ಮೈಸೂರು
Mysuru-‘ಮಹಾರಾಷ್ಟ್ರದಲ್ಲಿ ಫ್ರೀ ಗ್ಯಾರಂಟಿ ಅನೌನ್ಸ್ ಮಾಡಬೇಡಿ’ : ಮೈಸೂರಿನ ಕಾರ್ಯಕ್ರಮದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕೂಗಿ ಹೇಳಿದ ಅಪರಿಚಿತ ವ್ಯಕ್ತಿ
ನಗರದ ಕರಾಮುವಿವಿ ಘಟಿಕೋತ್ಸವ ಭವನದಲ್ಲಿ ಪ್ರವಾಸೋದ್ಯಮ ಸಚಿವಾಲಯದ ವತಿಯಿಂದ ನಡೆದ ‘ಮೈಸೂರು ಸಂಗೀತ ಸುಗಂಧ’ ಸಮಾರಂಭದಲ್ಲಿ ದಿಢೀರನೆ ವೇದಿಕೆ ಬಳಿ ಆಗಮಿಸಿದ ವ್ಯಕ್ತಿ ಗ್ಯಾರಂಟಿ ಕುರಿತು ಸಚಿವರಿಗೆ ಕೂಗಿ ಹೇಳಿದ್ದಾನೆ. ಹಠಾತ್ ನಡೆದ ಘಟನೆಯಿಂದ ವೇದಿಕೆ ಮೇಲಿದ್ದ ಗಣ್ಯರು ತಬ್ಬಿಬ್ಬಾಗಿದ್ದಾರೆ.
ಮೈಸೂರು: ನಗರದ ಕರಾಮುವಿವಿ ಘಟಿಕೋತ್ಸವ ಭವನದಲ್ಲಿ ಪ್ರವಾಸೋದ್ಯಮ ಸಚಿವಾಲಯದ ವತಿಯಿಂದ ನಡೆದ ‘ಮೈಸೂರು ಸಂಗೀತ ಸುಗಂಧ’ ಸಮಾರಂಭದಲ್ಲಿ ದಿಢೀರನೆ ವೇದಿಕೆ ಬಳಿ ಆಗಮಿಸಿದ ವ್ಯಕ್ತಿ ಗ್ಯಾರಂಟಿ ಕುರಿತು ಸಚಿವರಿಗೆ ಕೂಗಿ ಹೇಳಿದ್ದಾನೆ. ಹಠಾತ್ ನಡೆದ ಘಟನೆಯಿಂದ ವೇದಿಕೆ ಮೇಲಿದ್ದ ಗಣ್ಯರು ತಬ್ಬಿಬ್ಬಾಗಿದ್ದಾರೆ.
ವ್ಯಕ್ತಿ ಹೇಳಿದ್ದೇನು?
ವೇದಿಕೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಇದ್ದ ಕಾರಣ, ಸಭಿಕರಲ್ಲಿದ್ದ ಒಬ್ಬ ವ್ಯಕ್ತಿ ಎದ್ದು ಬಂದು ಮಹಾರಾಷ್ಟ್ರದಲ್ಲಿ ಫ್ರೀ ಗ್ಯಾರಂಟಿ ಅನೌನ್ಸ್ ಮಾಡ್ಬೇಡಿ ಪ್ಲೀಸ್. ಕರ್ನಾಟಕವನ್ನು ಲೂಟಿ ಹೊಡೆಯುತ್ತಿದ್ದಾರೆ ರಕ್ಷಣೆ ಮಾಡಿ ಎಂದು ಹೇಳಿದ್ದಾನೆ. ಕಾರ್ಯಕ್ರಮದ ಮಧ್ಯೆಯೇ ಎದ್ದು ನಿಂತು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ಗೆ ಅಪರಿಚಿತ ವ್ಯಕ್ತಿ ಈ ಮನವಿ ಮಾಡುತ್ತಿರುವಾಗಲೇ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಆತನನ್ನು ಕರೆದೊಯ್ಡರು.
