Connect with us

ಬಿಗ್ ನ್ಯೂಸ್

Vitla-ವಿಟ್ಲ : ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ನದಿಯಲ್ಲಿ ಶಿವಲಿಂಗ ಪತ್ತೆ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ವಿಟ್ಲ: ಆನೆಕಲ್ಲು ಪಡ್ಪು ಶ್ರೀ ಜಲದುರ್ಗಾ ಪರಮೇಶ್ವರೀ ಕ್ಷೇತ್ರದಲ್ಲಿ ನಾಡಿ ವಿಧಾನದ ಮೂಲಕ ನಡೆಯುತ್ತಿದ್ದ ಪ್ರಶ್ನಾಚಿಂತನೆ ಸಂದರ್ಭ ದೇವಸ್ಥಾನದ ಮುಂಭಾಗ ಹರಿಯುವ ನದಿಯಲ್ಲಿ ಶಿವ ಲಿಂಗ ಇರುವ ವಿಚಾರ ತಿಳಿದು ಬಂದಿದ್ದು, ಅದನ್ನು ಪತ್ತೆ ಮಾಡುವ ಕಾರ್ಯ ಶನಿವಾರ ಸಾಯಂಕಾಲ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಪಡ್ಪು ತೋಟದಲ್ಲಿ ದಶಕದ ಹಿಂದೆ ದೇವಸ್ಥಾನದ ಕುರುಹು ಪತ್ತೆಯಾದ ಸಂದರ್ಭದಲ್ಲಿ ನಡೆದ ಪ್ರಶ್ನಾ ಚಿಂತನೆಯಲ್ಲಿ ಜಲದುರ್ಗೆಯ ಜತೆಗೆ ಶಿವನ ಸಾನಿಧ್ಯವೂ ಇದೆ ಎಂಬುದು ಕಾಣಿಸಿತ್ತು. ಜಲದುರ್ಗಾ ಪರಮೇಶ್ವರೀ ನೀರಿನಲ್ಲಿ ನಿಂತು ಶಿವನಿಗೋಸ್ಕರ ತಪಸ್ಸು ಮಾಡಿದ ದೇವಿಯಾಗಿದ್ದಾರೆ. ಶಿವ ಲಿಂಗ ಸಿಗುವ ಮೂಲಕ ದೇವಿಯ ತಪಸ್ಸು ಸಾಕಾರಗೊಂಡಿದೆ. ನದಿಯಲ್ಲಿ ಪತ್ತೆಯಾದ ಶಿವಲಿಂಗಕ್ಕೆ ಶಿವ ಯೋಗೇಶ್ವರ ಎಂದು ಕರೆಯಲ್ಪಡುತ್ತಿದ್ದು, ಪ್ರತಿಯೊಬ್ಬ ಭಕ್ತರೂ ಪುರೋಹಿತ ಸಹಾಯದಲ್ಲಿ ಅರ್ಚನೆ ಮಾಡುವ ರೀತಿ ಶಿವಾಲಯವನ್ನು ನಿರ್ಮಾಣ ಮಾಡಲಾಗುವುದು.

Ad Widget

Ad Widget <> Ad Widget

ನಾಡಿ ಶೋಧನೆಯನ್ನು ಕರೂರು ಪಂಚಮದೇವಿ ಕಲಿಪಾಳ್ಯಮ್ ಶ್ರೀ ನಂದೀಶ್ವರರ್ ಜ್ಞಾನಪೀಠಂ ನ ಸ್ವಾಮಿ ಸಿದ್ಧ ಗುರೂಜಿಯವರು ನಡೆಸಿದ್ದಾರೆ. ಆನೆಕಲ್ಲು ಶ್ರೀ ಜಲದುರ್ಗಾ ಪರಮೇಶ್ವರೀ ಟ್ರಸ್ಟ್ ಗೌರವಾಧ್ಯಕ್ಷ ಒ. ಶ್ಯಾಮ್ ಭಟ್, ಜ್ಞಾನಪೀಠಂ ನ ಕಾರ್ಯನಿರ್ವಾಹಕ ಧರ್ಮದರ್ಶಿ ನಂದಿನಿ ಕೃಷ್ಣಕುಮಾರ್, ಟ್ರಸ್ಟಿ ಶಿವರಾಮನ್, ವೆಂಕಟ್, ಮಾತಾ ಅಮೃತಾನಂದಮಯೀ ಆಶ್ರಮದ ಎ. ಪಿ. ಲಲಿತಾ, ಶ್ರೀ ಜಲದುರ್ಗಾ ಪರಮೇಶ್ವರೀ ಕ್ಷೇತ್ರದ ಸಂಚಾಲಕ ಸುರೇಶ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುಷ್ಪರಾಜ್, ನೆಲಜಲ ಹೋರಾಟ ಸಮಿತಿ ಅಧ್ಯಕ್ಷ ರಾಮಣ್ಣ ಪಾಳಿಗೆ ಮತ್ತಿತರರು ಹಾಜರಿದ್ದರು.



Ad Widget
Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ

Published

on



Ad Widget

Ad Widget

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

Ad Widget

Ad Widget <> Ad Widget

ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.



Ad Widget

ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.

ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.

Ad Widget
Continue Reading

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading