ಈ ವೇಳೆ ದ್ವಿಚಕ್ರ ವಾಹನದ ಹಿಂಬದಿ ಸವಾರೆಯಾಗಿದ್ದ  ಮಹಿಳೆ ತನ್ನ ಜೊತೆಗೆ ಬೀಳುತ್ತಿದ್ದ […]" /> ಈ ವೇಳೆ ದ್ವಿಚಕ್ರ ವಾಹನದ ಹಿಂಬದಿ ಸವಾರೆಯಾಗಿದ್ದ  ಮಹಿಳೆ ತನ್ನ ಜೊತೆಗೆ ಬೀಳುತ್ತಿದ್ದ […]"> ಕುಂದಾಪುರ : ಟಿಪ್ಪರ್ ಅಡಿಗೆ ಬಿದ್ದು ಮಹಿಳೆ ಸಾವು - ಮಗು ಮತ್ತು ಪತಿಗೆ ಗಾಯ - Nikhara News | Kannada News Website
Connect with us

ಅಪರಾಧ

ಕುಂದಾಪುರ : ಟಿಪ್ಪರ್ ಅಡಿಗೆ ಬಿದ್ದು ಮಹಿಳೆ ಸಾವು – ಮಗು ಮತ್ತು ಪತಿಗೆ ಗಾಯ

Published

on

Ad Widget

Ad Widget

Ad Widget

Ad Widget

ಕುಂದಾಪುರ :  ಟಿಪ್ಪರ್ ಹಾಗೂ  ದ್ವಿಚಕ್ರ ವಾಹನದ  ಮಧ್ಯೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ‌ ಘಟನೆ ಹೆಮ್ಮಾಡಿಯಲ್ಲಿ ಭಾನುವಾರ ಸಂಜೆ ನಡೆದಿದೆ.

Ad Widget

Ad Widget

Ad Widget

Ad Widget

ಕುಂದಾಪುರದ ಅರೆಹೊಳೆ ಎರುಕೋಣೆ ನಿವಾಸಿ ಜ್ಯೋತಿ  ಅಪಘಾತದಲ್ಲಿ ಮೃತಪಟ್ಟ ಮಹಿಳೆ.  ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಇವರ ಪತಿ ಶರತ್ ಮತ್ತು ಮಗು   ಗಾಯಗೊಂಡಿದ್ದಾರೆ.ಚಲಾಯಿಸಿಕೊಂಡು ಬರುವಾಗ ನಿಯಂತ್ರಣ ತಪ್ಪಿ  ಅದೇ ದಾರಿಯಲ್ಲಿ ತೆರಳುತ್ತಿದ್ದ ಸ್ಕೂಟಿಗೆ ಢಿಕ್ಕಿ ಹೊಡೆದಿದೆ. 

Ad Widget

Ad Widget alt="Ad Widget"/>

Ad Widget

ಈ ವೇಳೆ ದ್ವಿಚಕ್ರ ವಾಹನದ ಹಿಂಬದಿ ಸವಾರೆಯಾಗಿದ್ದ  ಮಹಿಳೆ ತನ್ನ ಜೊತೆಗೆ ಬೀಳುತ್ತಿದ್ದ ಮಗುವನ್ನು ಇನ್ನೊಂದು ಕಡೆ ಹಾಕಿ,  ಬೊಬ್ಬೆ ಹೊಡೆದಿದ್ದಾರೆ. ಆದರೇ ಟಿಪ್ಪರ್ ಮಹಿಳೆಯ ಮೇಲೆ  ಹರಿದಿದೆ. ಘಟನೆಯಲ್ಲಿ  ಮಗು ಹಾಗೂ ಆಕೆಯ ಪತಿ ಗಾಯಗೊಂಡಿದ್ದಾರೆ. ಕುಂದಾಪುರ ಸಂಚಾರಿ ಠಾಣೆ ಪ್ರಕರ ದಾಖಲಾಗಿದೆ.

