Connect with us

ಸ್ಥಳೀಯ

Dharmasthala-ಡಾ.ವೀರೇಂದ್ರ ಹೆಗ್ಗಡೆಯವರ ಆದರ್ಶ ಗುಣಗಳನ್ನು ಮನ್ನಿಸಿ ಪ್ರಧಾನಿ ಮೋದಿಯವರೇ ರಾಜ್ಯಸಭಾ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿರುವುದು ರಾಜ್ಯಕ್ಕೆ ಸಂದ ಗೌರವ; ದೇಶ ಮತ್ತು ಧರ್ಮದ ವಿಕಾಸಕ್ಕೆ ಧರ್ಮಸ್ಥಳವೇ ಆದಿ; ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಿ ಅನುಗ್ರಹ ಭಾಷಣ ಮಾಡಿದ ಕಂಚಿ ಕಾಮಕೋಟಿ ಸ್ವಾಮೀಜಿ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಬೆಳ್ತಂಗಡಿ : ಧರ್ಮ ಸಹಿತ ಸಮಾಜದ ನೇತೃತ್ವ ಆರ್ಥಿಕ ಸಹಿತ ಧಾರ್ಮಿಕ ನೇತೃತ್ವ ವಹಿಸಿದವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ಈ ದೇಶಕ್ಕೆ ಈ ರೀತಿಯ ವಿಕಾಸಕ್ಕೆ ಇಂಥ ಆವಶ್ಯಕತೆಯಿತ್ತು. ದಕ್ಷಿಣ ಭಾರತದಲ್ಲಿ ಸನಾತನ ಸಂಸ್ಕೃತಿಯಡಿ ಎಲ್ಲರೂ ಒಂದೆಡೆ ಸಮಾವೇಶಗೊಳ್ಳುವ ಕ್ಷೇತ್ರವಾಗಿ ಬೆಳಗಿ ನಿಂತಿದೆ ಎಂದು ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾ ಚಾರ್ಯ ಸ್ವಾಮೀಜಿ ನುಡಿದರು.

Ad Widget

Ad Widget

Ad Widget alt="Ad Widget"/>

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರಕ್ಕೆ ನ.9 ರಂದು ಶ್ರೀಗಳು ಪುರಪ್ರವೇಶ ಮಾಡಿದಾಗ ಮುಖ್ಯ ಪ್ರವೇಶ ದ್ವಾರದಿಂದ ಧರ್ಮಾಧಿಕಾರಿಗಳು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ ಬಳಕ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಅನುಗ್ರಹ ಭಾಷಣ ಮಾಡಿದರು.

Ad Widget

Ad Widget <> Ad Widget

ಧರ್ಮಸ್ಥಳದಲ್ಲಿ ಗ್ರಾಮೀಣ ವಿಕಾಸದ ಜತೆಗೆ ಧಾರ್ಮಿಕ ನಗರವನ್ನೇ ಸೃಷ್ಟಿಸಿದ್ದಾರೆ. ಸನಾತನ ಧರ್ಮದಲ್ಲಿ ಕುಟುಂಬ ಪದ್ಧತಿ ಶೂನ್ಯತೆಯತ್ತ ಸಾಗುವ ಕಾಲದಲ್ಲಿ ಹೆಗ್ಗಡೆ ಕುಟುಂಬ ಜತೆಗೂಡಿ ಸಮಾಜ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸ್ವಯಂಪ್ರೇರಿತವಾಗಿ ತೊಡಗಿಸಿಕೊಂಡು ಅಭೂತಪೂರ್ವ ಅಭಿವೃದ್ಧಿ ಹಾಗೂ ವಿಶಾಲ ದೃಷ್ಟಿಕೋನವು ಮುಂದಕ್ಕೆ ಮಂಜುನಾಥನ ಸನ್ನಿಧಿ ಸೇವಾನಗರವಾಗಿ ಬೆಳಗಲಿ ಎಂದು ಹರಿಸಿದರು.



