Connect with us

Uncategorized

ಮಂಗಳೂರು : ರಸ್ತೆ ಹೊಂಡ ತಪ್ಪಿಸಲು ಯತ್ನಿಸಿದಾಗ ಸ್ಕೂಟಿ ಸ್ಕಿಡ್‌ – ಸಹ ಸವಾರೆಯ ಮೈಮೇಲೆ ಟ್ಯಾಂಕರ್‌ ಹರಿದು ಮೃತ್ಯು – ರೊಚ್ಚಿಗೆದ್ದ ಜನ

Published

on

Ad Widget

Ad Widget

Ad Widget

Ad Widget

ಪತಿಯೊಂದಿಗೆ ಹಿಂಬದಿ ಸವಾರೆಯಾಗಿ ಸ್ಕೂಟಿಯಲ್ಲಿ  ತೆರಳುತ್ತಿದ್ದ ವೇಳೆ, ರಸ್ತೆಯ ಹೊಂಡ ತಪ್ಪಿಸಲು ಸವಾರ (ಪತಿ)   ಪ್ರಯತ್ನಿಸಿದಾಗ  ಸ್ಕೂಟರ್‌ ಸ್ಕಿಡ್‌ ಆಗಿ ಮಹಿಳೆ ರಸ್ತೆಗೆ ಬಿದ್ದ ಹಾಗೂ ಅದೇ ವೇಳೆ ಆಕೆಯ ಮೇಲೆ ಟ್ಯಾಂಕರ್‌ ಹರಿದು ಆಕೆ ಸಾವನ್ನಪ್ಪಿದ ಘಟನೆ ನ 9 ರಂದು ಸಂಜೆ ಮಂಗಳೂರಿನ ತೊಕ್ಕೊಟ್ಟು  ಚೆಂಬುಗುಡ್ಡೆ ಎಂಬಲ್ಲಿ ನಡೆದಿದೆ. ದುರ್ಘಟನೆಗೆ ರಸ್ತೆ ಹೊಂಡವೇ ಕಾರಣ ಎಂದು ಉದ್ರಿಕ್ತರಾದ ಸ್ಥಳೀಯರು ಗುಂಪು ರಸ್ತೆಗೆ ಅಡ್ಡವಾಗಿ ಕಲ್ಲುಗಳನ್ನಿಟ್ಟು ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಒಂದು ಗಂಟೆ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget

Ad Widget

Ad Widget

 ರಶೀದ್ ಅವರು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯಲ್ಲಿ  ಸೂಪರ್‌ ವೈಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ಪತ್ನಿ ಮೂಲತ : ಸುರತ್ಕಲ್‌ ನ ಕುಳಾಯಿ ನಿವಾಸಿ ರೆಹಮತ್‌ (47) ಮೃತಪಟ್ಟವರು.  ರೆಹಮತ್‌ ಹಿಂದೆ ಪತಿಯೊಂದಿಗೆ ದುಬೈಯಲ್ಲಿ ನೆಲೆಸಿದ್ದರು. ಬಳಿಕ ಊರಿಗೆ ಬಂದಿದ್ದ ರಶೀದ್‌ 10 ವರ್ಷಗಳಿಂದ ಯೇನೆಪೊಯ ಸಂಸತೆಯಲ್ಲಿ ಉದ್ಯೋಗಿಯಾಗಿದ್ದರು.

Ad Widget

Ad Widget alt="Ad Widget"/>

Ad Widget

ರೆಹಮತ್‌ ಅವರ ಸಹೋದರಿಯ ಪುತ್ರಿಗೆ ಮೂರು ತಿಂಗಳ ಹಿಂದೆ ವಿವಾಹವಾಗಿತ್ತು. ಆಕೆಯ ಪತಿಯ ಸೌದಿ ಆರೇಬಿಯದಲ್ಲಿದ್ದರು. ಶನಿವಾರ ಸಂಜೆ ವಿದೇಶಕ್ಕೆ ತೆರಳುವ ಸಹೋದರಿಯ ಪುತ್ರಿಯನ್ನು ಬೀಳ್ಕೊಡಲು  , ಶನಿವಾರ ಸಂಜೆ ಸುಮಾರು 4:30ಕ್ಕೆ   ಆಕ್ಟೀವಾ ಸ್ಕೂಟರ್‌ನಲ್ಲಿ ದಂಪತಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