Ad Widget

Ad Widget <> Ad Widget

Ad Widget
Click to comment

Leave a Reply

ಅಪರಾಧ

Excise raid-ಬಾಳ್ತಿಲ, ಮೆಲ್ಕಾರ್‌ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್‌ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್‌ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.

Ad Widget

Ad Widget alt="Ad Widget"/>

Ad Widget

ಮೊದಲ ಪ್ರಕರಣದಲ್ಲಿ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಪೂರ್ಲಿಪಾಡಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 1,261 ಲೀಟರ್ ಗೋವಾ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜಪ್ತಿಯಾದ ಮದ್ಯದ ಮೌಲ್ಯ ಸುಮಾರು ₹7.72 ಲಕ್ಷ ಎಂದು ಅಂದಾಜಿಸಲಾಗಿದೆ.

Ad Widget

Ad Widget <> Ad Widget

ಇನ್ನೊಂದು ಪ್ರಕರಣದಲ್ಲಿ ಮೆಲ್ಕಾರ್ ಸಮೀಪ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 188.9 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಮದ್ಯ ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಕಾರುಗಳನ್ನೂ ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಈ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು ₹20.37 ಲಕ್ಷ ಮೌಲ್ಯದ ಮದ್ಯ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಜಮಾಡಿ ಟೋಲ್ ಬಳಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಅಬಕಾರಿ ಇಲಾಖೆ ಮತ್ತೊಂದು ಮಹತ್ವದ ಯಶಸ್ಸು ಸಾಧಿಸಿದೆ.

Ad Widget

Ad Widget

ಜಿಲ್ಲೆಯಲ್ಲಿ ಅಕ್ರಮ ಮದ್ಯ ದಾಸ್ತಾನು ಹಾಗೂ ಸಾಗಾಟದ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದ್ದು, ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಇಲಾಖೆ ಎಚ್ಚರಿಕೆ ನೀಡಿದೆ.

Ad Widget
Continue Reading

ಅಂತರ ರಾಜ್ಯ

Sreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು

Published

on

Ad Widget

Ad Widget

Ad Widget

Ad Widget

ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.

Ad Widget

Ad Widget alt="Ad Widget"/>

Ad Widget

2022ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್‌ನ ಫಾಸ್ಟ್‌ಟ್ರ್ಯಾಕ್ ವಿಶೇಷ ನ್ಯಾಯಾಲಯ-11ರ ನ್ಯಾಯಾಧೀಶೆ ರಮ್ಯಾ ಮೆನನ್ ಅವರು, ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ದಂಡ ಸಂಹಿತೆ (IPC) 1860ರ ಸೆಕ್ಷನ್ 509ರ ಅಡಿಯಲ್ಲಿ ಶ್ರೀಜಿತ್ ರವಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.

Ad Widget

Ad Widget <> Ad Widget

2022ರ ಜುಲೈ 4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಶಾಲೆಯಿಂದ ತ್ರಿಶೂರ್‌ನ ಅರನಟ್ಟುಕರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಶ್ರೀಜಿತ್ ರವಿ ಕಾರಿನಲ್ಲಿ ಬಾಲಕಿಯರನ್ನು ಹಿಂಬಾಲಿಸಿ, ಅಪಾರ್ಟ್‌ಮೆಂಟ್‌ನ ಕಾರು ನಿಲುಗಡೆ ಪ್ರದೇಶದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು.

ವಿಚಾರಣೆ ವೇಳೆ ಬಾಲಕಿಯರು ನ್ಯಾಯಾಲಯದಲ್ಲಿ ಶ್ರೀಜಿತ್ ರವಿಯನ್ನು ಗುರುತಿಸಿದ್ದರು. ಆದರೆ, ಚಲನಚಿತ್ರ ನಟನಾಗಿದ್ದರೂ ಬಾಲಕಿಯರು ಆತನ ಹೆಸರನ್ನು ಗುರುತಿಸಲು ವಿಫಲರಾಗಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಟನ ಪರ ವಕೀಲರು ಗುರುತಿಸುವಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.

