ಆರೋಗ್ಯ
Kumbra-ಕುಂಬ್ರ ಸ್ಪಂದನಾ ಸೇವಾ ಬಳಗ ಆಶ್ರಯದಲ್ಲಿ ಉಚಿತ ಆರೋಗ್ಯ ಶಿಬಿರ – ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ
ಸ್ಪಂದನಾ ಸೇವಾ ಬಳಗ ಕುಂಬ್ರ ಇದರ ಆಶ್ರಯದಲ್ಲಿ, ಎ. ಜೆ. ಇನ್ಸ್ ಟ್ಯೂಷನ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ವು ದಿನಾಂಕ 10/11/2024 ನೇ ಆದಿತ್ಯವಾರ ದಂದು ಶ್ರೀ ರಾಮ ಭಜನಾ ಮಂದಿರದ ಸಭಾಂಗಣ ಕುಂಬ್ರ ದಲ್ಲಿ ನಡೆಯಿತು.
ಸ್ಪಂದನಾ ಸೇವಾ ಬಳಗ ಕುಂಬ್ರ ಇದರ ಆಶ್ರಯದಲ್ಲಿ, ಎ. ಜೆ. ಇನ್ಸ್ ಟ್ಯೂಷನ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ವು ದಿನಾಂಕ 10/11/2024 ನೇ ಆದಿತ್ಯವಾರ ದಂದು ಶ್ರೀ ರಾಮ ಭಜನಾ ಮಂದಿರದ ಸಭಾಂಗಣ ಕುಂಬ್ರ ದಲ್ಲಿ ನಡೆಯಿತು.
ಮೊದಲಿಗೆ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮ ವನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಕುಂಬ್ರ ಇಲ್ಲಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಭವಾನಿ ಬಿ. ಆರ್. ರವರು ಮಾತನಾಡಿ ಸ್ಪಂದನ ಸಂಸ್ಥೆ ಯ ಉತ್ತಮ ಸೇವೆ ಇದಾಗಿದ್ದು ಯಾವುದೇ ಪ್ರಚಾರವನ್ನು ಬಯಸದೆ ಸಮಾಜ ಸೇವೆ ಮಾಡುವ ಈ ಸಂಸ್ಥೆಗೆ ಎಲ್ಲರೂ ಕೈ ಜೋಡಿಸುವಂತೆ ಮನವಿ ಮಾಡಿಕೊಂಡರು.
ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಸ್ಪಂದನ ಸೇವಾ ಬಳಗದ ಅಧ್ಯಕ್ಷರಾದ ರತನ್ ರೈ ಕುಂಬ್ರ ವಹಿಸಿದ್ದರು. ಮುಖ್ಯ ಅತಿಥಿ ಶ್ರೀ ರಾಮ ಭಜನಾ ಮಂದಿರ ರಿ ಕುಂಬ್ರ ಇಲ್ಲಿನ ಅಧ್ಯಕ್ಷರಾದ ಶ್ರೀ ಮೋನಪ್ಪ ಪೂಜಾರಿ ಬಡಕ್ಕೋಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಸ್ಪಂದನ ಸೇವಾ ಬಳಗದ ಗೌರವಧ್ಯಕ್ಷರಾದ ಶ್ರೀ ಮೋಹನ್ ದಾಸ್ ರೈ ಕುಂಬ್ರ
ಸ್ಪಂದನ ಸೇವಾ ಬಳಗದ ಗೌರವ ಸಲಹೆಗಾರರಾದ ಶ್ರೀ ಸುಧಾಕರ ರೈ ಕುಂಬ್ರ
ಸ್ಪಂದನ ಸೇವಾ ಬಳಗದ ಕಾರ್ಯಧ್ಯಕ್ಷರಾದ ಅಶೋಕ್ ತ್ಯಾಗರಾಜೆ ಉಪಸ್ಥಿತರಿದ್ದರು.
ಶ್ರೀಮತಿ ಉಷಾ ನಾರಾಯಣ ಕುಂಬ್ರ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ನೆರವೇರಿತು.
ಸ್ಪಂದನ ಸೇವಾ ಬಳಗದ ಗೌರವ ಸಲಹೆಗಾರರಾದ ಶ್ರೀ ತಿಲಕ್ ರೈ ಕುತ್ಯಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷರಾದ ರತನ್ ರೈ ಕುಂಬ್ರ ಸ್ವಾಗತಿಸಿ ಅಶೋಕ್ ತ್ಯಾಗರಾಜೆ ವಂದಿಸಿದರು.
ವಿದ್ಯಾಲತಾ ರೈ ಕುಂಬ್ರ, ರಾಜೇಶ್ ರೈ ಪರ್ಪುoಜ, ಪದ್ಮನಾಭ ಗೌಡ ಮುಂಡಾಲ, ನಿತೀಶ್ ಕುಮಾರ್ ಶಾಂತಿವನ, ಕರುಣಾ ರೈ ಬಿಜಳ, ಚಂದ್ರಕಾಂತ ಶಾಂತಿವನ ಅತಿಥಿಗಳನ್ನು ಶಾಲು ಹಾಕಿ ಗೌರವಿಸಿದರು
ಹರೀಶ್ ರೈ ಮುಗೇರು ಕಾರ್ಯಕ್ರಮ ನಿರೂಪಣೆ ಮಾಡಿದರು. ಶರತ್ ಕುಮಾರ್ ಗುತ್ತು, ಸಂತೋಷ್ ಕುಮಾರ್ ರೈ ಕೈಕಾರ ಸಹಕರಿಸಿದರು.
ಶಿಬಿರದಲ್ಲಿ ಸುಮಾರು 450ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಪಾಲ್ಗೊಂಡರು 150 ಕ್ಕೂ ಹೆಚ್ಚು ಜನರಿಗೆ ಕನ್ನಡಕ ವಿತರಿಸಲಾಯಿತು. 50 ಕ್ಕೂ ಅಧಿಕ ಮಂದಿ ಅಂಚೆ ಇಲಾಖೆಯ ಅಪಘಾತ ವಿಮೆ ಮಾಡಿಸಿಕೊಂಡರು ಅಯುಷ್ಮಾನ್ ಕಾರ್ಡ್ ನ ಪ್ರಯೋಜನ ಕೂಡ ಪಡೆದುಕೊಂಡರು.
ಸ್ಪಂದನ ಸೇವಾ ಬಳಗದ ಗೌರವಧ್ಯಕ್ಷರಾದ ಸುಧಾಕರ ರೈ ಕುಂಬ್ರ ಉಚಿತವಾಗಿ ಕನ್ನಡಕದ ವ್ಯವಸ್ಥೆಯನ್ನು ಮಾಡಿದರು.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್‌ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
ಸುಳ್ಯ22 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಸ್ಥಳೀಯ22 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ಸ್ಥಳೀಯ19 hours agoKadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
-
ಮಂಗಳೂರು19 hours agoPriyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
-
ನಿಧನ ವಾರ್ತೆ3 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಅಂತರ ರಾಜ್ಯ3 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ2 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಪರಾಧ3 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!















