗಡಿಯಿಂದ ಬೆಂಗಳೂರಿನ ಹೈಕೋರ್ಟ್‌ಗೆ ಹೋಗಲು 325 ಕಿಲೋಮೀಟರ್‌ ದೂರದಲ್ಲಿ ಪ್ರಯಾಣಿಸಬೇಕಾಗುತ್ತದೆ, ಮತ್ತು ಇದಕ್ಕೆ ಸಂಬಂಧಿಸಿದಂತೆ ವಸತಿ ಹಾಗೂ ಇತರ ಖರ್ಚುಗಳನ್ನು ಭರಿಸುವುದು ಒಂದು ದೊಡ್ಡ ಚ್ಯಾಲೆಂಜ್ ಆಗಿದೆ. ಅಲ್ಲದೆ, ಇತ್ತೀಚೆಗೆ ತಾಲ್ಲೂಕಿನ ಅನೇಕ ಭೂ ನ್ಯಾಯ ಮಂಡಳಿಗೆ ಸಂಬಂಧಿಸಿದ ಪ್ರಕರಣಗಳು ಹಲವಾರು ದಶಕಗಳಿಂದ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ, ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠವನ್ನು ಸ್ಥಾಪಿಸಬೇಕು ಎಂದು ಸಭೆಯಲ್ಲಿ ಎಲ್ಲಾ ಸದಸ್ಯರು ಒತ್ತಾಯಿಸಿದರು.

Ad Widget

Ad Widget <> Ad Widget

ಹೋರಾಟ ಸಮಿತಿಯ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಧನಂಜಯ ರಾವ್ ಮಾತನಾಡುತ್ತಾ, “1981ರಿಂದ ಮಂಗಳೂರು ವಕೀಲರ ಸಂಘದಿಂದ ಈ ಹೋರಾಟ ಆರಂಭವಾಗಿದೆ. ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಯಾದರೆ ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜನರಿಗೂ ಇದರಿಂದ ಅನುಕೂಲವಾಗಲಿದೆʼʼ ಎಂದರು.

ಸಭೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಸಹಿ ಸಂಗ್ರಹ ಅಭಿಯಾನ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು, ಒಪ್ಪಿಗೆ ಪತ್ರಗಳ ಚಳವಳಿ, ಹೈಕೋರ್ಟ್‌ನಲ್ಲಿ ಪ್ರಕರಣಗಳುಳ್ಳವರು ಒಂದಾಗಿ ಸೇರಬೇಕಾದರೆ ಅಗತ್ಯವಿರುವ ಕ್ರಮಗಳು, ತಾಲ್ಲೂಕು ಮಟ್ಟದಲ್ಲಿ ಸಮಾವೇಶಗಳನ್ನು ಆಯೋಜಿಸುವುದು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಪೀಠ ಸ್ಥಾಪನೆಯ ಪ್ರಾಮುಖ್ಯತೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು ಮುಂತಾದ ಚಟುವಟಿಕೆಯಿಂದ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂಬ ಅಭಿಪ್ರಾಯ ಹೊರಹೊಮ್ಮಿತು.

Click to comment

Leave a Reply

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!