Ad Widget

Ad Widget

ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಬಾಲಕಿಯರು ಆರೋಪಿಯನ್ನು ಗುರುತಿಸಿದ್ದು, ಅವರ ದೈಹಿಕ ಚಹರೆಯ ಬಗ್ಗೆಯೂ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ತಿಳಿಸಿದೆ.

ಪೊಲೀಸ್ ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆಯೂ ನ್ಯಾಯಾಲಯ ಗಮನ ಸೆಳೆದಿದೆ. ವಿಶೇಷವಾಗಿ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸದಿರುವುದನ್ನು ಉಲ್ಲೇಖಿಸಿದೆ. ಆದರೆ, ತನಿಖೆಯಲ್ಲಿನ ಇಂತಹ ಲೋಪಗಳು ಬಾಲಕಿಯರು ನೀಡಿದ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Ad Widget
Continue Reading

ಅಂತರ ರಾಜ್ಯ

FIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್‌ಫ್ಲುಯೆನ್ಸರ್ ವಹಿದಾ ದೂರು – ಎಫ್‌ಐಆರ್ ದಾಖಲು..!

Published

on

Ad Widget

Ad Widget

Ad Widget

Ad Widget

ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಚೆನ್ನೈ: ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಇನ್‌ಫ್ಲುಯೆನ್ಸರ್ ವಹಿದಾ ಅಖ್ದರ್ (Wahidha Akdhar) ನೀಡಿದ ದೂರಿನ ಆಧಾರದಲ್ಲಿ ಚೆನ್ನೈನ ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 69ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ತನಿಖೆ ಆರಂಭಿಸಿರುವ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಮುತ್ತುಕುಮಾರನ್ ಅವರಿಗೆ ಶೀಘ್ರದಲ್ಲೇ ಸಮನ್ಸ್ ಜಾರಿ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಇದೇ ವೇಳೆ, ತಮ್ಮ ವಿರುದ್ಧ ದೂರು ನೀಡಿರುವ ವಹಿದಾ ವಿರುದ್ಧವೇ ಮುತ್ತುಕುಮಾರನ್ ಪ್ರತಿದೂರು ದಾಖಲಿಸಿದ್ದಾರೆ. ವಹಿದಾ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಏನಿದು ಪ್ರಕರಣ?
‘ದಿ ಟೈಮ್ಸ್ ಆಫ್ ಇಂಡಿಯಾ’ ವರದಿಯ ಪ್ರಕಾರ, ಇನ್‌ಸ್ಟಾಗ್ರಾಮ್ ಮೂಲಕ ಮುತ್ತುಕುಮಾರನ್ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೆ ತಿರುಗಿತ್ತು ಎಂದು ವಹಿದಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ದೈಹಿಕ ಸಂಪರ್ಕ ಬೆಳೆಸುವ ಮೊದಲು ಮುತ್ತುಕುಮಾರನ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಆದರೆ, ನಂತರ ಮದುವೆಯಾಗಲು ನಿರಾಕರಿಸಿದ್ದಾರೆ ಎಂಬುದು ವಹಿದಾ ಅವರ ಆರೋಪವಾಗಿದೆ.

ಈ ಸಂಬಂಧ ವಹಿದಾ ಮೊದಲು ಚೆನ್ನೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಬಳಿಕ ದೂರನ್ನು ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಅಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬಿಎನ್‌ಎಸ್ ಸೆಕ್ಷನ್ 69ರ ಅಡಿಯಲ್ಲಿ, ಅತ್ಯಾಚಾರದ ವ್ಯಾಪ್ತಿಗೆ ಬಾರದಿದ್ದರೂ ಮದುವೆಯಾಗುವ ಸುಳ್ಳು ಭರವಸೆ ಸೇರಿದಂತೆ ವಂಚನೆಯ ಮಾರ್ಗಗಳ ಮೂಲಕ ದೈಹಿಕ ಸಂಪರ್ಕ ಬೆಳೆಸುವುದಕ್ಕೆ ಸಂಬಂಧಿಸಿದ ಅಪರಾಧವನ್ನು ಪರಿಗಣಿಸಲಾಗುತ್ತದೆ.