ವೇದಿಕೆ ಮೇಲಿದ್ದ ಗಣ್ಯರು ಹಠಾತ್ ನಡೆದ ಘಟನೆಯಿಂದ ತಬ್ಬಿಬ್ಬಾಗಿದ್ದಾರೆ. ವ್ಯಕ್ತಿಯನ್ನು ಬಿಟ್ಟುಬಿಡಿ ಎಂದು ಪೊಲೀಸರಿಗೆ ಸೂಚಿಸಿದರು. ಈ ಘಟನೆ ನಡೆಯುವಾಗ ರಾಜ್ಯ ಸರ್ಕಾರದ ಸಚಿವರಾದ ಎಚ್ಸಿ ಮಹದೇವಪ್ಪ ಕೂಡಾ ವೇದಿಕೆಯಲ್ಲಿದ್ದರು. ಈ ಘಟನೆಯಿಂದ ಅಚ್ಚರಿ ಜೊತೆಗೆ ಮುಜುಗರಕ್ಕೀಡಾದರು.
ದೇಶದಾದ್ಯಂತ ಕಾರ್ಯಕ್ರಮ ಆಯೋಜನೆ:
ದಕ್ಷಿಣ ಭಾರತದ ರಾಜ್ಯಗಳು ವಿಭಿನ್ನ ಸಂಗೀತ ಪರಂಪರೆ ಹೊಂದಿದ್ದು, ಮುಂದಿನ ದಿನಗಳಲ್ಲಿ ದೇಶಾದ್ಯಂತ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ರಾಜ್ಯ ಸಚಿವ ಸುರೇಶ್ ಗೋಪಿ ತಿಳಿಸಿದರು.
”ಕಳೆದ ಬಾರಿ ಆಂಧ್ರಪ್ರದೇಶದಲ್ಲಿಈ ರೀತಿಯ ಕಾರ್ಯ ಕ್ರಮವನ್ನು ಆಯೋಜಿಸಲಾಗಿತ್ತು. ಈ ವರ್ಷ ಕರ್ನಾಟಕದ ಮೈಸೂರಿನಲ್ಲಿ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕೇರಳ, ತೆಲಂಗಾಣದಲ್ಲೂ ಕಾರ್ಯಕ್ರಮ ನಡೆಸಲಾಗುವುದು,” ಎಂದು ಹೇಳಿದರು.
”ಮೈಸೂರು ಕರ್ನಾಟಕ ಸಂಗೀತ ಪರಂಪರೆಯ ಗೂಡಾಗಿದ್ದು, ಇಲ್ಲಿನ ಸಂಗೀತ, ನೃತ್ಯ, ಜಾನಪದ, ಪ್ರದರ್ಶನ ಕಲೆಗಳಿಗೆ ಪ್ರವಾಸಿಗರು ಮನಸೋಲುತ್ತಾರೆ. ಮೈಸೂರು ಕೇವಲ ಸಂಗೀತದ ನಗರವಾಗಿರದೆ ಇಲ್ಲಿರುವ ಹಲವಾರು ತಾಣಗಳಿಂದ ಪ್ರವಾಸಿಗರ ನೆಚ್ಚಿನ ನಗರವಾಗಿದೆ,” ಎಂದರು. ”ಮೈಸೂರಿಗೆ ಸಂಗೀತ ಸುಗಂಧದ ಜತೆಗೆ ಚಂದನ ಸುಗಂಧ ಎಂಬ ಹೆಸರೂ ಇದೆ. ಕರ್ನಾಟಕ ಸಂಗೀತಕ್ಕೆ ಮೈಸೂರಿನ ಕೊಡುಗೆ ಅಪಾರ.
ಇನ್ನು ಭಾರತೀಯ ಚಿತ್ರರಂಗದಲ್ಲಿ ಕರ್ನಾಟಕ ಸಂಗೀತದ ಪ್ರಭಾವವನ್ನು ನೋಡುವುದಾದರೆ ಶಂಕರನ್, ಯೇಸುದಾಸ್ ಅವರ ಕಾಣಿಕೆಯನ್ನು ಮರೆಯುವಂತಿಲ್ಲ. ಎಸ್.ಬಿ.ಬಾಲಸುಬ್ರಮಣ್ಯಂ, ಎಸ್.ಜಾನಕಿ, ಸುಶೀಲ, ಕೆ.ಎಸ್.ಚಿತ್ರ, ಜಯಚಂದ್ರನ್ ಸೇರಿದಂತೆ ಹಲವಾರು ಸಂಗೀತ ದಿಗ್ಗಜರು ಕರ್ನಾಟಕ ಸಂಗೀತದಲ್ಲಿ ಪರಿಣಿತರಾಗಿದ್ದು, ಚಿತ್ರರಂಗಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ಮಲಯಾಳಂ ಸಿನಿಮಾದಲ್ಲಿ ಕರ್ನಾಟಕ ಸಂಗೀತವು ಒಂದು ಹೊಸ ಅಲೆಯನ್ನೇ ಸೃಷ್ಟಿಸಿತ್ತು,” ಎಂದರು.