Ad Widget

ಮೋದಿಯವರೇ ಆಯ್ಕೆ ಮಾಡಿದ ಸ್ಥಾನ:
ದೇಶಕ್ಕೆ ಮುಕುಟಪ್ರಾಯವಾದ ಧರ್ಮಸ್ಥಳ ಸೌಂದರ್ಯನಗರ, ಸಂಸ್ಕೃತಿ ನಗರ ಮತ್ತು ಸೇವಾನಗರವಾಗಿದೆ. ಇಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಪ್ರಜ್ಞೆ ಲಪ್ರಖ್ಯಾತಿ, ಪ್ರಶಸ್ತಿ, ಪ್ರಚಾರವಿದೆ. ಇವರು ಒಬ್ಬ ಸಾಧಾರಣ ವ್ಯಕ್ತಿಯಾಗಿ ಸಮಾಜಕ್ಕೆ ಅಸಾಧಾರಣ ಸಾಧನೆ ಮಾಡಿದ್ದಾರೆ. ಅವರ ಕಾರ್ಯವೈಖರಿ, ಆದರ್ಶ ನಾಯಕತ್ವ ಸಾಮಾಜಿಕ ಸೇವಾ ಕಳಕಳಿ ಮತ್ತು ಪ್ರತಿಷ್ಠೆ ಹೃದಯ ಶ್ರೀಮಂತಿಕೆಯನ್ನು ಮನ್ನಿಸಿ ಪ್ರಧಾನಿ ನರೇಂದ್ರ ಮೋದಿಯವರೇ ಹೆಗ್ಗಡೆಯವರನ್ನು ರಾಜ್ಯ ಸಭಾ ಸದಸ್ಯರಾಗಿ ರಾಜ್ಯಸಭಾ ನಾಮ ನಿರ್ದೇಶನ ಮಾಡಿರುವುದು ಕರ್ನಾಟಕ ರಾಜ್ಯಕ್ಕೆ ಸಂದ ಗೌರವ ಎಂದರು.

Ad Widget

Ad Widget

ಅನ್ನಪೂರ್ಣ ಛತ್ರದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನ ವ್ಯವಸ್ಥೆ ಹೊಂದಿರುವ ಭೋಜನಾಲಯದ ಉದ್ಘಾಟನೆಗೆ ಹೆಗ್ಗಡೆಯವರು ಆಹ್ವಾನಿಸಿದ್ದು ಸಂತಸ ತಂದಿದೆ. ಸೋಮವಾರ ಕಾರ್ತಿಕ ಪೂಜೆ, ದ್ವಾದಶಿ ಪೂಜೆ, ತ್ರಯೋದಶಿ ಪೂಜೆ ಹಾಗೂ ಕಂಚಿಮಠದಲ್ಲಿ ಕೃಷಿ ಸುಭೀಕ್ಷೆಗೆ ಪ್ರತಿ ವರ್ಷ ಶಿವನಿಗೆ ಅನ್ನಾಭಿಷೇಕವಾಗುತ್ತದೆ, ಶನಿವಾರ ಧರ್ಮಸ್ಥಳ ಕ್ಷೇತ್ರದಲ್ಲಿ ಇದನ್ನು ಮಾಡಲಿದ್ದೇವೆ ಎಂದು ಶ್ರೀಗಳು ತಿಳಿಸಿದರು.

ಧರ್ಮಾಧಿಕಾರಿ ಡಾ | ಡಿ.ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ.ಹೆಗ್ಗಡೆಯವರು, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸೋನಿಯಾ ಯಶೋವರ್ಮ ಮತ್ತು ಪೂರಣ್ ವರ್ಮ ಉಪಸ್ಥಿತರಿದ್ದರು.

