ಹಿರಿಯ ವಿದ್ಯಾರ್ಥಿ ಮಹೇಶ್ ಕೆ.ಎನ್. […]" /> ಹಿರಿಯ ವಿದ್ಯಾರ್ಥಿ ಮಹೇಶ್ ಕೆ.ಎನ್. […]"> ಬೆಳ್ಳಾರೆ ಪದವಿ ಕಾಲೇಜು : ಹಿರಿಯ ವಿದ್ಯಾರ್ಥಿಗಳ ಸಭೆ; ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ - Nikhara News | Kannada News Website
Connect with us

Uncategorized

ಬೆಳ್ಳಾರೆ ಪದವಿ ಕಾಲೇಜು : ಹಿರಿಯ ವಿದ್ಯಾರ್ಥಿಗಳ ಸಭೆ; ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ

Published

on

Ad Widget

Ad Widget

Ad Widget

Ad Widget

ಪೆರುವಾಜೆ : ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹತ್ತಾರು ಧನಾತ್ಮಕ ಚಟುವಟಿಕೆಗಳು ನಡೆಯುತ್ತಿದ್ದು ಅವು ಹೊರ ಜಗತ್ತಿಗೆ ಅಪರಿಚಿತವಾಗಿಯೇ ಉಳಿದಿದೆ. ಅವುಗಳನ್ನು ನವ ಮಾಧ್ಯಮಗಳ ಮೂಲಕ ಹೊರ ಜಗತ್ತಿಗೆ ಪರಿಚಯಿಸುವ ಕಾರ್ಯ ತುರ್ತಾಗಿ ಆಗಬೇಕು ಎಂಬ ಅಭಿಪ್ರಾಯ ಹಿರಿಯ ವಿದ್ಯಾರ್ಥಿಗಳಿಂದ ವ್ಯಕ್ತವಾಯಿತು.

Ad Widget

Ad Widget

Ad Widget

Ad Widget

ಬೆಳ್ಳಾರೆ ಡಾ|ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಹಿರಿಯ ವಿದ್ಯಾರ್ಥಿಗಳ ಸಭೆಯು ನ.8 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಹಿರಿಯ ವಿದ್ಯಾರ್ಥಿ ಮಹೇಶ್ ಕೆ.ಎನ್. ಅಭಿಪ್ರಾಯ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣಗಳು ಸಹಿತ ಮಾಧ್ಯಮಗಳ ಮೂಲಕ ಇಲ್ಲಿನ ಪಾಸಿಟಿವ್ ಸಂಗತಿಗಳನ್ನು ಹಂಚಿಕೊಳ್ಳುವ ಬಗ್ಗೆ ಗಂಭೀರ ಚಿಂತನೆ ನಡೆಯಬೇಕು. ಈ ಪ್ರಯತ್ನ ನಿರಂತರ ಚಟುವಟಿಕೆ ಆಗಬೇಕು. ಇಲ್ಲಿರುವ ಕೆಲ ಸೌಲಭ್ಯಗಳು, ಅವಕಾಶಗಳ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಅವು ಎಲ್ಲರಿಗೂ ತಲುಪಲು ನಿಟ್ಟಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘ ಕೊಂಡಿಯಾಗಿ ಕೆಲಸ ಮಾಡಬೇಕು. ಫೇಸ್‌ಬುಕ್‌, ವಾಟ್ಸಫ್, ಇನ್ಸ್ಟಾಗ್ರಾಂ ಮೊದಲಾದವುಗಳ ಸದ್ಭಳಕೆ ಆಗಬೇಕು ಎಂದವರು ಸಲಹೆ ನೀಡಿದರು.

Ad Widget

Ad Widget <> Ad Widget

ಇದು ಸ್ಪರ್ಧಾತ್ಮಕ ಯುಗ. ಇಲ್ಲಿ ಉದ್ಯೋಗಕ್ಕೆ ಪೂರಕವಾಗಿ ಹತ್ತಾರು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿವೆ. ಇದಕ್ಕೆ ಬೇಕಾದ ತರಬೇತಿಗಳನ್ನು ಈ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡುವ ಬಗ್ಗೆ ನಾವು ಯೋಜನೆ ರೂಪಿಸಬಹುದು ಎಂದು‌ ಮಹೇಶ್ ಅಭಿಪ್ರಾಯಿಸಿದರು.