ಅವಿಸ್ಮರಣೀಯ ಕಾರ್ಯಕ್ರಮ:
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾತನಾಡಿ, ‘ಸುಗಂಧ ಸಂಗೀತ ಎಂಬುದು ಅವಿಸ್ಮರಣೀಯ ಕಾರ್ಯಕ್ರಮವಾಗಿದ್ದು, ಧರ್ಮ ಮತ್ತು ಜಾತಿಯನ್ನು ಮೀರಿ ಸಂಗೀತವು ಜನರ ಮನಸ್ಸನ್ನು ಸೇರಬೇಕು, ಎಂದರು. ‘ವಿಜಯನಗರ ಸಾಮ್ರಾಜ್ಯ ಆಳ್ವಿಕೆ ಕಾಲದಲ್ಲಿಸಂಗೀತ ಮನ್ನಣೆ ಪಡೆಯಿತು. ಕರ್ನಾಟಕದಲ್ಲಿ ಪುರಂದರ ದಾಸರು ಕೀರ್ತನೆಗಳ ಮೂಲಕ ಸಂಗೀತವನ್ನು ಪಸರಿಸಿದರು.
ಈ ದಸರಾದಲ್ಲಿ ಸಂಗೀತದ ಜತೆ ಪ್ರತಿಯೊಂದಕ್ಕೂ ಮನ್ನಣೆ ನೀಡಿದ್ದೇವೆ. ಗಣತಂತ್ರ ವ್ಯವಸ್ಥೆಯಲ್ಲಿ ಪ್ರಜಾಪ್ರಭುತ್ವವನ್ನು ಗೌರವಿಸುವ ಮೂಲಕ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯೋಣ, ಎಂದು ಹೇಳಿದರು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ದಾಸ ಸಾಹಿತ್ಯದ ದಿಗ್ಗಜರಾದ ಪುರಂದರ ದಾಸರು ಸುಮಾರು 4.75 ಲಕ್ಷ ಕೀರ್ತನೆಗಳನ್ನು ರಚಿಸಿ, ಕರ್ನಾಟಕ ಸಂಗೀತದ ಪಿತಾಮಹ ಎಂಬ ಖ್ಯಾತಿ ಪಡೆದಿದ್ದಾರೆ.
ಒಂದು ವೇಳೆ ಪುರಂದರದಾಸರು ಇಲ್ಲದಿದ್ದರೆ ಇಂದು ಕರ್ನಾಟಕ ಸಂಗೀತ ಇರುತ್ತಿರಲಿಲ್ಲ. ಅವರ ನಂತರ ಬಂದಂತಹ ಕನಕದಾಸರು, ಹರಿದಾಸ, ಗೋಪಾಲದಾಸರು ಹಾಗೂ ಇನ್ನಿತರರು ದಾಸ ಸಾಹಿತ್ಯದ ಪರಂಪರೆಯನ್ನು ಉಳಿಸಿಕೊಂಡು ಬಂದಿದ್ದಾರೆ,” ಎಂದು ಹೇಳಿದರು. ಶಾಸಕ ಟಿ.ಎಸ್. ಶ್ರೀವತ್ಸ, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಸುಮನ್ ಬಿಲ್ಲಾ ಸೇರಿದಂತೆ ನಾನಾ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಅಪರಾಧ
Case filed-ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲು
ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಮೈಸೂರು, ಸೆ. 23: ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾ ಕಲಾ ಸಂಘದ ಅಧ್ಯಕ್ಷ ಮಧು ಕೆ.ಟಿ. ಅವರು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ದೂರಿನಲ್ಲಿ ತಿಳಿಸಿರುವಂತೆ, ಸೆಪ್ಟೆಂಬರ್ 18ರಂದು ಟಿ.ನರಸೀಪುರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಪ್ರತಾಪ್ ಸಿಂಹ ನೂರಾರು ಜನರ ಸಮ್ಮುಖದಲ್ಲಿ ಮತ್ತು ಮಾಧ್ಯಮಗಳ ಕ್ಯಾಮೆರಾ-ಮೈಕ್ಗಳ ಮುಂದೆ ನಿಂತು ದಲಿತ ಸಮುದಾಯವನ್ನು ಹೀಯಾಳಿಸುವ ಮತ್ತು ಕೀಳಾಗಿ ಚಿತ್ರಿಸುವ ಉದ್ದೇಶದಿಂದ ಅತ್ಯಂತ ಅವಹೇಳನಕಾರಿ ಹಾಗೂ ನಿಂದನಾತ್ಮಕ ಭಾಷಣ ಮಾಡಿದ್ದಾರೆ.