ನ.14: ಧರ್ಮಸ್ಥಳದಲ್ಲಿ ಆಸನ ವ್ಯವಸ್ಥೆಯ ಭೋಜನಾಲಯ ಉದ್ಘಾಟನೆ :

ಧರ್ಮಸ್ಥಳದಲ್ಲಿ ಅನ್ನಪೂರ್ಣ ಭೋಜನಾಲಯದ ಮೇಲಂತಸ್ತಿನಲ್ಲಿ ನಿರ್ಮಿಸಲಾದ ಸುಸಜ್ಜಿತ ಆಸನ ವ್ಯವಸ್ಥೆಗಳನ್ನು ಹೊಂದಿರುವ ಭೋಜನಾಲಯವನ್ನು ನ.14ರಂದು ಸಂಜೆ 5 ಗಂಟೆಗೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಉದ್ಘಾಟಿಸುವರು. ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಶಾಸಕರಾದ ಹರೀಶ್ ಪೂಂಜ ಮತ್ತು ಕೆ.ಪ್ರತಾಪಸಿಂಹ ನಾಯಕ್, ಕೆ.ಪಿ.ಸಿ.ಸಿ. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮತ್ತು ಡಿ.ಸುರೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿರುವರು.

Ad Widget
Click to comment

Leave a Reply

ಪುತ್ತೂರು

ಮುಳಿಯ ಶ್ಯಾಮ್ ಭಟ್‌ ನಿಧನ : ‘ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌’ ಅ.6ರಂದು ಮಧ್ಯಾಹ್ನ 2 ಗಂಟೆಯವರೆಗೆ ಶೋರೂಮ್ ಬಂದ್

Published

on



Ad Widget

Ad Widget

Ad Widget

Ad Widget

ಪುತ್ತೂರು, ಅ.5: ಹಿರಿಯ ಚಿನ್ನಾಭರಣ ಉದ್ಯಮಿ ಹಾಗೂ ಮುಳಿಯ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಸಂಸ್ಥೆಯ ಮಾಲಕ ಸರಾಫ್‌ ಮುಳಿಯ ಶ್ಯಾಮ್ ಭಟ್‌ (81) ಅವರ ನಿಧನಕ್ಕೆ ಗೌರವ ಸೂಚಿಸಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು ಹಾಗೂ ಸುಳ್ಯ ಶೋರೂಂಗಳನ್ನು ಅ.6ರಂದು ಮಧ್ಯಾಹ್ನದವರೆಗೆ ಬಂದ್ ಇರಿಸಲಾಗುವುದು.

Ad Widget

Ad Widget

Ad Widget

Ad Widget

ಚಿನ್ನಾಭರಣ ಉದ್ಯಮ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿದ್ದ ಶ್ಯಾಮ್ ಭಟ್‌ ಅವರ ಅಗಲಿಕೆಗೆ ಸಂತಾಪ ಸೂಚಿಸುವ ಉದ್ದೇಶದಿಂದ ಶೋರೂಂ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಶ್ಯಾಮ್ ಭಟ್‌ ಅವರು ಅ.4ರಂದು ನಿಧನರಾಗಿದ್ದು, ಅ.6ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿದೆ. ಬಳಿಕ ಅಂತ್ಯಕ್ರಿಯೆ ನಡೆಯಲಿದೆ.

Ad Widget

Ad Widget <> Ad Widget



Ad Widget
Ad Widget
Continue Reading

ಬಿಗ್ ನ್ಯೂಸ್

Puttur Dasara-92ನೇ ವರ್ಷದ ಶಾರದೋತ್ಸವಕ್ಕೆ ಹೊಸ ರೂಪ; ‘ಪುತ್ತೂರು ದಸರಾ’ ನಾಮಾಂಕಿತದಲ್ಲಿ ನವರಾತ್ರಿಯ ವೈಭವದ ಆಚರಣೆ

Published

on



Ad Widget

Ad Widget

Ad Widget

Ad Widget

ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ ನಡೆಯುತ್ತಿದೆ. ಇದೀಗ ಈ ಉತ್ಸವಕ್ಕೆ ಮತ್ತಷ್ಟು ವಿಶಾಲ ರೂಪ ನೀಡುವ ಉದ್ದೇಶದಿಂದ ಈ ವರ್ಷದಿಂದ ಪುತ್ತೂರು ಶಾರದೋತ್ಸವವನ್ನು ‘ಪುತ್ತೂರು ದಸರಾ’ ಎಂಬ ನಾಮಾಂಕಿತದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ ನಡೆಯುತ್ತಿದೆ. ಇದೀಗ ಈ ಉತ್ಸವಕ್ಕೆ ಮತ್ತಷ್ಟು ವಿಶಾಲ ರೂಪ ನೀಡುವ ಉದ್ದೇಶದಿಂದ ಈ ವರ್ಷದಿಂದ ಪುತ್ತೂರು ಶಾರದೋತ್ಸವವನ್ನು ‘ಪುತ್ತೂರು ದಸರಾ’ ಎಂಬ ನಾಮಾಂಕಿತದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ.11ರಿಂದ 21ರವರೆಗೆ 92ನೇ ವರ್ಷದ ನವರಾತ್ರಿ ಪೂಜೆ ಹಾಗೂ ಶ್ರೀ ಶಾರದೋತ್ಸವ ವೈಭವದಿಂದ ನಡೆಯಲಿದೆ.

Ad Widget

Ad Widget <> Ad Widget

ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅ.21ರಂದು 20ಕ್ಕೂ ಅಧಿಕ ಕಲಾತಂಡಗಳು, ಸಾವಿರಾರು ಕುಣಿತ ಭಜನಾ ತಂಡಗಳು ಹಾಗೂ ವಿವಿಧ ವಾದ್ಯಘೋಷಗಳೊಂದಿಗೆ ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆ ನಡೆಯಲಿದ್ದು, ಇದರೊಂದಿಗೆ ‘ಪುತ್ತೂರು ದಸರಾ’ ಸಂಪನ್ನಗೊಳ್ಳಲಿದೆ.



Ad Widget

ದಸರಾ ಪರಂಪರೆಗೆ ಹೊಸ ರೂಪ
ಶ್ರೀ ಶಾರದಾ ಭಜನಾ ಮಂದಿರದ ಅಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ ಮಾತನಾಡಿ, ಹಲವು ಪವಾಡಗಳಿಗೆ ಸಾಕ್ಷಿಯಾಗಿರುವ ಪುತ್ತೂರು ಶಾರದಾ ಭಜನಾ ಮಂದಿರದಲ್ಲಿ ಕಳೆದ ಮೂರು ವರ್ಷಗಳಿಂದ ಶಾರದೋತ್ಸವವನ್ನು ಗತಕಾಲದ ವೈಭವವನ್ನು ಮರುಕಳಿಸುವ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದರು.

Ad Widget

Ad Widget

ಈ ಬಾರಿ ಶಾರದೋತ್ಸವಕ್ಕೆ ‘ಪುತ್ತೂರು ದಸರಾ’ ಎಂಬ ನಾಮಾಂಕಿತ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಪುತ್ತೂರು ತಾಲೂಕಿನ ದಸರಾ ಮಹೋತ್ಸವವಾಗಿ ರೂಪಿಸುವ ಉದ್ದೇಶವಿದೆ. ಈ ಕುರಿತು ಮೂರು ವರ್ಷಗಳ ಹಿಂದೆಯೇ ಸಮಿತಿಯಲ್ಲಿ ಚಿಂತನೆ ನಡೆದಿತ್ತು ಎಂದು ಅವರು ತಿಳಿಸಿದರು.

ಪುತ್ತೂರಿನಲ್ಲೇ ದಸರಾ ವೈಭವ
ಹಿಂದೆ ದಸರಾ ಮೆರವಣಿಗೆಯ ವೈಭವವನ್ನು ಕಣ್ತುಂಬಿಕೊಳ್ಳಲು ಪುತ್ತೂರಿನ ಜನರು ಮಂಗಳೂರು ಹಾಗೂ ಮಡಿಕೇರಿಗೆ ತೆರಳುತ್ತಿದ್ದರು. ಆದರೆ ಕಳೆದ ಮೂರು ವರ್ಷಗಳಿಂದ ಪುತ್ತೂರು ಶಾರದೆಯ ವೈಭವದ ಶೋಭಾಯಾತ್ರೆ ಜನರ ಗಮನ ಸೆಳೆಯುತ್ತಿದ್ದು, ವರ್ಷದಿಂದ ವರ್ಷಕ್ಕೆ ಹೊಸತನವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಇದಕ್ಕೆ ಸಾರ್ವಜನಿಕರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಸೀತಾರಾಮ ರೈ ಹೇಳಿದರು.

ಪುತ್ತೂರಿನಲ್ಲೇ ಜನರು ದಸರಾ ವೈಭವವನ್ನು ಕಣ್ತುಂಬಿಕೊಳ್ಳುವಂತಾಗಬೇಕು ಎಂಬ ಉದ್ದೇಶದಿಂದ ಶಾರದೋತ್ಸವಕ್ಕೆ ‘ಪುತ್ತೂರು ದಸರಾ’ ಎಂಬ ವಿಶಾಲ ರೂಪ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇದು ಪುತ್ತೂರು ತಾಲೂಕಿನ ಜನತೆಯ ದಸರಾ ಮಹೋತ್ಸವವಾಗಿ ಬೆಳೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹತ್ತು ದಿನ ಧಾರ್ಮಿಕ-ಸಾಂಸ್ಕೃತಿಕ ಸಂಭ್ರಮ
ಅ.11ರಿಂದ ಆರಂಭವಾಗುವ ಉತ್ಸವದಲ್ಲಿ ನವರಾತ್ರಿ ಪೂಜೆ, ಶ್ರೀ ಶಾರದಾ ಆರಾಧನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಚಂಡಿಕಾ ಹೋಮ ಸೇರಿದಂತೆ ವಿಶೇಷ ಧಾರ್ಮಿಕ ಆಚರಣೆಗಳು ನಡೆಯಲಿದ್ದು, ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರು ಹಾಗೂ ಸಾರ್ವಜನಿಕರನ್ನು ರಂಜಿಸಲಿವೆ.

ಅ.21ರಂದು ನಡೆಯುವ ಸಮಾರೋಪದಂದು 20ಕ್ಕೂ ಅಧಿಕ ಪ್ರಸಿದ್ಧ ಕಲಾತಂಡಗಳು, ಸಾವಿರಾರು ಕುಣಿತ ಭಜನಾ ತಂಡಗಳು ಹಾಗೂ ವಿವಿಧ ವಾದ್ಯಘೋಷಗಳು ಶೋಭಾಯಾತ್ರೆಗೆ ಮೆರುಗು ನೀಡಲಿವೆ. ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯೊಂದಿಗೆ ಈ ಬಾರಿಯ ‘ಪುತ್ತೂರು ದಸರಾ’ ವೈಭವಕ್ಕೆ ತೆರೆ ಬೀಳಲಿದೆ.

ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ದಸರಾ ಸಮಿತಿಯ ಗೌರವ ಮಾರ್ಗದರ್ಶಕ ಡಾ. ಸುರೇಶ್ ಪುತ್ತೂರಾಯ, ಉಪಾಧ್ಯಕ್ಷ ದಯಾನಂದ ಪಿ., ಶಾರದಾ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಕೋಶಾಧಿಕಾರಿ ವಸಂತ್ ಕುಮಾರ್ ಹಾಗೂ ಶೋಭಾಯಾತ್ರೆಯ ಸಂಚಾಲಕರಾದ ಕೃಷ್ಣ ಎಂ. ಅಳಿಕೆ ಮತ್ತು ನವೀನ್ ಕುಲಾಲ್ ಪುತ್ತೂರು ಉಪಸ್ಥಿತರಿದ್ದರು.

Ad Widget
Continue Reading

ಶಿಕ್ಷಣ

Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget <> Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.



Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading