ಬಿಗ್ ನ್ಯೂಸ್
ಆಣೆಪ್ರಮಾಣಕ್ಕೆ ಕರೆದ ಮಹಾಲಕ್ಷೀ ಸೊಸೈಟಿಯವರು ಪ್ರಮಾಣ ಮಾಡದೇ ಪ್ರಾರ್ಥನೆ ಮಾಡಿ ಹೋದರು : ರಘುಪತಿ ಭಟ್ | ದೇವಸ್ಥಾನದೊಳಗೆ ಮಕ್ಕಳ ಕಾಲಿನಲ್ಲಿ ಚಪ್ಪಲಿ : ಸಾಮಾಜಿಕ ಜಾಲತಾಣದಲ್ಲಿ ವೈರಲ್ ..!
ಮಹಾಲಕ್ಷ್ಮೀ ಕ್ರೆಡಿಟ್ ಕೋಆಪರೇಟಿವ್ ಅವ್ಯವಹಾರ ಆರೋಪ ತಾರಕಕ್ಕೇರಿದೆ. ಇಂದು ಆಣೆ ಪ್ರಮಾಣದವರೆಗೆ ಬಂದು ಕೊನೆಗೆ ಪ್ರಾರ್ಥನೆಗೆ ಸೀಮಿತವಾಗಿದೆ.
ಮಹಾಲಕ್ಷ್ಮಿ ಕೋ – ಓಪರೇಟಿವ್ ಬ್ಯಾಂಕ್ ಲಿ. ಉಡುಪಿ ಇವರು ಪತ್ರ ಮುಖೇನ ನ.9 ರಂದು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರಮಾಣಕ್ಕೆ ದಿನ ನಿಗಧಿಗೊಳಿಸಿರುವಂತೆ ಇಂದು ದಿನಾಂಕ 9-11-2024 ರಂದು ಮಹಾಲಕ್ಷ್ಮಿ ಕೋ – ಓಪರೇಟಿವ್ ಬ್ಯಾಂಕ್ ಲಿ. ಉಡುಪಿ ಇಲ್ಲಿನ ಪ್ರಧಾನ ವ್ಯವಸ್ಥಾಪಕರಾದ ಶರತ್ ಕುಮಾರ್ ಶೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಕರಂಬಳ್ಳಿ ಶ್ರೀ ವೆಂಕಟರಮಣ ಮುಖ್ಯ ಪ್ರಾಣ ದೇವರ ಸನ್ನಿಧಿಯಲ್ಲಿ ಪ್ರಮಾಣಕ್ಕೆ ಬಂದು, ಯಾವುದೇ ಆಣೆ ಪ್ರಮಾಣ ಮಾಡದೆ ಬದಲಾಗಿ ಸಿಬ್ಬಂದಿಗಳ ಜೊತೆ ದೇವರ ಮುಂದೆ ಪ್ರಾರ್ಥನೆ ಮಾಡಿ ಪ್ರಾರ್ಥನೆಗೆ ಸೀಮಿತಗೊಳಿಸಿ ತೆರಳಿದರು ಎಂದು ರಘುಪತಿ ಭಟ್ ಹೇಳಿದರು.
ಮಹಾಲಕ್ಷ್ಮಿ ಕೋ – ಓಪರೇಟಿವ್ ಬ್ಯಾಂಕ್ ಲಿ. ಇವರಿಂದ ಅನ್ಯಾಯಕ್ಕೊಳಗಾದ ಸಂತೃಸ್ಥರು ಲಿಖಿತವಾಗಿ ತಾವು ಪಡೆದ ಹಣವನ್ನು ಬ್ಯಾಂಕ್ ನ ನಿಯಮದಂತೆ ಬಡ್ಡಿ ಸಮೇತ ಪಾವತಿಸಲು ಬದ್ದರಿದ್ದೇವೆ. ಇದಕ್ಕೆ ನಮಗೆ ನ್ಯಾಯ ಒದಗಿಸಬೇಕು ಎಂದು ದೇವರ ಮುಂದೆ ಪ್ರಾರ್ಥಿಸಿದರು. ಮುಂದಿನ ದಿನಗಳಲ್ಲಿ ರಘುಪತಿ ಭಟ್ ಅವರು ಕಾನೂನಿನ ರೀತಿಯಲ್ಲಿ ನ್ಯಾಯಯುತವಾಗಿ ನಮಗೆ ನ್ಯಾಯ ದೊರಕಿಸಿಕೊಡಲಿ ಎಂದು ಪ್ರಾರ್ಥಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ದಿವಾಕರ ಐತಾಳ ಪ್ರಾರ್ಥನೆ ನೆರವೇರಿಸಿ ಪೂಜೆ ಸಲ್ಲಿಸಿದರು. ನೂರಾರು ಮಂದಿ ಸಂತೃಸ್ಥರು ಉಪಸ್ಥಿತರಿದ್ದರು.