ತಮ್ಮ ಭಾಷಣದಲ್ಲಿ ದಲಿತ ಸಮುದಾಯದ ಕಾರ್ಯಕರ್ತರನ್ನು ನೇರವಾಗಿ ಗುರಿಯಾಗಿಸಿ, “ನೀವು ಕೇವಲ ನೀಲಿ ಶಾಲು ಹೊದ್ದು ನಾವು ಏನೇ ಮಾಡಿದರೂ ಅಡ್ಡ ಬಂದು ನಿಲ್ಲುತ್ತೀರಿ. ನಿಮಗೆ ಅಂಬೇಡ್ಕರ್ ಅವರ ಬಗ್ಗೆ ಏನೂ ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಓದಿ” ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಈ ಮೂಲಕ ದಲಿತ ಸಮುದಾಯದ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲಿನ ಗೌರವವನ್ನು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಸಾರ್ವಜನಿಕವಾಗಿ ಹೀಯಾಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಆರೋಪಿತರು ಕೇವಲ ಒಂದು ರಾಜಕೀಯ ಪಕ್ಷದ ವಿರುದ್ಧ ಮಾತನಾಡುತ್ತಿಲ್ಲ. ಬದಲಿಗೆ ಶೋಷಿತರ ಹಕ್ಕುಗಳಿಗಾಗಿ ಹೋರಾಡುವ ದಲಿತ ಸಂಘಟನೆಯ ಪದಾಧಿಕಾರಿಗಳನ್ನು “ಹಣದ ಆಸೆಗಾಗಿ ಅಥವಾ ವೈಯಕ್ತಿಕ ಲಾಭಕ್ಕಾಗಿ ಹೋರಾಟ ಮಾಡುವವರು” ಎಂದು ಸಾರಾಸಗಟಾಗಿ ಸುಳ್ಳು ಆರೋಪ ಮಾಡಿದ್ದಾರೆ. ಇದು ಸಂಘಟನೆಯ ನೈತಿಕತೆಯನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಉದ್ದೇಶಪೂರ್ವಕ ಜಾತಿ ನಿಂದನೆ ಎಂದು ದೂರುದಾರರು ತಿಳಿಸಿದ್ದಾರೆ.
ಇದಲ್ಲದೆ, ಅವರು ಒಬ್ಬ ಪೊಲೀಸ್ ಅಧಿಕಾರಿಯ ಜಾತಿಯನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ, “ನಿಮ್ಮ ಜಾತಿಯ ಅಧಿಕಾರಿ ಎಂಬ ಒಂದೇ ಕಾರಣಕ್ಕೆ ನೀವು ಅವರನ್ನು ಬೆಂಬಲಿಸುತ್ತೀರಿ ಮತ್ತು ರಕ್ಷಣೆಗೆ ನಿಲ್ಲುತ್ತೀರಿ. ಆತ ಒಬ್ಬ ಕ್ಷುಲ್ಲಕ, ಕಳಪೆ ವ್ಯಕ್ತಿತ್ವದ ಇನ್ಸ್ಪೆಕ್ಟರ್” ಎಂದು ಹೇಳುವ ಮೂಲಕ ಪರಿಶಿಷ್ಟ ಜಾತಿಗೆ ಸೇರಿದ ಧನಂಜಯರನ್ನು ಜಾತಿ ಹೆಸರಿನಲ್ಲಿ ನಿಂದಿಸಿ, ಬೆದರಿಕೆ ಹಾಗೂ ತುಚ್ಛವಾಗಿ ಮಾತನಾಡಿದ್ದಾರೆ. ಆ ಮೂಲಕ ಸಾರ್ವಜನಿಕವಾಗಿ ಅಪಮಾನಗೊಳಿಸಿ, ಜಾತಿ ವ್ಯವಸ್ಥೆಯನ್ನು ಕೆರಳಿಸುವ ಮತ್ತು ಸಮಾಜದಲ್ಲಿ ವಿವಿಧ ಜಾತಿಗಳ ನಡುವೆ ತಾರತಮ್ಯ, ದ್ವೇಷ ಹಾಗೂ ನಾಗರಿಕ ಸಂಘರ್ಷದ ವಾತಾವರಣವನ್ನು ಸೃಷ್ಟಿಸುವ ತೀವ್ರ ಪ್ರಯತ್ನ ಮಾಡಿದ್ದಾರೆ ಎಂದು ದೂರಲಾಗಿದೆ.