ಹಿರಿಯ ವಿದ್ಯಾರ್ಥಿನಿ ಗೌತಮಿ‌ ಕೆ ಮಾತನಾಡಿ, ಪ್ರಚಾರ ಅತಿ ಅಗತ್ಯ ಅನ್ನುವ ಕಾಲಘಟ್ಟ ಇದು. ಈ ಕಾಲದಲ್ಲಿ ಎಲ್ಲ ಕ್ಷೇತ್ರಗಳ ಬೆಳವಣಿಗೆಗೆ ಅತ್ಯಂತ ಬೇಡಿಕೆಯುಳ್ಳ ವಿಧಾನ ನವ ಮಾಧ್ಯಮವೇ ಆಗಿದೆ. ಕಾಲೇಜಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ತಾಲೂಕು ವ್ಯಾಪ್ತಿಯಲ್ಲಿ ಕಾಲೇಜಿನ ಚಟುವಟಿಕೆಗಳನ್ನು ಪ್ರಚುರಪಡಿಸಲು ಸಾಮಾಜಿಕ ಮಾಧ್ಯಮ, ಸ್ಥಳೀಯ ಪತ್ರಿಕೆ, ದೃಶ್ಯ, ನವ ಮಾಧ್ಯಮಗಳನ್ನು ಬಳಸಿಕೊಳ್ಳಬೇಕು. ಈಗಿನ ಸಾಮಾಜಿಕ ಜಾಲತಾಣಗಳು‌ ಮಹತ್ವದ ತೀರಾ ಸ್ಥಳೀಯ ಅಥವಾ ಬೇರುಮಟ್ಟದ ಸುದ್ದಿ, ಬೆಳವಣಿಗೆಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುತ್ತಿದ್ದು ಕಾಲೇಜಿನ ಬೆಳವಣಿಗೆಗೆ ಪೂರಕವಾಗಿ ಮಾಧ್ಯಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

Ad Widget

Ad Widget

ಹಿರಿಯ ವಿದ್ಯಾರ್ಥಿ ಭಾಸ್ಕರ ಕೋಟ್ಯಾನ್ ಮಾತನಾಡಿ, 34 ವರ್ಷಗಳ ಇತಿಹಾಸ ಇರುವ ಬೆಳ್ಳಾರೆ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಂಖ್ಯಾ ಬಲ ಹೆಚ್ಚಳದ ಬಗ್ಗೆ ಆದ್ಯತೆ ನೀಡಬೇಕು. ಹಿರಿಯ ವಿದ್ಯಾರ್ಥಿಗಳನ್ನು ಸಂಪರ್ಕಿಸುವ ಕೆಲಸಕ್ಕೆ ಒತ್ತು ನೀಡಬೇಕು. ಇಲ್ಲಿ ಕಲಿತ ಪ್ರತಿ ವಿದ್ಯಾರ್ಥಿಗಳಿಗೂ ಇದು ನಮ್ಮ ಕಾಲೇಜು ಎಂಬ ಅಭಿಮಾನ ಇದ್ದೆ ಇರುತ್ತದೆ. ಅವರು ಕಾಲೇಜಿನ ಅಭಿವೃದ್ಧಿಗೆ ಸಹಕಾರ ನೀಡುತ್ತಾರೆ. ಹಾಗಾಗಿ ನಾವು ಕೊರತೆಗಳ ಬಗ್ಗೆ ಯೋಚಿಸದೆ, ಪಾಸಿಟಿವ್ ನೆಲೆಯಲ್ಲಿ ಕಾಲೇಜಿನ ಬೆಳವಣಿಗೆಗೆ ಹಿರಿಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವ ಬಗ್ಗೆ ಕಾರ್ಯಪ್ರವೃತರಾದರೆ ಉತ್ತಮ ಎಂದರು.

ಪಿಯುಸಿ ವಿದ್ಯಾರ್ಥಿಗಳಿಗೆ ಫೆಸ್ಟ್ ಆಯೋಜಿಸುವ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಯಿತು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಕ್ಷಿತ್ ಕುಮಾರ್ ಪೆರುವಾಜೆ, ಕೋಶಾಧಿಕಾರಿ ಯಶೋಧಾ ಪೆರುವಾಜೆ, ಉಪಾಧ್ಯಕ್ಷ ರಜನೀಶ್ ಸವಣೂರು ಮೊದಲಾದವರು ಸಲಹೆ ಸೂಚನೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೋ. ಬಾಲಸುಬ್ರಹ್ಮಣ್ಯ ಪಿ.ಎಸ್., ಹಿರಿಯ ವಿದ್ಯಾರ್ಥಿ ಸಂಘದ ಸಂಚಾಲಕ ಗಿರೀಶ್ ಸಿ.ಆರ್., ಬ್ರಿಜೇಶ್ ರೈ, ಶಿವಪ್ರಸಾದ್ ಪೆರುವಾಜೆ, ಡಾ.ಸಂದೀಪ್ ಕುಮಾರ್, ಶಿಲ್ಪ ಕೆ.ಎನ್., ಪುನೀತ ಎಂ.ಎಸ್., ದೀಕ್ಷಿತ್ ಆಚಾರ್ಯ ಎಂ., ರಂಜಿತ್ ಡಿ.ಯು., ವಾಸುದೇವ ಪೆರುವಾಜೆ, ದೇವಿಪ್ರಸಾದ್ ಕೆ, ಸನತ್ ಪೆರುವಾಜೆ, ರಂಜಿತ್ ಪೆರುವಾಜೆ ಮೊದಲಾದವರು ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅನುರಾಜ್ ಸಿ.ಬಿ.ಸ್ವಾಗತಿಸಿ, ವಂದಿಸಿದರು.

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!