Ad Widget

Ad Widget <> Ad Widget

 ತೊಕ್ಕೊಟ್ಟು-ಚೆಂಬುಗುಡ್ಡೆಯ ಸೇವಾ ಸೌಧದ ಬಳಿ ಹದಗೆಟ್ಟ ರಸ್ತೆಯ ಗುಂಡಿಯಿಂದ ಪಾರಾಗಲು ರಶೀದ್ ಹರಸಾಹಸ ಪಡುತ್ತಿದ್ದಂತೆಯೇ ನಿಯಂತ್ರಣ ಕಳಕೊಂಡು ಸ್ಕೂಟರ್ ಸ್ಕಿಡ್ಡಾಗಿ ಬಿತ್ತು ಎನ್ನಲಾಗಿದೆ. ಇದರಿಂದ ಸ್ಕೂಟರ್‌ನ ಹಿಂಬದಿ ಕುಳಿತಿದ್ದ ರಹ್ಮತ್ ರಸ್ತೆಗೆ ಎಸೆಯಲ್ಪಟ್ಟರು. ಅದೇ ರಸ್ತೆಯಲ್ಲಿ ವೇಗದಲ್ಲಿದ್ದ ಟ್ಯಾಂಕರ್ ರಹ್ಮತ್‌ರ ಮೇಲೆಯೇ ಹರಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಅಪಘಾತದಿಂದ ರಹ್ಮತ್ ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ರಹ್ಮತ್ ಮೃತಪಟ್ಟಿರುವುದಾಗಿ ಘೋಷಿಸಿದರು.

ರಸ್ತೆ ಅವ್ಯವಸ್ಥೆಯಿಂದಾಗಿ ಘಟನೆ ನಡೆದಿರುವುದಾಗಿ ಆರೋಪಿಸಿದ ಉದ್ರಿಕ್ತ ಗುಂಪು, ರಸ್ತೆಗೆ ಅಡ್ಡವಾಗಿ ಕಲ್ಲುಗಳನ್ನು ಇಟ್ಟು ಪ್ರತಿಭಟನೆ ನಡೆಸಿದೆ. ಇದರಿಂದಾಗಿ ತೊಕ್ಕೊಟ್ಟು ಕೊಣಾಜೆ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ವಾಹನಗಳೆಲ್ಲವೂ ಸರತಿ ಸಾಲುಗಳಲ್ಲಿ ನಿಂತರೆ, ಹಲವು ವಾಹನಗಳು ಬೀರಿ ಮಾರ್ಗವಾಗಿ ಸಂಚರಿಸಿದೆ. ಉದ್ರಿಕ್ತ ಗುಂಪು ಹಾಗೂ ಉಳ್ಳಾಲ ಪೊಲೀಸರ ನಡುವೆ ತೀವ್ರ ವಾಗ್ದಾಳಿ ನಡೆದಿದೆ.

Ad Widget

Ad Widget

108 ಆಂಬ್ಯುಲೆನ್ಸ್ ಅವ್ಯವಸ್ಥೆ!:

ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ ರೆಹಮತ್ ಅವರ ಮೃತದೇಹ ಅರ್ಧ ಗಂಟೆಗೂ ಅಧಿಕ ಕಾಲ ರಸ್ತೆಯಲ್ಲೇ ಉಳಿದಿತ್ತು. 108 ಆಂಬ್ಯುಲೆನ್ಸ್‌ಗೆ ಕರೆ ಮಾಡಿದಾಗ ತಾಂತ್ರಿಕ ಕಾರಣಗಳನ್ನು ನೀಡಿ ಸ್ಥಳಕ್ಕಾಗಮಿಸಲಿಲ್ಲ. ಇದರಿಂದ ಇನ್ನಷ್ಟು ರೊಚ್ಚಿಗೆದ್ದ ಜನ ಆಂಬ್ಯುಲೆನ್ಸ್ ಅವ್ಯವಸ್ಥೆಯ ವಿರುದ್ದವೂ, ನಿತ್ಯ ಹೊಂಡಗುಂಡಿಯ ರಸ್ತೆಯ ಬದಿಯಲ್ಲೇ ನಿಂತು ದಂಡ ಪಡೆಯುವ ಸಂಚಾರಿ ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಘಟನಾ ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್, ಸಂಚಾರಿ ವಿಭಾಗದ ಎಸಿಪಿ ನಜ್ಞಾ ಫಾರೂಕಿ, ಎಸಿಪಿ ಧನ್ಯಾ ನಾಯಕ್, ಉಳ್ಳಾಲ ಠಾಣಾಧಿಕಾರಿ ಬಾಲಕೃಷ್ಣ ಎಚ್.ಎನ್. ಭೇಟಿ ನೀಡಿ ಉದ್ರಿಕ್ತರನ್ನು ಸಮಾಧಾನಿಸಿದರು

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!