ಈ ಇಡೀ ಕೃತ್ಯವು ಆಕಸ್ಮಿಕವಾಗಿ ನಡೆದದ್ದಲ್ಲ. ಮುಖ್ಯ ಆರೋಪಿತರು ಹಾಗೂ ಶೋಭಾ ಯಾತ್ರೆಯ ಮುಖ್ಯ ಆಯೋಜಕರು (ಸಹ ಆರೋಪಿಗಳು) ಒಟ್ಟಾಗಿ ಸೇರಿ, ಪಟ್ಟಣದ ಸಾಮಾಜಿಕ ಶಾಂತಿ ಮತ್ತು ಸೌಹಾರ್ದ ಕೆಡಿಸುವ ಹಾಗೂ ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅಪಮಾನಿಸುವ ಉದ್ದೇಶದಿಂದಲೇ ಮೊದಲೇ ಯೋಜಿತ ಸಂಚು ರೂಪಿಸಿ ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಪ್ರಚೋದನಾತ್ಮಕ ಹೇಳಿಕೆ ನೀಡಲು ಮುಕ್ತವಾಗಿ ಅವಕಾಶ ಮಾಡಿಕೊಟ್ಟು, ಅದಕ್ಕೆ ಕುಮ್ಮಕ್ಕು ನೀಡಿ ಸಹಕರಿಸಿರುವ ಆಯೋಜಕರು ಸಹ ಈ ಅಪರಾಧದಲ್ಲಿ ಸಮಾನ ಭಾಗಿಗಳು ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು
Pramodadevi-ದಸರಾ ವೇಳೆ ಕಂಬಳ ಆಯೋಜನೆ ಅಗತ್ಯವಿಲ್ಲ; ಕರಾವಳಿಯ ಕ್ರೀಡೆಗೆ ಪ್ರತ್ಯೇಕ ಮಹತ್ವ ಸಿಗಲಿ: ಪ್ರಮೋದಾದೇವಿ
ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಮೈಸೂರು: ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಕಂಬಳಕ್ಕೆ ಕರಾವಳಿ ಭಾಗದಲ್ಲಿ ತನ್ನದೇ ಆದ ವಿಶಿಷ್ಟ ಪರಂಪರೆ ಹಾಗೂ ಮಹತ್ವವಿದೆ. ಹೀಗಾಗಿ ದಸರಾ ಉತ್ಸವದೊಂದಿಗೆ ಕಂಬಳವನ್ನು ಸೇರಿಸುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಕಂಬಳವನ್ನು ಪ್ರತ್ಯೇಕವಾಗಿ ಆಯೋಜಿಸಿದರೆ ಕ್ರೀಡೆಗೆ ಇನ್ನಷ್ಟು ಮಹತ್ವ ಹಾಗೂ ಗಮನ ಸಿಗಲಿದೆ. ಆದರೆ ದಸರಾ ಉತ್ಸವದ ಭಾಗವಾಗಿ ಆಯೋಜಿಸಿದರೆ ಕಂಬಳಕ್ಕೆ ಸಿಗಬೇಕಾದ ಪ್ರತ್ಯೇಕ ಗಮನ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಪ್ರಮೋದಾದೇವಿ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸ್ಥಳೀಯ5 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ
-
ಕಾರ್ಯಕ್ರಮಗಳು22 hours ago‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಅಂತರ ರಾಜ್ಯ5 hours agoMurder case-ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ಗೆ ಗಲ್ಲು ಶಿಕ್ಷೆ..!
-
ಶಿಕ್ಷಣ21 hours agoSanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಸಾನಿಧ್ಯ ಎಸ್. ರಾವ್ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ
-
ಬಿಗ್ ನ್ಯೂಸ್5 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
Uncategorized22 hours agoAmbika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ ಬಹುಮಾನ


