ದೇವಳದೊಳಗೆ ಚಪ್ಪಲಿ..! : ಸಂತ್ರಸ್ತರೊಂದಿಗೆ ದೇವಸ್ಥಾನದೊಳಗೆ ಬಂದ ಮುಸ್ಲಿಂ ಮಹಿಳೆಯರ ಕೈಯಲ್ಲಿದ್ದ ಪುಟಾಣಿ ಮಕ್ಕಳ ಕಾಲಿನಲ್ಲಿ ಚಪ್ಪಲಿ ಧರಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸ್ಥಳೀಯ
Dharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ
ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿದರು.
ಉಜಿರೆ: ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿ, ಜೀರ್ಣೋದ್ಧಾರ ಕಾರ್ಯವು ಸುಸೂತ್ರವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಹಾವೀರ ಅಜ್ರಿ ಉಪಸ್ಥಿತರಿದ್ದರು.
ಅಂತರ ರಾಜ್ಯ
WhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.
ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.
WhatsApp ನಮ್ಮ ದೈನಂದಿನ ಜೀವನದ ಪ್ರಮುಖ ಸಂವಹನ ಸಾಧನವಾಗಿದ್ದು, ಅದರ ಭದ್ರತೆಗೆ ಸಂಬಂಧಿಸಿದಂತೆ CERT-In ಇದೀಗ ಅಧಿಕ ತೀವ್ರತೆಯ ಸಲಹೆ ನೀಡಿದೆ. Android, iOS, Mac ಹಾಗೂ Windows ಸೇರಿದಂತೆ ವಿವಿಧ ಪ್ಲಾಟ್ಫಾರ್ಮ್ಗಳಲ್ಲಿ ಬಳಕೆಯಾಗುವ WhatsAppನ ಕೆಲವು ಆವೃತ್ತಿಗಳಲ್ಲಿನ ನ್ಯೂನತೆಗಳು ಸೈಬರ್ ದಾಳಿಗೆ ಅವಕಾಶ ಮಾಡಿಕೊಡಬಹುದು ಎಂದು ಎಚ್ಚರಿಸಲಾಗಿದೆ.
ಕೇಂದ್ರ ಸರ್ಕಾರದ ಸೈಬರ್ ಭದ್ರತಾ ಸಂಸ್ಥೆಯ ಪ್ರಕಾರ, ವಿಶೇಷವಾಗಿ ರೂಪಿಸಲಾದ ಸಂದೇಶಗಳು, ಅಟ್ಯಾಚ್ಮೆಂಟ್ಗಳು ಅಥವಾ URL ಲಿಂಕ್ಗಳ ಮೂಲಕ ಈ ದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಬಳಕೆದಾರರು ಹಾಗೂ ಸಂಸ್ಥೆಗಳು ತಮ್ಮ ಸಾಧನಗಳಲ್ಲಿ WhatsApp ಅನ್ನು ತಕ್ಷಣವೇ ನವೀಕರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.
ಈ ಹಿಂದೆ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಅಪರಾಧ ಬೆದರಿಕೆ ವಿಶ್ಲೇಷಣಾ ಘಟಕ (NCTAU) ಕೂಡ WhatsApp ಬಳಕೆಯ ಕುರಿತು ಎಚ್ಚರಿಕೆ ನೀಡಿತ್ತು. ಸಾರ್ವಜನಿಕ ಕಂಪ್ಯೂಟರ್ಗಳಲ್ಲಿ WhatsApp ವೆಬ್ಗೆ ಲಾಗಿನ್ ಮಾಡಿ ಕೆಲಸ ಮುಗಿದ ಬಳಿಕ ಲಾಗ್ಔಟ್ ಮಾಡದೆ ಬಿಟ್ಟರೆ, ಅನಧಿಕೃತ ವ್ಯಕ್ತಿಗಳು ಖಾತೆಯನ್ನು ಪ್ರವೇಶಿಸಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿತ್ತು. ಬ್ರೌಸರ್ ಟ್ಯಾಬ್ ಮುಚ್ಚಿದ ಮಾತ್ರಕ್ಕೆ WhatsApp ವೆಬ್ನಿಂದ ಲಾಗ್ಔಟ್ ಆಗುವುದಿಲ್ಲ ಎಂಬುದನ್ನೂ ಎಚ್ಚರಿಸಿತ್ತು.
WhatsAppನಲ್ಲಿ ಪತ್ತೆಯಾದ ಪ್ರಮುಖ ಭದ್ರತಾ ದೋಷಗಳೇನು?
CERT-In ಸಲಹೆಯಲ್ಲಿ WhatsAppನ ವಿವಿಧ ಆವೃತ್ತಿಗಳಲ್ಲಿನ ಐದು ಭದ್ರತಾ ನ್ಯೂನತೆಗಳನ್ನು ಉಲ್ಲೇಖಿಸಲಾಗಿದೆ.
CVE-2026-102769: Android WhatsAppನಲ್ಲಿ ವಿಶೇಷವಾಗಿ ರೂಪಿಸಲಾದ ಆರ್ಡರ್ ವಿವರಗಳ ಸಂದೇಶಕ್ಕೆ ಸಂಬಂಧಿಸಿದ ಈ ದೋಷವು SQL ಇಂಜೆಕ್ಷನ್ಗೆ ಅವಕಾಶ ನೀಡಬಹುದು. ಸಂದೇಶವನ್ನು ಬಳಕೆದಾರರು ತೆರೆಯುವ ಸಂದರ್ಭದಲ್ಲಿ ಸ್ಥಳೀಯವಾಗಿ ಸಂಗ್ರಹವಾಗಿರುವ ಚಾಟ್ಗಳು, ಮಾಧ್ಯಮ ಹಾಗೂ ಇತರ ಫೈಲ್ಗಳನ್ನು ಅಳಿಸುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ. ಸಂದೇಶ ತಲುಪಿದ ಸಮಯ ಹಾಗೂ ಡಬಲ್ ಟಿಕ್ನ ಮಾಹಿತಿಯನ್ನು ಗಮನಿಸುವ ಮೂಲಕ ಚಾಟ್ ಡೇಟಾಬೇಸ್ ಕುರಿತು ಕೆಲವು ಮಾಹಿತಿಯನ್ನು ತಿಳಿದುಕೊಳ್ಳುವ ಸಾಧ್ಯತೆಯೂ ಇದೆ. ಆದರೆ ಈ ದೋಷದ ದುರ್ಬಳಕೆಗೆ ಸಂಬಂಧಿಸಿದ ಯಾವುದೇ ಪುರಾವೆ ಇಲ್ಲ ಎಂದು WhatsApp ತಿಳಿಸಿದೆ.
CVE-2026-44908: Meta AIನ ಕಂಪ್ಯೂಟಿಂಗ್ ವ್ಯವಸ್ಥೆಯೊಂದಿಗೆ ವಿಶ್ವಾಸಾರ್ಹ ಸಂಪರ್ಕ ಸ್ಥಾಪಿಸಲು ಬಳಸುವ ಸರ್ಟಿಫಿಕೇಟ್ ಚೈನ್ ಪರಿಶೀಲನೆಯಲ್ಲಿನ ನ್ಯೂನತೆಗೆ ಈ ದೋಷ ಸಂಬಂಧಿಸಿದೆ. ಇದರಿಂದ ಕೆಲವು ಸಂದರ್ಭಗಳಲ್ಲಿ ಹಾರ್ಡ್ವೇರ್ ಭದ್ರತಾ ವ್ಯವಸ್ಥೆಯನ್ನು ಬೈಪಾಸ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ದೋಷವನ್ನು ದುರ್ಬಳಕೆ ಮಾಡಿಕೊಂಡಿರುವ ಪುರಾವೆಯೂ ಇಲ್ಲ ಎಂದು WhatsApp ಹೇಳಿದೆ.
CVE-2026-23871: Android ಸಾಧನಗಳಲ್ಲಿನ ಬಾಹ್ಯ ಜಾಹೀರಾತು-ಪ್ರತಿಕ್ರಿಯೆ URLಗಳಿಗೆ ಸಂಬಂಧಿಸಿದ ಈ ದೋಷವು ವಿಶೇಷವಾಗಿ ರೂಪಿಸಲಾದ ‘Click to WhatsApp’ ಸಂದೇಶಗಳ ಮೂಲಕ ಸಾಧನವು ಹ್ಯಾಕರ್ ನಿಯಂತ್ರಿತ ವಿಳಾಸದಿಂದ ಮಾಧ್ಯಮವನ್ನು ಲೋಡ್ ಮಾಡುವಂತೆ ಮಾಡಬಹುದು. ಇದರಿಂದ ಬಳಕೆದಾರರ IP ವಿಳಾಸ ಬಹಿರಂಗಗೊಳ್ಳುವ ಸಾಧ್ಯತೆಯಿದೆ.
ಇದಲ್ಲದೆ, Instagram Reelಗೆ ಸಂಬಂಧಿಸಿದ AI ಪ್ರತಿಕ್ರಿಯೆಯಲ್ಲಿನ ದುರ್ಬಲತೆಯ ಮೂಲಕ iOS ಅಥವಾ Android ಸಾಧನಗಳಲ್ಲಿ ದುರುದ್ದೇಶಪೂರಿತ ವಿಷಯವನ್ನು ಪ್ರಕ್ರಿಯೆಗೊಳಿಸುವ ಸಾಧ್ಯತೆಯಿರುವ ಮತ್ತೊಂದು ದೋಷವನ್ನೂ ಉಲ್ಲೇಖಿಸಲಾಗಿದೆ.
CVE-2026-23863: Windows WhatsAppನಲ್ಲಿ ದುರುದ್ದೇಶಪೂರಿತ ಅಟ್ಯಾಚ್ಮೆಂಟ್ಗಳನ್ನು ಸಾಮಾನ್ಯ ಫೈಲ್ಗಳಂತೆ ತೋರಿಸಿ, ತೆರೆಯುವಾಗ ಕಾರ್ಯಗತಗೊಳಿಸಬಹುದಾದ ಫೈಲ್ಗಳಾಗಿ ರನ್ ಆಗುವಂತೆ ಮಾಡುವ ನ್ಯೂನತೆ ಇದಾಗಿದೆ. ಈ ದೋಷಗಳ ದುರ್ಬಳಕೆಗೆ ಸಂಬಂಧಿಸಿದ ಪುರಾವೆಗಳು ಇಲ್ಲ ಎಂದು WhatsApp ತಿಳಿಸಿದೆ.
ಸೈಬರ್ ಭದ್ರತಾ ಆತಂಕಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ CERT-In ಬಳಕೆದಾರರು WhatsAppನ ಇತ್ತೀಚಿನ ಆವೃತ್ತಿಯನ್ನು ಬಳಸುವಂತೆ ಹಾಗೂ ಅಪರಿಚಿತ ಸಂದೇಶಗಳು, ಲಿಂಕ್ಗಳು ಮತ್ತು ಅಟ್ಯಾಚ್ಮೆಂಟ್ಗಳನ್ನು ತೆರೆಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಬಿಗ್ ನ್ಯೂಸ್
Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.
ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
-
ನಿಧನ ವಾರ್ತೆ9 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ8 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ8 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ8 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ8 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಅಂತರ ರಾಜ್ಯ8 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಅಂತರ ರಾಜ್ಯ8 hours agoWomen’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
-
ಸ್ಥಳೀಯ7 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