ನವೆಂಬರ್ 9ರಂದು ವಹಿದಾ ಅವರು ಮುತ್ತುಕುಮಾರನ್ ಜೊತೆಗಿನ ಸಂಬಂಧದ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡ ಬಳಿಕ ಈ ವಿಚಾರ ಬಹಿರಂಗವಾಗಿತ್ತು. ಇಬ್ಬರೂ ಜೊತೆಯಾಗಿರುವ ವಿಡಿಯೊವನ್ನು ಪ್ರಕಟಿಸಿದ್ದ ಅವರು, ಮುತ್ತುಕುಮಾರನ್ ನೀಡಿದ್ದ ಭರವಸೆಗಳ ಬಗ್ಗೆ ಪ್ರಶ್ನಿಸಿದ್ದರು. ತಮ್ಮ ಪೋಸ್ಟ್‌ನಲ್ಲಿ, “ನೀನು ಹೇಳಿದ್ದೆಲ್ಲವೂ ನಿನಗೆ ಕೇವಲ ತಮಾಷೆಯಾಗಿತ್ತು” ಎಂದು ಬರೆದುಕೊಂಡಿದ್ದರು.

ಇದರ ಬೆನ್ನಲ್ಲೇ ವಹಿದಾ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳೂ ಪ್ರಕಟವಾಗಿದ್ದವು. ಈ ಪ್ರಕರಣದ ಕುರಿತು ಹಿರಿಯ ಗೀತರಚನೆಕಾರ ತಾಮರೈ ಕೂಡ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದು, ಮುತ್ತುಕುಮಾರನ್ ಅವರನ್ನು ಟೀಕಿಸಿ, ಆರೋಪಗಳ ಬಗ್ಗೆ ತಮ್ಮ ಕಡೆಯ ಸ್ಪಷ್ಟನೆ ನೀಡುವಂತೆ ಒತ್ತಾಯಿಸಿದ್ದಾರೆ.

ನಟ ವಿಜಯ್ ಸೇತುಪತಿ ನಿರೂಪಣೆಯ ‘ಬಿಗ್ ಬಾಸ್ ತಮಿಳು ಸೀಸನ್-8’ರಲ್ಲಿ ಸ್ಪರ್ಧಿಸುವ ಮೂಲಕ ಮುತ್ತುಕುಮಾರನ್ ಜನಪ್ರಿಯತೆ ಗಳಿಸಿದ್ದರು. 2025ರ ಜನವರಿ 19ರಂದು ನಡೆದ ಫಿನಾಲೆಯಲ್ಲಿ ಅವರು ಕಾರ್ಯಕ್ರಮದ ವಿಜೇತರಾಗಿ ಹೊರಹೊಮ್ಮಿದ್ದರು.

ನಟ ವಿಜಯ್ ಸೇತುಪತಿ ನಿರೂಪಣೆಯ ‘ಬಿಗ್ ಬಾಸ್ ತಮಿಳು ಸೀಸನ್ 8’ರಲ್ಲಿ ಭಾಗವಹಿಸುವ ಮೂಲಕ ಮುತ್ತುಕುಮಾರನ್ ಅಪಾರ ಜನಪ್ರಿಯತೆ ಗಳಿಸಿದ್ದರು. ಜನವರಿ 19, 2025ರಂದು ನಡೆದ ಫಿನಾಲೆಯಲ್ಲಿ ಅವರು ಶೋನ ವಿಜೇತರಾಗಿ ಹೊರಹೊಮ್ಮಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!